Thursday, August 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

  • Bengaluru Focus

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬಂಗಾಳಕೊಲ್ಲಿ ಸೈಕ್ಲೋನ್ ಪರಿಣಾಮ : ಮುಳುಗೆದ್ದ ಬೆಂಗಳೂರು ; ಟ್ಯಾಕ್ಟರ್ ಭಾಗ್ಯ ಕಲ್ಪಿಸಿದ ಬಿಬಿಎಂಪಿ!!

ಪ್ರಕೃತಿಗೆ ಕಡಿವಾಣ ಹಾಕಲು ಸಾಧ್ಯವೇ? ಮಳೆ ಪರಿಸ್ಥಿತಿ ನಿರ್ವಹಣೆಗೆ ಸರ್ಕಾರ ಸಮರ್ಥವಾಗಿದೆ, ವಿರೋಧ ಪಕ್ಷಗಳು ರಾಜ್ಯದ ಮಾನ ತೆಗೆಯುವುದನ್ನು ನಿಲ್ಲಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

by Bengaluru Wire Desk
October 16, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ಅ.16 www.bengaluruwire.com : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ನಗರದಲ್ಲಿ ಸುರಿದ ಭಾರೀ ಮಳೆಗೆ ಯಲಹಂಕದ ಕೇಂದ್ರೀಯ ವಿಹಾರ್, ಮಹದೇವಪುರ, ಬೊಮ್ಮನಹಳ್ಳಿ ವಲಯದಲ್ಲಿ ಹಲವು ಬಡಾವಣೆಗಳಲ್ಲಿ, ರಸ್ತೆಗಳಲ್ಲಿ ನೀರು ನಿಂತಿದ್ದು ವಾಹನಗಳ ಓಡಾಟಕ್ಕೆ ಸಮಸ್ಯೆಯಾಗಿದೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ, ಮರ ಬಿದ್ದ ಘಟನೆಗಳು ವರದಿಯಾಗಿದೆ.

ಈ ಮಧ್ಯೆ ನಗರದಲ್ಲಿ ನಿರಂತರ ಮಳೆ ಬಿದ್ದ ಹಿನ್ನಲೆಯಲ್ಲಿ ಸೃಷ್ಟಿಯಾದ ಸಮಸ್ಯೆಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಕೆಸರೆರಚಾಟ ಹೆಚ್ಚಾಗಿದೆ. ಈ ಬಗ್ಗೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು,

“ಬೆಂಗಳೂರಿನಲ್ಲಿ ಅನಿರೀಕ್ಷಿತವಾಗಿ ಸುರಿಯುತ್ತಿರುವ ಭಾರಿ ಮಳೆಯನ್ನು ನಿಭಾಯಿಸಲು ಸರ್ಕಾರ ಸಮರ್ಥವಾಗಿದೆ. ಪ್ರಕೃತಿಗೆ ಕಡಿವಾಣ ಹಾಕಲು ಸಾಧ್ಯವೇ? ಚಂಡಮಾರುತ ತಡೆಯಲು ಸಾಧ್ಯವೇ? ಇದನ್ನು ಅರ್ಥ ಮಾಡಿಕೊಳ್ಳದ ವಿರೋಧ ಪಕ್ಷಗಳು ರಾಜ್ಯದ ಮಾನ ಹರಾಜು ಹಾಕುವುದನ್ನು ನಿಲ್ಲಿಸಬೇಕು” ಎಂದು ಗುಡುಗಿದ್ದಾರೆ.

“ಬೆಂಗಳೂರಿನಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಲಾಗಿದೆ. ಇಂದು (ಬುಧವಾರ) ಕೂಡ ಮಳೆ ಸಾಧ್ಯತೆ ಇದೆ, ಸಂಚಾರ ದಟ್ಟಣೆಯಾಗಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು” ಎಂದು ತಿಳಿಸಿದರು.

“ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ಕಾರ್ಯಕ್ರಮದಿಂದ ಮರಳಿದ ನಂತರ ಇಂದು ಸಂಜೆ ಪೊಲೀಸ್ ಇಲಾಖೆ, ಬಿಬಿಎಂಪಿ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳ ಜತೆ ಮತ್ತೊಂದು ಸುತ್ತಿನ ಸಭೆ ನಡೆಸಿ ಪರಿಸ್ಥಿತಿ ಅವಲೋಕನ ಮಾಡುತ್ತೇನೆ” ಎಂದು ತಿಳಿಸಿದರು.

ಮಹದೇವಪುರ ವಲಯದಲ್ಲಿನ ವರ್ತೂರು ಬಳಗೆರೆಯಿಂದ ಹೊರವರ್ತುಲ ರಸ್ತೆ ಸಂಪರ್ಕಿಸುವ ಮಾರ್ಗದ ಮಂಗಳವಾರದ ಪರಿಸ್ಥಿತಿ.

“ವಿರೋಧ ಪಕ್ಷಗಳ ನಾಯಕರ ಟ್ವೀಟ್ ಗಳನ್ನು ನೋಡಿದೆ. ಪ್ರಕೃತಿಗೆ ನಾವು ಕಡಿವಾಣ ಹಾಕಿ ಬುದ್ದಿಹೇಳಲು ಸಾಧ್ಯವೇ? ಚಂಡಮಾರುತದ ಪರಿಣಾಮದಿಂದ ಅನಿರೀಕ್ಷಿತವಾಗಿ ಮಳೆ ಸುರಿದಿದ್ದು, ಇನ್ನು ಹೆಚ್ಚಿನ ಮಳೆ ಬಂದರೂ ಅದನ್ನು ನಿಭಾಯಿಸಲು ಸರ್ಕಾರ ಹಾಗೂ ಜನರು ಸಮರ್ಥರಿದ್ದೇವೆ” ಎಂದು ತಿಳಿಸಿದರು.

ಮಳೆ ಹಾನಿ ಪ್ರದೇಶಗಳಿಗೆ ತುಷಾರ್ ಗಿರಿನಾಥ್ ಭೇಟಿ :

ಇನ್ನೊಂದೆಡೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಯಲಹಂಕ ವಲಯದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸೂಕ್ತ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.

ಭಾರೀ ಮಳೆಯಿಂದ ನೀರು ನಿಂತಿರುವ ರಸ್ತೆಯಲ್ಲಿ ಪರಿಶೀಲನೆ ನಡೆಸಿದ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್.

ಮೊದಲಿಗೆ ಬೆಳಗ್ಗೆ ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಗೆ ಭೇಟಿ ನೀಡಿ ಪ್ರಸ್ತುತ ಸುಮಾರು 3 ಅಡಿ ನೀರು ನಿಂತಿದ್ದು, ಕೂಡಲೆ ಅಗತ್ಯ ಕ್ರಮಗಳನ್ನು ಕೈಗೊಂಡು ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸದ್ಯ ಇರುವ ನೀರುಗಾಲುವೆಯ ಪಕ್ಕ ಖಾಸಗಿ ಜಾಗದಲ್ಲಿ ಹಿಟಾಚಿ ಮೂಲಕ ಕಚ್ಚಾ ಡ್ರೈನ್ ಮಾಡಲಾಗುತ್ತಿದ್ದು, ಕೂಡಲೇ ಕೆಲಸ ಮುಗಿಸಿ ಕಚ್ಚಾ ಡ್ರೈನ್ ಮೂಲಕ ನೀರು ಹರಿದು ಹೊಗುವಂತೆ ಮಾಡಲಾಗುತ್ತಿದೆ. 2 ಅಗ್ನಿಶಾಮಕ ವಾಹನಗಳಿಂದ ಪಂಪ್ ಮೂಲಕ ನೀರನ್ನು ಹೊರ ಹಾಕಲಾಗುತ್ತಿದೆ. ನಿನ್ನೆ ಸಂಜೆ ಸಹಾಯ ಕೇಂದ್ರ(Help Desk) ತೆಗಯಲಾಗಿದ್ದು, ನಿವಾಸಿಗಳಿಗಳಿಗೆ ಕುಡಿಯುವ ನೀರು, ಹಾಲು, ಬ್ರೆಡ್, ಬಿಸ್ಕೆಟ್ ಇನ್ನಿತರೆ ಅಗತ್ಯ ವ್ಯವಸ್ಥೆ ಮಾಡಲಾಗುತ್ತಿದೆ. ಅಪಾರ್ಟ್ಮೆಂಟ್ ನಿಂದ ನಿವಾಸಿಗಳು ಹೊರ ಬರಲು ಹಾಗೂ ಒಳ ಹೋಗಲು 2 ಟ್ರ್ಯಾಕ್ಟರ್ ಗಳ ವ್ಯವಸ್ಥೆ ಮಾಡಲಾಗಿದೆ ಎಂದರು.

ಯಲಹಂಕ ಕೆರೆಗೆ ಎರಡು ಕೋಡಿಗಳಿದ್ದು, ಉತ್ತರ, ದಕ್ಷಿಣದಲ್ಲಿ ಕೋಡಿಗಳು ಬರಲಿದೆ. ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಕಡೆಗೆ ಉತ್ತರ ಕೋಡಿ ಬರಲಿದ್ದು, ಅಲ್ಲಿ ನೀರಿನ ಹರಿವನ್ನು ಕಡಿಮೆ ಮಾಡಬೇಕಿದೆ. ಈ ಸಂಬಂಧ ದಕ್ಷಿಣದ ಕೋಡಿಯಲ್ಲಿ ನೀರಿನ‌ ಹರಿವಿನ ಮಟ್ಟ ಹೆಚ್ಚಿಸಿದಾಗ ಉತ್ತರದ ಕೋಡಿಯಲ್ಲಿ ನೀರಿನ ಹರಿವಿನ ಮಟ್ಟ ಕಡಿಮೆಯಾಗಲಿದೆ. ಆದ್ದರಿಂದ ಕೂಡಲೆ ಸೂಕ್ತ ಕ್ರಮ ಕೈಗೊಳ್ಳ ಸೂಚನೆ ನೀಡಿದರು. 20ಕ್ಕೂ ಹೆಚ್ಚು ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳದಲ್ಲಿದ್ದು, ಸಮಸ್ಯೆಯನ್ನು ಬಗೆಹರಿಸುವಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ರಮಣಶ್ರೀ ಕ್ಯಾಲಿಫೋರ್ನಿಯಾ ಲೇಔಟ್ ಪರಿಶೀಲನೆ:

ರಮಣಶ್ರೀ ಲೇಔಟ್ ಗೆ ಬರುತ್ತಿರುವ ನೀರನ್ನು ತಡೆಯುವ ಸಲುವಾಗಿ ಹಿಂದೆಯೇ ಡೈವರ್ಷನ್ ಚಾನಲ್ ಮಾಡಲಾಗಿದ್ದು, ನೀರಿನ ಮಟ್ಟವನ್ನು ಸಾಕಷ್ಟು ತಡೆಯಲಾಗಿದೆ. ರಮಣಶ್ರೀ ಕ್ಯಾಲಿಫೋರ್ನಿಯಾ ಲೇಔಟ್ ನಲ್ಲಿ ನಿಂತಿರುವ ನೀರನ್ನು ಕೂಡಲೇ ತೆರವುಗೊಳಿಸಲು ಸೂಚನೆ ನೀಡಿದರು.

ವಿವಿಧ ವಲಯಗಳಲ್ಲಿ ಸಮಸ್ಯೆಯಾಗಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಲು ಸೂಚನೆ:

ಮಳೆಯಾಗುತ್ತಿರುವ ಹಿನ್ನೆಲೆ ಮುಖ್ಯ ಆಯುಕ್ತರು ಇಂದು ಬೆಳಗ್ಗೆಯೇ ವರ್ಚುವಲ್ ಮೂಲಕ ಸಭೆ ನಡೆಸಿ, ಆಯಾ ವಲಯ ವ್ಯಾಪ್ತಿಯಲ್ಲಿ ಸಮಸ್ಯೆಯಾಗಿರುವ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು. ಸ್ಥಳದಲ್ಲಾಗಿರುವ ಸಮಸ್ಯೆ ಬಗ್ಗೆ ಅವಲೋಕಿಸಿ ಆ ಸ್ಥಳದಲ್ಲಿ ಶಾಶ್ವತ ಪರಿಹಾರ ಹುಡುಕಿ, ಇರುವ ಸಮಸ್ಯೆಯನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಲು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಎಲ್ಲಾ ವಲಯಗಳ ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ನಾಗರೀಕರಿಂದ ಬರುವ ದೂರುಗಳಿಗೆ ಕೂಡಲೇ ಸ್ಪಂದಿಸಲು ಸೂಚನೆ ನೀಡಿದರು.  

ಪ್ರತಿ ಬಾರಿ ನಿರಂತರ ಜೋರು ಮಳೆಯಾದರೂ ಯಲಹಂಕ, ಮಹದೇವಪುರ, ಬೊಮ್ಮನಹಳ್ಳಿಯಲ್ಲಿ ರಸ್ತೆ, ಬಡಾವಣೆಗಳಲ್ಲಿ ನೀರು ತುಂಬಿ, ಜನ ಟ್ಯಾಕ್ಟರ್- ಬೋಟ್ ಗಳಲ್ಲಿ ಸಂಚರಿಸುವ ತಾಪತ್ರಯ ಇನ್ನೂ ತಪ್ಪಿಲ್ಲದಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಜನ ಪಾಲಿಕೆಗೆ, ಆಡಳಿತ ವ್ಯವಸ್ಥೆಗೆ ಹಿಡಿಶಾಪ ಹಾಕುತ್ತಿದ್ದಾರೆ.

WhatsApp Join our WhatsApp Channel
Previous Post

ಜೋರು ಮಳೆಗೆ ನೇರಳೆ ಮಾರ್ಗ ಹಳಿ ಮೇಲೆ ಮರಬಿದ್ದು ಮೆಟ್ರೊ ರೈಲು ಸಂಚಾರಕ್ಕೆ ಅಡ್ಡಿ : ಮರ ತೆರವು ಮಾಡಿದ ಸಿಬ್ಬಂದಿ

Next Post

#Cauvery | ಜೀವನ ನದಿ ಕಾವೇರಿ ತೀರ್ಥೋದ್ಭವ : ತುಲಾ ಲಗ್ನದಲ್ಲಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ

Next Post

#Cauvery | ಜೀವನ ನದಿ ಕಾವೇರಿ ತೀರ್ಥೋದ್ಭವ : ತುಲಾ ಲಗ್ನದಲ್ಲಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ

HD Kumaraswamy

ಕುದುರೆಮುಖ, ಎಚ್ಎಂಟಿ ವಿಷಯದಲ್ಲಿ ಕೇಂದ್ರ- ರಾಜ್ಯ ಸರ್ಕಾರದ ನಡುವೆ ತಾರಕಕ್ಕೇರಿದ ವಾಕ್ಸಮರ

Please login to join discussion

Like Us on Facebook

Follow Us on Twitter

Recent News

ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

August 13, 2026

Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

August 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

August 13, 2026

Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

August 13, 2026

ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

August 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group