ಬೆಂಗಳೂರು, ಜೂ.01 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಆಸ್ತಿ ಮಾಲೀಕರಿಗೆ ನಗರಾಭಿವೃದ್ಧಿ ಇಲಾಖೆ ಪೂರ್ಣ ಆಸ್ತಿ ತೆರಿಗೆ ಪಾವತಿಗೆ ಶೇ.5ರಷ್ಟು ರಿಯಾಯಿತಿಯನ್ನು ಜೂ.30ರ ತನಕ ವಿಸ್ತರಿಸಿದೆ.
ಸಾರ್ವಜನಿಕರಿಗೆ ತೆರಿಗೆ ಪಾವತಿಸಲು ಶೇಕಡ 5ರಷ್ಟು ರಿಯಾಯಿತಿ ನೀಡಬೇಕೆಂದು ಸರ್ಕಾರಕ್ಕೆ ಮಾಜಿ ಆಡಳಿತ ಪಕ್ಷದ ನಾಯಕರಾದ ಎಮ್.ಶಿವರಾಜು, ವಿರೋಧ ಪಕ್ಷದ ನಾಯಕರಾದ ಅಬ್ದುಲ್ ವಾಜಿದ್ ರವರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.
ಇದೀಗ ರಾಜ್ಯ ಸರ್ಕಾರ ಜೂ.30ರವರೆಗೆ ಶೇ.5ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರಿಗೆ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರಿಗೆ ಎಮ್.ಶಿವರಾಜು, ಅಬ್ದುಲ್ ವಾಜಿದ್ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.
























