Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

  • Bengaluru Focus

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Tungabhadra Dam | “ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್ ಚೈನ್  ಲಿಂಕ್ ಮುರಿದಿದೆ” : ನೀರು ಉಳಿಸಿ, ಗೇಟ್ ದುರಸ್ತಿ ಬಗ್ಗೆ ತಜ್ಞರ ವರದಿ ಬಳಿಕ ತೀರ್ಮಾನ ; ಡಿಸಿಎಂ ಡಿ.ಕೆ.ಶಿವಕುಮಾರ್

by Bengaluru Wire Desk
August 11, 2024
in News Wire, Public interest
Reading Time: 1 min read
0

ಬೆಂಗಳೂರು, ಆ.11 www.bengaluruwire.com: “ಮೂರು ರಾಜ್ಯಗಳಿಗೆ ಸೇರಿರುವ ನೀರನ್ನು ಹೇಗಾದರೂ ಮಾಡಿ ಉಳಿಸಿಕೊಂಡು ತುಂಗಭದ್ರಾ ಅಣೆಕಟ್ಟಿನ ಗೇಟನ್ನು ದುರಸ್ತಿ ಮಾಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ತುಂಗಭದ್ರಾ ಜಲಾಶಯಕ್ಕೆ ತೆರಳುವ ಮುನ್ನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರನ್ನು ಉದ್ದೇಶಿಸಿ ಭಾನುವಾರ ಮಾತನಾಡಿದ ಅವರು “ನೀರನ್ನು ಹೊರಗೆ ಬಿಡದ ಹೊರತು ಗೇಟ್ ದುರಸ್ತಿ ಮಾಡಲು ಸಾಧ್ಯವಿಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಆದ ಕಾರಣ ತಂತ್ರಜ್ಞರ ವರದಿಯ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದರು.

ಚೈನ್ ಲಿಂಕ್ ಮುರಿದ ಗೇಟ್ ಸ್ಥಳವನ್ನು ವೀಕ್ಷಿಸುತ್ತಿರುವ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್.

“ಶನಿವಾರ ರಾತ್ರಿ ಜಲಾಶಯದ 10 ಗೇಟ್ ಗಳನ್ನು ತೆರೆಯಲಾಗಿತ್ತು. ಏಕಾಏಕಿ ಜಲಾಶಯದ 19 ನೇ ಗೇಟಿನ ಚೈನ್ ಲಿಂಕ್ ತುಂಡಾದ ಹಿನ್ನೆಲೆ ಎಲ್ಲಾ ಗೇಟ್ ತೆರೆದು ಅಣೆಕಟ್ಟಿನ ಮೇಲಿನ ಒತ್ತಡ ಕಡಿಮೆ ಮಾಡಲಾಗಿದೆ. ಸದ್ಯ ಜಲಾಶಯದಿಂದ 98 ಸಾವಿರ ಕ್ಯೂಸೆಕ್ ನೀರು ಹೊರಗಡೆ ಬಿಡಲಾಗುತ್ತಿದೆ. 19 ನೇ ಗೇಟ್ ಒಂದರಲ್ಲಿಯೇ 35 ಸಾವಿರ ಕ್ಯೂಸೆಕ್ ನೀರು ಹೊರಹೋಗುತ್ತಿದೆ. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು.

ರೈತರ ಒಂದು ಬೆಳೆಗಾದರೂ ನೀರನ್ನು ಉಳಿಸುತ್ತೇವೆ :

“ಜಲಾಶಯದಿಂದ 60 ಟಿಎಂಸಿ ನೀರು ಖಾಲಿ ಮಾಡಬೇಕಿದೆ. ಗೇಟನ್ನು ಮತ್ತೆ ಹಾಕಬೇಕೆಂದರೆ ಒತ್ತಡ ಕಡಿಮೆ ಮಾಡಬೇಕಿದೆ. ಜಲಾಶಯದಲ್ಲಿ 150 ಟಿಎಂಸಿ ನೀರನ್ನು ಸಂಗ್ರಹ ಮಾಡಬಹುದು. ಜಲಾಶಯಕ್ಕೆ ಒಳಹರಿವು 28,000 ಕ್ಯೂಸೆಕ್ಸ್  ಇದೇ. ಕನಿಷ್ಠ ನಮ್ಮ ರೈತರಿಗೆ ಒಂದು ಬೆಳಗಾದರೂ ಒದಗಿಸುವಷ್ಟು ನೀರನ್ನು ಉಳಿಸಿಕೊಳ್ಳುತ್ತೇವೆ” ಎಂದು ತಿಳಿಸಿದರು.

ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್ ಚೈನ್ ಲಿಂಕ್ ಮುರಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್.

“ಅಣೆಕಟ್ಟಿನ  ಪ್ರಮುಖ ಮೂರು ಕಾಲುವೆಗಳಿಗೆ ನೀರನ್ನು ಹರಿಸಲು 115 ಟಿ ಎಂ ಸಿ ನೀರಿನ ಅವಶ್ಯಕತೆ ಇದೆ. ಇದೆಲ್ಲವನ್ನು ಲೆಕ್ಕಾಚಾರ ಹಾಕಿ ರೈತರನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಪಕ್ಕದ ರಾಜ್ಯಗಳಿಗೆ ಈಗಾಗಲೇ 25 ಟಿಎಂಸಿ ನೀರನ್ನು ಕೊಡಲಾಗಿದೆ. ಇನ್ನೂ 90 ಟಿಎಂಸಿ ನೀರನ್ನು ಕೊಡಬೇಕಾಗಿದೆ. ಮೂರು ರಾಜ್ಯಗಳು ಒಟ್ಟಿಗೆ ಸೇರಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ. ರೈತರು ಆತಂಕಕ್ಕೆ ಒಳಗಾಗಬೇಡಿ” ಎಂದರು.

“ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ ಈ ಮೂರು ರಾಜ್ಯಗಳ ರೈತರಿಗೆ ಬಹುಮುಖ್ಯವಾದ ಜಲಾಶಯ ಇದಾಗಿದೆ. ನಮ್ಮ ಕರ್ನಾಟಕದ 12 ಲಕ್ಷ ಹೆಕ್ಟರ್ ಅಚ್ಚುಕಟ್ಟು ಪ್ರದೇಶವನ್ನು ಇದು ಹೊಂದಿದೆ. ಕೊಪ್ಪಳ, ರಾಯಚೂರು, ಬಳ್ಳಾರಿ ಸೇರಿದಂತೆ ಅನೇಕ ಜಿಲ್ಲೆಗಳು ಇದರಿಂದ ಲಾಭ ಪಡೆಯುತ್ತಿವೆ. ನಮ್ಮ ರೈತರು ಆತಂಕ ಪಡಬೇಕಾಗಿಲ್ಲ ಸರ್ಕಾರ ನಿಮ್ಮ ಜೊತೆಗಿದೆ” ಎಂದು ತಿಳಿಸಿದರು.

ತುಂಗಭದ್ರಾ ಡ್ಯಾಮ್ (Tungabhadra Dam) ಪಕ್ಷಿನೋಟ.

“ಇದು 60 ರಿಂದ 70 ವರ್ಷ ಹಳೆಯ ಜಲಾಶಯವಾಗಿದ್ದು. ಘಟನೆಗೆ ಸಂಬಂಧಿಸಿದಂತೆ ನಾನು ಯಾವ ಅಧಿಕಾರಿಗಳನ್ನೂ ದೂರುವುದಿಲ್ಲ. ದೇಶದ ಸಂಪತ್ತನ್ನು ಕಾಪಾಡಬೇಕಿದೆ. ಅಣೆಕಟ್ಟಿನ ಎರಡು ಕಿಲೋಮೀಟರ್ ಸುತ್ತಳತೆಯಲ್ಲಿ ತಂತ್ರಜ್ಞರು ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಹೊರತುಪಡಿಸಿ ಜನಪ್ರತಿನಿಧಿಗಳಿಗೂ ಸಹ ಪ್ರವೇಶವನ್ನು ನಿರ್ಬಂಧಿಸಲಾಗಿದೆ” ಎಂದರು.

“ಅಣೆಕಟ್ಟಿನ 1 ರಿಂದ 16 ನೇ ಗೇಟುಗಳನ್ನು ಸಿಡಬ್ಲ್ಯೂಸಿ ನಿರ್ವಹಣೆ ಮಾಡುತ್ತದೆ. 17 ರಿಂದ 32 ರವರೆಗಿನ ಜವಾಬ್ದಾರಿ ಕರ್ನಾಟಕ ಸರ್ಕಾರದ್ದಾಗಿದೆ. ಕೇಂದ್ರ ಜಲ ಆಯೋಗದವರು ಸಹ ಒಂದಷ್ಟು ತಂತ್ರಜ್ಞರನ್ನು ಕಳುಹಿಸಿದ್ದಾರೆ. ನಾವು ಸಹ ನುರಿತ ತಂತ್ರಜ್ಞರನ್ನು ಕಳುಹಿಸಿದ್ದೇವೆ. ನಾನು ಸಹ ಶನಿವಾರ ರಾತ್ರಿಯಿಂದಲೇ ಅಧಿಕಾರಿಗಳ ಜೊತೆ ದೂರವಾಣಿ ಸಂಪರ್ಕದಲ್ಲಿದ್ದು ಪ್ರತಿ ಕ್ಷಣದ ಮಾಹಿತಿ ಪಡೆಯುತ್ತಿದ್ದೇನೆ” ಎಂದು ಹೇಳಿದರು.

“ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್ ಚೈನ್  ಲಿಂಕ್ ಮುರಿದಿದೆ” :

“ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್ ಚೈನ್  ಲಿಂಕ್ ಮುರಿದ ಕಾರಣ ಈ ತೊಂದರೆ ಉಂಟಾಗಿದೆ. ಭಾರಿ ಪ್ರಮಾಣದಲ್ಲಿ ನೀರು ಹೊರ ಹೋಗುತ್ತಿದ್ದು, ಅಣೆಕಟ್ಟಿನ ಭದ್ರತೆಯ ದೃಷ್ಟಿಯಿಂದ ಎಲ್ಲಾ ಗೇಟ್ ಗಳನ್ನು ತೆರೆದು ನದಿಗೆ ನೀರು ಬಿಡಲಾಗುತ್ತಿದೆ. ಅಣೆಕಟ್ಟಿನ ಕೆಳಭಾಗದ ಹಾಗೂ ನದಿ ಪಾತ್ರದ ಎಲ್ಲಾ ಜನರಿಗೆ ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಲಾಗಿದೆ” ಎಂದರು.

ಮುಂದಿನ ದಿನಗಳಲ್ಲಿ ನೀರಿನ ಅಭಾವ ಉಂಟಾಗುತ್ತದೆಯೇ ಎಂದು ಪ್ರಶ್ನಿಸಿದಾಗ “ಇದು ಅತ್ಯಂತ ಗಂಭೀರವಾದ ವಿಚಾರವಾಗಿದ್ದು. ಇದರಲ್ಲಿ ನಾನು ಯಾರ ಮಾತನ್ನು ಕೇಳುವುದಿಲ್ಲ. ಸ್ಥಳೀಯರು ಹಾಗೂ ರೈತರು ಒಂದಷ್ಟು ಅಭಿಪ್ರಾಯಗಳನ್ನು ಸೂಚಿಸುತ್ತಿದ್ದಾರೆ. ಎಲ್ಲರ ಅಭಿಪ್ರಾಯಗಳನ್ನು ಗೌರವಿಸಲಾಗುವುದು. ಆದರೆ ಅಂತಿಮವಾಗಿ ತಂತ್ರಜ್ಞರ ವರದಿ ಆಧರಿಸಿ ಕ್ರಮ ತೆಗೆದುಕೊಳ್ಳಲಾಗುವುದು. ನಮಗೆ ನಮ್ಮ ರೈತರ ಹಿತ ಮುಖ್ಯ” ಎಂದು ಹೇಳಿದರು.

ಮಂಗಳವಾರ ಟಿಬಿ ಡ್ಯಾಮ್ ಗೆ ಸಿಎಂ ಭೇಟಿ :

ಈ ಮಧ್ಯೆ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕಟ್ ಘಟನೆ ಕುರಿತಂತೆ ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿಗಳು ಮಂಗಳವಾರ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಇಂದು ಬೆಳಗ್ಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ ಅವರೊಂದಿಗೆ ಮಾತುಕತೆ ನಡೆಸಿ ಸಂಪೂರ್ಣ ವಿವರ ಪಡೆದರು. ಯಾವುದೇ ಹಾನಿ ಸಂಭವಿಸದಂತೆ ಮುಂಜಾಗ್ರತೆ ವಹಿಸುವಂತೆ ಸೂಚಿಸಿದರು. 

ಜಲ ಸಂಪನ್ಮೂಲ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರೊಂದಿಗೂ ಸಿಎಂ ಚರ್ಚಿಸಿದರು.

WhatsApp Join our WhatsApp Channel
Previous Post

BW SPECIAL | ವಯನಾಡು ಪ್ರಾಕೃತಿಕ ದುರಂತ : ಕೇರಳದ ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಗೆ ಹತ್ತು ದಿನಗಳಲ್ಲಿ ಹರಿದು ಬಂತು 96.58 ಕೋಟಿ ರೂ. ನೆರವು

Next Post

Forest News | ಎಚ್ಎಂಟಿ ವಶದಲ್ಲಿರುವ 10 ಸಾವಿರ ಕೋಟಿ ರೂ. ಮೌಲ್ಯದ ಪೀಣ್ಯ, ಜಾಲಹಳ್ಳಿಯ 599 ಎಕರೆ ಅರಣ್ಯ ಭೂಮಿ ವಾಪಸ್ ಗೆ ಸೂಚನೆ : ಸಚಿವ ಈಶ್ವರ ಖಂಡ್ರೆ

Next Post

Forest News | ಎಚ್ಎಂಟಿ ವಶದಲ್ಲಿರುವ 10 ಸಾವಿರ ಕೋಟಿ ರೂ. ಮೌಲ್ಯದ ಪೀಣ್ಯ, ಜಾಲಹಳ್ಳಿಯ 599 ಎಕರೆ ಅರಣ್ಯ ಭೂಮಿ ವಾಪಸ್ ಗೆ ಸೂಚನೆ : ಸಚಿವ ಈಶ್ವರ ಖಂಡ್ರೆ

World Elephant Day | ಬನ್ನೇರುಘಟ್ಟದಲ್ಲಿ ವಿಶ್ವ ಆನೆ ದಿನದ ಸಂಭ್ರಮ : 27 ಆನೆಗಳಿಗೆ ಹಣ್ಣು- ಹಂಪಲು ವಿತರಣೆ : ಗಜ ಸಂರಕ್ಷಣೆ ಬಗ್ಗೆ ಜಾಗೃತಿ

Please login to join discussion

Like Us on Facebook

Follow Us on Twitter

Recent News

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026

#OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

June 15, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026

#OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

June 15, 2026

Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

June 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group