ಬೆಂಗಳೂರು, ಆ.29 www.bengaluruwire.com: ನಿರುದ್ಯೋಗಿ ಯುವಕರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಡುವ ಉದ್ದೇಶದಿಂದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (RSETI) ವತಿಯಿಂದ ಉಚಿತ ಮೊಬೈಲ್ ಫೋನ್ ಸರ್ವಿಸಿಂಗ್ ಮತ್ತು ರಿಪೇರಿ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.
ಸೆಪ್ಟೆಂಬರ್ 7 ರಿಂದ ಆರಂಭವಾಗಲಿರುವ ಈ ತರಬೇತಿಯು ಒಟ್ಟು 31 ದಿನಗಳ ಕಾಲ ನಡೆಯಲಿದೆ.
ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಉಚಿತ ಊಟ, ವಸತಿ ಮತ್ತು ಅಗತ್ಯ ಕಲಿಕಾ ಸಾಮಗ್ರಿಗಳನ್ನು ಸಂಪೂರ್ಣವಾಗಿ ಉಚಿತವಾಗಿ ನೀಡಲಾಗುತ್ತದೆ. ಯಶಸ್ವಿಯಾಗಿ ಕೋರ್ಸ್ ಪೂರ್ಣಗೊಳಿಸಿದ ಶಿಬಿರಾರ್ಥಿಗಳಿಗೆ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ವತಿಯಿಂದ ಮಾನ್ಯತೆ ಪಡೆದ ಪ್ರಮಾಣಪತ್ರವನ್ನು (Certificate) ವಿತರಿಸಲಾಗುತ್ತದೆ.
ಅರ್ಹತೆ ಮತ್ತು ಮಾನದಂಡಗಳು:

ವಯೋಮಿತಿ: 18 ರಿಂದ 45 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.
ಅರ್ಹತೆ: ಕರ್ನಾಟಕದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಭಾಗವಹಿಸಬಹುದು. ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.
ಆದ್ಯತೆ: ಗ್ರಾಮೀಣ ಭಾಗದ ಬಿಪಿಎಲ್ (BPL) ಕಾರ್ಡ್ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ನೇರ ಸಂದರ್ಶನ ವಿವರ:
ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಮತ್ತು ವಿಳಾಸದ ಮೂಲ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ 7, 2026 ರಂದು ಬೆಳಿಗ್ಗೆ 9.30 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬೇಕು.
ಸ್ಥಳ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ.
ಸಂಪರ್ಕ ಸಂಖ್ಯೆಗಳು: 8970476050, 9591514154, 6363139123, 9886935603, 9686248369.




















