Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ವರ್ತೂರು ಎಲಿವೇಟೆಡ್ ಕಾರಿಡಾರ್‌ಗೆ ಗ್ರಾಮಸ್ಥರ ವಿರೋಧ: ಯೋಜನೆ ರದ್ದುಪಡಿಸಲು ಮನವಿ

ಕೆಆರ್‌ಡಿಸಿಎಲ್‌ನ 1.92 ಕಿ.ಮೀ ಮೇಲ್ಸೇತುವೆ ಯೋಜನೆಗೆ ವರ್ತೂರು ಮತ್ತು ಸುತ್ತಲಿನ ಗ್ರಾಮಸ್ಥರಿಂದ ತೀವ್ರ ವಿರೋಧ | ಯೋಜನೆ ರದ್ಧತಿಗೆ ಸಿಎಸ್ ಗೆ ಮನವಿ

by Bengaluru Wire Desk
April 17, 2025
in Bengaluru Focus
Reading Time: 1 min read
0

ಬೆಂಗಳೂರು, ಏ.17 www.bengaluruwire.com : ವರ್ತೂರು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ (ಕೆಆರ್‌ಡಿಸಿಎಲ್) ವರ್ತೂರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ 1.92 ಕಿ.ಮೀ ಉದ್ದದ ಎಲಿವೇಟೆಡ್ ಕಾರಿಡಾರ್ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 

ವರ್ತೂರು ಕೆರೆ ಕೋಡಿಯಿಂದ ವಿನಾಯಕ ಥಿಯೇಟರ್‌ವರೆಗೆ ನಿರ್ಮಿಸಲು ಉದ್ದೇಶಿಸಿರುವ ಈ 452 ಕೋಟಿ ರೂ. ವೆಚ್ಚದ ಯೋಜನೆಯನ್ನು ಕೂಡಲೇ ರದ್ದುಪಡಿಸುವಂತೆ ಗ್ರಾಮಸ್ಥರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿದ್ದಾರೆ. 2016-17ರಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ಅನುಮತಿ ಪಡೆದಿದ್ದರೂ, ಸ್ಥಳೀಯರ ತೀವ್ರ ಪ್ರತಿರೋಧದಿಂದಾಗಿ ಈ ಯೋಜನೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಆದರೂ, ಕೆಆರ್‌ಡಿಸಿಎಲ್ ಯೋಜನೆಯನ್ನು ಕೈಬಿಡದೆ ಮುಂದುವರಿಸಲು ಪ್ರಯತ್ನಿಸುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಬುಧವಾರ ಸ್ಥಳಕ್ಕೆ ಭೇಟಿ ನೀಡಿದ್ದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ವರ್ತೂರು ನಾಗರಿಕರ ಹಿತರಕ್ಷಣಾ ವೇದಿಕೆಯು ಎಲಿವೇಟೆಡ್ ಕಾರಿಡಾರ್ ಯೋಜನೆಯಿಂದಾಗುವ ತೊಂದರೆಗಳ ಬಗ್ಗೆ ವಿವರಿಸಿತು. ಈ ಯೋಜನೆಯಿಂದ ಸೊರಹುಣಸಿ, ವಾಲೇಪುರ, ಮುತ್ತಂದ್ರ, ಹಲಸಹಳ್ಳಿ ಸೇರಿದಂತೆ ಐದಾರು ಗ್ರಾಮಗಳಿಗೆ ತೊಂದರೆಯಾಗಲಿದೆ ಎಂದು ವೇದಿಕೆಯ ಸದಸ್ಯರು ಗಮನಸೆಳೆದರು. ಅಲ್ಲದೆ, ಅಧಿಕಾರಿಗಳು ಕಾನೂನು ಉಲ್ಲಂಘಿಸಿ ಯೋಜನೆ ರೂಪಿಸಲು ಯತ್ನಿಸುತ್ತಿರುವುದರ ಬಗ್ಗೆಯೂ ಮುಖ್ಯ ಕಾರ್ಯದರ್ಶಿಯವರಿಗೆ ಮನವರಿಕೆ ಮಾಡಿಕೊಡಲಾಯಿತು.

ಯೋಜನೆಯಿಂದ ಪರಿಸರ ನಾಶ ಆತಂಕ :

ಎಲಿವೇಟೆಡ್ ಕಾರಿಡಾರ್ ಯೋಜನೆಯು ಪರಿಸರವನ್ನು ನಾಶಪಡಿಸುವ ಯೋಜನೆಯಾಗಿದ್ದು, ಇದನ್ನು ಕೂಡಲೇ ರದ್ದುಪಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಯಾವುದೇ ಮೂಲಸೌಕರ್ಯ ಯೋಜನೆಯನ್ನು ಪ್ರಾರಂಭಿಸುವ ಮೊದಲು ಸ್ಥಳೀಯರು ಮತ್ತು ತಜ್ಞರೊಂದಿಗೆ ಸಮಾಲೋಚನೆ ನಡೆಸಬೇಕು. ಪರ್ಯಾಯ ಪರಿಹಾರಗಳ ಬಗ್ಗೆ ನಿರ್ಧಾರ ಕೈಗೊಳ್ಳಲು ನಗರ ಭೂ ಸಾರಿಗೆ ನಿರ್ದೇಶನಾಲಯದಂತಹ ಸಮರ್ಥ ಸಂಸ್ಥೆಗಳಿಂದ ಅಧ್ಯಯನ ನಡೆಸಬೇಕು. ಸುಸ್ಥಿರ ಅಭಿವೃದ್ಧಿಯ ದೃಷ್ಟಿಯಿಂದ ಮೆಟ್ರೋ ಮತ್ತು ಉಪನಗರ ರೈಲು ಯೋಜನೆಗಳಂತಹ ಸಮೂಹ ಸಾರ್ವಜನಿಕ ಸಾರಿಗೆಗೆ ಆದ್ಯತೆ ನೀಡಬೇಕು. ಗ್ರಾಮದ ಪರಿಸರ ಮತ್ತು ಪರಂಪರೆಗೆ ಧಕ್ಕೆಯಾಗದಂತೆ ಯೋಜನೆಗಳನ್ನು ರೂಪಿಸಬೇಕು ಮತ್ತು ಯಾವುದೇ ಯೋಜನೆಯ ಡಿಪಿಆರ್ ವಿವರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.

ಕಾನೂನು ನಿಯಮ ಉಲ್ಲಂಘನೆ ಆರೋಪ :

ಈ ಯೋಜನೆಯು ಟೌನ್ ಮತ್ತು ಕಂಟ್ರಿ ಪ್ಲಾನಿಂಗ್ ಆಕ್ಟ್-1961 ಮತ್ತು ಪರಿಸರ ಸಂರಕ್ಷಣೆ ಕಾಯಿದೆ-1986 ರ ಉಲ್ಲಂಘನೆಯಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಅಧಿಕಾರಿಗಳು ಸಾಂವಿಧಾನಿಕ ಆದೇಶಗಳು ಮತ್ತು ನಗರ ಯೋಜನೆ ಮಾನದಂಡಗಳನ್ನು ಅನುಸರಿಸದೆ ಹಾಗೂ ಕಾನೂನು ಮತ್ತು ಸಾಮಾಜಿಕ ಸ್ಥಿತಿಗತಿಗಳ ಮೌಲ್ಯಮಾಪನವಿಲ್ಲದೆ ಭೂಸ್ವಾಧೀನಕ್ಕೆ ಪ್ರಯತ್ನಿಸುತ್ತಿದ್ದಾರೆ. ಅಲ್ಲದೆ, ಪರಿಹಾರಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿಯನ್ನು ಸ್ಥಳೀಯರೊಂದಿಗೆ ಹಂಚಿಕೊಂಡಿಲ್ಲ. ಈ ಯೋಜನೆಗಾಗಿ ಸಾಕಷ್ಟು ಮರಗಳನ್ನು ಕಡಿಯುವುದರಿಂದ ನಗರದ ಹಸಿರು ಹೊದಿಕೆಯೂ ಕಡಿಮೆಯಾಗಲಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ರಸ್ತೆ ಅಗಲೀಕರಣ ಯೋಜನೆ ಎಲಿವೇಟೆಡ್ ಕಾರಿಡಾರ್ ಆಗಿ ಬದಲು :

2016-17 ರಲ್ಲಿ ಮೊದಲು 40 ಅಡಿ ರಸ್ತೆ ಅಗಲೀಕರಣಕ್ಕೆ ಯೋಜಿಸಲಾಗಿತ್ತು. ನಂತರ ಟ್ರಾಫಿಕ್ ಸಮಸ್ಯೆಯ ನೆಪವೊಡ್ಡಿ, 60 ಅಡಿ ರಸ್ತೆ ಅಗಲೀಕರಣ ಯೋಜನೆಯನ್ನು ಎಲಿವೇಟೆಡ್ ಕಾರಿಡಾರ್ ಯೋಜನೆಯಾಗಿ ಪರಿವರ್ತಿಸಲಾಯಿತು. ರಸ್ತೆ ಅಗಲೀಕರಣಕ್ಕೆ ಒಪ್ಪಿದ್ದ ಸ್ಥಳೀಯರು, ಎಲಿವೇಟೆಡ್ ಕಾರಿಡಾರ್ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು ಮತ್ತು ಸಹಿ ಸಂಗ್ರಹ ಅಭಿಯಾನವನ್ನು ಸಹ ನಡೆಸಿದರು. ಆದರೂ, ಸರ್ಕಾರವು ಯೋಜನೆಯಲ್ಲಿ ಬದಲಾವಣೆಗಳನ್ನು ಮಾಡುತ್ತಾ ಅದನ್ನು ಜಾರಿಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿಎಸ್ ಸಕಾರಾತ್ಮಕ ಸ್ಪಂದನೆ :

ವರ್ತೂರು ನಾಗರಿಕರ ಹಿತರಕ್ಷಣಾ ವೇದಿಕೆಯ ಜಗದೀಶ್ ರೆಡ್ಡಿ ಅವರು ಮಾತನಾಡಿ, “ವರ್ತೂರು ಕೆರೆಯ ಬಫರ್ ವಲಯ ಸೇರಿದಂತೆ ಅನೇಕ ಪರಿಸರ ಸಂರಕ್ಷಣಾ ನಿಯಮಗಳನ್ನು ಉಲ್ಲಂಘಿಸಿ ಎಲಿವೇಟೆಡ್ ಕಾರಿಡಾರ್ ಯೋಜನೆ ಜಾರಿಗೊಳಿಸಲು ಕೆಆರ್‌ಡಿಸಿಎಲ್ ಪ್ರಯತ್ನಿಸುತ್ತಿದೆ. ರಸ್ತೆ ಅಗಲೀಕರಣಕ್ಕೆ ನಮ್ಮ ವಿರೋಧವಿಲ್ಲ, ಆದರೆ ಇಲ್ಲಿ ಎಲಿವೇಟೆಡ್ ಕಾರಿಡಾರ್ ಅಗತ್ಯವಿಲ್ಲ. ಈ ವಿಷಯಗಳನ್ನು ಮುಖ್ಯ ಕಾರ್ಯದರ್ಶಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದು, ಅವರು ಈ ಬಗ್ಗೆ ಪುನರ್ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಮುಖ್ಯ ಕಾರ್ಯದರ್ಶಿಗಳು ಗ್ರಾಮಸ್ಥರ ವಿರೋಧಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ” ಎಂದು ಅವರು ತಿಳಿಸಿದರು. 

WhatsApp Join our WhatsApp Channel
Previous Post

ಯಲಹಂಕ ಬಳಿ ಭೀಕರ ಅಪಘಾತ : ಮೆಟ್ರೊ ಗರ್ಡರ್ ಬಿದ್ದು ಆಟೋ ಚಾಲಕ ದುರ್ಮರಣ

Next Post

BW SPECIAL | ಬಿಬಿಎಂಪಿ : ನಗರದಲ್ಲಿ ಕಟ್ಟಡ ನಿರ್ಮಾಣ ಉಲ್ಲಂಘನೆ ಮಿತಿ ಶೇ.15ಕ್ಕೆ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

Next Post
ಬಿಬಿಎಂಪಿ ಕೇಂದ್ರ ಕಚೇರಿಯ ಸಾಂದರ್ಭಿಕ ಚಿತ್ರ.

BW SPECIAL | ಬಿಬಿಎಂಪಿ : ನಗರದಲ್ಲಿ ಕಟ್ಟಡ ನಿರ್ಮಾಣ ಉಲ್ಲಂಘನೆ ಮಿತಿ ಶೇ.15ಕ್ಕೆ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

‘ಲಿಖಿತ ರೂಪದಲ್ಲಿರುವ ಅತ್ಯುತ್ತಮ ಸಂವಿಧಾನ ನಮ್ಮ ಭಾರತ ಸಂವಿಧಾನ’ : ಎಸ್.ಆರ್ ಉಮಾಶಂಕರ್

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group