Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Public interest
  • BW Special
  • Life Style
  • Photo Gallery
  • Video
No Result
View All Result

Home Others

ಕಾಂಗ್ರೆಸ್ ಸರ್ಕಾರಕ್ಕೆ ಮೇ 20ಕ್ಕೆ ಎರಡು ವರ್ಷ : 1 ಲಕ್ಷ ಕುಟುಂಬಕ್ಕೆ ಡಿಜಿಟಲ್ ಹಕ್ಕುಪತ್ರ ವಿತರಣೆ

ಪೋಡಿ ಅಭಿಯಾನದ ಮೂಲಕ ದುರಸ್ತಿ | ವರ್ಷಾಂತ್ಯಕ್ಕೆ ತಹಸೀಲ್ದಾರ್ ಕಚೇರಿ ದಾಖಲೆ ಡಿಜಿಟಲೀಕರಣ | ರೈತರಿಗೆ ಭೂ ಸುರಕ್ಷಾ ಯೋಜನೆ ಮೂಲಕ ಮುಕ್ತಿ

by Bengaluru Wire Desk
April 26, 2025
in Others
Reading Time: 1 min read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು, ಏ.26 www.bengaluruwire.com : ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಮೇ 20ರಂದು ಎರಡು ವರ್ಷ ತುಂಬಲಿದೆ. ಈ ಹಿನ್ನಲೆಯಲ್ಲಿ ಅಂದು ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಕಂದಾಯ ಗ್ರಾಮಗಳ 1 ಲಕ್ಷ ಕುಟುಂಬಗಳಿಗೆ ಶಾಶ್ವತ ಡಿಜಿಟಲ್‌ ಹಕ್ಕುಪತ್ರಗಳನ್ನು ವಿತರಣೆಗೆ ಕಂದಾಯ ಇಲಾಖೆ ಭಾರೀ ಸಿದ್ಧತೆ ನಡೆಸುತ್ತಿದೆ.

ವಿಕಾಸಸೌಧದಲ್ಲಿ ಶುಕ್ರವಾರ ಎಲ್ಲಾ ಜಿಲ್ಲಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ”ರಾಜ್ಯ ಸರ್ಕಾರದ ಜನಪರ ಆಡಳಿತಕ್ಕೆ ಸಾಕ್ಷಿಯಾಗಿ ಹಟ್ಟಿ, ತಾಂಡಾ, ಹಾಡಿ ಮತ್ತಿತರ ಜನವಸತಿ ಪ್ರದೇಶಗಳ ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಗುತ್ತಿದೆ,” ಎಂದು ಹೇಳಿದರು.

‘ರಾಜ್ಯದ ಉದ್ದಗಲಕ್ಕೂ ಹಾಡಿ, ಹಟ್ಟಿಗಳು ಕಂದಾಯ ಗ್ರಾಮಗಳಲ್ಲದ ಕಾರಣ ಅಲ್ಲಿನ ನಿವಾಸಿಗಳು ಸರಕಾರಿ ಸೌಲಭ್ಯ ಗಳಿಂದ ವಂಚಿತರಾಗಿದ್ದಾರೆ. ಇಂತಹ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳ ಸ್ಥಾನಮಾನ ನೀಡಿ ಲಕ್ಷಾಂತರ ಕುಟುಂಬಗಳಿಗೆ ಶಾಶ್ವತ ನೆಮ್ಮದಿ ನೀಡುವ ಕೆಲಸವನ್ನು ನಮ್ಮ ಸರಕಾರ ಮಾಡುತ್ತಿದೆ” ಎಂದು ತಿಳಿಸಿದರು.

‘ನಾನಾ ಕಾರಣಗಳಿಂದ ಬಿಟ್ಟು ಹೋಗಿರುವ ಉಳಿದ ಜನವಸತಿ ಪ್ರದೇಶಗಳನ್ನೂ ಗುರ್ತಿಸಿ ಈ ವರ್ಷಾಂತ್ಯದೊಳಗೆ ಕನಿಷ್ಠ 2 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡುವ ಮೂಲಕ ಎಲ್ಲಾ ಸರಕಾರಿ ಸೌಲಭ್ಯಗಳನ್ನು ತಲುಪಿಸುವ ಉದ್ದೇಶವಿದೆ. ಮೂಲ ದಾಖಲೆ ಕಳೆದುಹೋಗುವ ಅಥವಾ ದಾಖಲೆಗಳನ್ನು ತಿದ್ದುವುದನ್ನು ತಡೆಯಲು ಡಿಜಿಟಲ್‌ ಹಕ್ಕು ಪತ್ರಗಳನ್ನು ನೀಡಲಾಗುವುದು. ಜತೆಗೆ, ಫಲಾನುಭವಿ ಹೆಸರಿಗೆ ಸರಕಾರವೇ ಕ್ರಯಪತ್ರದ ಮೂಲಕ ನೋಂದಣಿ ಮಾಡಿಸಿ, ಸ್ಥಳೀಯ ಸಂಸ್ಥೆಯಿಂದ ಖಾತೆ ಕೊಡಿಸಲಿದೆ. ಹಾಗಾಗಿ, ಫಲಾನುಭವಿಗಳು ಮತ್ತೆ ಸರಕಾರಿ ಕಚೇರಿಗಳಿಗೆ ಅಲೆಯುವುದೂ ತಪ್ಪಲಿದೆ” ಎಂದು ಅವರು ವಿವರಿಸಿದರು.

ಪೋಡಿ ಅಭಿಯಾನದ ಮೂಲಕ ದುರಸ್ತಿ :

”ದಶಕಗಳ ಹಿಂದೆ ಸರಕಾರದಿಂದ ಭೂಮಿ ಮಂಜೂರಾಗಿದ್ದರೂ ರೈತರು ಅನುಭೋಗದಲ್ಲಿದ್ದಾರೆ ಮತ್ತು ಪಹಣಿಯಲ್ಲಿ ಹೆಸರಿದೆ ಎಂಬುದನ್ನು ಬಿಟ್ಟರೆ ಬೇರಾವ ದಾಖಲೆಗಳೂ ಇಲ್ಲ. ಪಕ್ಕಾ ದಾಖಲೆಗಳಿಲ್ಲದೆ ಪರಿತಪಿಸುತ್ತಿದ್ದ ರೈತರಿಗೆ ವರ್ಷಾಂತ್ಯದೊಳಗೆ ಪೋಡಿ ದುರಸ್ತಿ ಮಾಡಿಕೊಡಲಾಗುವುದು. ಪಕ್ಕಾ ದಾಖಲೆಗಳಿಗಾಗಿ ಸರಕಾರಿ ಕಚೇರಿಗಳಿಗೆ ಅಲೆದಾಟ ತಪ್ಪಿಸಲು ಸಿಎಂ ಸೂಚನೆಯಂತೆ ರಾಜ್ಯಾದ್ಯಂತ ಕಳೆದ ಜನವರಿ ತಿಂಗಳಿಂದ ಪೋಡಿ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ,” ಎಂದು ಹೇಳಿದರು.

“ಕಂದಾಯ ಮತ್ತು ಸರ್ವೆ ಇಲಾಖೆ ಒಟ್ಟಾಗಿ ಪೋಡಿ ದುರಸ್ತಿಗೆ ಸರಳೀಕೃತ ನಿಯಮ ರಚಿಸಿವೆ. ಕಳೆದ ಜನವರಿಯಿಂದ ಈನಕ ಒಟ್ಟು 88,886 ಭೂಮಂಜೂರಾತಿ ಪಡೆದವರಿಗೆ 1 – 5 ದಾಖಲೆ ಸಿದ್ಧಪಡಿಸಿ, ಸರ್ವೆ ಇಲಾಖೆಯಿಂದ ಅಳತೆ ಕೆಲಸವನ್ನೂ ಕೈಗೆತ್ತಿಕೊಂಡಿದ್ದೇವೆ. ಪ್ರತಿ ತಿಂಗಳೂ 5 ಸಾವಿರ ಪ್ರಕರಣಗಳಲ್ಲಿ ಸರ್ವೆ ಕೆಲಸದ ಗುರಿ ಹೊಂದಲಾಗಿದೆ” ಎಂದು ಸಚಿವರು ತಿಳಿಸಿದರು.

ವರ್ಷಾಂತ್ಯಕ್ಕೆ ತಹಸೀಲ್ದಾರ್ ಕಚೇರಿ ದಾಖಲೆ ಡಿಜಿಟಲೀಕರಣ :

“ಭೂ ಸುರಕ್ಷಾ ಯೋಜನೆಯಡಿ ವರ್ಷಾಂತ್ಯದೊಳಗೆ ತಹಸೀಲ್ದಾರ್‌ ಕಚೇರಿಗಳಲ್ಲಿರುವ ಎಲ್ಲ ಮೂಲ ದಾಖಲೆಗಳನ್ನು ಸ್ಕ್ಯಾ‌ನ್‌ ಮಾಡಿ ಡಿಜಿಟಲೀಕರಣ ಮಾಡಲಾಗುವುದು” ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ರೈತರಿಗೆ ಭೂ ಸುರಕ್ಷಾ ಯೋಜನೆ ಮೂಲಕ ಮುಕ್ತಿ :

”ರೈತರು ತಹಸೀಲ್ದಾರ್‌ ಕಚೇರಿಗಳಲ್ಲಿ ತಮ್ಮ ಭೂಮಿ ದಾಖಲೆ ಪಡೆಯಲು ಸಾಕಷ್ಟು ತೊಂದರೆ ಎದುರಿಸುತ್ತಿದ್ದಾರೆ. ಎಷ್ಟೋ ದಾಖಲೆ ಕಳೆದುಹೋಗಿದ್ದರೆ, ಮತ್ತಷ್ಟು ದಾಖಲೆಗಳನ್ನು ಕಾನೂನುಬಾಹಿರವಾಗಿ ತಿದ್ದುವ ಮೂಲಕ ರೈತರನ್ನು ಕೋರ್ಟ್‌, ಕಚೇರಿಗಳಿಗೆ ಅಲೆದಾಡುವಂತೆ ಮಾಡಲಾಗಿದೆ. ರೈತರಿಗೆ ಈ ಎಲ್ಲ ಶೋಷಣೆಗಳಿಂದ ಭೂ ಸುರಕ್ಷಾ ಯೋಜನೆ ಮುಕ್ತಿ ನೀಡಲಿದೆ. ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಿ ದಾಖಲೆ ಪಡೆಯುವ ವ್ಯವಸ್ಥೆ ಮಾಡಲಾಗುತ್ತಿದೆ,” ಎಂದು ಸಚಿವರು ಹೇಳಿದರು.

WhatsApp Join our WhatsApp Channel
Previous Post

Space News | ಬಾಹ್ಯಾಕಾಶ ಔಷಧ ಸಹಕಾರಕ್ಕಾಗಿ ಇಸ್ರೋ ಮಹತ್ವದ ಒಪ್ಪಂದ : ಮಾನವ ಸಹಿತ ಗಗನಯಾತ್ರೆಗೆ ಬಲ

Next Post

ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ನಾಗರೀಕರ ಮೇಲೆ ಭಯೋತ್ಪಾದಕರ ದಾಳಿ : ಕುಪ್ವಾರದಲ್ಲಿ ದುರ್ಘಟನೆ

Next Post

ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ನಾಗರೀಕರ ಮೇಲೆ ಭಯೋತ್ಪಾದಕರ ದಾಳಿ : ಕುಪ್ವಾರದಲ್ಲಿ ದುರ್ಘಟನೆ

ಘನತ್ಯಾಜ್ಯ ಬಳಕೆದಾರರ ಶುಲ್ಕ ಹಿಂಪಡೆಯುವಂತೆ ಪಾಲಿಕೆ ಮಾಜಿ ವಿರೋಧ ಪಕ್ಷದ ನಾಯಕ ಪದ್ಮನಾಭರೆಡ್ಡಿ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು : ‘ಘನತ್ಯಾಜ್ಯ ನಿರ್ವಹಣಾ ಶುಲ್ಕ ವಿಧಿಸಿದ್ದು ಕಾನೂನುಬಾಹಿರ, ಸುತ್ತೋಲೆ ಹಿಂಪಡೆಯಿರಿ’

Please login to join discussion

Like Us on Facebook

Follow Us on Twitter

Recent News

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group