Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Forest News | ಎಚ್ಎಂಟಿ ವಶದಲ್ಲಿರುವ 10 ಸಾವಿರ ಕೋಟಿ ರೂ. ಮೌಲ್ಯದ ಪೀಣ್ಯ, ಜಾಲಹಳ್ಳಿಯ 599 ಎಕರೆ ಅರಣ್ಯ ಭೂಮಿ ವಾಪಸ್ ಗೆ ಸೂಚನೆ : ಸಚಿವ ಈಶ್ವರ ಖಂಡ್ರೆ

by Bengaluru Wire Desk
August 11, 2024
in Bengaluru Focus
Reading Time: 1 min read
0

ಬೆಂಗಳೂರು, ಆ.11 www.bengaluruwire.com : ಬೆಂಗಳೂರು ನಗರದ ಪೀಣ್ಯ ಜಾಲಹಳ್ಳಿ ಪ್ಲಾಂಟೇಷನ್ ಸರ್ವೆ ನಂ.1 ಮತ್ತು 2ರಲ್ಲಿ 10 ಸಾವಿರ ಕೋಟಿ ರೂ.ಗೂ ಹೆಚ್ಚು ಬೆಲೆ ಬಾಳುವ 599 ಎಕರೆ ಅಧಿಸೂಚಿತ ಅರಣ್ಯ ಪ್ರದೇಶವನ್ನು ಇಲಾಖೆಗೆ ಮರಳಿ ಪಡೆಯಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಟಿಪ್ಪಣಿ ಕಳುಹಿಸಿರುವ ಸಚಿವರು,  ಅರಣ್ಯ ನಿಯಮಾವಳಿ 1878ರ ಸೆಕ್ಷನ್ 9ರಡಿಯಲ್ಲಿ ಅರಣ್ಯ ಎಂದು ಘೋಷಣೆಯಾಗಿ, ಮೈಸೂರು ಮಹಾರಾಜರ ಆಳ್ವಿಕೆಯ ಕಾಲದಲ್ಲಿ ಅಂದರೆ 1896 ಜೂನ್ 11ರಲ್ಲೇ ಗೆಜೆಟ್ ಅಧಿಸೂಚನೆ ಆಗಿರುವ ಸಾವಿರಾರು ಕೋಟಿ ರೂ. ಬೆಲೆ ಬಾಳುವ ಭೂಮಿಯನ್ನು ಕೇಂದ್ರ ಸರ್ಕಾರಿ ಸ್ವಾಮ್ಯದ ಎಚ್.ಎಂ.ಟಿ. ಸಂಸ್ಥೆ ಅಕ್ರಮವಾಗಿ ಸರಕಾರಿ ಇಲಾಖೆಗಳು, ವಿವಿಧ ಸಂಸ್ಥೆಗಳು ಮತ್ತು ಖಾಸಗಿಯವರಿಗೆ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ. 

* 281 ಎಕರೆ ಮೊದಲಿಗೆ ವಶಕ್ಕೆ ಪಡೆಯಲು ಸೂಚನೆ

* ಅರಣ್ಯ ಭೂಮಿಯನ್ನು ದಾನವಾಗಿ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ

ಹೀಗಾಗಿ ಕೂಡಲೇ ಒಟ್ಟು  599 ಎಕರೆ ಅರಣ್ಯ ಭೂಮಿಯ ಪೈಕಿ ಎಚ್.ಎಂ.ಟಿ. ನೀಡಲಾಗಿದೆ ಎನ್ನಲಾದ 469 ಎಕರೆ 32 ಗುಂಟೆಯಲ್ಲಿ ಖಾಲಿ ಇರುವ 281 ಎಕರೆ ಜಮೀನನ್ನು ಮೊದಲಿಗೆ ವಶಕ್ಕೆ ಪಡೆದು ನಂತರ ಉಳಿದ ಭೂಮಿಯ ವಶಕ್ಕೆ ಕಾನೂನು ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ. ಅರಣ್ಯ ಸಂರಕ್ಷಣಾ ಕಾಯಿದೆ ಸೆಕ್ಷನ್ 64ಎ ಅಡಿಯಲ್ಲಿ ಈ ಹಿಂದೆ ಪ್ರಕ್ರಿಯೆ ನಡೆದಿದ್ದು ಭೂಮಿ ತೆರವಿಗೆ ಆದೇಶ ಆಗಿದ್ದರೂ, ಈವರೆಗೆ ಕ್ರಮ ವಹಿಸದ ಅರಣ್ಯಾಧಿಕಾರಿಗಳ ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಸಚಿವರು, ಈ ಕುರಿತು ತನಿಖೆ ನಡೆಸಲು ಕ್ರಮ ಕೈಗೊಳ್ಳುವಂತೆಯೂ ಸೂಚನೆ ನೀಡಿದ್ದಾರೆ. ಅರಣ್ಯ ನಿಯಂತ್ರಣ ಕಾಯಿದೆ 1900ರ ಸೆಕ್ಷನ್ 30ರ ಸಬ್ ಸೆಕ್ಷನ್ (1)ರ ಅಡಿಯಲ್ಲಿ ಯಾವುದೇ ಅರಣ್ಯ ಭೂಮಿಯನ್ನು ದಾನವಾಗಿ ನೀಡಲು ಕಾನೂನಿನಲ್ಲಿ ಅವಕಾಶ ಇರುವುದಿಲ್ಲ.

ಯಾವುದೇ ಅರಣ್ಯ ಭೂಮಿಯನ್ನು ಮಂಜೂರಾತಿ ಮಾಡುವ ಮುನ್ನ ಅರಣ್ಯೇತರ ಉದ್ದೇಶಕ್ಕೆ ಪರಿವರ್ತನೆ ಮಾಡಲು ಮೊದಲಿಗೆ ಡಿ ನೋಟಿಫೈ ಮಾಡಿ,  ಗೆಜೆಟ್ ಅಧಿಸೂಚನೆ ಮಾಡಬೇಕಾಗಿರುತ್ತದೆ.  ಆದರೆ ಈ ಜಮೀನನ್ನು ಅಂದಿನ ಬೆಂಗಳೂರು ನಗರ ಜಿಲ್ಲಾಧಿಕಾರಿ  ಹನುಮಾನ್ ಅವರು 1963ರಲ್ಲಿ ಎಚ್.ಎಂ.ಟಿ.ಗೆ ದಾನಪತ್ರದ ಮೂಲಕ ವರ್ಗಾವಣೆ ಮಾಡಿರುತ್ತಾರೆ ಎನ್ನಲಾಗಿದೆ. ಈ ದಾನಪತ್ರದ ಕುರಿತಂತೆ ಯಾವುದೇ ಗೆಜೆಟ್ ಅಧಿಸೂಚನೆಯೂ ಆಗಿರುವುದಿಲ್ಲ. 

ಈ ಭೂಮಿ ಅರಣ್ಯೇತರ ಉದ್ದೇಶಕ್ಕೆ ಡಿನೋಟಿಫೈ ಆಗಿಲ್ಲ :

ಭೂಮಿ ಅರಣ್ಯೇತರ ಉದ್ದೇಶಕ್ಕೆ ಡಿನೋಟಿಫೈ ಕೂಡ ಆಗಿರುವುದಿಲ್ಲ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಶರಾವತಿ ಸಂತ್ರಸ್ತರಿಗೆ ಅರಣ್ಯ ಭೂಮಿ ನೀಡಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಹಾಗೂ ಗೋದಾವರ್ಮನ್ ಮತ್ತು ಭಾರತ ಸರ್ಕಾರದ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯದ ಆದೇಶಗಳು ಇದನ್ನು ಸ್ಪಷ್ಟಪಡಿಸುತ್ತವೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಎಚ್.ಎಂ.ಟಿ. ವಶದಲ್ಲಿರುವ ಮತ್ತು ಎಚ್.ಎಂ.ಟಿ. ವಿವಿಧ ಸಂಸ್ಥೆ, ಇಲಾಖೆ, ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಿರುವ ಭೂಮಿ ಅರಣ್ಯವೇ ಆಗಿದೆ.

ಇತ್ತೀಚೆಗೆ ಸರ್ವೋಚ್ಚ ನ್ಯಾಯಾಲಯ “Once a Forest is Always a Forest – Environment is more important than civil rights” ಎಂದು ಅಭಿಪ್ರಾಯಪಟ್ಟಿದೆ. ಮಿಗಿಲಾಗಿ ಸದರಿ ಜಮೀನಿನ ಪೈಕಿ ಎಚ್.ಎಂ.ಟಿ. ಮಾರಾಟ ಮಾಡಿರುವ 201 ಎಕರೆಗೆ ಸಂಬಂಧಿಸಿದಂತೆ 64ಎ ಪ್ರಕ್ರಿಯೆಯೂ ಆಗಿದ್ದು, ಆ ಆದೇಶದ ವಿರುದ್ಧ ಎಚ್.ಎಂ.ಟಿ. ಈವರೆಗೆ ಮೇಲ್ಮನವಿಯನ್ನೂ ಸಲ್ಲಿಸಿರುವುದಿಲ್ಲ. ಈ ನಿಟ್ಟಿನಲ್ಲಿ ಎಚ್.ಎಂ.ಟಿ. ವಶದಲ್ಲಿರುವ ಭೂಮಿ, ಮಾರಾಟ ಮಾಡಿರುವ ಭೂಮಿ ಇಂದಿಗೂ ಅರಣ್ಯವೇ ಆಗಿರುತ್ತದೆ ಎಂದು ಅಭಿಪ್ರಾಯಪಟ್ಟಿರುತ್ತಾರೆ.

ಮಧ್ಯಂತರ ಅರ್ಜಿ (IA) ಹಿಂಪಡೆಯಲು ಸೂಚನೆ:

ಸದರಿ ಭೂಮಿಯನ್ನು  ಎಚ್.ಎಂ.ಟಿ. ಸಂಸ್ಥೆ ಸರ್ಕಾರಿ ಇಲಾಖೆ/ಸಂಸ್ಥೆಗಳು ಮತ್ತು ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡುತ್ತಿರುವುದು ಅಕ್ರಮವಾಗಿರುತ್ತದೆ. ಈ ಸಂಬಂಧ ಸಚಿವ ಸಂಪುಟದ ಗಮನಕ್ಕೂ ತಾರದೆ 2020ರಲ್ಲಿ ಡಿನೋಟಿಫೈ ಮಾಡಲು ಅನುಮತಿ  ಕೋರಿ ಸುಪ್ರೀಂಕೋರ್ಟ್ ಗೆ ಅರಣ್ಯ ಇಲಾಖೆ ಐ.ಎ. ಸಲ್ಲಿಸಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ.  ಈ ಹಿನ್ನೆಲೆಯಲ್ಲಿ  ಐ.ಎ.ಯನ್ನು ಹಿಂಪಡೆಯಲು ತಕ್ಷಣ ಕ್ರಮ ಕೈಗೊಳ್ಳುವಂತೆ ಮತ್ತು ತನಿಖೆ ನಡೆಸುವಂತೆ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಈಶ್ವರ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.

WhatsApp Join our WhatsApp Channel
Previous Post

Tungabhadra Dam | “ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್ ಚೈನ್  ಲಿಂಕ್ ಮುರಿದಿದೆ” : ನೀರು ಉಳಿಸಿ, ಗೇಟ್ ದುರಸ್ತಿ ಬಗ್ಗೆ ತಜ್ಞರ ವರದಿ ಬಳಿಕ ತೀರ್ಮಾನ ; ಡಿಸಿಎಂ ಡಿ.ಕೆ.ಶಿವಕುಮಾರ್

Next Post

World Elephant Day | ಬನ್ನೇರುಘಟ್ಟದಲ್ಲಿ ವಿಶ್ವ ಆನೆ ದಿನದ ಸಂಭ್ರಮ : 27 ಆನೆಗಳಿಗೆ ಹಣ್ಣು- ಹಂಪಲು ವಿತರಣೆ : ಗಜ ಸಂರಕ್ಷಣೆ ಬಗ್ಗೆ ಜಾಗೃತಿ

Next Post

World Elephant Day | ಬನ್ನೇರುಘಟ್ಟದಲ್ಲಿ ವಿಶ್ವ ಆನೆ ದಿನದ ಸಂಭ್ರಮ : 27 ಆನೆಗಳಿಗೆ ಹಣ್ಣು- ಹಂಪಲು ವಿತರಣೆ : ಗಜ ಸಂರಕ್ಷಣೆ ಬಗ್ಗೆ ಜಾಗೃತಿ

ಹೊಸಪೇಟೆಯಲ್ಲಿರುವ ತುಂಗಭದ್ರ ಅಣೆಕಟ್ಟಿನ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿ ರಭಸವಾಗಿ ನೀರು ಹರಿದು ಬರುತ್ತಿರುವ ಸಾಂದರ್ಭಿಕ ಚಿತ್ರ.

BW SPECIAL | Tungabhadra Dam Situation | ತುಂಗಭದ್ರ ಅಣೆಕಟ್ಟು ಅವಘಡ : ಕಳೆದ 10 ವರ್ಷಗಳ ಸರಾಸರಿಗಿಂತ ಈಗಿನ ನೀರಿನ ಹೊರಹರಿವು 37,693 ಕ್ಯೂಸೆಕ್ಸ್ ಹೆಚ್ಚಳ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

June 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group