Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕಲ್ಪತರು ನಾಡಿನಲ್ಲಿ ಜ.18, 19ರಂದು ಎರಡು ದಿನ ಕಾರ್ಯನಿರತ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನ

ಪತ್ರಿಕೋದ್ಯಮ, ಪತ್ರಕರ್ತರು ಸೇರಿದಂತೆ ನ್ಯೂಸ್ ರೂಂ ನ ಎಲ್ಲಾ ಆಯಾಮಗಳ ಕುರಿತು ಚಿಂತನ-ಮಂಥನ ಮಾಡುವುದು , ಈ ಮೂಲಕ ಪತ್ರಿಕೋದ್ಯಮದ ಸಮಗ್ರ ಹಿನ್ನೋಟ, ಮುನ್ನೋಟಗಳನ್ನು ಕಾಣುವುದು ಸಮ್ಮೇಳನದ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

by Bengaluru Wire Desk
January 15, 2025
in Bengaluru Focus
Reading Time: 1 min read
0

ಬೆಂಗಳೂರು, ಜ.15 www.bengaluruwire.com : ಕಲ್ಪತರು ನಾಡು ತುಮಕೂರಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಸಂಘಟನೆ ಮಾಡುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಜ.18 ಮತ್ತು 19 ರಂದು ಎರಡು ದಿನಗಳ ಕಾಲ ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

ಪ್ರೆಸ್ ಕ್ಲಬ್‌ನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿ, ಜ.18ರಂದು ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಹೇಳಿದರು.

ಡಿವಿಜಿ ಸಂಸ್ಥಾಪಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಶತಮಾನೋತ್ಸದತ್ತ ಮುನ್ನಡೆಯುತ್ತಿದ್ದು, ರಾಜ್ಯದ ಹತ್ತು ಸಾವಿರಕ್ಕೂ ಹೆಚ್ಚಿನ ಕಾರ್ಯನಿರತ ಪತ್ರಕರ್ತರ ಸದಸ್ಯತ್ವ ಉಳ್ಳ ದೇಶದ ಏಕೈಕ ಬೃಹತ್ ಸಂಘಟನೆಯಾಗಿದೆ ಎಂದರು.

ಪತ್ರಕರ್ತರು ಎದುರಿಸುತ್ತಿರುವ ವೃತ್ತಿ ಪರ ಸಮಸ್ಯೆಗಳು , ಆರೋಗ್ಯ, ಪ್ರೋತ್ಸಾಹಕ ಯೋಜನೆಗಳಿಗೆ ಸಂಬಂಧಿಸಿದಂತೆ ಸರ್ಕಾರದ ಗಮನ ಸೆಳೆಯಲು ಸಮ್ಮೇಳನಗಳು ಸಮರ್ಥ ವೇದಿಕೆಯಾಗುತ್ತವೆ. ಈ ಎಲ್ಲಾ ಸಂಘಟನಾತ್ಮಕ ಚಟುವಟಿಕೆಗಳನ್ನು ವಾರ್ಷಿಕ ಸಮ್ಮೇಳನಗಳಲ್ಲಿ ಮಂಥನ ಮಾಡುವ ಅವಕಾಶವನ್ನು ಸೃಷ್ಟಿಕೊಳ್ಳಲಾಗಿದೆ. ಪತ್ರಿಕೋದ್ಯಮ, ಪತ್ರಕರ್ತರು ಸೇರಿದಂತೆ ನ್ಯೂಸ್ ರೂಂ ನ ಎಲ್ಲಾ ಆಯಾಮಗಳ ಕುರಿತು ಚಿಂತನ-ಮಂಥನ ಮಾಡುವುದು , ಈ ಮೂಲಕ ಪತ್ರಿಕೋದ್ಯಮದ ಸಮಗ್ರ ಹಿನ್ನೋಟ, ಮುನ್ನೋಟಗಳನ್ನು ಕಾಣುವುದು ಸಮ್ಮೇಳನದ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ ಎಂದರು.

ಜ. 18 ರಂದು ಬೆಳಗ್ಗೆ 8.30ಕ್ಕೆ ತುಮಕೂರಿನ ಟೌನ್ ಹಾಲ್ ಬಿಜಿಎಸ್ ವೃತ್ತದಿಂದ ಪತ್ರಕರ್ತರ ಸಾಂಸ್ಕೃತಿಕ ಮೆರಗಿನ ಮೆರವಣಿಗೆಯನ್ನು ಗೃಹ ಸಚಿವರೂ, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ.ಜಿ ಪರಮೇಶ್ವರ್ ಅವರು ಉದ್ಘಾಟಿಸುವ ಮೂಲಕ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ. ಈ ಸಮಾರಂಭಗಳಲ್ಲಿ ಹಿರೇ ಮಠಾಧೀಕ್ಷರಾದ ಡಾ.ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ರಾಮಕೃಷ್ಣ ವಿವೇಕಾನಂದ ಆಶ್ರಮದ ಡಾ. ಶ್ರೀ ವಿರೇಶಾನಂದ ಸರಸ್ವತಿ ಸ್ವಾಮೀಜಿ, ಸ್ವಾಮಿ ಜಪಾನಂದಜೀ ಸಾನಿಧ್ಯ ವಹಿಸಲಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನ

ಇದೇ ದಿನ ಬೆಳಗ್ಗೆ 11 ಗಂಟೆಗೆ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ನಿರ್ಮಿಸಲಾಗಿರುವ ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿ ವೇದಿಕೆಯಲ್ಲಿ ಸಿದ್ದಗಂಗಾ ಮಠದ ಸಿದ್ದಲಿಂಗಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.

ತುಮಕೂರು ಜಿಲ್ಲೆಯ ಹಾಲಿ ಶಾಸಕರು, ಮಾಜಿ ಶಾಸಕರು, ಸಂಸದರುಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷರಾದ ಟಿ ವಿ ಶಿವಾನಂದ ತಗಡೂರು ವಹಿಸಲಿದ್ದು, ಕೇಂದ್ರ ಸಚಿವ ವಿ.ಸೋಮಣ್ಣ ಸಚಿವ ಕೆ.ಎನ್ ರಾಜಣ್ಣ ಹಾಗೂ ಜಿಲ್ಲೆಯ ಎಲ್ಲಾ ಶಾಸಕರುಗಳು ಆತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಂವಾದ ಗೋಷ್ಟಿಗಳು:

ಎರಡು ದಿನಗಳ ಸಮ್ಮೇಳನದಲ್ಲಿ ಪತ್ರಿಕೋದ್ಯಮಕ್ಕೆ ಸಂಬಂಧಿಸಿದಂತೆ ಮಹತ್ವದ ಸಂವಾದ ಮತ್ತು ಗೋಷ್ಟಿಗಳು ನಡೆಯಲಿವೆ. ಜ. 18 ರಂದು ಮಧ್ಯಾಹ್ನ 2 ಗಂಟೆಗೆ ಸಂವಿಧಾನ ಮತ್ತು ಮಾಧ್ಯಮ ವಿಷಯವಾಗಿ ನಡೆಯುವ ಗೋಷ್ಟಿಯನ್ನು ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ ಪಾಟೀಲ್ ಅವರು ಉದ್ಘಾಟಿಸಲಿದ್ದು, ಖ್ಯಾತ ಪತ್ರಕರ್ತ, ಮಾಧ್ಯಮ ತಜ್ಞ ಜಿ.ಎನ್ ಮೋಹನ್ ಅವರು ವಿಷಯ ಮಂಡಿಸಲಿದ್ದು, ಮುಖ್ಯಮಂತ್ರಿಗಳು ರಾಜಕೀಯ ಸಲಹೆಗಾರರಾದ ಬಿ.ಆರ್ ಪಾಟೀಲ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರೂ, ಶಾಸಕರೂ ಆದ ಎ.ಎಸ್ ಪೊನ್ನಣ್ಣ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಂಜೆ 4.30ಕ್ಕೆ ಸುದ್ದಿಮನೆ ಮತ್ತು ಪೋಟೋಗ್ರಫಿ ಗೋಷ್ಟಿಯಲ್ಲಿ ಹಿರಿಯ ಪತ್ರಕರ್ತ ಕೆ.ಶಿವಸುಬ್ರಹ್ಮಣ್ಯ ಅವರು ಉದ್ಘಾಟಿಸಲಿದ್ದು, ಹಿರಿಯ ಪತ್ರಿಕಾ ಛಾಯಾಗ್ರಾಹಕ ಕೆ.ಗೋಪಿನಾಥ್, ಅನುಶಾಂತರಾಜ್, ಶರಣು ಬಸಪ್ಪ ಪಾಲ್ಗೊಳ್ಳಲಿದ್ದಾರೆ.

ಓದುಗರು /ನೋಡುಗರು/ಕೇಳುಗರು ಗೋಷ್ಟಿ :

ಜ. 19 ರಂದು ಬೆಳಗ್ಗೆ 10.30ಕ್ಕೆ ಮಾಧ್ಯಮ ಮತ್ತು ಓದುಗರು /ನೋಡುಗರು/ಕೇಳುಗರು ಗೋಷ್ಟಿಯನ್ನು ವಿಜಯವಾಣಿ ಸಂಪಾದಕರಾದ ಕೆ.ಎನ್ ಚನ್ನೇಗೌಡ ಉದ್ಘಾಟಿಸಿದರೆ, ಪ್ರಜಾವಾಣಿ ಸಂಪಾದಕರಾದ ರವೀಂದ್ರ ಭಟ್ ಐನಕೈ ಅವರು ಅಧ್ಯಕ್ಷತಗೆ ವಹಿಸಲಿದ್ದಾರೆ. ಹಿರಿಯ ಪತ್ರಕರ್ತರಾದ ಅನಂತ ಚಿನಿವಾರ, ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಎಂ ಎಸ್ ಸ್ವಪ್ನ, ಅವರುಗಳು ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12 ಕ್ಕೆ ಸಾಮಾಜಿಕ ಜಾಲತಾಣ ಮತ್ತು ಪತ್ರಕರ್ತರ ಸವಾಲುಗಳು ಗೋಷ್ಟಿಯನ್ನು ಸುವರ್ಣ ನ್ಯೂಸ್ ಸಂಪಾದಕರ ಅಜಿತ್ ಹನುಮಕ್ಕನವರ್ ಉದ್ಘಾಟಿಸಲಿದ್ದು, ವಿಜಯಕರ್ನಾಟಕ ಸಂಪಾದಕರಾದ ಸುದರ್ಶನ ಚನ್ನಂಗಿಹಳ್ಳಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಪತ್ರಕರ್ತ ಗೌರೀಶ್ ಅಕ್ಕಿ , ಕಸ್ತೂರಿ ಸಂಪಾದಕರಾದ ಶಾಂತಲಾ ಧರ್ಮರಾಜ್, ದಾವಣಗೆರೆವಿವಿ ಡಾ. ಶಿವಕುಮಾರ ಕಣಸೋಗಿ ಪಾಲ್ಗೋಳ್ಳಲಿದ್ದಾರೆ.

ಪತ್ರಿಕೆಗಳು /ಜಾಹೀರಾತು/ವಿತರಕರ ಗೋಷ್ಟಿ :

ಮಧ್ಯಾಹ್ನ 2.30ಕ್ಕೆ ಸ್ಥಳೀಯ ಪತ್ರಿಕೆಗಳು /ಜಾಹೀರಾತು/ವಿತರಕರು ಗೋಷ್ಟಿಯನ್ನು ವಾರ್ತಾ ಇಲಾಖೆ ಆಯುಕ್ತ ಹೇಮಂತ ನಿಂಬಾಳ್ಕರ್ ಉದ್ಘಾಟಿಸಲಿದ್ದು ಹಿರಿಯ ಪತ್ರಿಕಾ ಸಂಪಾದಕರಾದ ಎಸ್ ನಾಗಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಎರಡು ದಿನಗಳ ಗೋಷ್ಟಿಗಳಲ್ಲಿ ಸಂವಾದಕರಾಗಿ ಹಿರಿಯ ಪತ್ರಕರ್ತರಾದ ಗಂಗಾಧರ ಮೊದಲಿಯಾರ್, ಶಿವಕುಮಾರ್ ಬೆಳ್ಳಿತಟ್ಟೆ, ಉಗಮ ಶ್ರೀನಿವಾಸ್, ಕುಚ್ಚಂಗಿ ಪ್ರಸನ್ನ, ಮರಿಯಪ್ಪ, ಉಮೇಶ್ ಭಟ್ , ಹರೀಶ್ ರೈ, ಗುರುನಾಥ್, ಬಿ.ಎಂ ಹನೀಫ್, ಟಿ ಎಂ ಸತೀಶ್ ಮೊದಲಾದವರು ಭಾಗವಹಿಸಲಿದ್ದಾರೆ.

ಕಲ್ಪತರು ಪ್ರಶಸ್ತಿ ಪ್ರದಾನ ಸಮಾರಂಭ :

ಸಮ್ಮೇಳನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಪ್ರತಿನಿಧಿಗಳ ಸಭೆ ಮತ್ತು ಕಲ್ಪತರು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಜಿಲ್ಲಾ ಶಾಖೆಯು ಸಮ್ಮೇಳನದ ಆತಿಥ್ಯ ವಹಿಸಿದ್ದು ಜಿಲ್ಲಾ ಘಟಕದ ಅಧ್ಯಕ್ಷರಾದ ಚಿ ನಿ ಪುರುಷೋತ್ತಮ, ಪ್ರಧಾನಕಾರ್ಯದರ್ಶಿ ರಘುರಾಮ್ ತಂಡ ಅವಿರತವಾಗಿ ಶ್ರಮಿಸುತ್ತಿದೆ.

ಸಮ್ಮೇಳನವು ಸಾಂಸ್ಕೃತಿಕ ಸಮಾರಂಭಗಳನ್ನು ಒಳಗೊಂಡಿದ್ದು ಖ್ಯಾತ ಗಾಯಕಿ ಶಮಿತ ಮಲ್ನಾಡ್ ಅವರ ತಂಡದಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ಶಿವಾನಂದ ತಗಡೂರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಖಜಾಂಚಿ ವಾಸುದೇವ ಹೊಳ್ಳ, ರಾಜ್ಯ ಸಮಿತಿ ಸದಸ್ಯರಾದ ದೇವರಾಜು, ಬೆಂಗಳೂರು ಘಟಕದ ಶಿವರಾಜು ಮತ್ತಿತರರು ಹಾಜರಿದ್ದರು.

WhatsApp Join our WhatsApp Channel
Previous Post

SALIGRAMA HABBA 2025 | ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದಲ್ಲಿ ನಾಳೆ (ಜ.16) ವಾರ್ಷಿಕ “ಬ್ರಹ್ಮರಥೋತ್ಸವ”

Next Post

Saligrama Habba-2025 Live | ಸಾಲಿಗ್ರಾಮ ಶ್ರೀ ಗುರುನರಸಿಂಹ ಬ್ರಹ್ಮರಥೋತ್ಸವ ನೇರ ಪ್ರಸಾರ ಇಲ್ಲಿ ನೋಡಿ…!

Next Post

Saligrama Habba-2025 Live | ಸಾಲಿಗ್ರಾಮ ಶ್ರೀ ಗುರುನರಸಿಂಹ ಬ್ರಹ್ಮರಥೋತ್ಸವ ನೇರ ಪ್ರಸಾರ ಇಲ್ಲಿ ನೋಡಿ...!

ಇಂದಿನಿಂದ 217ನೇ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ ಆರಂಭ : ಸಿಎಂ ಸಿದ್ದರಾಮಯ್ಯರಿಂದ ಚಾಲನೆ ; ಸಂಚಾರ ಬದಲಾವಣೆ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group