Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Big News | ಕಾಂಗ್ರೆಸ್ ಐದು ಗ್ಯಾರಂಟಿ ಜಾರಿಗೆ ಸಚಿವ ಸಂಪುಟ ನಿರ್ಧಾರ : ಸಿಎಂ ಸಿದ್ದರಾಮಯ್ಯ

ಮುಂದಿನ ಸಚಿವ ಸಂಪುಟದ ಒಳಗಾಗಿ ಕಾಂಗ್ರೆಸ್ ಪ್ರಣಾಳಿಕೆ ಅನುಷ್ಟಾನಕ್ಕೆ ಕ್ರಮ - ಸಿದ್ದರಾಮಯ್ಯ

by Bengaluru Wire Desk
May 20, 2023
in News Wire, Public interest
Reading Time: 1 min read
0

ಬೆಂಗಳೂರು, ಮೇ.20 www.bengaluruwire.com : ಕಾಂಗ್ರೆಸ್‌ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ‘ಗ್ಯಾರಂಟಿ’ಗಳ ಅನುಷ್ಠಾನಕ್ಕೆ ಶನಿವಾರ ನಡೆದ ಸಚಿವ ಸಂಪುಟದ ಮೊದಲ ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದು, ಈ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲು ನಿರ್ಧರಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಹೊಸ ಸಂಪುಟದ 8 ಸದಸ್ಯರು ಮಧ್ಯಾಹ್ನ 12.40ಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ವಿಧಾನಸೌಧಕ್ಕೆ ಆಗಮಿಸಿ ಮೊದಲ ಸಚಿವ ಸಂಪುಟದಲ್ಲಿ ಈ ತೀರ್ಮಾನ ಕೈಗೊಂಡಿದ್ದಾರೆ.

ಎರಡನೇ ಬಾರಿಗೆ ಸಿಎಂ ಆದ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವ ಸಂಪುಟದ ಸಹದ್ಯೋಗಿಗಳ ಜೊತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಸಿದ್ದರಾಮಯ್ಯ ಮಾತಾನಾಡುತ್ತಾ, ಕಾಂಗ್ರೆಸ್ ಗೆ ಬಹುಮತ ನೀಡಿದ ನಾಡಿನ ಜನತೆಗೆ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ರಾಷ್ಟ್ರದ ಮಾಜಿ ಮುಖ್ಯಮಂತ್ರಿಗಳು, ಕಾಂಗ್ರೆಸ್ ಅಧ್ಯಕ್ಷರು,‌ ಮಾಜಿ ಅಧ್ಯಕ್ಷರು ಲೋಕಸಭಾ ಸದಸ್ಯರು, ರಾಜ್ಯಸಭೆ ಸದಸ್ಯರು, ಬಿಜೆಪಿಯೇತರ ಪಕ್ಷದ ಅಧ್ಯಕ್ಷರು, ನಾಯಕರು ಆಗಮಿಸಿ ಹೊಸ ಸರ್ಕಾರಕ್ಕೆ ಶುಭಕೋರಿದ್ದಾರೆ.

ಸರ್ಕಾರ ರಚನೆಯಾದ ಮೇಲೆ ಮೊದಲ ಸಚಿವ ಸಂಪುಟ ಸಭೆ ನಡೆದಿದೆ.  ಡಿಸಿಎಂ ಹಾಗೂ ಎಲ್ಲ ಸಚಿವರು ಭಾಗವಹಿಸಿದ್ದರು. ನಾವು ಪ್ರಣಾಳಿಕೆಯಲ್ಲಿ ಹಲವು ಭರವಸೆ ಕೊಟ್ಟಿದ್ದೇವೆ. ಅದನ್ನೆಲ್ಲ ಒಂದೇ ವರ್ಷದಲ್ಲಲ್ಲ ಐದು ವರ್ಷದಲ್ಲಿ ಈಡೇರಿಸುತ್ತೇವೆ.

ಪ್ರಮುಖ ಐದು ಗ್ಯಾರಂಟಿಗಳನ್ನು ಜನರಿಗೆ ಕೊಟ್ಟಿದ್ದೇವೆ. ಇದಕ್ಕೆ‌ ಮೊದಲ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದು ಅದಕ್ಕೆ ಸಂಬಂಧಿಸಿದ ಆದೇಶ ಸದ್ಯದಲ್ಲೇ ಹೊರಡಿಸುತ್ತೇವೆ. ನಮ್ಮ ಸರ್ಕಾರ ನುಡಿದಂತೆ ನಡೆಯುತ್ತದೆ. ಹಿಂದೆ 165ರಲ್ಲಿ 158 ಭರವಸೆ ಈಡೆರಿಸಿದ್ದೇವೆ, 2013-2018ರ ಅವಧಿಯಲ್ಲಿ. ಅದಲ್ಲದೇ 30 ಕಾರ್ಯಕ್ರಮ ಕೊಟ್ಟಿದ್ದೆವು. ಜನರಿಗೆ ನಮ್ಮ ಮೇಲೆ ವಿಶ್ವಾಸ, ನಂಬಿಕೆಯಿದೆ.‌ಆದರೆ ವಿರೋಧ ಪಕ್ಷ ಜನರನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದೆ. ಈ ದೇಶದ ಪ್ರಧಾನಮಂತ್ರಿಗಳೇ‌ ತಮ್ಮ‌ ಮನಕಿ ಬಾತ್ ನಲ್ಲೇ ಹೇಳಿದ್ದಾರೆ. ಬಿಜೆಪಿ ನಾಯಕರು ಇದನ್ನೇ ತಿಳಿಸುತ್ತಿದ್ದಾರೆ.

ರಾಜ್ಯದ ಪ್ರತಿ ಮನೆಯ ಯಜಮಾನಿಗೆ ಮಾಸಿಕ‌ 2 ಸಾವಿರ ನೀಡುವ ಗೃಹಲಕ್ಷ್ಮಿ ಯೋಜನೆಗೆ ತಾತ್ವಿಕ‌ ಅನುಮೋದನೆ ನೀಡಿದ ಸರ್ಕಾರ

15ನೇ ಹಣಕಾಸು ಆಯೋಗದಿಂದ ಅನ್ಯಾಯ :
ಈ ಎಲ್ಲಾ ಐದು ಭರವಸೆ ಈಡೇರಿಸಲು ತತಕ್ಷಣದ ಲೆಕ್ಕಾಚಾರದಂತೆ 50,000 ಕೋಟಿ ರೂ.‌ಆಗಬಹುದು. ನಮ್ಮ ರಾಜ್ಯದ ಬಜೆಟ್ 3.10 ಲಕ್ಷ ಕೋಟಿ ರೂ.ಗಳು. ಪ್ರತಿವರ್ಷ ಶೇ.10ರಂತೆ ಬಜೆಟ್ ಗಾತ್ರ ಹೆಚ್ಚಾಗುತ್ತೆ ಹೋಗುತ್ತೆ.‌‌ ತೆರಿಗೆ ಕಟ್ಟುನುಟ್ಟಾಗಿ ವಸೂಲಿ ಮಾಡಿದರೆ ಸಂಗ್ರಹ ಹೆಚ್ಚಾಗಲಿದೆ. ಕೆಲವು ಕಡೆ ತೆರಿಗೆ ಹೆಚ್ಚು ಮಾಡಲು ಆಗದು. ನಮಗೆ ಪೆಟ್ರೋಲ್, ಡೀಸೆಲ್, ಸಾರಿಗೆ, ಮದ್ಯ, ನೋಂದಣಿ ಮತ್ತು ಮುದ್ರಾಂಕ ರಾಜ್ಯಕ್ಕೆ ಬರುವ ತೆರಿಗೆಗಳು.‌

ಕೇಂದ್ರ 15ನೇ ಹಣಕಾಸು ಆಯೋಗದ ಪ್ರಕಾರ 50,000 ಬದಲಿಗೆ ಒಂದು ಲಕ್ಷ ರೂ. ಬರಬೇಕಿತ್ತು. 37,000 ನಮ್ಮ ತೆರಿಗೆ ಪಾಲು, 13,000 ಕೇಂದ್ರದ ಸಹಾಯಧನ ಸೇರಿ 50 ಸಾವಿರ ಕೋಟಿ‌ರೂ. ಬರಲಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ 14ಕ್ಕೆ ಹೋಲಿಸಿದರೆ 15 ನೇ ಹಣಕಾಸು ಆಯೋಗದಲ್ಲಿನ ಅನುದಾನ ಕಡಿಮೆಯಾಗಿದೆ. 4 ಲಕ್ಷ ಕೋಟಿ ರೂ. ಹಣ ಕರ್ನಾಟಕವು ಜಿಎಸ್ ಟಿ, ಇಂಧನ‌‌ ಮೇಲಿನ  ಸರ್ ಚಾರ್ಜ್ ಮತ್ತಿತರ ಹಣ ಕೇಂದ್ರಕ್ಕೆ ಹೋಗುತ್ತದೆ. ಆದರೆ ತೆರಿಗೆಯಲ್ಲಿ ರಾಜ್ಯಕ್ಕೆ ಬರುತ್ತಿರೋದು ಕೇವಲ 50,000 ಕೋಟಿ ರೂ. ಮಾತ್ರ.

5,495 ಕೋಟಿ ರೂ. ವಿಶೇಷ ಅನುದಾನ ರಾಜ್ಯಕ್ಕೆ ನಷ್ಟ :
5,495 ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ಕೇಂದ್ರದ ಹಣಕಾಸು ಆಯೋಗದ ಮಧ್ಯಂತರ ಹಣವನ್ನು ಹಿಂದಿನ ಬಿಜೆಪಿ ಸರ್ಕಾರ ತೆಗೆದುಕೊಳ್ಳಲೇ ಇಲ್ಲ. ಅಂತಿಮ ವರದಿಯಲ್ಲಿ ರಾಜ್ಯದ ರಾಜ್ಯಸಭಾ ಸದಸ್ಯರಾದ ಹಣಕಾಸು ಸಚಿವೆ ಆ ಹಣವನ್ನು ತೆಗೆದೇ ಹಾಕಿದರು. ಮೋದಿ ಸರ್ಕಾರದಿಂದ ರಾಜ್ಯಕ್ಕೆ ನಷ್ಟವಾಯಿತು.

ಬಸವರಾಜ ಬೊಮ್ಮಾಯಿ ಜಿಎಸ್ ಟಿ ಕೌನ್ಸಿಲ್ ಸದಸ್ಯರಾಗಿದ್ದರೂ ರಾಜ್ಯಕ್ಕೆ ಅನ್ಯಾಯವಾಯಿತು. ನಮ್ಮ ರಾಜ್ಯದಿಂದ ಸಂಗ್ರಹವಾಗುವ ಹಣವನ್ನೇ ಕೇಂದ್ರ ಕೊಡೋದು. ಕಾಂಗ್ರೆಸ್ ಗ್ಯಾರಂಟಿಯಿಂದ ರಾಜ್ಯ ಆರ್ಥಿಕ ದಿವಾಳಿಯಾಗಲ್ಲ.

ರಾಷ್ಟ್ರದಲ್ಲಿ ಸ್ವಾತಂತ್ರ್ಯ ಬಂದಾಗಿನಿಂದ 53.11 ಲಕ್ಷ ಕೋಟಿ ರೂ. ಸಾಲವಾಗಿದ್ದರೆ ಪ್ರಧಾನಿ‌ ನರೇಂದ್ರ ಮೋದಿ ಸರ್ಕಾರ ಬಂದ ಮೇಲೆ 102 ಲಕ್ಷ ಕೋಟಿ ರೂ. ರಾಷ್ಟ್ರದ ಸಾಲ ಏರಿಕೆಯಾಗಿದೆ.

ರಾಜ್ಯದಲ್ಲಿ 1947 ರಿಂದ ಮಾರ್ಚ್ 2018 ರ ವರೆಗೆ ರಾಜ್ಯದ ಸಾಲದ ಮೊತ್ತ 2.42 ಲಕ್ಷ ಕೋಟಿ ರೂ. ಇತ್ತು.‌ಆದರೆ ಬಿಜೆಪಿ ರಾಜ್ಯ ಸರ್ಕಾರದ ಅವಧಿಯಲ್ಲಿ 2022-23ರಲ್ಲಿ 5.64 ಲಕ್ಷ ಕೋಟಿ‌ರೂ. ತನಕ‌‌ ಸಾಲದ ಮೊತ್ತ ಏರಿದೆ. ನನ್ನ ಅವಧಿಯಲ್ಲಿ 1.16 ಲಕ್ಷ ಕೋಟಿ ರೂ.‌ನನ್ನ ಅವಧಿಯಲ್ಲಿ ಸಾಲ ಮಾಡಿದ್ದೆ. 2023-24 ಸಾಲದ ಮೇಲಿನ ಅಸಲು ಬಡ್ಡಿ ಮೊತ್ತ 56,000 ಕೋಟಿ ರೂ. ರಾಜ್ಯ ಸರ್ಕಾರ ಕಟ್ಟಬೇಕು.

3.25 ಲಕ್ಷ ಕೋಟಿ ರೂ. ಜುಲೈನಲ್ಲಿ ಮತ್ತೆ ಬಜೆಟ್ ಅನಯಷ್ಟಾನ ಮಾಡುತ್ತೇವೆ. ಸಾಲ ತೆಗೆದುಕೊಳ್ಳೋದು ಕಡಿಮೆ ಮಾಡಿ, ತೆರಿಗೆ ಸಂಗ್ರಹ ಹೆಚ್ಚಳ, ಅನಗತ್ಯ ವೆಚ್ಚ ಕಡಿಮೆ ಮಾಡಿದರೆ ವರ್ಷಕ್ಕೆ ಈ ಐದು ಗ್ಯಾರಂಟಿಗಳಾದ
200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್, ಬಿಪಿಎಲ್ ಕುಟುಂಬಗಳ ಸದಸ್ಯರಿಗೆ ಉಚಿತವಾಗಿ ತಿಂಗಳಿಗೆ ತಲಾ ಹತ್ತು ಕೆ.ಜಿ. ಅಕ್ಕಿ, ಮನೆಯ ಯಜಮಾನಿಗೆ ತಿಂಗಳಿಗೆ 2,000 ನೆರವು, ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ 3,000 ಹಾಗೂ ಡಿಪ್ಲೊಮಾ ಪದವೀಧರರಿಗೆ ತಿಂಗಳಿಗೆ 1,500 ನಿರುದ್ಯೋಗ ಭತ್ಯೆ ಮತ್ತು ಮಹಿಳೆಯರಿಗೆ ರಾಜ್ಯದಾದ್ಯಂತ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಒದಗಿಸುವುದಾಗಿ ಕಾಂಗ್ರೆಸ್ ಗ್ಯಾರಂಟಿ ನೀಡಿದೆ. ಇದಕ್ಕೆ ವಾರ್ಷಿಕ 50,000 ಕೋಟಿ ರೂ. ಹಣ ಖರ್ಚಾಗಲಿದೆ.

ಗೃಹಜ್ಯೋತಿ ಯೋಜನೆ ಜಾರಿಗೆ ಮಾಸಿಕ 1,200 ಕೋಟಿ ರೂ., ಗೃಹಲಕ್ಷ್ಮಿ ಯೋಜನೆಗೆ ತಿಂಗಳಿಗೆ ಮನೆಯೊಡತಿಗೆ 2 ಸಾವಿರ, ಅನ್ನಭಾಗ್ಯ 7ರಿಂದ 10 ಕೆಜಿಗೆ ಏರಿಸುತ್ತೇವೆ. ಈ ವರ್ಷದಿಂದ ನಿರುದ್ಯೋಗಿಗಳಿಗೆ ಎರಡು ವರ್ಷದ ತನಕ ತಿಂಗಳಿಗೆ 3 ಸಾವಿರ ನೀಡುತ್ತೇವೆ. ಮಧ್ಯದಲ್ಲಿ ಕೆಲಸ ಸಿಕ್ಕಿದರೆ ಹಣ ಕೊಡಲ್ಲ. ಡಿಪ್ಲೊಮಾ ಪದವೀಧರರಿಗೆ ತಿಂಗಳಿಗೆ 1,500 ನಿರುದ್ಯೋಗ ಭತ್ಯೆ. ರಾಜ್ಯದ ಮಹಿಳೆಯರಿಗೆ ಮಾತ್ರ, ರಾಜ್ಯದಾದ್ಯಂತ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯದ ಬಗ್ಗೆ ಸೂಕ್ತ ಆದೇಶ ಹೊಡಿಸುತ್ತೇವೆ. ಎಷ್ಟೇ ಹೊರೆಯಾದರೂ ಅನುಷ್ಟಾನ ಮಾಡುತ್ತೇವೆ. ಮುಂದಿನ ಸಚಿವ ಸಂಪುಟದ ಒಳಗಾಗಿ ಐದು ಗ್ಯಾರಂಟಿ ಅನುಷ್ಟಾನ

ಮೇ.24 ಒಳಗೆ ಎಲ್ಲ ನೂತನ ಶಾಸಕರು ಪ್ರಮಾಣ ವಚನ‌ ಸ್ವೀಕಾರ ಹಾಗೂ ನೂತನ ಸ್ಪೀಕರ್ ಆಯ್ಕೆ ಮಾಡುತ್ತೇವೆ. ಹಂಗಾಮಿ ಸ್ಪೀಕರ್ ಆಗಿ ಆರ್.ವಿ.ದೇಶಪಾಂಡೆ ಆಯ್ಕೆ ಮಾಡಿದ್ದೇವೆ. ಇಂದಿರಾ ಕ್ಯಾಂಟೀನ್ ಯೋಜನೆ ಪುನಃ ಅನುಷ್ಟಾನ ಮಾಡುತ್ತೇವೆ. ಮುಂಬರುವ ಸೋಮವಾರ, ಮಂಗಳವಾರ ಹಾಗೂ ಬುಧವಾರ ಅಧಿವೇಶನ ಕರೆಯುತ್ತೇವೆ.

ಎಂ. ಬಿ. ಪಾಟೀಲ್, ಡಾ. ಜಿ. ಪರಮೇಶ್ವರ್, ರಾಮಲಿಂಗಾ ರೆಡ್ಡಿ, ಪ್ರಿಯಾಂಕ ಖರ್ಗೆ, ಕೆ.ಎಚ್. ಮುನಿಯಪ್ಪ, ಕೆ. ಜೆ. ಜಾರ್ಜ್, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್ ಖಾನ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ನೂತನ ಡಿಸಿಎಂ ಡಿ.ಕೆ.ಶಿವಕುಮಾರ್ ವಿಧಾನಸೌಧ ಮೆಟ್ಟಿಲುಗಳಿಗೆ ತಲೆಬಾಗಿ‌ ನಮಸ್ಕರಿಸಿದರು

ವಿಧಾನಸೌಧ ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರವೇಶಿಸಿದ ಡಿಕೆಶಿ :
ಡಿಸಿಎಂ ಆದ ಬಳಿಕ ಮೊತ್ತ ಮೊದಲ ಬಾರಿಗೆ ವಿಧಾನಸೌಧದ ಮೆಟ್ಟಿಲು ಹತ್ತುವಾಗ ಡಿ.ಕೆ.ಶಿವಕುಮಾರ್, ಸತ್ ಸಂಪ್ರದಾಯದಂತೆ ಮಂಡಿಯೂರಿ, ವಿಧಾನಸೌಧದ ಮೆಟ್ಟಿಲುಗಳಿಗೆ ತಲೆಬಾಗಿ ನಮಸ್ಕರಿಸಿ ಶಕ್ತಿಕೇಂದ್ರದ ಒಳಗೆ ಪ್ರವೇಶಿಸಿದರು.

WhatsApp Join our WhatsApp Channel
Previous Post

Karnataka Congress Government | ನೂತನ ಸಿಎಂ,‌ ಡಿಸಿಎಂ‌ ಹುದ್ದೆಗೆ ಇಂದು ಪ್ರಮಾಣವಚನ ಸ್ವೀಕಾರ ; ಸಿದ್ದು – ಡಿಕೆಶಿ ಜೊತೆಗೆ 8 ಮಂದಿ ಸಂಪುಟ ಸೇರ್ಪಡೆ

Next Post

ರಾಜಕೀಯ ಗುರು ಎಸ್.ಎಂ.ಕೃಷ್ಣರನ್ನು ಭೇಟಿ ಮಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್

Next Post

ರಾಜಕೀಯ ಗುರು ಎಸ್.ಎಂ.ಕೃಷ್ಣರನ್ನು ಭೇಟಿ ಮಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರಿನ ಏರಿಯಾವೊಂದರಲ್ಲಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿರುವ ಸಾಂದರ್ಭಿಕ ಚಿತ್ರ (ಚಿತ್ರಕೃಪೆ : ಟ್ವಿಟರ್)

BW EXCLUSIVE | Bangalore Floods Condition Analysis | ಬೆಂಗಳೂರು ಈ ಮಳೆಗಾಲಕ್ಕೆ ಎಷ್ಟರ ಮಟ್ಟಿಗೆ ಸಿದ್ಧಗೊಂಡಿದೆ? ಯಾವ ವಲಯದಲ್ಲಿ ಸಮಸ್ಯೆಯಾಗಬಹುದು? ಇಲ್ಲಿದೆ ಕರಾರುವಕ್ ವಿಶ್ಲೇಷಣೆ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group