Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಮೂಲಸೌಕರ್ಯ ಕಲ್ಪಿಸದ ಖಾಸಗಿ ಲೇಔಟ್ ಗಳ ಡೆವಲಪರ್ ಗಳಿಗೆ ನೋಟೀಸ್ ನೀಡಲು ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

"ನಮಗೂ ಬಿಬಿಎಂಪಿ ಚುನಾವಣೆ ನಡೆಸಬೇಕು ಎನ್ನುವ ಅಭಿಲಾಷೆ ಇದೆ. ಈ ವಿಚಾರ ನ್ಯಾಯಾಲಯದಲ್ಲಿ ಇರುವ ಕಾರಣ ತಡವಾಗುತ್ತಿದೆ" - ಡಿಸಿಎಂ ಡಿಕೆ ಶಿವಕುಮಾರ್

by Bengaluru Wire Desk
May 20, 2024
in Bengaluru Focus
Reading Time: 1 min read
0
ಯಲಹಂಕದ ರಮಣಶ್ರೀ ಕ್ಯಾಲಿಫೋರ್ನಿಯ ಲೇಔಟ್ ನ ಮಳೆ ಪೀಡಿತ ಪ್ರದೇಶವನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸೋಮವಾರ ಪರಿಶೀಲಿಸಿ, ನಿವಾಸಿಗಳ ಅಹವಾಲು ಆಲಿಸಿದರು.

ಯಲಹಂಕದ ರಮಣಶ್ರೀ ಕ್ಯಾಲಿಫೋರ್ನಿಯ ಲೇಔಟ್ ನ ಮಳೆ ಪೀಡಿತ ಪ್ರದೇಶವನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸೋಮವಾರ ಪರಿಶೀಲಿಸಿ, ನಿವಾಸಿಗಳ ಅಹವಾಲು ಆಲಿಸಿದರು.

ಬೆಂಗಳೂರು, ಮೇ.20 www.bengaluruwire.com : “ಮೂಲಸೌಕರ್ಯ ವ್ಯವಸ್ಥೆಗಳನ್ನು ಸರಿಯಾಗಿ ನೀಡದ ಖಾಸಗಿ ಲೇಔಟ್ ಗಳ ಡೆವಲಪರ್ ಗಳಿಗೆ ನೋಟೀಸ್ ಜಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ರಾಚೇನಹಳ್ಳಿ ಕೆರೆಯ ಬಳಿ ರಾಜಕಾಲುವೆ ಪರಿಶೀಲಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. “ಖಾಸಗಿ ಲೇಔಟ್ ಗಳಲ್ಲಿ ನೀರು ಹರಿಯಲು ಸೂಕ್ತ ವ್ಯವಸ್ಥೆ ರೂಪಿಸದ ಕಾರಣ ಮನೆಗಳಿಗೆ ನೀರು ನುಗ್ಗಿದೆ. ಮಳೆ ನೀರು ಹಾಗೂ ಕೊಳಚೆ ನೀರನ್ನು ಒಟ್ಟಿಗೆ ಬಿಟ್ಟಿರುವ ಕಾರಣಕ್ಕೆ ಸಮಸ್ಯೆಗಳು ಉಂಟಾಗುತ್ತಿವೆ. ಲೇಔಟ್ ಗಳನ್ನು ರೂಪಿಸುವಾಗ ಸೂಕ್ತ ವ್ಯವಸ್ಥೆ ಮಾಡದಿರುವುದು ಡೆವಲಪರ್ ಗಳ ತಪ್ಪು. ಜನರಿಂದ ಹಣ ಪಡೆದು ಮಳೆ ನೀರು ಹರಿಯಲು ಸೂಕ್ತ ವ್ಯವಸ್ಥೆ ಮಾಡದೇ ಇರುವ ಕಾರಣಕ್ಕೆ ಜನ ತೊಂದರೆ ಅನುಭವಿಸುತ್ತಿದ್ದಾರೆ. ಡೆವಲಪರ್ ಗಳು ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಿಲ್ಲ. ಅವರಿಂದ ಆಗಿರುವ ತೊಂದರೆ ನಿವಾರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು.

ಬೆಂಗಳೂರಿನ ಜನತೆಗೆ ತೊಂದರೆ ಆಗಬಾರದು :

ಬ್ರಾಂಡ್ ಬೆಂಗಳೂರು ಯೋಜನೆ ಮೂಲಕ ಈ ತೊಂದರೆಗಳಿಗೆ ಮುಕ್ತಿ ಸಿಗಬಹುದೇ ಎಂದು ಕೇಳಿದಾಗ, “ಪರಿಹಾರ ನೀಡಬೇಕು ಎಂಬ ಉದ್ದೇಶದಿಂದಲೇ ತೊಂದರೆಯಾದ ಜಾಗಗಳಿಗೆ ಭೇಟಿ ನೀಡಿದ್ದೇನೆ. ಕೇವಲ ಕಿವಿಯಲ್ಲಿ ಕೇಳಬಾರದು, ಕಣ್ಣಲ್ಲಿ ನೋಡಬೇಕು ಎಂದು ಅಧಿಕಾರಿಗಳ ಜೊತೆ ಬಂದಿದ್ದೇನೆ”. ಪ್ರತಿ ವರ್ಷ ಎಲ್ಲೆಲ್ಲಿ ಮಳೆಯಿಂದ ತೊಂದರೆ ಆಗುತ್ತದೆಯೋ ಆ ಪ್ರದೇಶಗಳನ್ನು ಗುರುತಿಸಿ ಹಂತ, ಹಂತವಾಗಿ ಅಭಿವೃದ್ಧಿ ಮಾಡಲಾಗುವುದು”. ರಾಜಕಾಲುವೆ ಒತ್ತುವರಿ ಬಗ್ಗೆ ಕೇಳಿದಾಗ “ಎಲ್ಲೆಲ್ಲಿ ಖಾಸಗಿ ಲೇಔಟ್ ನವರು ಒತ್ತುವರಿ ಮಾಡಿದ್ದಾರೋ ಅಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು. ಎಸ್ ಟಿಪಿ ಅಳವಡಿಕೆ ಮಾಡದವರಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು”. ಸ್ಕೈ ಡೆಕ್ ನಿರ್ಮಾಣದ ಬಗ್ಗೆ ಕೇಳಿದಾಗ, “ಬೆಂಗಳೂರಿಗೆ ಒಂದು ಒಳ್ಳೆಯ ಪ್ರವಾಸಿ ಕೇಂದ್ರ ಬೇಕು ಎನ್ನುವ ಆಲೋಚನೆ ನಮ್ಮಲಿದೆ. ಅಧಿಕಾರಿಗಳು ಯೋಜನಾ ವರದಿ ನೀಡಿದ್ದಾರೆ. ಟೆಂಡರ್ ಕರೆಯಲು ಸಿದ್ಧತೆ ಮಾಡಿಕೊಂಡಿದ್ದು, ಪಾರ್ಕಿಂಗ್, ಜಾಗದ ಲಭ್ಯತೆ ಮತ್ತಿತರ ಅಂಶಗಳನ್ನು ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಲಾಗುವುದು” ಎಂದು ತಿಳಿಸಿದರು.

ಯಲಹಂಕದ ಜವಹರಲಾಲ್ ಆಧುನಿಕ ವೈಜ್ಞಾನಿಕ ಸಂಶೋಧನೆ ಕೇಂದ್ರದ ಮಳೆ ಪೀಡಿತ ಪ್ರದೇಶವನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸೋಮವಾರ ಪರಿಶೀಲಿಸಿ, ನಿವಾಸಿಗಳ ಅಹವಾಲು ಆಲಿಸಿದರು.

ಬಿಬಿಎಂಪಿ ಚುನಾವಣೆ ಬಗ್ಗೆ ಕೇಳಿದಾಗ “ನಮಗೂ ಬಿಬಿಎಂಪಿ ಚುನಾವಣೆ ನಡೆಸಬೇಕು ಎನ್ನುವ ಅಭಿಲಾಷೆ ಇದೆ. ಈ ವಿಚಾರ ನ್ಯಾಯಾಲಯದಲ್ಲಿ ಇರುವ ಕಾರಣ ತಡವಾಗುತ್ತಿದೆ”. ಮಳೆಗಾಲ ಆರಂಭಕ್ಕೂ ಮುನ್ನ ಡಿಸಿಎಂ ನಗರ ಪ್ರದಕ್ಷಿಣೆ; ಪಾಲಿಕೆಯ ಪೂರ್ವಸಿದ್ಧತೆ ಪರಿಶೀಲನೆ ಮಾಡಿದರು. ಮಳೆಗಾಲ ಆರಂಭದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗುವ ಸ್ಥಳಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಯಲಹಂಕದ ರಮಣಶ್ರೀ ಗಾರ್ಡೇನಿಯಾ ಲೇಔಟ್ ಗೆ ಭೇಟಿ ನೀಡಿ, ಸ್ಥಳೀಯ ನಿವಾಸಿಗಳ ಜತೆ ಚರ್ಚೆ ನಡೆಸಿದರು. “ಕಳೆದ ಎರಡು ವರ್ಷಗಳ ಹಿಂದೆ ಈ ಭಾಗದಲ್ಲಿ ಕಾಲುವೆ ಇರಲಿಲ್ಲ. ಪಾಲಿಕೆ ವತಿಯಿಂದ ಕಾಲುವೆ ನಿರ್ಮಿಸಿ ಅದನ್ನು ಮುಂದೆ ತೆಗೆದುಕೊಂಡು ಹೋಗದೆ ಇಲ್ಲಿಗೆ ನಿಲ್ಲಿಸಿದ್ದಾರೆ. ಇದರಿಂದಾಗಿ ಸಣ್ಣ ಮಳೆಗೆ ಮನೆಗಳ ಒಳಗೆ ನೀರು ನುಗ್ಗಿದೆ. ಈ ಕಾಲುವೆ ಮುಂದೆ ವಿಸ್ತರಣೆ. ಮಳೆ ನೀರು ಕಾಲುವೆ ಹಾಗು ಚರಂಡಿಯನ್ನು ಪ್ರತ್ಯೇಕವಾಗಿ ಮಾಡಬೇಕು. ಇಲ್ಲಿರುವ ಕೆರೆಗೆ ಕೊಳಚೆ ನೀರು ಬಿಡಬಾರದು” ಎಂದು ಸ್ಥಳೀಯ ನಿವಾಸಿಗಳು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಉಪಮುಖ್ಯಮಂತ್ರಿಗಳು, “ಮುಂದೆ ಅರಣ್ಯ ಇಲಾಖೆ ಜಾಗ ಇರುವ ಕಾರಣ, ಅವರು ಕಾಲುವೆಯನ್ನು ಮುಂದೆ ವಿಸ್ತರಿಸಲು ಅನುಮತಿ ನೀಡಿರಲಿಲ್ಲ. ಇಂದು ಬೆಳಗ್ಗೆ ಪಾಲಿಕೆ ಅಧಿಕಾರಿಗಳು ಅರಣ್ಯ ಅಧಿಕಾರಿಗಳ ಜತೆ ಸಭೆ ಮಾಡಿದ್ದು, ಕಾಲುವೆ ಮುಂದಕ್ಕೆ ತೆಗೆದುಕೊಂಡು ಹೋಗಲು ಅನುಮತಿ ಪಡೆಯಲಾಗಿದೆ. ಮಳೆ ನೀರು ಹಾಗೂ ಚರಂಡಿ ನೀರು ಹರಿಯಲು ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಾಗುವುದು. ಆದಷ್ಟು ಬೇಗ ಈ ಕಾಮಗಾರಿ ಪೂರ್ಣಗೊಳಿಸಲಾಗುವುದು. ಇನ್ನು ಬೆಂಗಳೂರಿನ ಯಾವುದೇ ಕೆರೆಗಳಿಗೆ ಕೊಳಚೆ ನೀರು ಹರಿಸುವುದಿಲ್ಲ. ಸಂಸ್ಕರಿಸಿದ ನೀರನ್ನು ಮಾತ್ರ ಬಿಡಲಾಗುವುದು. ಈ ಬಾರಿ ಏಳು ಸಾವಿರ ಕೊಳವೆ ಬಾವಿ ಬತ್ತಿದ ಪರಿಣಾಮ ನೀರಿನ ಸಮಸ್ಯೆ ಎದುರಾಗಿದ್ದು, ಮುಂದೆ ಇಂತಹ ಸಮಸ್ಯೆ ಬಾರದಂತೆ ಎಚ್ಚರ ವಹಿಸಲಾಗುವುದು” ಎಂದು ತಿಳಿಸಿದರು.

ನಂತರ ಉಪಮುಖ್ಯಮಂತ್ರಿಗಳು ರಾಚೇನಹಳ್ಳಿ ಕೆರೆ ಪಕ್ಕದಲ್ಲಿರುವ ಜವಾಹರ್ ಲಾಲ್ ನೆಹರು ಆಧುನಿಕ ವಿಜ್ಞಾನ ಸಂಶೋಧನಾ ಕೇಂದ್ರ (JNCSAR)ದಲ್ಲಿ ಹಾದುಹೋಗಿರುವ ರಾಜಕಾಲುವೆ ಪರಿಶೀಲನೆ ನಡೆಸಿದರು. ಈ ರಾಜಕಾಲುವೆ ತಡೆಗೋಡೆ ಎತ್ತರ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಿದರು. ಈ ವೇಳೆ “ಮುಂದಿನ ಒಂದು ತಿಂಗಳ ಒಳಗಾಗಿ ಈ ಕಾಮಗಾರಿ ಪೂರ್ಣಗೊಳಿಸಲಾಗುವುದು. ಅಷ್ಟರ ಒಳಗಾಗಿ ಮತ್ತೆ ಮಳೆ ಬಂದರೆ ಪ್ರವಾಹ ಪರಿಸ್ಥಿತಿ ತಡೆಯಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ” ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ನಂತರ ಉಪಮುಖ್ಯಮಂತ್ರಿಗಳು ಗೆದ್ದಲಹಳ್ಳಿ ಬಳಿ ರಾಜಕಾಲುವೆ ಕಾಮಗಾರಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ವೇಳೆ ಸ್ಥಳೀಯ ನಿವಾಸಿಗಳು, “ಪ್ರತಿ ಬಾರಿ ಮಳೆ ಬಂದರೂ ಇಲ್ಲಿ ಮನೆಯೊಳಗೆ ನೀರು ನುಗ್ಗುತ್ತದೆ. ಈ ಸಮಸ್ಯೆಗೆ ಪರಿಹಾರ ಕಲ್ಪಿಸಿ” ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು, “ಖಾಸಗಿ ಬಡಾವಣೆ ಮಾಡಿರುವವರು ಸರಿಯಾದ ರೀತಿಯಲ್ಲಿ ಮೂಲಸೌಕರ್ಯ ಒದಗಿಸದ ಕಾರಣ ಈ ಸಮಸ್ಯೆ ಎದುರಾಗಿದೆ. ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದಲೇ ಇಲ್ಲಿಗೆ ಬಂದು ಪರಿಶೀಲನೆ ಮಾಡುತ್ತಿದ್ದೇವೆ” ಎಂದರು.

WhatsApp Join our WhatsApp Channel
Previous Post

Elephant Census 2024 | ರಾಜ್ಯದಲ್ಲಿ ಮೇ 23 ರಿಂದ ಮೂರು ದಿನ ಸಂಯೋಜಿತ ಆನೆ ಗಣತಿ 2024: ಎಲ್ಲೆಲ್ಲಿ ಮತ್ತು ಹೇಗೆ ಸೆನ್ಸೆಸ್ ನಡೆಯುತ್ತೆ ಗೊತ್ತಾ? ಇಲ್ಲಿದೆ ವಿವರ

Next Post

Hanuman Chalisa Kannada | ಹನುಮಾನ್ ಚಾಲೀಸಾ ಮಹತ್ವ ಮತ್ತು ಅದರ ನಾನಾ ರೀತಿಯ ಪ್ರಯೋಜನಗಳು : ಇಲ್ಲಿದೆ ಸಂಪೂರ್ಣ ಮಾಹಿತಿ

Next Post
ವೀರಾಂಜನೇಯನ ಸಾಂದರ್ಭಿಕ ಚಿತ್ರ.

Hanuman Chalisa Kannada | ಹನುಮಾನ್ ಚಾಲೀಸಾ ಮಹತ್ವ ಮತ್ತು ಅದರ ನಾನಾ ರೀತಿಯ ಪ್ರಯೋಜನಗಳು : ಇಲ್ಲಿದೆ ಸಂಪೂರ್ಣ ಮಾಹಿತಿ

ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣವೊಂದನ್ನು ಭೇದಿಸಿದಾಗ 176 ಮೊಬೈಲ್ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದ್ದು, ಪೊಲೀಸರು ವಶಪಡಿಸಿಕೊಂಡ ಮೊಬೈಲ್ ಗಳನ್ನು ಪ್ರದರ್ಶನದಲ್ಲಿಟ್ಟಿದ್ದಾರೆ. ನಗರ ಪೊಲೀಸ್ ಆಯುಕ್ತ ದಯಾನಂದ್ ಅದನ್ನು ಪರಿಶೀಲಿಸಿ ಪೊಲೀಸ್ ಅಧಿಕಾರಿಗಳೊಂದಿಗೆ ಸಮಾಲೋಚಿಸುತ್ತಿರುವ ಚಿತ್ರ.

Bangalore Crime News | ಬೆಂಗಳೂರಿನಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಮೂವರ ಬಂಧನ : 25 ಲ್ಯಾಪ್ ಟಾಪ್, 176 ಮೊಬೈಲ್ ಫೋನ್ ವಶ

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group