Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Caste Atrocities | ಜಾತಿ ದೌರ್ಜನ್ಯ ಪ್ರಕರಣದಲ್ಲಿ ರಾಜ್ಯದಲ್ಲಿನ ಶಿಕ್ಷೆ ಪ್ರಮಾಣ ಶೇ. 3.44 : ಜಾತಿ ದೌರ್ಜನ್ಯಗಳಿಗೆ ಕಡಿವಾಣ ಅತ್ಯಗತ್ಯ – ಮುಖ್ಯಮಂತ್ರಿ ಸಿದ್ದರಾಮಯ್ಯ

ದೌರ್ಜನ್ಯ ತಡೆಗೆ ಪೊಲೀಸ್, ಕಾನೂನು, ಸಮಾಜ ಕಲ್ಯಾಣ ಮತ್ತು ಕಂದಾಯ ಇಲಾಖೆ ನಡುವೆ ಸಮನ್ವಯ ಇರಲಿ | ಕರ್ನಾಟಕ ಪ್ರಜ್ಞಾವಂತರ ನಾಡು | ಸುಳ್ಳು ಜಾತಿ ಪ್ರಮಾಣ ಪತ್ರಗಳಿಗೆ ಪ್ರತ್ಯೇಕ ಸಭೆ - ಸಿಎಂ

by Bengaluru Wire Desk
September 7, 2023
in News Wire, Public interest
Reading Time: 1 min read
0
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಿತು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಿತು.

ಬೆಂಗಳೂರು, ಸೆ.7 www.bengaluruwire.com  : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೇಲೆ ನಡೆಯುವ ಜಾತಿ ದೌರ್ಜನ್ಯ ಪ್ರಕರಣಗಳನ್ನು ಕಡಿಮೆ ಮಾಡುವ ಜತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪೊಲೀಸ್ ಇಲಾಖೆ, ಕಾನೂನು ಇಲಾಖೆ, ಸಮಾಜ‌ಕಲ್ಯಾಣ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ 3 ಗಂಟೆಗಳ ಕಾಲ ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಬಳಿಕ ಅಧಿಕಾರಿ ವರ್ಗಕ್ಕೆ ಈ ಸೂಚನೆ ನೀಡಿದರು. 

ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಜಾತಿ ದೌರ್ಜನ್ಯ ಪ್ರಕರಣಗಳಿಗೆ ಸೂಕ್ತ ನ್ಯಾಯ ಒದಗಿಸಲು ಸಾಧ್ಯ ಆಗುವುದಿಲ್ಲ ಎನ್ನುವ ಕಾರಣದಿಂದ ಎಸ್.ಸಿ ಮತ್ತು ಎಸ್.ಟಿ ದೌರ್ಜನ್ಯ ತಡೆ ಕಾಯ್ದೆ,  ನಾಗರಿಕ ಹಕ್ಕು ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಸರ್ಕಾರ ಈ ಕಾಯ್ದೆಗೆ ಹೆಚ್ಚಿನ‌ ಮಹತ್ವ ನೀಡಿ ಗಂಭೀರವಾಗಿ ಪರಿಗಣಿಸುತ್ತದೆ. ಸಂತ್ರಸ್ತರಿಗೆ ರಕ್ಷಣೆ ಸಿಗಬೇಕು. ಈ ಉದ್ದೇಶ ಸಫಲವಾಗಲು ಸಮಾಜ ಕಲ್ಯಾಣ ಇಲಾಖೆ, ಪೊಲೀಸ್‌ ಇಲಾಖೆ, ಪ್ರಾಸಿಕ್ಯೂಷನ್‌ ಇಲಾಖೆ, ಕಂದಾಯ ಇಲಾಖೆ ಸಮನ್ವಯದೊಂದಿಗೆ ಕೆಲಸ ಮಾಡಬೇಕು. ಸಮನ್ವಯ ಇದ್ದಾಗ ಮಾತ್ರ ವ್ಯವಸ್ಥಿತವಾಗಿ ಈ ವರ್ಗದ ಜನರಿಗೆ ನ್ಯಾಯ ಸಿಗಲು ಸಾಧ್ಯವಾಗುತ್ತದೆ ಎಂದರು.

 ಪೊಲೀಸ್ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಎರಡು ತಿಂಗಳೊಳಗೆ ಚಾರ್ಜ್‌ ಶೀಟ್‌ ಹಾಕುವ ಬಗ್ಗೆ ಎಸ್‌.ಪಿ. ಗಳಿಗೆ, ಡಿಸಿಪಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಪೊಲೀಸರು ಜಾಗರೂಕತೆಯಿಂದ ತನಿಖೆ ಮಾಡಬೇಕು. ಇವುಗಳನ್ನು ವಿಶೇಷ ಪ್ರಕರಣ ವೆಂದು ಪರಿಗಣಿಸಿ ಶಿಕ್ಷೆ ಕೊಡಿಸಲು ಎಲ್ಲ ಪ್ರಯತ್ನ ಮಾಡಬೇಕು ಎಂದು ಸೂಚಿಸಿದರು.

ರಾಜ್ಯದಲ್ಲಿ ಶಿಕ್ಷೆ ಪ್ರಮಾಣ ಶೇ.3.44 :

ರಾಜ್ಯದಲ್ಲಿ ಶಿಕ್ಷೆ ಪ್ರಮಾಣ ಶೇ. 3.44 ರಷ್ಟಿರುವುದು ನಾಚಿಕೆಯ ಸಂಗತಿ. ಇದನ್ನು ಇನ್ನಷ್ಟು ಹೆಚ್ಚಿಸುವಂತೆ ಸೂಚಿಸಿದರು. ಪ್ರಜ್ಞಾವಂತ ಸಮಾಜವಿರುವ ನಮ್ಮ ರಾಜ್ಯದಲ್ಲಿ ಇಷ್ಟು ಕಡಿಮೆ ಇರುವುದು ತಲೆ ತಗ್ಗಿಸುವ ವಿಚಾರ. ತಹಸೀಲ್ದಾರರು, ಉಪವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಪೊಲೀಸ್‌ ವರಿಷ್ಠಾಧಿಕಾರಿಗಳು ಇದರ ಪ್ರಗತಿ ಪರಿಶೀಲನೆ ಮಾಡಬೇಕು. ಪೊಲೀಸ್‌ ವರಿಷ್ಠಾಧಿಕಾರಿಗಳು ಈ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿ, ಡಿ.ಜಿ.ಪಿ. ಅವರಿಗೆ ವರದಿ ಕಳುಹಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

ತಾಲ್ಲೂಕು, ಜಿಲ್ಲಾ ಮಟ್ಟದ ಕೆಡಿಪಿ ಸಭೆಗಳಲ್ಲಿ ಈ ವಿಷಯದ ಕುರಿತು ಕಡ್ಡಾಯವಾಗಿ ಪ್ರಗತಿ ಪರಿಶೀಲನೆ ಆಗಬೇಕು. ಚಾರ್ಜ್‌ ಶೀಟ್‌ ಸಲ್ಲಿಕೆಯನ್ನು ಯಾವುದೇ ಕಾರಣಕ್ಕೆ ವಿಳಂಬ ಮಾಡಬಾರದು. ಸಾಕ್ಷ್ಯ ವಿಫಲ ಆಗದಂತೆ ಪೊಲೀಸರು ಹೆಚ್ಚಿನ ಗಮನ ಕೊಡಬೇಕು.

ರಾಜಕಾರಣಿಗಳು ಈ ದೌರ್ಜನ್ಯ ಪ್ರಕರಣಗಳಲ್ಲಿ ಮಧ್ಯ ಪ್ರವೇಶಿಸದೆ ಪೊಲೀಸರಿಗೆ ಸಹಕಾರ ನೀಡಬೇಕು. ಪ್ರತಿ ಪ್ರಕರಣ ದಾಖಲಿಸುವಾಗ ಪೊಲೀಸರು ತಮ್ಮ ವಿವೇಚನೆಯನ್ನು ಬಳಸಬೇಕು. ಚಾರ್ಜ್‌ ಶೀಟ್‌ ಸಲ್ಲಿಕೆ ವಿಳಂಬವಾದರೆ ಆರೋಪಿಗಳು ಜಾಮೀನು ಪಡೆದು ಹೊರಬಂದು ಮತ್ತೊಮ್ಮೆ ಅಪರಾಧ ಎಸಗುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದರು.

ಹೆಚ್ಚಿನ ಪ್ರಕರಣ ಬಾಕಿಯಿರುವ ಕಡೆ ತ್ವರಿತ ನ್ಯಾಯಾಲಯ ಸ್ಥಾಪನೆ :

ಮುಂದಿನ ಸಭೆಯಲ್ಲಿ ವಿಚಾರಣೆ ಬಾಕಿ ಇರುವ ಪ್ರಕರಣಗಳ ಅವಧಿ ಮತ್ತು ಇತರ ಮಾಹಿತಿಯನ್ನು ಒದಗಿಸಬೇಕು. ಹೆಚ್ಚು ಪ್ರಕರಣಗಳು ಬಾಕಿ ಇರುವಲ್ಲಿ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸುವ ಬಗ್ಗೆ ಪರಿಶೀಲಿಸಲಾಗುವುದು. ಅನುಕಂಪ ಆಧಾರದ ಉದ್ಯೋಗ ನೀಡುವುದರಲ್ಲಿ 54 ಅರ್ಜಿಗಳು ಇತ್ಯರ್ಥಕ್ಕೆ ಬಾಕಿ ಇದೆ. ಬಹಳಷ್ಟು ಅರ್ಜಿಗಳು ತಿರಸ್ಕೃತಗೊಂಡಿವೆ. ಇದಕ್ಕೆ ಎರಡು ವರ್ಷದೊಳಗೆ ಅರ್ಜಿ ಸಲ್ಲಿಸಬೇಕೆಂಬ ಷರತ್ತಿನ ಬಗ್ಗೆ ಮುಖ್ಯ ಕಾರ್ಯದರ್ಶಿಗಳೊಂದಿಗೆ ಚರ್ಚಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು.

ಆರು ತಿಂಗಳಿಗೊಮ್ಮೆ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ :

ಈ ಬಾರಿ ಆಯವ್ಯಯದಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯವನ್ನು ಬಲಪಡಿಸುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಗೃಹ ಸಚಿವರು ನನ್ನೊಂದಿಗೆ ಚರ್ಚಿಸಿದ್ದಾರೆ. ಇದನ್ನು ಸಚಿವ ಸಂಪುಟ ಸಭೆಗೆ ಮಂಡಿಸುವಂತೆ ಸಚಿವರಿಗೆ ಸೂಚಿಸಿದರು.

ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಸಭೆ ಕರೆಯಲಾಗುವುದು. ಕಾನೂನು ಬಾಹಿರವಾಗಿ ನಡೆಯುವ ದೌರ್ಜನ್ಯಗಳನ್ನು ತಡೆಯಲು ನಮ್ಮ ಸರ್ಕಾರ ಬದ್ಧವಾಗಿದೆ. ನಿಯಮಕ್ಕೆ ತಿದ್ದುಪಡಿ ಮಾಡಿ ಈ ಸಮುದಾಯಗಳ ಎಲ್ಲ ಸಚಿವರು, ಸಂಸದರು, ಶಾಸಕರನ್ನು ಸಭೆಗೆ ಆಹ್ವಾನಿಸಲಾಗಿದೆ. ಈ ದೌರ್ಜನ್ಯ ತಡೆಯಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಅಧಿಕಾರಿಗಳು ತಮ್ಮ ಧೋರಣೆಯನ್ನು ಬದಲಿಸಿಕೊಂಡು ಕಾರ್ಯನಿರ್ವಹಿಸಬೇಕು. ಆರು ತಿಂಗಳಿಗೊಮ್ಮೆ ಈ ಸಭೆ ಕರೆಯುವಂತೆ ತಿಳಿಸಿದರು.

ಸಿಆರ್ ಇ ಸೆಲ್ ಗೆ ಹೆಚ್ಚಿನ ಬಲ :

ಪ್ರಸಕ್ತ ಆಯವ್ಯಯದಲ್ಲಿ ಘೋಷಿಸಿದಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (CRE cell) ಬಲ ಪಡಿಸುವ ಕುರಿತು ವರದಿ ಸಿದ್ಧಪಡಿಸಲಾಗಿದ್ದು, ಕಡತವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸುವುದಾಗಿ ಸಮಾಜ ಕಲ್ಯಾಣ ಸಚಿವರು ಸಭೆಯಲ್ಲಿ ತಿಳಿಸಿದರು. ಕಳೆದ ಐದು ವರ್ಷಗಳಲ್ಲಿ 53 ಕೊಲೆ ಪ್ರಕರಣಗಳಲ್ಲಿಯೂ ಚಾರ್ಜ್‌ ಶೀಟ್‌ ಹಾಕದಿರುವ ಕುರಿತು ಆಕ್ಷೇಪಿಸಿದ ಮುಖ್ಯಮಂತ್ರಿಗಳು, ಅಂತಹ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್‌ ನೀಡುವಂತೆ ಸೂಚಿಸಿದರು.

ಸಭೆಯಲ್ಲಿ‌ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಡಾ. ಹೆಚ್‌.ಸಿ.ಮಹಾದೇವಪ್ಪ ಹಾಗೂ ಸಚಿವರಾದ ಡಾ. ಜಿ. ಪರಮೇಶ್ವರ, ಕೆ.ಹೆಚ್. ಮುನಿಯಪ್ಪ, ಪ್ರಿಯಾಂಕ್‌ ಖರ್ಗೆ, ಆರ್.ಬಿ. ತಿಮ್ಮಾಪೂರ, ಕೆ.ಎನ್.ರಾಜಣ್ಣ, ನಾಗೇಂದ್ರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲು ಕ್ಷೇತ್ರಗಳ ಶಾಸಕರು, ಸಂಸದರು, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಗೋವಿಂದರಾಜು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

WhatsApp Join our WhatsApp Channel
Previous Post

BBMP News | Dengue Positive | ರಾಜ್ಯದಲ್ಲಿನ ಡೆಂಗ್ಯೂ ಪಾಸಿಟಿವ್ ಪ್ರಕರಣಕ್ಕಿಂತ ಬಿಬಿಎಂಪಿ ವ್ಯಾಪ್ತಿಯಲ್ಲೇ ಹೆಚ್ಚು : ಇದೊಂದು ಎಚ್ಚರಿಕೆಯ ಗಂಟೆ!!

Next Post

IISC Dengue Forecasting Software | ಐಐಎಸ್ ಸ್ಸಿ ವಿಜ್ಞಾನ ಸಂಸ್ಥೆಯಿಂದ ಡೆಂಗ್ಯೂ ಮುನ್ಸೂಚನಾ ತಂತ್ರಾಂಶ : ನಾಳೆ ಬಿಡುಗಡೆ – ಇದರ ವಿಶೇಷತೆಗಳೇನು ಗೊತ್ತಾ?

Next Post
ಡೆಂಗ್ಯೂ ಮುನ್ಸೂಚನಾ ತಂತ್ರಾಂಶ ಕಾರ್ಯತಂತ್ರದ ಭಾಗದ ಸಾಂದರ್ಭಿಕ ಚಿತ್ರ.

IISC Dengue Forecasting Software | ಐಐಎಸ್ ಸ್ಸಿ ವಿಜ್ಞಾನ ಸಂಸ್ಥೆಯಿಂದ ಡೆಂಗ್ಯೂ ಮುನ್ಸೂಚನಾ ತಂತ್ರಾಂಶ : ನಾಳೆ ಬಿಡುಗಡೆ – ಇದರ ವಿಶೇಷತೆಗಳೇನು ಗೊತ್ತಾ?

G-20 Bharath Mandpam | ಜಿ-20 ಶೃಂಗಸಭೆ ಸಾಕ್ಷಿಯಾಗುವ "ಭಾರತ ಮಂಟಪ"ದ ವಿಶೇಷತೆಗಳೇನು?

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group