Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕಟ್ಟಡ ಕುಸಿತದಲ್ಲಿ ಮೃತರಾದವರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಣೆ : ಅನಧಿಕೃತ ಕಟ್ಟಡ ಕಟ್ಟಿದರೆ ಅಧಿಕಾರಿಗಳೇ ನೇರ ಹೊಣೆ – ಸಿಎಂ

ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕಳಪೆ ಕಾಮಗಾರಿಯಿಂದ ಕುಸಿತವಾಗಿದೆ | ಅನಧಿಕೃತವಾಗಿ ಪರವಾನಗಿ ಪಡೆಯದೇ ನಿರ್ಮಾಣ | ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ | ಗಾಯಗೊಂಡವರಿಗೆ ಸರ್ಕಾರಿ ವೆಚ್ಚದಲ್ಲಿ ಚಿಕಿತ್ಸೆ

by Bengaluru Wire Desk
October 24, 2024
in Bengaluru Focus
Reading Time: 1 min read
0

ಬೆಂಗಳೂರು, ಅ.24 www.bengaluruwire.com : ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದ್ದು, ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಗುರುವಾರ, ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಗಾಯಗೊಂಡವರಿಗೆ ಚಿಕಿತ್ಸೆ ಜೊತೆಗೆ ಪರಿಹಾರ ನೀಡಲು ಸರ್ಕಾರದ ಚಿಂತನೆ ನಡೆಸುತ್ತಿದೆ ಎಂದು ಅವರು ತಿಳಿಸಿದರು.

ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ 8 ಜನರು ಸಾವು ಸಂಭವಿಸಿದೆ. ಅವರ ಶವಗಳನ್ನು ಹೊರತೆಗೆಯಲಾಗಿದ್ದು, ಉಳಿದಂತೆ 8 ಜನರನ್ನು ರಕ್ಷಣೆ ಮಾಡಲಾಗಿದೆ. ಅವರಲ್ಲಿ ಆರು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದವರಿಗೆ  ಗಂಭೀರ ಗಾಯಗಳಾಗಿವೆ. ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಅವರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸುತ್ತಿದೆ. 

ಸಾವನ್ನಪ್ಪಿರುವ 8 ಜನರಿಗೆ ತಲಾ 2 ಲಕ್ಷ ರೂ. ಕಾರ್ಮಿಕ ಇಲಾಖೆಯಿಂದ, 3 ಲಕ್ಷ ರೂ. ಬಿಬಿಎಂಪಿಯಿಂದ, ಒಟ್ಟು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಣೆ ಮಾಡಲಾಗಿದೆ. ಇದು ಕಂದಾಯ ಬಡಾವಣೆಯಾಗಿದ್ದು, ಈ ಕಟ್ಟಡವನ್ನು ಅನಧಿಕೃತವಾಗಿ ಪರವಾನಗಿ ಪಡೆಯದೇ ನಿರ್ಮಿಸಲಾಗಿದೆ. ಅನಧಿಕೃತ ಕಾಮಗಾರಿ ಎಂದು ನೋಟೀಸು ನೀಡಲಾಗಿದ್ದರೂ, ನಿರ್ಮಾಣ ಮಾಡಿರುವುದರಿಂದ, ಸಂಬಂಧಪಟ್ಟ ಎಇಇ ಯನ್ನು ಅಮಾನತುಗೊಳಿಸಲಾಗಿದೆ ಎಂದರು.  

ದುರ್ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿ ಮಾಡಿ ಬೇಗ ಗುಣಮುಖರಾಗುವಂತೆ ಹಾರೈಸಿದರು.

ಅನಧಿಕೃತ ಕಾಮಗಾರಿ ಕೈಗೊಳ್ಳದಂತೆ ಜನರಲ್ಲಿ ಸಿಎಂ ಮನವಿ :

ಜನರು ಕಾನೂನಿನ ಪ್ರಕಾರ ಮನೆಗಳನ್ನು ನಿರ್ಮಿಸಬೇಕೇ ಹೊರತು ಕಾನೂನು ಬಾಹಿರವಾಗಿ ಮನೆಗಳನ್ನು ಕಟ್ಟಬಾರದೆಂದು ಜನರಲ್ಲಿ ಸಿಎಂ ಮನವಿ ಮಾಡಿದರು. ಕಾಮಗಾರಿ ನಿಲ್ಲಿಸುವಂತೆ ನೋಟೀಸು ನೀಡಿದ ನಂತರವೂ ಕಟ್ಟಡ ಮಾಲೀಕರು ಹಾಗೂ ಗುತ್ತಿಗೆದಾರರು ಕಾಮಗಾರಿಯನ್ನು ನಿಲ್ಲಿಸದ ಕಾರಣ, ಈ ದುರಾದೃಷ್ಟರ ಘಟನೆ ನಡೆದಿದೆ. ಇಂತಹ ಘಟನೆಗಳು ಮರುಕಳಿಸದಿರಲು, ಸಾರ್ವಜನಿಕರು ಕಟ್ಟಡ ನಿರ್ಮಾಣಕ್ಕೆ ಮುಂಚಿತವಾಗಿ ಅನುಮತಿ ಪಡೆಯಬೇಕು ಮತ್ತು ಎಇಇ ನಿಂದ ಸೂಕ್ತ ಪರಿಶೀಲನೆಯಾಗಬೇಕು. ಇದರ ಜೊತೆಗೆ ಕಳಪೆ ಕಾಮಗಾರಿ ಮಾಡದೇ ಕಟ್ಟಡದ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. 

ಕಳಪೆ ಕಾಮಗಾರಿಯಿಂದ ಕಟ್ಟಡ ಕುಸಿತ :

ಈ ಕಟ್ಟಡ ಕುಸಿತ ಕಳಪೆ ಕಾಮಗಾರಿಯಿಂದಾಗಿದೆಯೇ ಹೊರತು ಮಳೆಯ ಕಾರಣದಿಂದಲ್ಲ.  ಇನ್ನು ಮುಂದೆ ಯಾವುದೇ ಕಾರಣಕ್ಕೂ ಅನಧಿಕೃತ ಕಟ್ಟಡಗಳಿಗೆ ಅನುಮತಿ ನೀಡಬಾರದು. ಒಂದು ವೇಳೆ ನಿರ್ಮಿಸಿದರೆ, ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು. ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ  ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ : BW EXCLUSIVE | 83 ಕೆರೆಗಳು ತುಂಬಿದರೂ ಸಂತೋಷಪಡುವ ಸ್ಥಿತಿಯಲ್ಲಿಲ್ಲ ಬೆಂಗಳೂರು : ಯಲಹಂಕ, ಮಹದೇವಪುರ ವಲಯಗಳಲ್ಲಿ ಮಳೆಹಾನಿಗೆ ನಿಖರ ಕಾರಣಗಳೇನು? ಪಾಲಿಕೆ ಎಡವಿದ್ದೆಲ್ಲಿ?

ಯಲಹಂಕದಲ್ಲಿ ರಕ್ಷಣಾ ಕಾರ್ಯ ಕೈಗೊಳ್ಳಲಾಗಿದೆ :

ಸರ್ಕಾರ ಮಳೆ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡುತ್ತಿಲ್ಲ ಎಂದು ಪ್ರತಿಪಕ್ಷದವರ ಮಾತು ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಟೀಕೆಗಳನ್ನು ಮಾಡುವುದು ಸುಲಭ.  ಹಿಂದಿನ ಸರ್ಕಾರದ ಅವಧಿಯಲ್ಲೂ ಮಳೆ ಸಂಭವಿಸಿದ್ದು , ಪ್ರತಿಪಕ್ಷದ ನಾಯಕನಾಗಿ ನಾನು ದೋಣಿಯಲ್ಲಿ ಕುಳಿತು ಸ್ಥಳ ವೀಕ್ಷಣೆ ಮಾಡಿದ್ದೆ. ನೂರಾರು ವರ್ಷಗಳಲ್ಲಿ ಯಲಹಂಕದಲ್ಲಿ ಒಂದೇ ದಿನ 170 ಮಿ.ಮೀ. ಮಳೆ ಬಿದ್ದಿದೆ. ಈ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಶಕ್ತಿ ಸರ್ಕಾರಕ್ಕೆ ಇರಬೇಕಾಗುತ್ತದೆ. ಆ ಭಾಗದಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ವಿವರ ನೀಡಿದರು. 

ಈ ವರ್ಷ ಮಳೆ ಜಾಸ್ತಿ ಆಗಿದ್ದು, ಇನ್ನೂ ಹೆಚ್ಚು ಮೂಲಸೌಕರ್ಯಗಳ ಅಭಿವೃದ್ಧಿ ಆಗಬೇಕಿದೆ. ರಾಜಕಾಲುವೆಗಳಲ್ಲಿ ಒತ್ತುವರಿ ತೆರವು ಮಾಡಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವಿಪತ್ತುನಿರ್ವಹಣೆಗಾಗಿ 3 ಸಾವಿರ ಕೋಟಿ ರೂ.ಗಳ ಸಾಲವನ್ನು ಪಡೆದು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನಧಿಕೃತ ಕಟ್ಟಡಗಳ ಸಮೀಕ್ಷೆ ನಡೆಸಲಾಗಿದ್ದರ ವಸ್ತುಸ್ಥಿತಿ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಯಾವುದೇ ಸರ್ಕಾರವಿದ್ದರೂ , ಇಂತಹ ವಿಷಯಗಳು ಪ್ರಸ್ತುತವಾಗಿರುತ್ತವೆ. ಕೆಲವರು ಈ ಬಗ್ಗೆ ಕಾನೂನು ಮೊರೆ ಹೋಗಿದ್ದಾರೆ. ಈ ವಿಷಯದ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

WhatsApp Join our WhatsApp Channel
Previous Post

ಇಂದಿನಿಂದ ಹಾಸನಾಂಬೆ ಜಾತ್ರೋತ್ಸವ ಆರಂಭ : ಒಟ್ಟು 9 ದಿನಗಳ ಕಾಲ ಸಾರ್ವಜನಿಕರಿಗೆ ದರ್ಶನ ಅವಕಾಶ

Next Post

Social Concern News | ಗಮನಿಸಿ !! : ಜನ ಸಾಮಾನ್ಯರು ಮೋಸ ಹೋಗುವ 10 ವಂಚನೆಗಳ ಪಟ್ಟಿ ಇಲ್ಲಿದೆ : ಈ ಬಗ್ಗೆ ತಿಳಿದುಕೊಂಡು ಎಚ್ಚರಿಕೆ ವಹಿಸಿ

Next Post
Fraud And Scams

Social Concern News | ಗಮನಿಸಿ !! : ಜನ ಸಾಮಾನ್ಯರು ಮೋಸ ಹೋಗುವ 10 ವಂಚನೆಗಳ ಪಟ್ಟಿ ಇಲ್ಲಿದೆ : ಈ ಬಗ್ಗೆ ತಿಳಿದುಕೊಂಡು ಎಚ್ಚರಿಕೆ ವಹಿಸಿ

ರಾಜಕಾಲುವೆ ಒತ್ತುವರಿ ನವೆಂಬರ್ 15ರ ಒಳಗೆ ತೆರವಿಗೆ, ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group