Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Guidelines For Bangalore PGs | ಬೆಂಗಳೂರಿನಲ್ಲಿ ಪೇಯಿಂಗ್ ಗೆಸ್ಟ್ ನಡೆಸುತ್ತಿದ್ದೀರಾ? ಬಿಬಿಎಂಪಿಯ ಈ 10 ಮಾರ್ಗೂಸೂಚಿಗಳನ್ನು ಪಾಲಿಸುವುದು ಖಡ್ಡಾಯ : ಇಲ್ಲವಾದಲ್ಲಿ ಕಠಿಣ ಕಾನೂನು ಕ್ರಮ

by Bengaluru Wire Desk
August 10, 2024
in Bengaluru Focus
Reading Time: 1 min read
0
ಪಿಜಿಯೊಂದರ ಮಲಗುವ ಕೋಣೆಯ ಸಾಂದರ್ಭಿಕ ಚಿತ್ರ.

ಪಿಜಿಯೊಂದರ ಮಲಗುವ ಕೋಣೆಯ ಸಾಂದರ್ಭಿಕ ಚಿತ್ರ.

ಬೆಂಗಳೂರು, ಆ.09 www.bengaluruwire.com : ಬೆಂಗಳೂರು ವ್ಯಾಪ್ತಿಯಲ್ಲಿ ‘ಪೇಯಿಂಗ್ ಗೆಸ್ಟ್’ (Paying Guests -PG) ಗಳಲ್ಲಿ ಹಲವು ಕಳ್ಳತನ, ಮಹಿಳೆಯ ಸುರಕ್ಷತೆಯಲ್ಲಿ ವೈಫಲ್ಯ ಹೀಗೆ ಹಲವು ಅಪರಾಧ ಮತ್ತು ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ತನ್ನ ವ್ಯಾಪ್ತಿಯಲ್ಲಿರುವ ಪಿಜಿಗಳಿಗೆ ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ.

ಈ ಮಾರ್ಗಸೂಚಿಯಲ್ಲಿ ಪ್ರಮುಖವಾಗಿ ಪಿಜಿಗಳಲ್ಲಿ ಸಿಸಿಟಿವಿ ಕಡ್ಡಾಯ ಅಳವಡಿಕೆ ಕಡ್ಡಾಯ, ಸ್ವಂತ ಅಡುಗೆಮನೆಯಿದ್ದಲ್ಲಿ ಎಫ್ಎಸ್ಎಸ್ಎಐ ನಿಂದ ಆಹಾರ ಸುರಕ್ಷತಾ ಪರವಾನಗಿ, ಅಗ್ನಿ ಸುರಕ್ಷತಾ ಕ್ರಮ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಲಾಗಿದೆ.

ಬಿಬಿಎಂಪಿ ಕಾಯ್ದೆ-2020ರ ಸೆಕ್ಷನ್ 305ರ ಪ್ರಕಾರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ ಪೇಯಿಂಗ್ ಗೆಸ್ಟ್ ಗಳಿಗೆ ಉದ್ದಿಮೆ ಪರವಾನಗಿಯನ್ನು ನೀಡುವಾಗ ಮಾರ್ಗಸೂಚಿಯನ್ನು ಪಾಲಿಸುವುದು ಕಡ್ಡಾಯವಾಗಿದೆ. ಒಂದು ವೇಳೆ ಪಾಲಿಸದಿದ್ದರೆ ಎಲ್ಲಾ ವಲಯ ಆಯುಕ್ತರು ಪರಿಶೀಲಿಸಬೇಕು. ಈ ಗೈಡಲೈನ್ಸ್ ಉಲ್ಲಂಘಿಸುವವರ ವಿರುದ್ಧ ಬಿಬಿಎಂಪಿ ಕಾಯ್ದೆ 2020ರ ಸೆಕ್ಷನ್ 307 ಹಾಗೂ 308 ರಂತೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಉದ್ದಿಮೆ ಪರವಾನಗಿ ಪಡೆದಿರುವ ಪಿಜಿಗಳೂ ಸಹ ನವೀಕರಣ ಸಂದರ್ಭದಲ್ಲಿ ಈ ಮಾರ್ಗಸೂಚಿಗಳನ್ನು ಪಾಲಿಸಿರಬೇಕು ಎಂದು ಮುಖ್ಯ ಆಯುಕ್ತರು ಮಾರ್ಗಸೂಚಿಗಳಲ್ಲಿ ತಿಳಿಸಿದ್ದಾರೆ. ವರದಿಯೊಂದರ ಪ್ರಕಾರ ಬೆಂಗಳೂರು ಪಿಜಿ ಮಾಲೀಕರ ಸಂಘ ಹೇಳುವಂತೆ ನಗರದಲ್ಲಿ 20,000 ಕ್ಕೂ ಹೆಚ್ಚು ಪಿಜಿ ಮನೆಗಳಿದ್ದು ಅವುಗಳಲ್ಲಿ 17 ಲಕ್ಷಕ್ಕೂ ಹೆಚ್ಚು ಕೆಲಸಕ್ಕೆ ಹೋಗುವ ಮತ್ತು ವಿದ್ಯಾರ್ಥಿಗಳಿಗೆ ನೆಲ ಒದಗಿಸಿದೆ ಎಂದು ಹೇಳಿದೆ.

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಪಿಜಿ ಮಾರ್ಗಸೂಚಿಗಳು ಈ ಕೆಳಕಂಡಂತಿದೆ :

1.ವಲಯ ಆರೋಗ್ಯಾಧಿಕಾರಿ, ಆರೋಗ್ಯ ವೈದ್ಯಾಧಿಕಾರಿ ಮತ್ತು ಹಿರಿಯ ಆರೋಗ್ಯ ಪರಿವೀಕ್ಷಕರು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿನ ಪಿಜಿಗಳಿಗೆ ಪ್ರತಿ 6 ತಿಂಗಳಿಗೊಮ್ಮೆ ಭೇಟಿ ನೀಡಿ ಮಾರ್ಗಸೂಚಿಗಳು ಪಾಲನೆಯಾಗುತ್ತಿರುವ ಬಗ್ಗೆ ಪರಿಶೀಲನೆ ನಡೆಸಬೇಕು.

2. ಪಿಜಿಗಳ ಎಲ್ಲ ಪ್ರವೇಶ ಮತ್ತು ನಿರ್ಗಮನ ದ್ವಾರ ಹಾಗೂ ಆವರಣದ ಸುತ್ತಮುತ್ತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. 90 ದಿನಗಳ ಬ್ಯಾಕ್‌ ಅಪ್‌ ಹೊಂದಿರಬೇಕು.

ಇದನ್ನೂ ಓದಿ : Greater Bengaluru Governance Bill 2024 | ಜನಾಗ್ರಹ ಸಂಘಟನೆಯ ತುಲನಾತ್ಮಕ ವಿಶ್ಲೇಷಣಾ ವರದಿ : ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಗೆ 10ಕ್ಕೆ ಕೇವಲ 3.5 ಅಂಕ

3. ವಸತಿ ಕಟ್ಟಡಗಳ ನಿಯಮಗಳ ಪ್ರಕಾರ ಪಿಜಿಗಳಲ್ಲಿ ಪ್ರತಿಯೊಬ್ಬ ನಿವಾಸಿಗೂ ಕಡ್ಡಾಯವಾಗಿ 70 ಚದರ ಅಡಿ ಕನಿಷ್ಠ ಸ್ಥಳಾವಕಾಶ ಇರಬೇಕು. ಕಟ್ಟಡದಲ್ಲಿ ಲಭ್ಯವಿರುವಸೌಕರ್ಯ ಗಳಿಗೆ ಅನುಗುಣವಾಗಿ ನಿರ್ದಿಷ್ಟ ಸಂಖ್ಯೆಯ ನಿವಾಸಿಗಳ ವಾಸಕ್ಕೆ ಮಾತ್ರ ಪರವಾನಗಿ ನೀಡಬೇಕು.

4. ಪಿಜಿಗಳಲ್ಲಿ ವಾಸಿಸುವ ನಿವಾಸಿಗಳಿಗೆ ಶುದ್ದ ಕುಡಿಯುವ ನೀರು ಒದಗಿಸಬೇಕು.ಪ್ರತಿಯೊಬ್ಬರಿಗೂ ಪ್ರತಿದಿನ 135 ಲೀಟರ್‌ ನೀರಿನ ಲಭ್ಯತೆ ಇರುವುದನ್ನು ಕಟ್ಟಡಗಳಮಾಲೀಕರು ಖಾತರಿಪಡಿಸಿಕೊಳ್ಳತಕ್ಕದ್ದು.

5. ಪಿಜಿಗಳಲ್ಲಿ ಮಾಲೀಕರು ತಮ್ಮದೇ ಆದ ಅಡುಗೆ ಮನೆ ಹೊಂದಿದ್ದಲ್ಲಿ ಪಾಲಿಕೆಯಿಂದ ಉದ್ದಿಮೆ ಪರವಾನಗಿ ನೀಡಿದ ಮೂರು ತಿಂಗಳೊಳಗೆ ಕಡ್ಡಾಯವಾಗಿ ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಪ್ರಾಧಿಕಾರದಿಂದ ಪರವಾನಗಿ ಪಡೆದುಕೊಂಡಿರಬೇಕು.

ಇದನ್ನೂ ಓದಿ : Paris Olympics 2024 | ಪ್ಯಾರಿಸ್ ಒಲಿಂಪಿಕ್ಸ್ 2024 : ಸ್ವಾತಂತ್ರ್ಯ ಪೂರ್ವದಿಂದ ಈವರೆಗಿನ ಭಾರತೀಯ ಒಲಿಂಪಿಕ್ ಪದಕ ವಿಜೇತರ ಸಂಪೂರ್ಣ ಪಟ್ಟಿ ಇಲ್ಲಿದೆ

6. ಪಿಜಿಗಳಲ್ಲಿ ವಾಸಿಸುವ ಪ್ರತಿಯಬ್ಬರ ಸುರಕ್ಷತೆಗೆ ಕನಿಷ್ಠ ಒಬ್ಬ ಸಿಬ್ಬಂದಿ ದಿನದ 24 ಗಂಟೆಗಳ ಕಾಲ ನಿಯೋಜಿಸಿರಬೇಕು.

7. ಪಿಜಿಗಳು ವಾಣಿಜ್ಯ ಪರವಾನಗಿ ಪತ್ರ ಒಡೆಯುವಾಗ ಅಗ್ನಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿರುವ ಕುರಿತು ಸಕ್ಷಮ ಪ್ರಾಧಿಕಾರದಿಂದ ಅಧಿಕೃತ ಪ್ರಮಾಣ ಪತ್ರ ಸಲ್ಲಿಸಿರಬೇಕು.

8. ಪಿಜಿ ಕಟ್ಟಡದಲ್ಲಿ ಬಿಬಿಎಂಪಿ ಸಹಾಯವಾಣಿ -1533, ಪೊಲೀಸ್‌ ಇಲಾಖೆಯ ಸಹಾಯವಾಣಿ-101 ಫಲಕವನ್ನು ಪ್ರದರ್ಶಿಸಬೇಕು.

9. ಪಿಜಿಗಳಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳ ಅಳವಡಿಕೆ ಕಡ್ಡಾಯ

10. ಪಿಜಿಗಳ ಮಾಲೀಕರು ಘನತ್ಯಾಜ್ಯ ವಿಂಗಡಿಸಿ ವಿಲೇವಾರಿ ಮಾಡಲು ಕ್ರಮಗಳನ್ನು ಅನುಸರಿಸಬೇಕು.

WhatsApp Join our WhatsApp Channel
Previous Post

Paris Olympics 2024 | ಪ್ಯಾರಿಸ್ ಒಲಿಂಪಿಕ್ಸ್ 2024 : ಸ್ವಾತಂತ್ರ್ಯ ಪೂರ್ವದಿಂದ ಈವರೆಗಿನ ಭಾರತೀಯ ಒಲಿಂಪಿಕ್ ಪದಕ ವಿಜೇತರ ಸಂಪೂರ್ಣ ಪಟ್ಟಿ ಇಲ್ಲಿದೆ

Next Post

BW SPECIAL | ವಯನಾಡು ಪ್ರಾಕೃತಿಕ ದುರಂತ : ಕೇರಳದ ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಗೆ ಹತ್ತು ದಿನಗಳಲ್ಲಿ ಹರಿದು ಬಂತು 96.58 ಕೋಟಿ ರೂ. ನೆರವು

Next Post
ಕೇರಳದ ವಯನಾಡಿನಲ್ಲಿ ಜುಲೈ 30ರಂದು ಸಂಭವಿಸಿದ ಭಾರೀ ಭೂಕುಸಿತದಿಂದ ಹರಿದು ಬಂದಿರುವ ಕೆಸರಿನ ಪಕ್ಷಿನೋಟ. (ಸಾಂದರ್ಭಿಕ ಚಿತ್ರ)

BW SPECIAL | ವಯನಾಡು ಪ್ರಾಕೃತಿಕ ದುರಂತ : ಕೇರಳದ ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಗೆ ಹತ್ತು ದಿನಗಳಲ್ಲಿ ಹರಿದು ಬಂತು 96.58 ಕೋಟಿ ರೂ. ನೆರವು

Tungabhadra Dam | "ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್ ಚೈನ್  ಲಿಂಕ್ ಮುರಿದಿದೆ" : ನೀರು ಉಳಿಸಿ, ಗೇಟ್ ದುರಸ್ತಿ ಬಗ್ಗೆ ತಜ್ಞರ ವರದಿ ಬಳಿಕ ತೀರ್ಮಾನ ; ಡಿಸಿಎಂ ಡಿ.ಕೆ.ಶಿವಕುಮಾರ್

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group