Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

KHIR City | ಬೆಂಗಳೂರು : ದೇಶದ ಮೊದಲ ಕೆಎಚ್ಐಆರ್ ಸಿಟಿ ಯೋಜನೆಗೆ ಆ.23ಕ್ಕೆ ಚಾಲನೆ ; ಎಲ್ಲಿ ಬರಲಿದೆ ಬಹು ವೈವಿಧ್ಯಮಯ ನಗರ? : ರಿಯಲ್ ಎಸ್ಟೇಟ್ ಉದ್ಯಮಕ್ಕೇನು ಲಾಭ?

ರಾಜ್ಯದಲ್ಲೇ ನೆಲೆ ಹೊಂದಿರುವ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಉದ್ದಿಮೆಗಳು ಮತ್ತು ಸಂಶೋಧನಾ ಸಂಸ್ಥೆಗಳಿಗೂ ಇಲ್ಲಿ ಅವಕಾಶವಿರಲಿದೆ.

by Bengaluru Wire Desk
August 5, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ಆ.5 www.bengaluruwire.com : ಸಿಲಿಕಾನ್ ಸಿಟಿ ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಒಂದಲ್ಲಾ ಒಂದು ವಿಚಾರದಲ್ಲಿ‌ಗಮನ ಸೆಳೆಯುತ್ತಿದೆ. ಇದೀಗ ದೇಶದಲ್ಲೇ ಪ್ರಪ್ರಥಮ ಎನ್ನಲಾದ, ಬಹು ಮಹತ್ತ್ವಾಕಾಂಕ್ಷೆಯ `ನಾಲೆಡ್ಜ್, ಹೆಲ್ತ್ ಇನ್ನೋವೇಶನ್ ಮತ್ತು ರೀಸರ್ಚ್ ಸಿಟಿ’ (Knowledge, Health Innovation And Research City) ಕೆಎಚ್ಐಆರ್ ಸಿಟಿ) ಯೋಜನೆಯ ಮೊದಲನೇ ಹಂತಕ್ಕೆ ಆ.23ರ ಶುಕ್ರವಾರ ಚಾಲನೆ ನೀಡಲಾಗುತ್ತಿದೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು, `ನಗರದಿಂದ 60 ಕಿ.ಮೀ. ದೂರದಲ್ಲಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport Ltd. – KIAL)ದ ಸಮೀಪ ಒಟ್ಟು 2,000 ಎಕರೆಯಲ್ಲಿ ಕೆಎಚ್ಐಆರ್ ಸಿಟಿ ಅಭಿವೃದ್ಧಿಪಡಿಸಲಾಗುವುದು. ಮೊದಲ ಹಂತದಲ್ಲಿ ಒಂದು ಸಾವಿರ ಎಕರೆ ಜಾಗದಲ್ಲಿ ಯೋಜನೆ ತಲೆ ಎತ್ತಲಿದೆ. ಒಟ್ಟು ಎರಡೂ ಹಂತಗಳಲ್ಲಿ 40 ಸಾವಿರ ಕೋಟಿ ರೂ.ಗಳಿಗಿಂತಲೂ ಹೆಚ್ಚು ಹೂಡಿಕೆ ಆಗಲಿದ್ದು, 50 ಸಾವಿರ ಉದ್ಯೋಗಗಳು ಸೃಷ್ಟಿಯಾಗಲಿವೆ. 23ರ ಬೆಳಿಗ್ಗೆ 11 ಗಂಟೆಗೆ ನಗರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕೆಎಚ್ಐಆರ್ ಸಿಟಿಗೆ ಚಾಲನೆ ಸಿಗಲಿದೆ’ ಎಂದು ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ. ಉದ್ಯಮ ವಲಯದ ಪ್ರಮುಖರು ಕೂಡ ಭಾಗವಹಿಸಲಿದ್ದು, ಗಣ್ಯಾತಿಗಣ್ಯ ಅತಿಥಿಗಳ ಹೆಸರುಗಳು ಅಂತಿಮವಾಗುತ್ತಿವೆ ಎಂದರು.

ಪ್ರಪಂಚದ ಬೇರೆಬೇರೆ ಭಾಗಗಳಲ್ಲಿಯೂ ವಿಶೇಷ ನಗರಗಳ ಪರಿಕಲ್ಪನೆ ಇದೆ. ಕೇಂದ್ರ ಸರಕಾರ ಕೂಡ ಇದೇ ಮಾದರಿಯನ್ನು ಅನುಸರಿಸುತ್ತದೆ. ಆದರೆ, ಕೆಎಚ್ಐಆರ್ ಸಿಟಿಯಲ್ಲಿ ನಾಲ್ಕೂ ವಲಯಗಳಲ್ಲಿನ ಜಾಗತಿಕ ಮಟ್ಟದ ಅತ್ಯುನ್ನತ ಕಂಪನಿಗಳು ನೆಲೆಯೂರಲಿವೆ. ಇದಕ್ಕೆ ಬೇಕಾದ ಜಮೀನು, ವಿದ್ಯುತ್, ನೀರು, ರಸ್ತೆ ಮತ್ತಿತರ ಸೌಲಭ್ಯಗಳನ್ನು ರಾಜ್ಯ ಸರಕಾರ ಒದಗಿಸಲಿದೆ. ಇದರಿಂದ ಆರ್ಥಿಕ ವರಮಾನ ಹೆಚ್ಚಳದ ಜೊತೆಗೆ ರಫ್ತು ವಹಿವಾಟು ಕೂಡ ವೃದ್ಧಿಸಲಿದೆ. ಇದರಿಂದಾಗಿ ಬೆಂಗಳೂರು ನಗರವು ಇನ್ನೊಂದು ಸ್ತರಕ್ಕೆ ಮೇಲೇರಲಿದೆ ಎಂದು ಅವರು ಹೇಳಿದ್ದಾರೆ.

ಜಾಗತಿಕವಾಗಿ ಉತ್ಕೃಷ್ಟ ಮಟ್ಟದ ಉದ್ದಿಮೆಗಳು, ವಿಶ್ವವಿದ್ಯಾಲಯಗಳು, ಮೆಡಿಕಲ್ ಟೂರಿಸಂ, ಸಂಶೋಧನೆ, ಚಿಕಿತ್ಸೆ, ನಾವೀನ್ಯತೆ ಇವುಗಳಿಗೆ ಉದ್ದೇಶಿತ ಸಿಟಿಯಲ್ಲಿ ಆದ್ಯತೆ ನೀಡಲಾಗುವುದು. ಜೊತೆಗೆ ಭವಿಷ್ಯದ ಸಂಚಾರ ವ್ಯವಸ್ಥೆ, ಸೆಮಿಕಂಡಕ್ಟರ್, ಅಡ್ವಾನ್ಸ್ಡ್ ಮೆಟೀರಿಯಲ್ಸ್, ನವೋದ್ಯಮಗಳು, ವೈಮಾಂತರಿಕ್ಷ, ರಕ್ಷಣೆ ಮತ್ತು ಬಾಹ್ಯಾಕಾಶ ತಂತ್ರಜ್ಞಾನ, ಜೀವವಿಜ್ಞಾನಗಳು ಮತ್ತು ಆಧುನಿಕ ತಂತ್ರಜ್ಞಾನ ವಲಯಗಳ ಕಂಪನಿಗಳು ಕೂಡ ಇಲ್ಲಿ ಬರಲಿವೆ.

ಮುಖ್ಯವಾಗಿ ಒಟ್ಟಾರೆ ಯೋಜನೆಯಿಂದ ಅಪಾರ ಸಂಖ್ಯೆಯ ಪರೋಕ್ಷ ಉದ್ಯೋಗಗಳು ಕೂಡ ಸೃಷ್ಟಿಯಾಗಲಿವೆ. ಇದರಿಂದ ಸ್ಥಳೀಯವಾಗಿ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ. ಇದಕ್ಕಾಗಿ ಸರಕಾರವು ಸ್ಪಷ್ಟ ರೂಪುರೇಷೆಯನ್ನು ಈಗಾಗಲೇ ಆಖೈರುಗೊಳಿಸಿದೆ ಎಂದು ಅವರು ವಿವರಿಸಿದ್ದಾರೆ.

ಕೆಎಚ್ಐಆರ್ ಸಿಟಿಯಲ್ಲಿ ಆರಂಭವಾಗಲಿರುವ ಉದ್ದಿಮೆಗಳಿಗೆ ಸಕಲ ರೀತಿಯ ಸೌಲಭ್ಯಗಳನ್ನೂ ಒದಗಿಸಲಾಗುವುದು. ರಾಜ್ಯದಲ್ಲೇ ನೆಲೆ ಹೊಂದಿರುವ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಉದ್ದಿಮೆಗಳು ಮತ್ತು ಸಂಶೋಧನಾ ಸಂಸ್ಥೆಗಳಿಗೂ ಇಲ್ಲಿ ಅವಕಾಶವಿರಲಿದೆ. ಈ ಮೂಲಕ ನಮ್ಮಲ್ಲಿನ ಸಂಸ್ಥೆಗಳು ಕೂಡ ಜಾಗತಿಕ ಗುಣಮಟ್ಟದ ಎತ್ತರಕ್ಕೆ ಬೆಳೆಯಲು ಅವಕಾಶ ಒದಗಿಸಲಾಗುವುದು. ಒಟ್ಟಿನಲ್ಲಿ ನಾವು ಜಾಗತಿಕ ಮಟ್ಟದಲ್ಲಿ ಪ್ರಮುಖ ಹೂಡಿಕೆ ತಾಣವಾಗಿ ಹೊರಹೊಮ್ಮಬೇಕು ಎನ್ನುವುದು ಇದರ ಹಿಂದಿನ ಆಶಯಗಳಲ್ಲಿ ಒಂದಾಗಿದೆ ಎಂದು ಪಾಟೀಲ ತಿಳಿಸಿದ್ದಾರೆ.

ಈಗಾಗಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಹಾರ್ಡ್ ವೇರ್ ಪಾರ್ಕ್, ಏರೊಸ್ಪೇಸ್ ಪಾರ್ಕ್ ಸೇರಿದಂತೆ ದೊಡ್ಡ ದೊಡ್ಡ ಯೋಜನೆಗಳು ಘೋಷಣೆಯಾಗಿವೆ. ಈ ಮಧ್ಯೆ `ನಾಲೆಡ್ಜ್, ಹೆಲ್ತ್ ಇನ್ನೋವೇಶನ್ ಮತ್ತು ರೀಸರ್ಚ್ ಸಿಟಿ’ ಯೋಜನೆ ನಿರ್ಮಾಣ ಕಾರ್ಯ ಆರಂಭದಲ್ಲಿ ಇಲ್ಲಿನ ರಿಯಲ್ ಎಸ್ಟೇಟ್ (Real Estate) ಉದ್ಯಮ ಮತ್ತಷ್ಟು ಬೆಳೆಯಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. (ಸಾಂದರ್ಭಿಕವಾಗಿ ಚಿತ್ರವನ್ನು ಬಳಸಿದೆ)

WhatsApp Join our WhatsApp Channel
Previous Post

Viral Video | ಬೆಂಗಳೂರು : ಆ ಕಳ್ಳ ಮನೆಯೊಳಗೆ ಹೊಕ್ಕಿ ಚಿನ್ನಾಭರಣ ಕಳ್ಳತನ ಮಾಡಿಲ್ಲ ; ಬಹಳ ಹುಡುಕಿ ಆತ ಕದ್ದು ಹೋಗಿದ್ದೇನು ಗೊತ್ತಾ?

Next Post

BBMP News | ವಯನಾಡು ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಜೂನ್ ತಿಂಗಳ ಶೇ.1ರಷ್ಟು ಬಿಲ್ ಮೊತ್ತ ನೀಡಲು ಘನತ್ಯಾಜ್ಯ ನಿರ್ವಹಣೆ ಗುತ್ತಿಗೆದಾರರ ನಿರ್ಧಾರ

Next Post

BBMP News | ವಯನಾಡು ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಜೂನ್ ತಿಂಗಳ ಶೇ.1ರಷ್ಟು ಬಿಲ್ ಮೊತ್ತ ನೀಡಲು ಘನತ್ಯಾಜ್ಯ ನಿರ್ವಹಣೆ ಗುತ್ತಿಗೆದಾರರ ನಿರ್ಧಾರ

Kempegowda International Airport

Bangalore Second Airport | ರಾಜಧಾನಿಗೆ ಎರಡನೇ ವಿಮಾನ ನಿಲ್ದಾಣ ಪ್ರಸ್ತಾವನೆ : ಏಳು ಕಡೆಗಳಲ್ಲಿ ಸ್ಥಳ ಗುರುತು

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group