Friday, June 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

  • Bengaluru Focus

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಜಾತಿ ಜನಗಣತಿ ವರದಿ ಬಗ್ಗೆ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಆರ್.ಅಶೋಕ್ 12 ಗಂಭೀರ ಪ್ರಶ್ನೆಗಳು

ಕಾಂತರಾಜು ವರದಿ ಬಗ್ಗೆ ನಾಡಿನ ಜನತೆಗೆ ಇರುವ ತಕರಾರು ಮತ್ತು ಅನುಮಾನಗಳ ಕುರಿತು ಜನತೆಯ ಪರವಾಗಿ ಈ ಪ್ರಶ್ನೆಗಳನ್ನು ಎತ್ತಿರುವುದಾಗಿ ಸಮರ್ಥನೆ ಮಾಡಿಕೊಂಡ ವಿಪಕ್ಷ ನಾಯಕ ಅಶೋಕ್.

by Bengaluru Wire Desk
April 15, 2025
in News Wire
Reading Time: 1 min read
0

ಬೆಂಗಳೂರು, ಏ.15 www.bengaluruwire.com : ರಾಜ್ಯದ ಆಡಳಿತರೂಢ ಕಾಂಗ್ರೆಸ್ ಸರ್ಕಾರ ಜಾತಿ ಜನಗಣತಿ ವರದಿ (Caste Census Report) ವಿಧಾನಸಭೆ ಪಕ್ಷ ನಾಯಕ ಆರ್.ಅಶೋಕ್ (Assembly party leader R. Ashok), ರಾಜ್ಯದ ಜನತೆಯ ಪರವಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ನವರ ಮುಂದೆ 12 ಗಂಭೀರವಾದ ಪ್ರಶ್ನೆಗಳನ್ನು ಎತ್ತಿದ್ದಾರೆ.

ಈ ಕುರಿತು ಎಕ್ಸ್ (X) ನಲ್ಲಿ ತಮ್ಮ ಅಧಿಕೃತ ಖಾತೆಯಲ್ಲಿ ಈ ಬಗ್ಗೆ ಫೋಸ್ಟ್ ಮಾಡಿದ್ದಾರೆ. “ಸಂಕಟ ಬಂದಾಗ ವೆಂಕಟರಮಣ ಎಂಬಂತೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕುರ್ಚಿಗೆ ಕಂಟಕ  ಬಂದಾಗಲೆಲ್ಲಾ ಜಾತಿ ಜನಗಣತಿ ವರದಿ ಎಂಬ ಮಂಕು ಬೂದಿ ಎರಚಿ ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಮಾಡೋ ಕುತಂತ್ರ ಈಗ ಗುಟ್ಟಾಗಿ ಏನು ಉಳಿದಿಲ್ಲ.”

“ಇತ್ತೀಚೆಗೆ ನಡೆದ ಎಐಸಿಸಿ ಅಧಿವೇಶನ (AICC session) ದ ಸಂದರ್ಭದಲ್ಲಿ, ದೆಹಲಿ ಪ್ರವಾಸದ ವೇಳೆ ಸಿಎಂ ಸಿದ್ದರಾಮಯ್ಯನವರಿಗೆ ಭಾರಿ ಹಿನ್ನೆಡೆ ಆಗಿದೆ. ಹನಿಟ್ರ್ಯಾಪ್ ಸೇರಿದಂತೆ ಸರ್ಕಾರದ ಸಾಲು ಸಾಲು ವೈಫಲ್ಯಗಳ ಬಗ್ಗೆ, ಎಡವಟ್ಟುಗಳು ವಿಚಾರವಾಗಿ ಹೈಕಮಾಂಡ್ ಸಿದ್ದರಾಮಯ್ಯನವರ ಬಣದ ಕಿವಿ ಹಿಂಡಿದೆ. ಆದ್ದರಿಂದಲೇ ಈಗ ಸಿದ್ದರಾಮಯ್ಯನವರು ಧಿಡೀರನೆ ಜಾತಿ ಜನಗಣತಿ ಜಪ ಮಾಡುತ್ತಿದ್ದಾರೆ ಎನ್ನುವ ಗುಸುಗುಸು ಕಾಂಗ್ರೆಸ್ ವಲಯದಲ್ಲೇ ಕೇಳಿಬರುತ್ತಿದೆ” ಎಂದು ಅಶೋಕ್ ತಮ್ಮ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

“ನಾನು ಈಗಾಗಲೇ ಹಲವಾರು ಬಾರಿ ಹೇಳಿರುವಂತೆ ನಮ್ಮ ಸಮಾಜದಲ್ಲಿರುವ ತಳಸಮುದಾಯಗಳ ಅಭ್ಯುದಯಕ್ಕೆ ಯಾವುದೇ ಸಕಾರಾತ್ಮಕ ಹೆಜ್ಜೆ ಇಟ್ಟರೂ ಅದಕ್ಕೆ ನಮ್ಮ ಪಕ್ಷದ ಬೆಂಬಲವಿದೆ. ಆದರೆ ರಾಜಕೀಯ ಹಾವು ಏಣಿ ಆಟದಲ್ಲಿ ಕೆಳಗೆ ಬಿದ್ದಾಗಲೆಲ್ಲ, ಅಧಿಕಾರದ ಚದುರಂಗದಾಟದಲ್ಲಿ ಮುಗ್ಗರಿಸಿದಾಗಲೆಲ್ಲ ಮೇಲೇಳುವುದಕ್ಕೆ ತಳಸಮುದಾಯಗಳನ್ನ ದಾಳವಾಗಿ ಬಳಸುವುದಕ್ಕೆ ನಮ್ಮ ವಿರೋಧವಿದೆ.”

“ಕಾಂತರಾಜು ಆಯೋಗದ ವರದಿ ಅವೈಜ್ಞಾನಿಕ, ಅಪೂರ್ಣ, ಅವಾಸ್ತವಿಕ ಹಾಗು ಅಪ್ರಸ್ತುತ ಎನ್ನುವುದು ಬಹುತೇಕರ ಅಭಿಪ್ರಾಯ. ಇದಕ್ಕೆ ಅನೇಕ ಕಾರಣಗಳೂ ಇವೆ. ಈ ಹಿನ್ನಲೆಯಲ್ಲಿ ರಾಜ್ಯದ ಜನತೆಯ ಪರವಾಗಿ ಸಿಎಂ ಸಿದ್ದರಾಮಯ್ಯನವರ ಮುಂದೆ ಕೆಲವು ಗಂಭೀರವಾದ ಪ್ರಶ್ನೆಗಳನ್ನು ಇಡುತ್ತಿದ್ದೇನೆ :

1) ಜಾತಿ ಜನಗಣತಿ ವರದಿಗೆ ಆಯೋಗದ ಸದಸ್ಯ ಕಾರ್ಯದರ್ಶಿ ಸಹಿ ಮಾಡಿಲ್ಲ ಎನ್ನುವ ಅನುಮಾನವಿದೆ. ಇದು ನಿಜವೇ? ಒಂದು ವೇಳೆ ಸಹಿ ಮಾಡಿಲ್ಲವಾದರೆ ಯಾಕೆ ಮಾಡಿಲ್ಲ?

2) ಸೀಲ್ಡ್ ಬಾಕ್ಸ್ ನಲ್ಲಿದ್ದ ಮೂಲ ಪ್ರತಿ ಅಥವಾ ಹಸ್ತಪ್ರತಿ ಲಭ್ಯವಿಲ್ಲವೆಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗ್ಡೆ ಅವರು ಹೇಳಿದ್ದರು. ಇದರ ಸತ್ಯಾಸತ್ಯತೆ ಏನು?

05-10-2021ರಂದು ಆಗಿನ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗ್ಡೆ , ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಬರೆದಿದ್ದ ಪತ್ರದ ದಾಖಲೆ.

3) ತಮಗೆ ನಿಜವಾಗಿಯೂ ಜಾತಿಗಣತಿಯ ಬಗ್ಗೆ ಬದ್ಧತೆ ಇದ್ದಿದ್ದರೆ, 2018ರಲ್ಲೇ ಕಾಂತರಾಜು ವರದಿಯನ್ನ ಏಕೆ ಸ್ವೀಕರಿಸಿ ಜಾರಿ ಮಾಡಲಿಲ್ಲ?

4) ಹತ್ತು ವರ್ಷಗಳ ಹಿಂದೆ ಕೈಗೊಂಡ ಜಾತಿ ಜನಗಣತಿ ವೈಜ್ಞಾನಿಕವಾಗಿ ನಡೆದಿಲ್ಲ, ಅನೇಕ ಜನರ ಮನೆಗಳಿಗೆ ಭೇಟಿಯೇ ನೀಡಿಲ್ಲ ಎಂಬ ದೂರುಗಳಿವೆ. ಹೀಗಿರುವಾಗ ಈ ವರದಿಯನ್ನ ಈಗ ಮುನ್ನೆಲೆಗೆ ತರುವ ತರಾತುರಿ ಏಕೆ? 

5) ಹತ್ತು ವರ್ಷಗಳ ಹಿಂದೆ ನಡೆಸಿರುವ ಈ ಸಮೀಕ್ಷೆ ಈಗ ಪ್ರಸ್ತುತವೇ ಅಲ್ಲ ಎನ್ನುವುದಕ್ಕೆ ತಮ್ಮ ಉತ್ತರವೇನು?

6) ಈ ಅವೈಜ್ಞಾನಿಕ ಜಾತಿ ಜನಗಣತಿ ವರದಿ ಸ್ವೀಕರಿಸದಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದೆ. ಇದನ್ನ ಬೆಂಬಲಿಸಿ ಸ್ವತಃ ಮಾನ್ಯ ಉಪಮುಖ್ಯಮಂತ್ರಿಗಳು ಹಾಗು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರೇ ಸಹಿ ಮಾಡಿದ್ದಾರೆ. ತಮ್ಮದೇ ಪಕ್ಷದ ಹಿರಿಯ ನಾಯಕರು, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪನವರೂ ಸಹ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅನೇಕ ಮಠಾಧೀಶರು, ಧಾರ್ಮಿಕ ಮುಖಂಡರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗ ಕಳೆದ 22 ತಿಂಗಳಿನಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಂದು ಸರ್ವಸಮ್ಮತವಾದ ನಿಲುವಿಗೆ ಬರುವ ಬದಲು ಈಗ ದಿಢೀರನೆ ಏಕಾಏಕಿ ವರದಿಯನ್ನ ಸಂಪುಟ ಸಭೆಯಲ್ಲಿ ಚರ್ಚೆಗೆ ಎತ್ತಿಕೊಳ್ಳುತ್ತಿರುವುದು ಯಾವ ಕಾರಣಕ್ಕೆ?

7) ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಆಗಿದೆ ಎನ್ನಲಾದ ಅಧಿಕಾರ ಹಂಚಿಕೆ ಒಪ್ಪಂದವನ್ನ ಹೇಗಾದರೂ ಮಾಡಿ ಮುಂದೂಡಲು, ಅಧಿಕಾರ ಹಂಚಿಕೆ ಒಪ್ಪಂದದಿಂದ ತಪ್ಪಿಸಿಕೊಳ್ಳಲು ಜಾತಿ ಜನಗಣತಿ ವರದಿಯನ್ನು ತಂತ್ರವಾಗಿ ಬಳಸಿಕೊಳ್ಳಲಾಗುತ್ತಿದೆಯೇ?

8) ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸಲು ತಾವು ಈ ವರದಿ ಜಾರಿ ಬಾಣ ಬಿಟ್ಟಿರುವ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲೇ ಚರ್ಚೆ ನಡೆಯುತ್ತಿದೆ. ಇದರ ಬಗ್ಗೆ ಏನು ಹೇಳುತ್ತೀರಿ?

9) ಜಾತಿಗಣತಿಯನ್ನ ರಾಜಕೀಯ ದಾಳವಾಗಿ ಬಳಸುವುದು ದಲಿತರಿಗೆ, ಹಿಂದುಳಿದ ವರ್ಗಗಳಿಗೆ, ತಳ ಸಮುದಾಯಗಳಿಗೆ ಮಾಡುವ ಅಪಮಾನವಲ್ಲವೇ? ಸಾಮಾಜಿಕ ನ್ಯಾಯವೆಂಬ ಪವಿತ್ರ ಪರಿಕಲ್ಪನೆಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದು ಆತ್ಮವಂಚನೆಯಲ್ಲವೇ?

10) ಜಾತಿ ಜನಗಣತಿ ವರದಿಯ ದತ್ತಾಂಶಗಳು ಮಾಧ್ಯಮಗಳಲ್ಲಿ ಸೋರಿಕೆಯಾಗಲು ಕಾರಣವೇನು? ಇದು ಸರ್ಕಾರದ ಲೋಪವೋ ಅಥವಾ ಉದ್ದೇಶಪೂರ್ವಕವಾಗಿಯೇ ವರದಿಯ ಅಂಕಿ-ಅಂಶಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಲಾಗುತ್ತಿದೆಯೇ?

11.) ಕೇವಲ ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಜನಾಂಗಕ್ಕೆ ಸೇರಿದ ಉಪಜಾತಿಗಳನ್ನು ಬೇರ್ಪಡಿಸಲಾಗಿದೆ. ಇದೇ ಮಾನದಂಡ ಮುಸ್ಲಿಂ, ಕ್ರಿಶ್ಚಿಯನ್ ಧರ್ಮಗಳಿಗೆ ಏಕೆ ಅನುಸರಿಸಿಲ್ಲ? ಇದರ ಹಿಂದಿನ ಹುನ್ನಾರ ಏನು?

12.) ಎಲ್ಲರೂ ಒಪ್ಪುವಂತಹ ವೈಜ್ಞಾನಿಕ ಸಮೀಕ್ಷೆ ನಡೆಸಿ ಹೊಸ ವರದಿ ಪಡೆಯಲು ತಮ್ಮ ತಕರಾರೇನು?

“ಇವು ಕಾಂತರಾಜು ವರದಿ ಬಗ್ಗೆ ನಾಡಿನ ಜನತೆಗೆ ಇರುವ ತಕರಾರು ಮತ್ತು ಅನುಮಾನ. ಇನ್ನಾದರೂ ಒಣ ಪ್ರತಿಷ್ಠೆ ಮತ್ತು ಸ್ವಹಿತಾಸಕ್ತಿ ಬದಿಗಿಟ್ಟು ಸಿಎಂ ಸಿದ್ದರಾಮಯ್ಯನವರು ಪ್ರಾಮಾಣಿಕ ಮತ್ತು ಪಾರದರ್ಶಕ ನಿರ್ಧಾರ ತೆಗೆದುಕೊಳ್ಳಲಿ ಎಂದು ಆಗ್ರಹಿಸುತ್ತೇನೆ.

WhatsApp Join our WhatsApp Channel
Previous Post

ಲಾರಿ ಮುಷ್ಕರದಿಂದ ರಾಜ್ಯಾದ್ಯಂತ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಸಾಧ್ಯತೆ : ಬೆಲೆ ಹೆಚ್ಚಳ ಸಂಭವ

Next Post

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ನೂತನ ಟ್ರಕ್ ನಿರ್ವಹಣಾ ವ್ಯವಸ್ಥೆ : ಸರಕು ನಿರ್ವಹಣೆಗೆ ತಂತ್ರಜ್ಞಾನದ ಸ್ಪರ್ಶ

Next Post

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ನೂತನ ಟ್ರಕ್ ನಿರ್ವಹಣಾ ವ್ಯವಸ್ಥೆ : ಸರಕು ನಿರ್ವಹಣೆಗೆ ತಂತ್ರಜ್ಞಾನದ ಸ್ಪರ್ಶ

Temperature

ಮುಂಗಾರು ಮಳೆ 2025 : ಭಾರತಕ್ಕೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಸಾಧ್ಯತೆ - ಐಎಂಡಿ ವರದಿ

Please login to join discussion

Like Us on Facebook

Follow Us on Twitter

Recent News

BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

June 19, 2026
Vidhana Soudha

IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

June 19, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

June 19, 2026
Vidhana Soudha

IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

June 19, 2026

GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

June 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group