Saturday, October 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

    LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

    ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

    ​ತುಂಗಭದ್ರಾ ಹಿನ್ನೀರಿನಿಂದ ಅಕ್ರಮವಾಗಿ ನೀರು ಕದಿಯುತ್ತಿರುವ ಉಕ್ಕು ಕಾರ್ಖಾನೆ ವೈರಲ್ ವಿಡಿಯೋ: ಅನ್ನದಾತರ ಆಕ್ರೋಶ!

    ಚೀನಾ ಬಾಹ್ಯಾಕಾಶ ನಿಲ್ದಾಣಕ್ಕೆ ಪಾಕ್ ಗಗನಯಾತ್ರಿ

    Video News | ಚಲಿಸುವ ಕಾರಿನ ಮೇಲೇರಿ 40 ಕಿ.ಮೀ ಸಾಹಸ: ತಮಿಳುನಾಡಿನಲ್ಲಿ ಗುಟ್ಕಾ ಕಳ್ಳಸಾಗಣೆದಾರರನ್ನು ಹಿಡಿದ ರಿಯಲ್ ‘ಸಿಂಗಂ’ ಕಾಪ್

    ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

  • Bengaluru Focus

    ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

    BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

    BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

    ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಕಸದ ಗಾಡಿ ಮನೆ ಬಾಗಿಲಿಗೆ ಬರುವಂತೆ ಮಾಡುವುದು ನನ್ನ ಜವಾಬ್ದಾರಿ: ಕೃಷ್ಣ ಬೈರೇಗೌಡ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

by Bengaluru Wire Desk
August 17, 2026
in News Wire, Public interest
Reading Time: 1 min read
0

ಕೊಳ್ಳೆಗಾಲ, ಆ.17 www.bengaluruwire.com: ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಶೂಟೌಟ್‌ನಲ್ಲಿ ಮೃತಪಟ್ಟ ಮೂವರ ಅಂತ್ಯಕ್ರಿಯೆ ಇಂದು ನೆರವೇರಿದೆ. 

ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಕೊಳ್ಳೆಗಾಲ ಉಪ ವಿಭಾಗಾಧಿಕಾರಿ (AC) ದಿನೇಶ್ ಕುಮಾರ್ ಮೀನಾ ನೇತೃತ್ವದ ತಂಡವು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಘಟನಾ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವ ತನಿಖಾ ತಂಡ. (ಚಿತ್ರ: ವಿಶೇಷ ವ್ಯವಸ್ಥೆ)

​ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಚಿಕ್ಕಲ್ಲೂರು ಮೀಸಲು ಅರಣ್ಯ ಪ್ರದೇಶದಲ್ಲಿ ಸ್ವಾತಂತ್ರ್ಯ ದಿನಾಚರಣೆ (ಆಗಸ್ಟ್ 15) ಬೆಳಗಿನ ಜಾವ ನಡೆದ ಕಳ್ಳಬೇಟೆಗಾರರು ಮತ್ತು ಅರಣ್ಯ ಸಿಬ್ಬಂದಿ ನಡುವಿನ ಗುಂಡಿನ ಚಕಮಕಿಯಲ್ಲಿ ಮೂವರು ಸಾವನ್ನಪ್ಪಿದ್ದರು. ಈ ದಾರುಣ ಘಟನೆಯು ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದು, ತೀವ್ರ ಕಾನೂನು ಹಾಗೂ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.

​ಘಟನೆಯ ವಿವರ ಮತ್ತು ಹಿನ್ನೆಲೆ

​ಹೊಳೆಮೂರುತೊಟ್ಟು ಗಸ್ತಿನ ಚಿಕ್ಕಲ್ಲೂರು ಮೀಸಲು ಅರಣ್ಯ ಪ್ರದೇಶದಲ್ಲಿ ಕಳ್ಳಬಂದೂಕುಧಾರಿಗಳು ವನ್ಯಪ್ರಾಣಿ ಕಳ್ಳಬೇಟೆಗಾಗಿ ಅಕ್ರಮವಾಗಿ ಪ್ರವೇಶಿಸಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಿಬ್ಬಂದಿ ಕಾರ್ಯಾಚರಣೆಗಿಳಿದಿದ್ದರು. ಆಗಸ್ಟ್ 15 ರಂದು ಬೆಳಿಗ್ಗೆ 5 ರಿಂದ 5.30 ರ ಸುಮಾರಿಗೆ ಕಲ್ಲುಬಂಡೆ ಹಾಗೂ ಪೊದೆಗಳ ಮರೆಯಲ್ಲಿ ಅವಿತಿದ್ದವರು ಸಿಬ್ಬಂದಿ ಮೇಲೆ ದಾಳಿಗೆ ಮುಂದಾಗಿದ್ದಾರೆ ಎಂದು ಇಲಾಖೆ ತಿಳಿಸಿದೆ.

ಕಳ್ಳಬೇಟೆಗಾರರಿಂದ ವಶಪಡಿಸಿಕೊಂಡ ವಸ್ತುಗಳು. (ಅರಣ್ಯ ಇಲಾಖೆ ಒದಗಿಸಿದ ಚಿತ್ರ)

ಶರಣಾಗುವಂತೆ ಎಚ್ಚರಿಕೆ ನೀಡಿದರೂ ನಾಡಬಂದೂಕಿನಿಂದ ದಾಳಿಗೆ ಯತ್ನಿಸಿದ ಕಾರಣ, ಆತ್ಮರಕ್ಷಣೆಗಾಗಿ ಗುಂಡು ಹಾರಿಸಬೇಕಾಯಿತು ಎಂದು ಅರಣ್ಯ ಇಲಾಖೆ ಸಮರ್ಥಿಸಿಕೊಂಡಿದೆ.

​ಮೂವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವು ಸಂಭವಿಸಿದ್ದು, ಮೃತದೇಹಗಳನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನಿಸಲಾಗಿತ್ತು. ಮತ್ತೊಬ್ಬ ಆರೋಪಿ ಕತ್ತಲಲ್ಲಿ ತಲೆಮರೆಸಿಕೊಂಡಿದ್ದ.

​ಮೃತರ ವಿವರ:

​ಆಂಟೋನಿ ಸ್ವಾಮಿ (50 ವರ್ಷ), ಮರಿಯಮಂಗಲ ಗ್ರಾಮ.

​ಜಾನ್ ರೋಸ್ ಪೀಟರ್ (42 ವರ್ಷ), ಜಗನ್ನಾಥದೊಡ್ಡಿ ಗ್ರಾಮ.

​ಕುಮಾರ್ (33 ವರ್ಷ), ಹಿಟಾಚಿ ವಾಹನ ಆಪರೇಟರ್, ಲಾರ್ಸದೊಡ್ಡಿ ಗ್ರಾಮ.

​ತಲೆಮರೆಸಿಕೊಂಡಿರುವ ಆರೋಪಿ: ಮಹಿಮದಾಸ್ (45 ವರ್ಷ), ಮರಿಯಮಂಗಲ ಗ್ರಾಮ.

​ಮೃತಪಟ್ಟವರ ಪಾರ್ಥಿವ ಶರೀರಗಳನ್ನು ತೋಮಿಯರ್ ಪಾಳ್ಯದ ಚರ್ಚ್‌ಗೆ ತಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಕ್ರೈಸ್ತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಮುಂದುವರೆದಿದೆ.

​ತನಿಖೆ ಚುರುಕು ಮತ್ತು ಅಪ್ಡೇಟ್ಸ್:

​ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಲಾಗಿದ್ದು, ಉಪ ವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ ನೇತೃತ್ವದ ತಂಡ ಪರಿಶೀಲನೆ ನಡೆಸಿದೆ. ಅರಣ್ಯ ಇಲಾಖೆಯು ನಾಲ್ಕು ಬಂದೂಕುಗಳು ಹಾಗೂ ವನ್ಯಮೃಗದ ಮಾಂಸವನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದೆ. ಆದರೆ ಮೃತರ ಕುಟುಂಬಸ್ಥರು ಇದು ನಕಲಿ ಎನ್‌ಕೌಂಟರ್ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದು, ಸ್ಥಳೀಯ ಶಾಸಕರ ಮಧ್ಯಸ್ಥಿಕೆ ಹಾಗೂ ಪರಿಹಾರದ ಭರವಸೆಯ ಬಳಿಕ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ. 

ಘಟನೆ ಕುರಿತು ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಕೂಡ ಎಕ್ಸ್ (ಟ್ವಿಟರ್) ಮೂಲಕ ಪ್ರತಿಕ್ರಿಯಿಸಿ, ಘಟನೆಯ ಬಗ್ಗೆ ಸಮಗ್ರ ಮತ್ತು ಪ್ರಾಮಾಣಿಕ ತನಿಖೆಗೆ ಆಗ್ರಹಿಸಿದ್ದಾರೆ.

​ಮರಣೋತ್ತರ ಪರೀಕ್ಷೆಯ ವರದಿ ಮತ್ತು ತನಿಖಾ ವರದಿಯ ನಂತರವಷ್ಟೇ ಘಟನೆಯ ನೈಜ ಸಂಗತಿಗಳು ಹೊರಬರಬೇಕಿದೆ. ಸದ್ಯ ಹನೂರು ತಾಲೂಕಿನಲ್ಲಿ ಬಿಗುವಿನ ವಾತಾವರಣವಿದ್ದು, ಪೊಲೀಸ್ ಹಾಗೂ ಆಡಳಿತಾತ್ಮಕವಾಗಿ ಕಟ್ಟೆಚ್ಚರ ವಹಿಸಲಾಗಿದೆ. (ಮುಖ್ಯ ಚಿತ್ರ ಕೃಪೆ: ದಿ ಇಂಡಿಯನ್ ಎಕ್ಸ್‌ಪ್ರೆಸ್‌)

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’, ಜಗತ್ತನ್ನೇ ನಡುಗಿಸುವ ಕ್ರೂರಿ

Next Post

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

Next Post

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

Please login to join discussion

Like Us on Facebook

Follow Us on Twitter

Recent News

ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

October 2, 2026

Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

October 2, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

October 2, 2026

Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

October 2, 2026

BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

October 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d