Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು – ಕನ್ನಡಿಗರ ಬಗ್ಗೆ ಹಗುರವಾಗಿ ಮಾತನಾಡಿದ್ದ ರೀಲ್ಸ್ ರಾಣಿ ಸುಗಂಧಾ ಶರ್ಮಾ ಕೆಲಸದಿಂದ ಕಿಕ್ ಔಟ್

by Bengaluru Wire Desk
September 24, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ಸೆ.24 www.bengaluruwire.com : ಸಾಮಾಜಿಕ ಜಾಲತಾಣವನ್ನು ಇತ್ತೀಚೆಗೆ ತಮ್ಮ ಚೌಕಟ್ಟು, ಎಲ್ಲೆ ಮೀರಿ ದುರುಪಯೋಗಪಡಿಸಿಕೊಳ್ಳುವವರ ಸಂಖ್ಯೆ ಜಾಸ್ತಿಯಾಗುತ್ತಿದೆ. ಇತ್ತೀಚೆಗಷ್ಟೇ ಉತ್ತರ ಭಾರತೀಯರು ಬೆಂಗಳೂರು ತೊರೆದರೆ ಬೆಂಗಳೂರು ಖಾಲಿಯಾಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ, ರೀಲ್ಸ್ ಮಾಡುವ ಸುಗಂಧಾ ಶರ್ಮಾ ತಮ್ಮ ತಪ್ಪಿಗೆ ಈಗ ಕೆಲಸ ಕಳೆದುಕೊಂಡಿದ್ದಾರೆ.

ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿರುವ ಆಕೆಯ ವಿರುದ್ಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಕನ್ನಡ ಹೋರಾಟಗಾರ  ರೂಪೇಶ್ ರಾಜಣ್ಣ ದೂರು ನೀಡಿದ್ದಾಗಿ ಹೇಳಿದ್ದಾರೆ. ಸುಗಂಧ ಶರ್ಮಾ ಎಂಬಾಕೆ ಉತ್ತರ ಭಾರತೀಯರು ಬೆಂಗಳೂರು ತೊರೆದರೆ ಬೆಂಗಳೂರು ಖಾಲಿಯಾಗುತ್ತದೆ ಎಂದು ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್‌ ಮೂಲಕ ದುರಹಂಕಾರ ಪ್ರದರ್ಶಿಸಿದ್ದರು. ಉತ್ತರ ಭಾರತ ಮೂಲದ ರೀಲ್ಸ್ ಮಾಡುತ್ತಿದ್ದ, ಸುಗಂಧಾ ಶರ್ಮಾರನ್ನ ಅವರನ್ನು ಬೆಂಗಳೂರಿನಲ್ಲಿನ ಖಾಸಗಿ ಕಂಪನಿಯೇ ಕೆಲಸದಿಂದ ಕಿತ್ತು ಹಾಕಿದೆ. ಹೀಗಾಗಿ ಈಗ ಬೆಂಗಳೂರನ್ನೇ ಬಿಡುವ ಪರಿಸ್ಥಿತಿ ಬಂದಿದೆ.

ಈಕೆಯ ಹೇಳಿಕೆಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೇ ಕನ್ನಡಿಗರು ಸುಗಂಧಾ ಶರ್ಮಾಗೆ ಬೆಂಗಳೂರನ್ನು ತೊರೆಯುವಂತೆ ಚಾಲೆಂಜ್ ಹಾಕಿದ್ದರು. ಈಗ ಸ್ವತಃ ಅವರೇ ಕೆಲಸ ಕಳೆದುಕೊಂಡಿದ್ದಾರೆ.

ಅಸಲಿಗೆ ಏನಿದು ವಿವಾದ? :

ಸುಗಂಧಾ ಶರ್ಮಾ ರೀಲ್ಸ್ ನಲ್ಲಿ, ನೀವು ಹೊರಟು ಹೋಗಿ ಎನ್ನುತ್ತಿದ್ದೀರಾ. ನಿಜವಾಗಿಯೂ ನಾವೆಲ್ಲರೂ ಬೆಂಗಳೂರು ತೊರೆದರೆ ನಿಮ್ಮ ನಗರ ಖಾಲಿಯಾಗುತ್ತದೆ. ನಿಮ್ಮ ಪಿ.ಜಿ.ಗಳು ಖಾಲಿ ಆಗುತ್ತವೆ. ನಿಮಗೆ ಹಣ ಸಂಪಾದನೆಯಾಗುವುದಿಲ್ಲ. ಕೋರಮಂಗಲದ ಎಲ್ಲ ಕ್ಲಬ್‌ಗಳು ಖಾಲಿಯಾಗುತ್ತವೆ. ಪಂಜಾಬಿ ಸಂಗೀತಕ್ಕೆ ಕುಣಿಯುವ ಚೆಂದದ ಹುಡುಗಿಯರು ಕಾಣಿಸುವುದಿಲ್ಲ. ಯೋಚಿಸಿ ಮಾತನಾಡಿ. ಉತ್ತರ ಭಾರತೀಯರು ತೊರೆಯಬೇಕು ಎನ್ನುವ ನಿಮ್ಮ ಆಸೆ ನಿಜವಾದರೆ ಬೆಂಗಳೂರಿನ ಕಳೆಯೇ ಹೋಗಿಬಿಡುತ್ತದೆ ಎಂದಿದ್ದರು. 

ಕೆಲವೇ ಗಂಟೆಗಳಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ಸುಗಂಧಾ ವಿರುದ್ಧ ಸೆಲೆಬ್ರಿಟಿಗಳು ಸೇರಿದಂತೆ ಅನೇಕರು ಕಿಡಿ ಕಾರಿದ್ದರು. ಭಾಷೆಯ ನೆಪದಲ್ಲಿ ಜನರ ನಡುವೆ ಕಂದಕ ಸೃಷ್ಟಿಸಲು ಯತ್ನಿಸುತ್ತಿರುವ ಈಕೆಯ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೆಲವು ನೆಟ್ಟಿಗರು ಪೊಲೀಸರಿಗೂ ಟ್ಯಾಗ್ ಮಾಡಿದ್ದರು.

ಬರೀ ಕಮೆಂಟ್ ಅಲ್ಲ ಅಖಾಡಕ್ಕಿಳಿದಿದ್ದ ಕನ್ನಡ ಹೋರಾಟಗಾರರು :

ಬೆಂಗಳೂರಿನಲ್ಲಿ ವಾಸವಿರುವ ಸುಗಂಧ್ ಶರ್ಮಾ ಅವರ ವಿರುದ್ಧ ದೂರು ನೀಡಲು ಕನ್ನಡ ಪರ ಕಾರ್ಯಕರ್ತರು ಮೊದಲು ಆಕೆ ಕೆಲಸ ಮಾಡುತ್ತಿದ್ದ ಕಚೇರಿಯನ್ನು ಹುಡುಕಿ ಆಕೆಯ ವಿವಾದಿತ ವಿಡಿಯೋ ಬಗ್ಗೆ ತಿಳಿ ಹೇಳಿ ಮನವರಿಕೆ ಮಾಡಿಕೊಟ್ಟರು. ಬೆಂಗಳೂರಿನಲ್ಲಿರುವ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರು ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್  ಮಾಡಿದ್ದು, “ಕನ್ನಡಿಗರಿಗೆ ಜಯವಾಗೋವರೆಗೂ ನಮ್ಮ ಹೋರಾಟ. ಸುಗಂಧ ಶರ್ಮ ಬೆಂಗಳೂರಿನ ವಿರುದ್ದ ಮಾತನಾಡಿರೋ ವಿಷಯವಾಗಿ ಕಳೆದ 2ದಿನದಿಂದ ಆಕೆಯ ಮಾಹಿತಿ ಹುಡುಕಿ ಫ್ರಿಡಂಆಪ್ ಸಂಸ್ಥೆಗೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಮಾತನಾಡಿ ಈಕೆಯ ಕನ್ನಡವಿರೋಧಿ ನೀತಿ ಕಂಡು ಈಕೆಯನ್ನು ಕೆಲಸದಿಂದ ತೆಗೆದಿದ್ದು,ಆಕೆಯ ಮೇಲೆ ಕ್ರಮಕ್ಕೆ ಕೋರಮಂಗಲ ಠಾಣೆಲಿ ದೂರು ಕೊಡುತ್ತಿದ್ದೇವೆ.” ಎಂದು ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಇನ್ನು ಫೇಸ್ ಬುಕ್‌ನಲ್ಲಿ ಸುಗಂಧ್ ಶರ್ಮಾ ವಿರುದ್ಧ ಕಿಡಿಕಾರಿ ಅಲ್ಲೂ ಪೋಸ್ಟ್ ಹಾಕಿರುವ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ, “ಆಕೆಯ ಮೇಲೆ ಕ್ರಮ ಆಗುವವರೆಗೂ ನಾವು ವಿರಮಿಸಲ್ಲ. ಹಾಗೂ ಇನ್ನೊಂದು ಕಂಪನಿ ಆಕೆಯನ್ನು ಕೆಲಸಕ್ಕೆ ಸೇರಿಸಿಕೊಂಡಿದ್ದರೆ ಕೂಡಲೇ ಆಕೆಯನ್ನು ಕೆಲ್ಸದಿಂದ ತೆಗೆದು ಅವರ ಊರಿಗೆ ಕಳಿಸಬೇಕು. ಇಲ್ಲವಾದರೆ ಅದನ್ನು ಹುಡುಕಿ ಕಂಪನಿ ವಿರುದ್ದ ಹೋರಾಟ ಮಾಡುವೆವು…” ಎಂದು ಖಾರವಾಗಿ ಹೇಳಿದ್ದಾರೆ. ಇದಕ್ಕೆ ನೆಟ್ಟಿಗರು ರೂಪೇಜ್ ರಾಜಣ್ಣ ಕಾರ್ಯವನ್ನು ಶ್ಲಾಘಿಸಿದ್ದರೆ, ಸುಗಂಧ್ ಶರ್ಮಾ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಕನ್ನಡಿಗರಿಗೆ ಜಯವಾಗೋವರೆಗೂ ನಮ್ಮ ಹೋರಾಟ💪🏻
ಸುಗಂಧ ಶರ್ಮ ಬೆಂಗಳೂರಿನ ವಿರುದ್ದ ಮಾತನಾಡಿರೋ ವಿಷಯವಾಗಿ ಕಳೆದ 2ದಿನದಿಂದ ಆಕೆಯ ಮಾಹಿತಿ ಹುಡುಕಿ ಫ್ರಿಡಂಆಪ್ ಸಂಸ್ಥೆಗೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಮಾತನಾಡಿ ಈಕೆಯ ಕನ್ನಡವಿರೋಧಿ ನೀತಿ ಕಂಡು ಈಕೆಯನ್ನು ಕೆಲಸದಿಂದ ತೆಗೆದಿದ್ದು,ಆಕೆಯ ಮೇಲೆ ಕ್ರಮಕ್ಕೆ ಕೋರಮಂಗಲ ಠಾಣೆಲಿ ದೂರು ಕೊಡುತ್ತಿದ್ದೇವೆ. pic.twitter.com/x9fhTxzDc0

— ರೂಪೇಶ್ ರಾಜಣ್ಣ(RUPESH RAJANNA) (@rajanna_rupesh) September 23, 2024
WhatsApp Join our WhatsApp Channel
Previous Post

Crime News | ವಿಲ್ಲಾದಲ್ಲಿ ಅಮೆರಿಕನ್ ಡಾಲರ್ ಕಳ್ಳತನ : ಒಂದು ಪ್ರಕರಣದಿಂದ ಸರಣಿ ಕಳ್ಳತನ ಬೆಳಕಿಗೆ- ಓರ್ವನ ಬಂಧನ

Next Post

 ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ

Next Post
Shobha Karandlaje And KH Muniyappa

 ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ

BJP Karnataka President BY Vijayendra

BJP Demand For CM Resignation | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group