Friday, June 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

  • Bengaluru Focus

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Big Breaking | ನಮ್ಮ ಮೆಟ್ರೋ ಪ್ರಯಾಣ ಅಸಹಜ ದರ ಏರಿಕೆಯಾದ ಕಡೆ ಕಡಿಮೆ ಮಾಡಲು ಬಿಎಂಆರ್ ಸಿಎಲ್ ಗೆ ಸಿಎಂ ಸೂಚನೆ

by Bengaluru Wire Desk
February 13, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಫೆ.13 www.bengaluruwire.com : ಸಾರ್ವಜನಿಕರ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ನಮ್ಮ‌ ಮೆಟ್ರೋ ರೈಲ್ವೆ ಪ್ರಯಾಣ ದರ ತೀವ್ರ ಏರಿಕೆಯ ಬಗ್ಗೆ ಆಡಳಿತರೂಢ ರಾಜ್ಯ ಸರ್ಕಾರ ಕೊನೆಗೂ ಸ್ಪಂದಿಸಿದೆ.

ಕಾಂಗ್ರೆಸ್- ಬಿಜೆಪಿ ಮುಖಂಡರ ವಾಗ್ಯುದ್ಧ ಹಾಗೂ ಸಾರ್ವಜನರಿಕರು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಮೆಟ್ರೋ ಪ್ರಯಾಣ‌ ದರ ಅರ್ಧಕ್ಕರ್ಧ ಹೆಚ್ಚಳವಾದ ಬಗ್ಗೆ ವ್ಯಾಪಕ ಆಕ್ರೋಶ ಹಾಗೂ ಪ್ರತಿಭಟನೆಗೆ ಕಾರಣವಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಫೆ.11ರಂದು ದರ ಏರಿಕೆ ನಿರ್ಧಾರ ರಾಜ್ಯ ಸರ್ಕಾರದ ಬಳಿಯಿಲ್ಲವೆಂದು ಸ್ಪಷ್ಟೀಕರಣ ನೀಡಿದ್ದರು.

ಆದಾದ ಮೂರನೇ ದಿನಕ್ಕೆ ಅಂದರೆ ಫೆ.13ರಂದು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ, “ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಬೆಂಗಳೂರು ಮೆಟ್ರೋ ದರ ಪರಿಷ್ಕರಣೆಯನ್ನು ಜಾರಿಗೆ ತಂದಿರುವ ರೀತಿಯು ವೈಪರೀತ್ಯಗಳಿಗೆ ಕಾರಣವಾಗಿದೆ. ಕೆಲವು ವಿಭಾಗಗಳಲ್ಲಿ ದರಗಳು ದ್ವಿಗುಣಗೊಂಡಿವೆ”.

“ಈ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಲು ಮತ್ತು ಹೆಚ್ಚಳವು ಅಸಹಜವಾಗಿರುವಲ್ಲಿ ದರಗಳನ್ನು ಕಡಿಮೆ ಮಾಡಲು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರನ್ನು ನಾನು ಕೇಳಿದ್ದೇನೆ. ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡಬೇಕು” ಎಂದು ನಮ್ಮ ಮೆಟ್ರೋ ಅಧಿಕಾರಿಗಳಿಗೆ ತಿಳಿಸಿದ್ದಾಗಿ ಪೋಸ್ಟ್ ಮಾಡಿದ್ದಾರೆ.

ಫೆ.11 ರಂದು ಮೆಟ್ರೋ ಪ್ರಯಾಣ ದರ ಏರಿಕೆ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟೀಕರಣ ನೀಡಿ, ಒಂದೆಡೆ ಮೆಟ್ರೋ ರೈಲು ನಿರ್ಮಾಣದ ಸಾಧನೆ ಕೇಂದ್ರದ ಬಿಜೆಪಿ ಸರ್ಕಾರದ್ದು ಎಂದು ಡಂಗುರ ಬಾರಿಸುತ್ತಿರುವ ಬಿಜೆಪಿ ನಾಯಕರು ದರ ಪರಿಷ್ಕರಣೆ ವಿರುದ್ದ ಜನಾಕ್ರೋಶ ವ್ಯಕ್ತವಾಗುತ್ತಿರುವುದನ್ನು ಕಂಡು ಅದರ ಜವಾಬ್ದಾರಿಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸುತ್ತಿರುವುದು ಆತ್ಮವಂಚಕ ನಡವಳಿಕೆಯಾಗಿದೆ. ಕೇಂದ್ರ ಮತ್ತು ಕರ್ನಾಟಕ ಸರ್ಕಾರ ಜೊತೆಗೂಡಿ ಬೆಂಗಳೂರು ಮೆಟ್ರೊ ರೈಲು ನಿಗಮವನ್ನು ಸ್ಥಾಪಿಸಿದ್ದು, ಇದರಲ್ಲಿ ಎರಡೂ ಸರ್ಕಾರಗಳ ಸಮ (50:50) ಪಾಲುದಾರಿಕೆ ಇದೆ ಎಂದು ಹೇಳಿದ್ದರು.

ಮೆಟ್ರೋ ಸ್ವಾಯತ್ತ ಸಂಸ್ಥೆಯಾಗಿದ್ದು ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಪೂರ್ಣ ನಿಯಂತ್ರಣಾಧಿಕಾರ ಇಲ್ಲ. ಉಳಿದೆಲ್ಲ ನಗರಗಳ ಮೆಟ್ರೋ ರೈಲು ನಿಗಮಗಳಂತೆ ಬೆಂಗಳೂರು ಮೆಟ್ರೊ ರೈಲು ನಿಗಮ ಕೂಡಾ ಕೇಂದ್ರ ಸರ್ಕಾರದ ಮೆಟ್ರೋ ರೈಲು (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002ರ ಅಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.

2017ರ ನಂತರ ಮೆಟ್ರೊ ರೈಲಿನ ಪ್ರಯಾಣ ದರ ಪರಿಷ್ಕರಣೆ ಮಾಡದೆ ಇರುವ ಕಾರಣ ದರ ಪರಿಷ್ಕರಣೆ ನಡೆಸುವಂತೆ ಬಿಎಂಆರ್‌ಸಿಎಲ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಪ್ರಯಾಣ ದರ ಹೆಚ್ಚಳದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲೇ ಇದ್ದಿದ್ದರೆ ಬಿಎಂಆರ್‌ಸಿಎಲ್ ನಮಗೆ ಪತ್ರ ಬರೆಯದೆ, ಕೇಂದ್ರ ಸರ್ಕಾರಕ್ಕೆ ಯಾಕೆ ಪತ್ರ ಬರೆಯುತ್ತಿತ್ತು? ಎಂದು ಪ್ರಶ್ನಿಸಿದ್ದರು.

2017ರ ಜೂನ್ ನಲ್ಲಿ ಬೆಂಗಳೂರು ಮೆಟ್ರೋ ರೈಲಿಗೆ  ನಿಗದಿಗೊಳಿಸಿದ್ದ ಪ್ರಯಾಣದರ, ಮೆಟ್ರೋದಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರ ಅನುಭವಗಳನ್ನು ದರಪರಿಷ್ಕರಣ ಸಮಿತಿ ಕಲೆ ಹಾಕಿತ್ತು. ಇದರ ಜೊತೆಯಲ್ಲಿ ಬಿಎಂಆರ್‌ಸಿಎಲ್ ನ ಹಣಕಾಸು ಸಾಮರ್ಥ್ಯವನ್ನು ಕೂಡಾ ಸಮಿತಿ ಅಧ್ಯಯನ ಮಾಡಿ 2024ರ ಡಿಸೆಬರ್ 16ರಂದು ಸಮಿತಿ ತನ್ನ ವರದಿನ್ನು ಸಲ್ಲಿಸಿತ್ತು.

2017ರ ಜೂನ್ ತಿಂಗಳಲ್ಲಿ ಬಿಎಂಆರ್‌ಸಿಎಲ್ ಪ್ರಯಾಣ ದರ ನಿಗದಿಪಡಿಸಿದಾಗ ಮೆಟ್ರೋ ಪ್ರಥಮ ಹಂತದ 42.30 ಕಿ.ಮೀ ಮಾರ್ಗ ಮಾತ್ರ ಪೂರ್ಣಗೊಂಡಿತ್ತು. ಮೆಟ್ರೋ ಎರಡನೇ ಹಂತ ಭಾಗಶ: ಪೂರ್ಣಗೊಂಡ ನಂತರ ಈಗ ಮೆಟ್ರೋ ಮಾರ್ಗ 76.95 ಕಿ.ಮೀಟರ್ ಗೆ ವಿಸ್ತರಣೆ ಗೊಂಡಿದೆ. ಮೆಟ್ರೋ 2, 2ಎ, ಮತ್ತು 2ಬಿ ಮಾರ್ಗಗಳು  (96.60 ಕಿ.ಮೀ.) 2026ರ ಡಿಸೆಂಬರ್ ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದ್ದು ಆಗ ಬೆಂಗಳೂರು ಮೆಟ್ರೋ ಮಾರ್ಗ 175,55 ಕಿ.ಮೀ.ಗೆ ವಿಸ್ತರಣೆಯಾಗಲಿದೆ.

ಬೆಂಗಳೂರು ಮೆಟ್ರೋ ರೈಲಿಗೆ ಸಂಬಂಧಿಸಿದ ಈ ಎಲ್ಲ ಅಂಶಗಳನ್ನು ಗಮನಕ್ಕೆ ತೆಗೆದುಕೊಂಡು ಚರ್ಚೆ ನಡೆಸಿದ ನಂತರ ಹತ್ತು ಅಧ್ಯಾಯಗಳಲ್ಲಿ ತನ್ನ ವರದಿ ನೀಡಿದೆ. ಸಮಿತಿ ದೇಶದ ಉಳಿದ ಮೆಟ್ರೋ ರೈಲಿನ ಪ್ರಯಾಣ ದರವನ್ನು ಅಧ್ಯಯನ ಮಾಡಿದೆ. ಸದ್ಯ ಬೆಂಗಳೂರು ಮೆಟ್ರೋ ಪ್ರಯಾಣ ದರ ಕನಿಷ್ಠ ರೂ.10 ಮತ್ತು ಗರಿಷ್ಠ ರೂ.60 ಆಗಿದೆ.  ಮುಂಬೈ ಮೆಟ್ರೋ ರೈಲಿನ ಕನಿಷ್ಠ ಪ್ರಯಾಣದರ ರೂ.10 ಮತ್ತು ಗರಿಷ್ಠ ಪ್ರಯಾಣ ದರ ರೂ.80 ಆಗಿದೆ ಎಂದು ಸಿಎಂ ತಿಳಿಸಿದ್ದರು.

ದೆಹಲಿ ಮೆಟ್ರೋವನ್ನು ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಮೊದಲ ಹಂತದ ಪ್ರಯಾಣದರವನ್ನು ಆಯಾ ರಾಜ್ಯಗಳ ಮೆಟ್ರೊ ನಿಗಮಗಳೇ ನಿಗದಿ ಪಡಿಸಿತ್ತು. ಈಗ ಪ್ರಯಾಣ ದರವನ್ನು ಕೇಂದ್ರ ಸರ್ಕಾರ ನೇಮಿಸುವ ಸಮಿತಿ ನಿಗದಿಪಡಿಸುತ್ತದೆ. ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯಿದೆಯ ಸೆಕ್ಷನ್ 37ರ ಪ್ರಕಾರ ಪ್ರಯಾಣ ದರ ನಿಗದಿ ಸಮಿತಿ ನೀಡಿದ ವರದಿಯನ್ನು ಮೆಟ್ರೋ ರೈಲು ನಿಗಮಗಳು ( ಈ ಪ್ರಕರಣದಲ್ಲಿ ಬಿಎಂಆರ್ ಸಿಎಲ್ ) ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕಾಗಿದೆ ಎಂದು ಹೇಳಿದ್ದರು. 

ಯಾವಾಗ ಸಾರ್ವಜನಿಕರಿಂದ ಪ್ರಯಾಣ ದರ ಏರಿಕೆ ಬಗ್ಗೆ ವ್ಯಾಪಕ ವಿರೋಧ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಹೋಯಿತೋ ದರ ಇಳಿಕೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ನಮ್ಮ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್ ಅವರಿಗೆ ತಿಳಿಸಿದ್ದಾಗಿ ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

https://twitter.com/siddaramaiah/status/1889878768237551906?t=ZKRjjFIrQmD-TfCh3cs3rw&s=19
WhatsApp Join our WhatsApp Channel
Previous Post

BW SPECIAL | ಲೋಕಾಯುಕ್ತದಲ್ಲಿ ದಿನಂಪ್ರತಿ ಸರಾಸರಿ 32 ಹೊಸ ಪ್ರಕರಣ ದಾಖಲು : ಪೂರ್ಣಾಧಿಕಾರವಿಲ್ಲದೆ- ಸಿಬ್ಬಂದಿ ಕೊರತೆಯಿಂದ ನರಳುತ್ತಿದೆ ಭ್ರಷ್ಟ ವಿರೋಧಿ ಕಾವಲು ಸಂಸ್ಥೆ

Next Post

ನಗರದ ಜಲಮೂಲಗಳ ಬಫರ್ ವಲಯ ಉಲ್ಲಂಘನೆಗೆ ಅವಕಾಶ : ಬಿಬಿಎಂಪಿ- ಬಿಡಿಎ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು

Next Post
ಬೆಳ್ಳಂದೂರು ಕೆರೆಯ ಪಕ್ಷಿನೋಟ.

ನಗರದ ಜಲಮೂಲಗಳ ಬಫರ್ ವಲಯ ಉಲ್ಲಂಘನೆಗೆ ಅವಕಾಶ : ಬಿಬಿಎಂಪಿ- ಬಿಡಿಎ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು

ನಮ್ಮ ಮೆಟ್ರೋ ಪ್ರಯಾಣದ ನೂತನ ಪರಿಷ್ಕೃತ ದರದ ಗರಿಷ್ಠ ಮಿತಿ ಶೇ.70ಕ್ಕೆ ನಿಗದಿ : ಅತಿ ಹೆಚ್ಚು ದುಬಾರಿಯಾದ ಟಿಕೆಟ್ ದರಗಳಲ್ಲಿ ಇಳಿಕೆ : ನಾಳೆಯಿಂದ ಜಾರಿ

Please login to join discussion

Like Us on Facebook

Follow Us on Twitter

Recent News

BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

June 19, 2026
Vidhana Soudha

IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

June 19, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

June 19, 2026
Vidhana Soudha

IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

June 19, 2026

GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

June 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group