Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home BW Special

BW Special | APL BPL Card | ಹೊಸದಾಗಿ ಎಪಿಎಲ್ ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಈ ತಿಂಗಳು ಅವಕಾಶವಿಲ್ಲ !! ಯಾಕೆ? ಇಲ್ಲಿದೆ Exclusive ಮಾಹಿತಿ

ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಆಹಾರ ಇಲಾಖೆಯ ರೇಷನ್ ಕಾರ್ಡ್ ಗಳೇ ಆಧಾರ | ರಾಜ್ಯದ 5.28 ಕೋಟಿ ರೇಷನ್ ಕಾರ್ಡ್ ಫಲಾನುಭವಿಗಳ ದತ್ತಾಂಶ ರಕ್ಷಣೆ, ಆಹಾರ ಇಲಾಖೆ ವೆಬ್ ಸೈಟ್, ಸಾಫ್ಟ್ ವೇರ್ ಕಾರ್ಯ ನಿರ್ವಹಣಾ ಸಾಮರ್ಥ್ಯ ಹೆಚ್ಚಳ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ | ಜುಲೈ ನಲ್ಲಿ ಬೇಡಿಕೆ ಆಧರಿಸಿ ಹೊಸ ಅರ್ಜಿ ಸಲ್ಲಿಕೆಗೆ ಸಿಎಂ ನಿರ್ಧಾರ

by Bengaluru Wire Desk
September 4, 2023
in BW Special, Public interest
Reading Time: 2 mins read
0
ಪಡಿತರ ಚೀಟಿದಾರರ ಕುಟುಂಬಕ್ಕೆ ಆಹಾರ ಧಾನ್ಯ ವಿತರಿಸುತ್ತಿರುವ ಸಾಂದರ್ಭಿಕ ಚಿತ್ರ

ಪಡಿತರ ಚೀಟಿದಾರರ ಕುಟುಂಬಕ್ಕೆ ಆಹಾರ ಧಾನ್ಯ ವಿತರಿಸುತ್ತಿರುವ ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.14 www.bengaluruwire.com : ರಾಜ್ಯದಲ್ಲಿ ಈಗ ಸಿದ್ದರಾಮಯ್ಯ ಸರ್ಕಾರದ 5 ಗ್ಯಾರಂಟಿ ಸ್ಕೀಮ್ ಗಳ ಜಾರಿ ಮಾಡುವತ್ತಲೇ ಎಲ್ಲರ ಚಿತ್ತ ಹರಿದಿದೆ. ಆದರೆ ಹಲವು ತಿಂಗಳುಗಳಿಂದ ಎಪಿಎಲ್, ಬಿಪಿಎಲ್ ಕಾರ್ಡಿಗೆ ಅರ್ಜಿ ಹಾಕಿ ಕುಳಿತವರಿಗೆ ಮತ್ತು ಹೊಸದಾಗಿ ಅರ್ಜಿ ಹಾಕಲು ಕಾಯುತ್ತಿರುವವರಿಗೆ ಆಹಾರ ಇಲಾಖೆಯ ವೆಬ್ ಪೋರ್ಟಲ್ ನಲ್ಲಿ ಅರ್ಜಿ ಹಾಕಲು ಇನ್ನು ಅವಕಾಶ ನೀಡಿಲ್ಲ. ಈ ತಿಂಗಳು ಆಹಾರ ಇಲಾಖೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ  ಅವಕಾಶ ನೀಡುವುದಿಲ್ಲ ಎಂದು ಆಹಾರ ಇಲಾಖೆಯ ಮೂಲಗಳು ತಿಳಿಸಿದೆ.

ಕಾಂಗ್ರೆಸ್ ಸರ್ಕಾರದ ಪ್ರಣಾಳಿಕೆಯಂತೆ ಈ ಹಿಂದೆ ಬಿಪಿಎಲ್ ಕಾರ್ಡಿನ ಪ್ರತಿ ಸದಸ್ಯರಿಗೆ ತಿಂಗಳಿಗೆ ನೀಡುತ್ತಿದ್ದ 5 ಕೆಜಿ ಅಕ್ಕಿಯ ಬದಲಾಗಿ ತಲಾ 10 ಕೆಜಿ ಅಕ್ಕಿಯನ್ನು ಜುಲೈ 1 ರಿಂದ ನೀಡುವ ಅನ್ನಭಾಗ್ಯ ಯೋಜನೆ ಜಾರಿಗೆ ಬರುತ್ತಿದೆ. ಹೀಗಾಗಿ ಪ್ರತಿದಿನ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಕಚೇರಿಗೆ ಬಿಪಿಎಲ್ ಕಾರ್ಡ್ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡುವಂತೆ ಪ್ರತಿದಿನ ಸರಾಸರಿ 300 ರಿಂದ 400 ಕರೆಗಳು ಬರುತ್ತಿದೆ. ಹೀಗೆ ಸಾಕಷ್ಟು ಒತ್ತಡವಿದ್ದರೂ ಹೊಸದಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಇಲಾಖೆ ಅವಕಾಶ ನೀಡುತ್ತಿಲ್ಲ. ಇದರಿಂದಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾವಿರಾರು ರೋಗಿಗಳಿಗೆ ಬಿಪಿಎಲ್ ಕಾರ್ಡ್ ಇದ್ದಲ್ಲಿ ಒಂದು ಮಿತಿವರೆಗೆ ಉಚಿತ ಚಿಕಿತ್ಸೆ ಸೌಲಭ್ಯವಿದೆ. ಹೀಗಾಗಿ ಹೊಸದಾಗಿ ಬಿಪಿಎಲ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ಸಿಗದ ಕಾರಣ ಸಾಕಷ್ಟು ರೋಗಿಗಳು ತೊಂದರೆಗೊಳಗಾಗಿದ್ದಾರೆ. ಈ ತಿಂಗಳು ಹೊಸದಾಗಿ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುತ್ತಿಲ್ಲ ಎಂದು ಆಹಾರ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ವೆಬ್ ಪೋರ್ಟಲ್ ಚಿತ್ರ

ಕರ್ನಾಟಕದಲ್ಲಿ ಈವರೆಗೆ ಒಟ್ಟಾರೆ 1,53,070,32 ಅಂತ್ಯೋದಯ (AAY), ಆದ್ಯತಾ ಪಡಿತರ ಚೀಟಿ (BPL) ಹಾಗೂ ಆದ್ಯತಾ ಪಡಿತರ ಚೀಟಿಯಲ್ಲದ (APL) ಕಾರ್ಡ್ ಗಳಿದ್ದು, ಒಟ್ಟಾರೆ 5,28,21,734 ಫಲಾನುಭವಿಗಳಿದ್ದಾರೆ. ಆ ಪೈಕಿ 10,90,047 ಮಂದಿ ಅಂತ್ಯೋದಯ ಕಾರ್ಡ್, 1,17,27,988 ಬಿಪಿಎಲ್ ಕಾರ್ಡ್ ಹಾಗೂ 24,88,997 ಎಪಿಎಲ್ ಕಾರ್ಡ್ ಗಳನ್ನು ವಿತರಿಸಲಾಗಿದೆ.

ಇನ್ನೂ 2.42 ಲಕ್ಷ ಅರ್ಜಿಗಳಿಗೆ ಸಿಗದ ಮುಕ್ತಿ :

2019-2020ನೇ ಸಾಲಿನಲ್ಲಿ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ https://ahara.kar.nic.in/home/eservices ಹೊಸ ಪಡಿತರ ಚೀಟಿ ವಿತರಣೆಗೆ ಆನ್ ಲೈನ್ ಮೂಲಕ ಅರ್ಜಿ ಕರೆದಾಗ ಒಟ್ಟಾರೆ 1,97,338 ಜನರು ಬಿಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಆ ಪೈಕಿ ಈವರೆಗೆ 98,332 ಕಾರ್ಡ್ ವಿತರಣೆಗೆ ಮಾತ್ರ ಒಪ್ಪಿಗೆ ದೊರೆತಿದ್ದು, 99,006 ಅರ್ಜಿಗಳಿಗೆ ಇನ್ನು ಮುಕ್ತಿ ದೊರೆಕಿಲ್ಲ. ಅದೇ ರೀತಿ 2021-22ನೇ ಸಾಲಿನಲ್ಲಿ 4,23,888 ಮಂದಿ ಆನ್ ಲೈನ್ ಮೂಲಕ ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದ್ದರೆ, 2,80,568 ಕಾರ್ಡ್ ವಿತರಣೆಗೆ ಅನುಮತಿ ನೀಡಿದ್ದು, ಇನ್ನು 1,43,320 ಅರ್ಜಿಗಳು ಬಾಕಿ ಉಳಿದಿದೆ. ಅಲ್ಲಿಗೆ ಒಟ್ಟಾರೆ 2,42,326 ಅರ್ಜಿಗಳು ಬಾಕಿ ಉಳಿದಿದೆ.

ಗೃಹಲಕ್ಷ್ಮಿ ಯೋಜನೆ ಪಡೆಯಲು ರೇಷನ್ ಕಾರ್ಡಿಗೆ ಬೇಡಿಕೆ :

ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆಯೊಡತಿಗೆ ತಿಂಗಳಿಗೆ ಎರಡು ಸಾವಿರ ರೂಪಾಯಿ ಹಣವನ್ನು ಅವರ ಬ್ಯಾಂಕ್ ಖಾತೆಗೆ ರವಾನಿಸಲು ಪ್ರಮುಖವಾಗಿ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಮೂಲಕವೇ ಸೇವಾಸಿಂಧು ಪೋರ್ಟಲ್ ಮುಖಾಂತರವೇ ಜೂನ್ 15 ರಿಂದ ಜುಲೈ 15ರನತಕ ಅರ್ಜಿ ಸಲ್ಲಿಸಬೇಕು. ಈಗಾಗಲೇ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಇದ್ದವರು ಸೇವಾಸಿಂಧು ಮುಖಾಂತರ ಅರ್ಜಿ ಸಲ್ಲಿಸಲು ಸಮಸ್ಯೆಯಾಗದು. ಆದರೆ ಎಪಿಎಲ್, ಬಿಪಿಎಲ್ ಕಾರ್ಡ್ ಇಲ್ಲದವರು ಹೊಸದಾಗಿ ಪಡಿತರ ಚೀಟಿ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಅದಲ್ಲದೆ ಸದ್ಯಕ್ಕೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ವೆಬ್ ಸೈಟ್ ನಲ್ಲಿ ಆನ್ ಲೈನ್ ಮೂಲಕ ಅಪ್ಲೈ ಮಾಡಲು ಅವಕಾಶ ನೀಡಿಲ್ಲ. ಆಗಸ್ಟ್ 15ರಂದು ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಪ್ರಾರಂಭವಾಗುವ ತನಕ ಈ ಆನ್ ಲೈನ್ ನಲ್ಲಿ ಎಪಿಎಲ್, ಬಿಪಿಎಲ್ ಕಾರ್ಡ್ ನಡಿ ಅರ್ಜಿ ಸಲ್ಲಿಸಲು ಸರ್ಕಾರ ಈ ತಿಂಗಳು ಅವಕಾಶ ನೀಡುವ ಸಾಧ್ಯತೆಗಳಿಲ್ಲ ಎಂದು ಉನ್ನತ ಮೂಲಗಳು ಖಚಿತಪಡಿಸಿದೆ.

ಆಹಾರ ಇಲಾಖೆ ಸಾಫ್ಟ್ ವೇರ್ ಸಿಸ್ಟಮ್ ಬದಲಾವಣೆ :

ಬಿಪಿಎಲ್ ಕಾರ್ಡಿನ ಸಾಂದರ್ಭಿಕ ಚಿತ್ರ

ರಾಜ್ಯ ಸರ್ಕಾರವು ತನ್ನ ಯೋಜನೆಗಳ ಜಾರಿ, ನಿರ್ವಹಣೆಗೆ ಪ್ರಮುಖವಾಗಿ ನಾಗರೀಕರ ದತ್ತಾಂಶಕ್ಕಾಗಿ ಪ್ರಮುಖವಾಗಿ ಅವಲಂಬನೆಯಾಗಿರುವುದು ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆಯು ವಿತರಿಸುವ ಪಡಿತರ ಚೀಟಿಯಿಂದಲೇ. ಯಾಕೆಂದರೆ ಇಲಾಖೆ ಬಳಿ ಒಟ್ಟಾರೆ 5.28 ಕೋಟಿ ಪಡಿತರ ಚೀಟಿಯ ಫಲಾನುಭವಿಗಳ ದತ್ತಾಂಶವಿದೆ. ಹೀಗಾಗಿ ಆಹಾರ ಇಲಾಖೆಯಲ್ಲಿನ ವೆಬ್ ಸೈಟ್ ಮತ್ತು ಕಾರ್ಯಾಚರಣೆ ಸಂಬಂಧ ಸಾಫ್ಟ್ ವೇರ್ ಬದಲಾವಣೆ ಹಾಗೂ ಅತ್ಯಾಧುನಿಕ ವ್ಯವಸ್ಥೆ ಅಳವಡಿಸಿಕೊಳ್ಳುವ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಇದೂ ಕೂಡ ಆನ್ ಲೈನ್ ಅರ್ಜಿ ಸ್ಥಗಿತಗೊಳಿಸಿರುವ ಕಾರಣಗಳಲ್ಲಿ ಒಂದಾಗಿದೆ ಎಂದು ಆಹಾರ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

2011ರ ಜನಸಂಖ್ಯಾ ಸಮೀಕ್ಷೆಯ ಆಧಾರದ ಮೇಲೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಒಟ್ಟಾರೆ 4.10 ಕೋಟಿ ಫಲಾನುಭವಿಗಳಿಗಷ್ಟೇ ಬಿಪಿಎಲ್ ಕಾರ್ಡ್ ವಿತರಿಸಲು ಅವಕಾಶವಿದೆ. ಆದರೆ ರಾಜ್ಯ ಸರ್ಕಾರವು 4.42 ಕೋಟಿ ಬಿಪಿಎಲ್ ಕುಟುಂಬದ ಫಲಾನುಭವಿಗಳಿಗೆ ಕಾರ್ಡ್ ಹಂಚಿಕೆ ಮಾಡಿ, ಆ ಮೂಲಕ ಆಹಾರ ಧಾನ್ಯ ವಿತರಿಸುತ್ತಿದೆ. ಕೇಂದ್ರದ 4.10 ಕೋಟಿ ಫಲಾನುಭವಿಗಳ ಮಿತಿಗಿಂತ ಹೆಚ್ಚಿನ ಫಲಾನುಭವಿಗಳಿಗೆ ಕರ್ನಾಟಕ ಸರ್ಕಾರವೇ ಪ್ರತಿ ವರ್ಷ ಎರಡು ಸಾವಿರ ಕೋಟಿ ರೂ. ಹಣವನ್ನು ಬಜೆಟ್ ನಲ್ಲಿ ಮೀಸಲಿಟ್ಟು ಆಹಾರ ಧಾನ್ಯ ಖರೀದಿಸಿ ವಿತರಿಸುತ್ತಿದೆ.

ಇದನ್ನೂ ಓದಿ : Electricity Bill Hike Actual Facts | ಜೂನ್ ತಿಂಗಳ ವಿದ್ಯುತ್ ಬಿಲ್ ಕಂಡು ಹೌಹಾರಿದ್ರಾ? ಇಲ್ಲಿದೆ ಬೆಸ್ಕಾಂ ಬಿಲ್ ಲೆಕ್ಕಾಚಾರದ ಮಾಹಿತಿ

ಎಪಿಎಲ್ ನಲ್ಲಿ ಶೇ.62ರಷ್ಟು ಮಂದಿಯಷ್ಟೆ ಯುಐಡಿ ಜೊತೆ ಲಿಂಕ್ :

ಪಡಿತರ ಚೀಟಿದಾರರು ರೇಷನ್ ಕಾರ್ಡ್ ಜೊತೆಗೆ ತಮ್ಮ ವೈಯುಕ್ತಿಕ ಆಧಾರ್ ಸಂಖ್ಯೆ (UID)ಗೆ ಲಿಂಕ್ ಮಾಡಿ ಸೀಡಿಂಗ್ ಮಾಡುವುದು ಅತ್ಯಗತ್ಯವಾಗಿರುತ್ತದೆ. ರಾಜ್ಯದಲ್ಲಿ ಈವರೆಗೆ 1,28,17,641 ಬಿಪಿಎಲ್ ಕಾರ್ಡ್ ಅಡಿಯಲ್ಲಿ ಬರುವ 4,41,96,465 (ಶೇ.99ರಷ್ಟು) ಫಲಾನುಭವಿಗಳು ತಮ್ಮ ಯುಐಡಿ ಸಂಖ್ಯೆಗೆ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಸೀಡ್ ಮಾಡಿಕೊಂಡಿದ್ದಾರೆ. ಆದರೆ ರಾಜ್ಯದಲ್ಲಿನ 24,88,997 (24.88 ಲಕ್ಷ) ಎಪಿಎಲ್ ಕಾರ್ಡ್  ನಡಿ 86,23,263 (86.23 ಲಕ್ಷ) ಫಲಾನುಭವಿಗಳಿದ್ದು, ಶೇ.62ರಷ್ಟು (15,63,191 ಪಡಿತರ ಚೀಟಿಗಳು) ರೇಷನ್ ಕಾರ್ಡ್ ನ 47,14,643 (ಶೇ.54ರಷ್ಟು) ಮಂದಿ ಫಲಾನುಭವಿಗಳಷ್ಟೇ ಆಧಾರ್ ಜೊತೆ ತಮ್ಮ ರೇಷನ್ ಕಾರ್ಡ್ ಅನ್ನು ಲಿಂಕ್ ಮಾಡಿಕೊಂಡಿದ್ದಾರೆ.

ಒಟ್ಟಾರೆ ಹೊಸದಾಗಿ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಸಾಮಾನ್ಯರು, ಬಡ ಜನರು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಈಗಾಗಲೇ ಅರ್ಜಿ ಸಲ್ಲಿಸಿದವರು ಹಲವು ತಿಂಗಳುಗಳಾದರೂ ಅರ್ಜಿ ವಿಲೇವಾರಿಯಾಗದೆ ಪಡಿತರ ಚೀಟಿಯಿಲ್ಲದೆ, ದುಬಾರಿ ಹಣಕೊಟ್ಟು ಅಂಗಡಿಯಿಂದ ಆಹಾರ ಧಾನ್ಯ ಪಡೆದು ಜೀವನ ನಿರ್ವಹಣೆ ಮಾಡಬೇಕಾದ ದುಸ್ಥಿತಿಯಲ್ಲಿದ್ದಾರೆ. ಸರ್ಕಾರ ಈ ಬಗ್ಗೆ ಅರ್ಹ ಅರ್ಜಿದಾರರ ಅನುಕೂಲಕ್ಕಾಗಿ ಆದಷ್ಟು ಶೀಘ್ರವಾಗಿ ಕ್ರಮ ಕೈಗೊಳ್ಳಬೇಕಾಗಿದೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

ಕೆಂಪೇಗೌಡರ ಜಯಂತ್ಯುತ್ಸವ : ಬಿಬಿಎಂಪಿ ವಾರ್ಡ್ ಮಟ್ಟದಲ್ಲಿ ‘ಬೆಂಗಳೂರು ಹಬ್ಬ’ವಾಗಿ ಆಚರಿಸಲು ಮನವಿ

Next Post

Gruha Jyothi Scheme | ಗೃಹಜ್ಯೋತಿ ಯೋಜನೆ : ಫಲಾನುಭವಿಗಳ ರಿಜಿಸ್ಟ್ರೇಷನ್ ಜೂ.18ರಿಂದ ಆರಂಭ ; ಇಲ್ಲಿದೆ ಸಂಪೂರ್ಣ ವಿವರ

Next Post
ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

Gruha Jyothi Scheme | ಗೃಹಜ್ಯೋತಿ ಯೋಜನೆ : ಫಲಾನುಭವಿಗಳ ರಿಜಿಸ್ಟ್ರೇಷನ್ ಜೂ.18ರಿಂದ ಆರಂಭ ; ಇಲ್ಲಿದೆ ಸಂಪೂರ್ಣ ವಿವರ

Annabhagya Scheme | ರಾಜ್ಯದ 'ಅನ್ನಭಾಗ್ಯ' ಯೋಜನೆಗೆ ಅಕ್ಕಿ ನೀಡದ ಕೇಂದ್ರ : ಸಿಎಂ‌ ಸಿದ್ದರಾಮಯ್ಯ ಆರೋಪಕ್ಕೆ ಎಫ್ ಸಿಐ ನೀಡಿದ ಸ್ಪಷ್ಟನೆ ಏನು?

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group