Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Netherlands Investment In Karnataka | ರಾಜ್ಯದಲ್ಲಿ 200ಕ್ಕೂ ಹೆಚ್ಚು ನೆದರ್ಲೆಂಡ್ ಕಂಪನಿಗಳಿಂದ 1 ಬಿಲಿಯನ್ ಅಮೆರಿಕನ್ ಡಾಲರ್ ಹೂಡಿಕೆ : ಡಿಸಿಎಂ ಡಿ.ಕೆ.ಶಿವಕುಮಾರ್

ಕರ್ನಾಟಕ ಬಂಡವಾಳ ಹೂಡಿಕೆದಾರರ ನೆಚ್ಚಿನ ತಾಣ, ರಾಜ್ಯದ ಇತರೆ ನಗರಗಳಲ್ಲೂ ಹೂಡಿಕೆ ಮಾಡಿ: ನೆದರ್ಲೆಂಡ್ ನಿಯೋಗಕ್ಕೆ ಡಿಸಿಎಂ ಆಹ್ವಾನ

by Bengaluru Wire Desk
September 11, 2023
in News Wire
Reading Time: 1 min read
0

ಬೆಂಗಳೂರು, ಸೆ.11 www.bengaluruwire.com : ಭಾರತದಲ್ಲಿ ನೆದರ್ಲೆಂಡ್ ಉದ್ಯಮಿಗಳ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ರಾಜ್ಯ ಶೇ.9ರಷ್ಟು ಬಂಡವಾಳವನ್ನು ಪಡೆದಿದೆ. ಅತ್ಯುತ್ತಮ ಕೈಗಾರಿಕಾ ನೀತಿ, ಮೂಲಭೂತ ಸೌಕರ್ಯ, ಮಾನವ ಸಂವನ್ಮೂಲ, ಪರಿಸರದಿಂದಾಗಿ ಕರ್ನಾಟಕ ರಾಜ್ಯ ಭಾರತದಲ್ಲೇ ಬಂಡವಾಳ ಹೂಡಿಕೆದಾರರ ನೆಚ್ಚಿನ ತಾಣವಾಗಿದೆ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ನೆದರ್ಲೆಂಡ್ ಪ್ರಧಾನ ಮಂತ್ರಿ ಮಾರ್ಕ್ ರುಟ್ಟೆ ಹಾಗೂ ಆ ದೇಶದ ಕಂಪನಿಗಳ ಪ್ರಮುಖರ ಜತೆ ಸಭೆ ನಡೆಸಿದಾಗ ಡಿ.ಕೆ. ಶಿವಕುಮಾರ್ ಮಾತನಾಡುತ್ತಾ, 

“ಕರ್ನಾಟಕ ಎಂದರೆ ಕೇವಲ ಬೆಂಗಳೂರು ಮಾತ್ರವಲ್ಲ, ಮೈಸೂರು, ಹುಬ್ಭಳ್ಳಿ, ಮಂಗಳೂರು, ಬೆಳಗಾವಿ ನಗರಗಳಲ್ಲಿ ಬಂಡವಾಳ ಹೂಡಿಕೆಗೆ ಅಗತ್ಯ ನೆರವು ನೀಡಲಾಗುವುದು. ಕರ್ನಾಟಕ ರಾಜ್ಯ ನೆದರ್ಲೆಂಡ್ ಜತೆಗೆ ಉತ್ತಮ ಬಾಂಧವ್ಯ ಹೊಂದಿದ್ದು, ಸಂಬಂಧವನ್ನು ಇನ್ನಷ್ಟು ವೃದ್ಧಿಗೊಳಿಸಲು ನಾವು ಬಯಸುತ್ತೇವೆ. ಕರ್ನಾಟಕ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡುತ್ತಿರುವವರ ಪೈಕಿ ಡಚ್ ಉದ್ಯಮಿಗಳು ಪ್ರಮುಖರಾಗಿದ್ದಾರೆ ಎಂದರು. 

ರಾಜ್ಯದ ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ನೆದರ್ಲ್ಯಾಂಡ್ ಪ್ರಧಾನಿ ಮಾರ್ಕ್ ರುಟ್ಟೆ ಜೊತೆ ಸೋಮವಾರ ಹಲವು ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಿದರು.

ರಾಜ್ಯದಲ್ಲಿ 25ಕ್ಕೂ ಹೆಚ್ಚು ಡಚ್ ಕಂಪನಿಗಳು ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಿವೆ. ಶೆಲ್ ಹಾಗೂ ಫಿಲಿಪ್ಸ್ ಕಂಪನಿಗಳ ಜಾಗತಿಕ ಕೇಂದ್ರಗಳು ಕರ್ನಾಟಕದಲ್ಲಿವೆ.

ದೇಶದಲ್ಲೇ 2ನೇ ಅತಿದೊಡ್ಡ ವಿದೇಶಿ ಬಂಡವಾಳ ಹೂಡಿಕೆ ಆಕರ್ಷಣೆ ಮಾಡಿರುವ ರಾಜ್ಯ :

ರಾಜ್ಯದಲ್ಲಿ ಬಂಡವಾಳ ಹೂಡಿಕೆದಾರರ ಸ್ನೇಹಿ ವಾತಾವರಣ ನಿರ್ಮಾಣಕ್ಕೆ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ. 2022-23ನೇ ಆರ್ಥಿಕ ವರ್ಷದಲ್ಲಿ ಕರ್ನಾಟಕ ದೇಶದಲ್ಲೇ 2ನೇ ಅತಿದೊಡ್ಡ ವಿದೇಶಿ ಬಂಡವಾಳ ಹೂಡಿಕೆ ಆಕರ್ಷಿಸಿದೆ. ಆ ಮೂಲಕ ದೇಶದಲ್ಲಿನ ಹೂಡಿಕೆಯಲ್ಲಿ ಶೇ.25ರಷ್ಟು ಹೂಡಿಕೆ ಕರ್ನಾಟಕ ರಾಜ್ಯದಲ್ಲಿ ಆಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. 

ರಾಜ್ಯದಲ್ಲಿ 200ಕ್ಕೂ ಹೆಚ್ಚು ನೆದರ್ಲೆಂಡ್ ಕಂಪನಿಗಳು 1 ಬಿಲಿಯನ್ ಅಮೆರಿಕನ್ ಡಾಲರ್ ಮೊತ್ತ ಹೂಡಿಕೆ ಮಾಡಿ ಕಾರ್ಯನಿರ್ವಹಣೆ ಮಾಡುತ್ತಿವೆ. ಡಚ್ ಕಂಪನಿಗಳ ಜತೆಗಿನ ಈ ಬಾಂಧವ್ಯವನ್ನು ಮತ್ತಷ್ಟು ಸಧೃಡಗೊಳಿಸಲು ನಾವು ಉತ್ಸುಕರಾಗಿದ್ದೇವೆ. ಕರ್ನಾಟಕ ಹಾಗೂ ನೆದರ್ಲೆಂಡ್ ದೇಶ ಆಹಾರ ಉತ್ಪನ್ನ, ಜೈವಿಕ ತಂತ್ರಜ್ಞಾನ, ಫಾರ್ಮಾ, ಇನ್ನೋವೇಷನ್ ಮತ್ತು ಸಂಶೋಧನೆ ಮತ್ತು ಅಭಿವೃದ್ಧಿ ಸೇರಿದಂತೆ ಅನೇಕ ವಿಚಾರಗಳಲ್ಲಿ ಸಾಮ್ಯತೆಗಳನ್ನು ಹೊಂದಿವೆ ಎಂದರು. 

ಉತ್ತಮ ಕೈಗಾರಿಕಾ ನೀತಿಗಳ ಮೂಲಕ ಉದ್ಯಮಸ್ನೇಹಿ ವಾತಾವರಣ :

ನಾವು ಕೃತಕ ಬುದ್ಧಿಮತ್ತೆ(AI), ಉತ್ಪಾದನೆ ಮತ್ತು ಸಂಶೋಧನೆ ಮತ್ತು ಅಭಿವೃದ್ಧಿಯಂತಹ ಕ್ಷೇತ್ರಗಳಿಗೆ ಪ್ರತ್ಯೇಕ ಕೈಗಾರಿಕಾ ನೀತಿ ಹೊಂದಿದ್ದೇವೆ.  ಈ ನೀತಿಯಲ್ಲಿ 6-10 ವರ್ಷಗಳವರೆಗೆ ವಾರ್ಷಿಕ ವಹಿವಾಟಿನಲ್ಲಿ 2.25% ಬಂಡವಾಳ ಉತ್ತೇಜನ ಸಬ್ಸಿಡಿ ನೀಡಲಾಗುವುದು. ಇದರ ಜೊತೆಗೆ ನಮ್ಮಲ್ಲಿ ಏರೋಸ್ಪೇಸ್, ರಕ್ಷಣೆ, ಸಂಚಾರ, ಸಂಶೋಧನೆ ಮತ್ತು ಅಭಿವೃದ್ಧಿ, ದತ್ತಾಂಶ ಕೇಂದ್ರ, ಮತ್ತು ಜವಳಿ ಕ್ಷೇತ್ರಗಳಿಗೆ ಪ್ರತ್ಯೇಕ ನೀತಿ ಹೊಂದಲಾಗಿದೆ. ಪ್ರತಿ ಕ್ಷೇತ್ರದಲ್ಲೂ ಬಂಡವಾಳ ಆಕರ್ಷಣೆಗೆ ಸಹಾಯಕವಾಗಿವೆ. ಉತ್ತಮ ಕಾರ್ಮಿಕ ನೀತಿ ಮೂಲಕ ಕಂಪನಿಗಳು ಹಾಗೂ ಉದ್ಯೋಗಿಗಳಿಗೆ ಪೂರಕವಾದ ವಾತಾವರಣ ನಿರ್ಮಾಣ ಮಾಡಲಾಗಿದೆ ಎಂದು ನೆದರ್ ಲ್ಯಾಂಡ್ ಕೈಗಾರಿಕೋದ್ಯಮಿಗಳಿಗೆ ಡಿಸಿಎಂ ಮಾಹಿತಿ ನೀಡಿದರು. 

ಬಂಡವಾಳ ಹೂಡಿಕೆದಾರ ಸ್ನೇಹಿ ನೀತಿಗಳಿಂದಾಗಿ ಕರ್ನಾಟಕ ರಾಜ್ಯ 2022-23ನೇ ಸಾಲಿನಲ್ಲಿ 4.67 ಟ್ರಿಲಿಯನ್ ಬಂಡವಾಳವನ್ನು ಆಕರ್ಷಿಸಿದೆ. ಆ ಮೂಲಕ ಕರ್ನಾಟಕ ರಾಜ್ಯ 400 ಕ್ಕೂ ಹೆಚ್ಚು ಬಹುರಾಷ್ಟ್ರೀಯ ಕಂಪನಿಗಳ ತಾಣವಾಗಿದೆ. 

ಕರ್ನಾಟಕ ರಾಜ್ಯ ಎಲ್ಲಾ ಪ್ರಮುಖ ಮಾರುಕಟ್ಟೆಗಳಿಗೆ ಅತ್ಯುತ್ತಮ ಸಂಪರ್ಕ ವ್ಯವಸ್ಥೆ ಹೊಂದುವ ಮೂಲಕ ಭಾರತದಲ್ಲಿ ಬಂಡವಾಳ ಹೂಡಿಕೆ ಹಾಗೂ ರಫ್ತಿನಲ್ಲಿ ಅಗ್ರಸ್ಥಾನದಲ್ಲಿದೆ. 2 ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು, 47 ರಾಷ್ಟ್ರೀಯ ಹೆದ್ದಾರಿಗಳು, 145 ರಾಜ್ಯ ಹೆದ್ದಾರಿಗಳು, 3818 ಕಿ.ಮೀ ರೈಲ್ವೇ ಸಂಪರ್ಕ, 1 ದೊಡ್ಡ ಬಂದರು ಹಾಗೂ 13 ಸಣ್ಣ ಬಂದರುಗಳನ್ನು ಹೊಂದಿದೆ. ರಾಜ್ಯ ಸರ್ಕಾರ ಬಂಡವಾಳ ಆಕರ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಡಿಪಿಐಐಟಿಯ ಉದ್ಯಮಸ್ನೇಹಿ ಸೂಚ್ಯಂಕದಲ್ಲಿ ಕರ್ನಾಟಕ ಅಗ್ರ ಸ್ಥಾನ ಪಡೆದಿದೆ.

ಬೆಂಗಳೂರು ದೇಶದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ಮೆಟ್ರೋಪಾಲಿಟನ್ ನಗರ : 

ಇಡೀ ವಿಶ್ವದಲ್ಲೇ 2,050 ಮೆ.ವ್ಯಾಟ್ ವಿದ್ಯುತ್ ಉತ್ಪಾದಿಸುವ ಸೋಲಾರ್ ಪಾರ್ಕ್ ಅನ್ನು ಕರ್ನಾಟಕದ ಪಾವಗಡದಲ್ಲಿ ನಿರ್ಮಿಸಲಾಗಿದೆ. ದೇಶದಲ್ಲಿ ಮೊದಲು ಇವಿ ನೀತಿ ಪ್ರಕಟಿಸಿದ ರಾಜ್ಯ ಎಂದರೆ ಅದು ಕರ್ನಾಟಕ. ಬೆಂಗಳೂರು ದೇಶದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ಮೆಟ್ರೋಪಾಲಿಟನ್ ನಗರವಾಗಿದ್ದು, ಪ್ರೈಮ್ ಗ್ಲೋಬಲ್ ಸಿಟೀಸ್ ಇಂಡೆಕ್ಸ ನಲ್ಲಿ 16ನೇ ಸ್ಥಾನ ಪಡೆದಿದೆ. ಜೊತೆಗೆ ಭಾರತದ ತಂತ್ರಜ್ಞಾನ ನಗರವಾಗಿ ಪರಿಗಣಿಸಲಾಗಿದ್ದು, ಅಮೆರಿಕದ ಕಂಪನಿಗಳಿಗೆ ನೆಚ್ಚಿನ ತಾಣವಾಗಿದೆ. ಕಾಸ್ಮೋಪಾಲಿಟನ್ ಸಂಸ್ಕೃತಿ, ಪ್ರತಿಭಾವಂತ ಸಂಪನ್ಮೂಲ, ಆವಿಷ್ಕಾರದ ಸಂಸ್ಕೃತಿ, ಮಾನವ ಸಂಪನ್ಮೂಲ ಬೆಂಗಳೂರಿನ ಶಕ್ತಿಯಾಗಿವೆ‌ ಎಂದಿದ್ದಾರೆ.

ರಾಜ್ಯದ ಇತರ ನಗರಗಳೂ ಪ್ರಬಲವಾಗಿವೆ :

ಕರ್ನಾಟಕ ಎಂದರೆ ಕೇವಲ ಬೆಂಗಳೂರು ಮಾತ್ರವಲ್ಲ. ಇನ್ನು ಅನೇಕ ಸುಂದರ ಹಾಗೂ ಪ್ರಬಲ ನಗರಗಳಿವೆ. ಈ ನಗರಗಳು ಅತ್ಯುತ್ತಮ ಮಾನವ ಸಂಪನ್ಮೂಲ ಹೊಂದಿದ್ದು, ಬೆಂಗಳೂರಿನ ಪರಿಸರವನ್ನೇ ಹೊಂದಿವೆ. ಹೀಗಾಗಿ ಕೈಗಾರಿಕೆಗಳು ಮೈಸೂರು, ಹುಬ್ಬಳ್ಳಿ-ಧಾರವಾಡ, ಮಂಗಳೂರು, ದಾವಣಗೆರೆ, ತುಮಕೂರು, ಬೆಳಗಾವಿ, ಕಲ್ಬುರ್ಗಿ ನಗರಗಳತ್ತಲೂ ಗಮನಹರಿಸಬೇಕಿದೆ. ಈ ನಗರಗಳು ವೇಗವಾಗಿ ಬೆಳೆಯುತ್ತಿದ್ದು, ಐಟಿ ಸೇರಿದಂತೆ ಅನೇಕ ಕ್ಷೇತ್ರಗಳಿಗೆ ಈ ನಗರಗಳು ಉತ್ತಮ ಅವಕಾಶವನ್ನು ಸೃಷ್ಟಿಸಬಲ್ಲದು. ಕೈಗಾರಿಕೆಗಳು ಬೆಂಗಳೂರಿನ ಹೊರತಾಗಿ ಈ ನಗರಗಳಲ್ಲಿ ಆರಂಭಿಸಲು ನಮ್ಮ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ. ಇದರ ಪ್ರಯೋಜನವನ್ನು ಬಳಸಿಕೊಳ್ಳಿ ಎಂದು ನೆದರ್ಲೆಂಡ್ ನಿಯೋಗಕ್ಕೆ ಡಿಸಿಎಂ ತಿಳಿಸಿದ್ದಾರೆ.

WhatsApp Join our WhatsApp Channel
Previous Post

BW IMPACT | ಬೆಂಗಳೂರು ವೈರ್ ವರದಿ ಪರಿಣಾಮ : 150 ಗುತ್ತಿಗೆ ಎಂಜಿನಿಯರ್ ಗಳ ಮೇ ತಿಂಗಳ ವೇತನ ಪಾವತಿಸಿದ ಬಿಬಿಎಂಪಿ

Next Post

BW SPECIAL | Food Investigation | ರಾಜ್ಯಮಟ್ಟದ ಆಹಾರ ಜಾಗೃತಿ ಮತ್ತು ತನಿಖಾ ದಳದಿಂದ 3.5 ವರ್ಷದಲ್ಲಿ 9,675 ಟನ್ ಅಕ್ಕಿ, 1,950 ಟನ್ ರಾಗಿ, 871 ಟನ್ ಜೋಳ ವಶ!!

Next Post
ಅಕ್ಕಿ ಗೋದಾಮುವೊಂದರ ಸಾಂದರ್ಭಿಕ ಚಿತ್ರ.

BW SPECIAL | Food Investigation | ರಾಜ್ಯಮಟ್ಟದ ಆಹಾರ ಜಾಗೃತಿ ಮತ್ತು ತನಿಖಾ ದಳದಿಂದ 3.5 ವರ್ಷದಲ್ಲಿ 9,675 ಟನ್ ಅಕ್ಕಿ, 1,950 ಟನ್ ರಾಗಿ, 871 ಟನ್ ಜೋಳ ವಶ!!

ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಇಲಾಖೆಯ ಲಾಂಛನ. (ಸಾಂದರ್ಭಿಕ ಚಿತ್ರ)

Airport Customs | ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ : ಕ್ಯಾಪ್ಸೂಲ್ ನಲ್ಲಿ ಡ್ರಗ್ಸ್ ಹಾಗೂ ರಟ್ಟಿನ ಡಬ್ಬದಲ್ಲಿ ಚಿನ್ನದ ಪುಡಿ ಕಳ್ಳಸಾಗಾಣಿಕೆ - ಇಲ್ಲಿದೆ ಕುತೂಹಲಕಾರಿ ಮಾಹಿತಿ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group