Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BW SPECIAL | ಒಎಫ್‌ಸಿ ಅಳವಡಿಕೆಯಲ್ಲಿ ಬೆಸ್ಕಾಂ ಓವರ್‌ಟೇಕ್ : ಬಿಬಿಎಂಪಿಗೆ ಕೋಟ್ಯಾಂತರ ರೂ. ಆದಾಯ ನಷ್ಟದ ಭೀತಿ!!

ಬಿಬಿಎಂಪಿ ಮುಖ್ಯ ಆಯುಕ್ತರು ಬೆಸ್ಕಾಂ ಕೇಂದ್ರ ಕಚೇರಿಗೆ ಬರೆದ ಪತ್ರದಲ್ಲಿ ಬಹಿರಂಗ | ಅನಧಿಕೃತ ಒಎಫ್ ಸಿ ಅಳವಡಿಕೆಯಿಂದ ಒಂದೆಡೆ ನಷ್ಟ, ಮತ್ತೊಂದೆಡೆ ಬೆಸ್ಕಾಂ ಒಎಫ್ ಸಿ ಡಕ್ಟ್ ಭೋಗ್ಯಕ್ಕೆ ನೀಡುವ ನಿರ್ಧಾರ ವಿವಾದಕ್ಕೆ ಕಾರಣವಾಗಿದೆ.

by Bengaluru Wire Desk
May 6, 2025
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ಮೇ.06 www.bengaluruwire.com : ರಾಜಧಾನಿಯ ರಸ್ತೆ ರಸ್ತೆಗಳಲ್ಲಿ ಅನಧಿಕೃತ ಒಎಫ್ ಸಿ ಅಳವಡಿಕೆಯಿಂದ ನೂರಾರು ಕೋಟಿ ರೂ. ನಷ್ಟ ಅನುಭವಿಸುತ್ತಿರುವ ಬಿಬಿಎಂಪಿಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ನಿರ್ಧಾರ ದೊಡ್ಡ ಶಾಕ್ ನೀಡಿದೆ.

ಬೆಸ್ಕಾಂ ಸಂಸ್ಥೆಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಭೂಮಿಯ ಮೇಲ್ಮಟ್ಟದ ವಿದ್ಯುತ್ ತಂತಿ ಮತ್ತು ಕೇಬಲ್‌ಗಳನ್ನು ಭೂಗತವಾಗಿ ಸ್ಥಳಾಂತರಿಸುವ ಯೋಜನೆಯಲ್ಲಿ ಈಗಾಗಲೇ   ವಿದ್ಯುತ್ ಸರಬರಾಜು ಕಂಪನಿಯು ಬಿಎಂಎಜೆಡ್ ವ್ಯಾಪ್ತಿಯಲ್ಲಿ ಪ್ರತ್ಯೇಕ ಒಎಫ್ ಸಿ ಡಕ್ಟ್ ಅಳವಡಿಸಿದೆ. 

ಈ ಡಕ್ಟ್ ನಲ್ಲಿ ಆಪ್ಟಿಕಲ್ ಫೈಬರ್ ಕೇಬಲ್ (Optical fibre cable – OFC) ಅಳವಡಿಕೆ ಮಾಡಲು ಟೆಲಿಕಾಮ್ ಕಂಪನಿ ಹಾಗೂ ಸಂವಹನ ಸಂಸ್ಥೆಗಳಿಗೆ ಆ ಮಾರ್ಗಗಳನ್ನು ಭೋಗ್ಯಕ್ಕೆ ನೀಡಲು ನಿರ್ಧರಿಸಿದೆ. ಬೆಸ್ಕಾಂ ಕಾರ್ಪೊರೇಟ್ ಕಚೇರಿಯಲ್ಲಿ 2025ರ ಏ.3 ರಂದು ನಡೆದ ಸಭೆಯಲ್ಲಿ ಈ ತೀರ್ಮಾನಕ್ಕೆ ಬಂದಿದೆ. ಇದರಿಂದಾಗಿ ಬಿಬಿಎಂಪಿ ಒಎಫ್ ಸಿ ಆದಾಯಕ್ಕೆ ಬೆಸ್ಕಾಂ ದೊಡ್ಡ ಪೆಟ್ಟು ಕೊಟ್ಟಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾರ್ವಜನಿಕ ರಸ್ತೆಗಳ ಒಡೆತನ ಮತ್ತು ನಿರ್ವಹಣೆಯ ಸಂಪೂರ್ಣ ಹಕ್ಕು ಬಿಬಿಎಂಪಿಗೆ ಇದೆ. ಯಾವುದೇ ಸಂಸ್ಥೆಯು ಭೂಗತ ಅಥವಾ ಮೇಲ್ಮಟ್ಟದ ಮೂಲಸೌಕರ್ಯ ಅಳವಡಿಸಲು ಬಿಬಿಎಂಪಿಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಈ ನಿಯಮವನ್ನು ಉಲ್ಲಂಘಿಸಿ ಬೆಸ್ಕಾಂ ಒಎಫ್‌ಸಿ ಅಳವಡಿಕೆಗೆ ಮುಂದಾಗಿರುವುದು ಬಿಬಿಎಂಪಿಯ ಕೆಂಗಣ್ಣಿಗೆ ಗುರಿಯಾಗಿದೆ.

ಬಿಬಿಎಂಪಿಯ ವಾದವೇನು? :

ಬಿಬಿಎಂಪಿ ಮುಖ್ಯ ಆಯುಕ್ತರು ಇದೇ ಏ.28ರಂದು ಬೆಸ್ಕಾಂ ಕೇಂದ್ರ ಕಚೇರಿಗೆ ಬರೆದಿರುವ ಪತ್ರದಲ್ಲಿ, ಬೆಸ್ಕಾಂ ಒಎಫ್‌ಸಿ ಅಳವಡಿಸುವ ಮೊದಲು ಬಿಬಿಎಂಪಿಗೆ ನಿರ್ದಿಷ್ಟ ಶುಲ್ಕವನ್ನು ಪಾವತಿಸಬೇಕು. ಈ ಶುಲ್ಕವು ಬಿಬಿಎಂಪಿಯ ಆದಾಯದ ಪ್ರಮುಖ ಭಾಗವಾಗಿದ್ದು, ವಾರ್ಷಿಕವಾಗಿ ರೂ.125 ರಿಂದ ರೂ.250 ಕೋಟಿಗಳವರೆಗೆ ಸಂಗ್ರಹವಾಗುತ್ತದೆ. ಬೆಸ್ಕಾಂ ಶುಲ್ಕ ಪಾವತಿಸದೆ ಒಎಫ್‌ಸಿ ಅಳವಡಿಸಿದರೆ, 2018ರ ಡಿಸೆಂಬರ್ 10ರಂದು ರಾಜ್ಯ ಸರ್ಕಾರ ಹೊರಡಿಸಿದ ಆದೇಶ ಅನ್ವಯ, ಲೆಕ್ಕಪರಿಶೋಧನೆಯಲ್ಲಿ ಆಕ್ಷೇಪಣೆ ಬರುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ.

ಬೆಸ್ಕಾಂ ನಡೆಯಿಂದ ಬಿಬಿಎಂಪಿಗೆ ನಷ್ಟ :

ಬೆಸ್ಕಾಂನ ಈ ನಡೆಯಿಂದ ಬಿಬಿಎಂಪಿಗೆ ಬರಬೇಕಾದ ಆದಾಯಕ್ಕೆ ನಷ್ಟವಾಗುವ ಸಾಧ್ಯತೆ ಇದೆ. ಈಗಾಗಲೇ ಸಾರ್ವಜನಿಕ ರಸ್ತೆಗಳಲ್ಲಿ ಕೇಬಲ್ ಅಳವಡಿಕೆಯಿಂದ ನಗರದ ಸೌಂದರ್ಯ ಹಾಳಾಗಿದ್ದು, ಇದೀಗ ಬೆಸ್ಕಾಂನ ಈ ನಡೆ ವಿವಾದಕ್ಕೆ ಕಾರಣವಾಗಿದೆ.

2019-20 ಮತ್ತು 2021-22 ರ ನಡುವೆ ಪಾಲಿಕೆಗೆ ₹87 ಕೋಟಿ ನಷ್ಟ :

ಬಿಬಿಎಂಪಿಯ ಲೆಕ್ಕಪರಿಶೋಧಕರು ಇತ್ತೀಚೆಗೆ, ಟೆಲಿಕಾಂ ಸೇವಾ ಕಂಪನಿಗಳಿಂದ ಆಪ್ಟಿಕಲ್ ಫೈಬರ್ ಕೇಬಲ್‌ಗಳ (OFC) ಅಳವಡಿಕೆಗೆ ಶುಲ್ಕ ಸಂಗ್ರಹಿಸುವಲ್ಲಿ ಅಕ್ರಮಗಳನ್ನು ಬಹಿರಂಗಪಡಿಸಿದ್ದರು. ಇದರಿಂದಾಗಿ 2019-20 ಮತ್ತು 2021-22 ರ ನಡುವೆ ಪಾಲಿಕೆಗೆ ಸುಮಾರು 87 ಕೋಟಿ ರೂ.ಗಳಷ್ಟು ಗಣನೀಯ ನಷ್ಟವಾಗಿದೆ ಎಂಬುದನ್ನು ಎತ್ತಿ ತೋರಿಸಿದ್ದರು.

OFC ಕೇಬಲ್ ಗಳನ್ನು ಹಾಕುವಾಗ ಸಾರ್ವಜನಿಕ ಭೂಮಿಯನ್ನು ವ್ಯಾಪಕವಾಗಿ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಎತ್ತಿ ತೋರಿಸಿದ್ದಾರೆ. ಮೀಟರ್‌ಗೆ 1,500 ರೂ.ಗಳ ನಿಗದಿತ ಶುಲ್ಕಕ್ಕಿಂತ ಕಡಿಮೆ ಬೆಲೆಗೆ ಒಎಫ್ ಸಿ ಗಳನ್ನು ಹಾಕಲಾಗಿದೆ. ಬಿಬಿಎಂಪಿ ಅಧಿಕಾರಿಗಳು ಟೆಲಿಕಾಂ ಸೇವಾ ಕಂಪನಿಗಳೊಂದಿಗೆ ಶಾಮೀಲಾಗಿ ಅನಧಿಕೃತ ಸಂಸ್ಥೆಗಳು ತಮ್ಮ ನೆಟ್‌ವರ್ಕ್‌ಗಳನ್ನು ಹಾಕಲು ಅವಕಾಶ ಮಾಡಿಕೊಟ್ಟಿದ್ದಾರೆ. ಇದರಿಂದಾಗಿ ಗಮನಾರ್ಹ ಆರ್ಥಿಕ ನಷ್ಟವಾಗಿದೆ. “ಒಎಫ್ ಸಿ ಮಾಫಿಯಾ ಜಾಲದಿಂದ ಈ ಕಾನೂನುಬಾಹಿರ ಚಟುವಟಿಕೆಯು ಸಾವಿರಾರು ಕೋಟಿ ಆದಾಯ ನಷ್ಟಕ್ಕೆ ಕಾರಣವಾಗಿದೆ” ಎಂದು ವರದಿಯಲ್ಲಿ ತಿಳಿಸಲಾಗಿತ್ತು. 

ಟೆಂಡರ್‌ಶ್ಯೂರ್ ರಸ್ತೆಗಳಲ್ಲಿ ಯುಟಿಲಿಟಿ ಡಕ್ಟ್‌ಗಳಿಗೆ ಬೈಪಾಸ್ :

ಬಿಬಿಎಂಪಿ ಅಭಿವೃದ್ಧಿಪಡಿಸಿದ ಟೆಂಡರ್‌ಶ್ಯೂರ್ ರಸ್ತೆಗಳಲ್ಲಿ ಕೇಬಲ್ ಅಳವಡಿಕೆಗಾಗಿ ಯುಟಿಲಿಟಿ ಡಕ್ಟ್‌ಗಳು ಅಸ್ತಿತ್ವದಲ್ಲಿದ್ದರೂ, ಪಾಲಿಕೆಗೆ ಶುಲ್ಕವನ್ನು ಪಾವತಿಸುವುದನ್ನು ತಪ್ಪಿಸಲು ಟೆಲಿಕಾಂ ಕಂಪನಿಗಳು ಆಗಾಗ್ಗೆ ಅವುಗಳನ್ನು ಬೈಪಾಸ್ ಮಾಡುತ್ತವೆ. ಸಿಕ್ಕ ಸಿಕ್ಕ  ಮರಗಳು, ವಿದ್ಯುತ್ ಕಂಬಗಳು, ಕಟ್ಟಡಗಳು ಮತ್ತು ಟ್ರಾಫಿಕ್ ಸಿಗ್ನಲ್ ಕಂಬಗಳ ಮೇಲೆ ಕೇಬಲ್‌ಗಳನ್ನು ಪಾದಚಾರಿ ಮಾರ್ಗಕ್ಕೆ ತೊಡಕಾಗುವಂತೆ ಕಟ್ಟಲಾಗುತ್ತದೆ.

ಇದು ನಗರದ ಸೌಂದರ್ಯವನ್ನು ಹಾನಿಗೊಳಿಸುತ್ತದೆ ಮತ್ತು ವಾಹನ ಚಾಲಕರು ಮತ್ತು ಪಾದಚಾರಿಗಳಿಗೆ ಅಪಾಯವನ್ನು ಉಂಟು ಮಾಡುತ್ತಿದೆ. ಒಎಫ್ ಸಿ ಅಳವಡಿಸುವ ಅನುಮತಿಗಳಿಗೆ ಸಂಬಂಧಿಸಿದ ಫೈಲ್‌ಗಳ ಇತ್ತೀಚಿನ ಪರಿಶೀಲನೆಯ ಸಮಯದಲ್ಲಿ ಈ ಅಕ್ರಮಗಳು ಬೆಳಕಿಗೆ ಬಂದಿವೆ.

ನಿಗದಿಪಡಿಸಿದಕ್ಕಿಂತ ಕಡಿಮೆ ಶುಲ್ಕ ವಿಧಿಸಿ ಭ್ರಷ್ಟಾಚಾರ :

“2019ರಲ್ಲಿ ಆಗಿನ ಪಾಲಿಕೆ ಕಮಿಷನರ್ ನವೆಂಬರ್ 29, ರಂದು ಆದೇಶ ಹೊರಡಿಸಿದ್ದರೂ, ಟೆಲಿಕಾಂ ಕಂಪನಿಗಳಿಗೆ ಮೀಟರ್‌ಗೆ 850 ರೂ. ಶುಲ್ಕವನ್ನು ನಿಗದಿಪಡಿಸಿದಕ್ಕಿಂತ ಕಡಿಮೆ ಶುಲ್ಕ ವಿಧಿಸಲಾಗಿದೆ. ಇದು ಕಂಪನಿಗಳು ಮತ್ತು ಭ್ರಷ್ಟ ಅಧಿಕಾರಿಗಳಿಗೆ ಲಾಭ ತಂದಿತು. ಇದರಿಂದಾಗಿ ಮೂರು ವರ್ಷಗಳಲ್ಲಿ 86.6 ಕೋಟಿ ರೂ. ನಷ್ಟ ಉಂಟಾಗಿದೆ” ಎಂದು ಲೆಕ್ಕ ಪರಿಶೋಧನಾ ವರದಿ ಹೇಳುತ್ತದೆ. “ಕಮಿಷನರ್ ಆದೇಶಗಳನ್ನು ಪಾಲಿಸದಿದ್ದಕ್ಕಾಗಿ OFC ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಯಾವುದೇ ವಿವರಣೆಯನ್ನು ನೀಡಲು ವಿಫಲರಾಗಿದ್ದಾರೆ” ಎಂದು ಹೇಳಲಾಗಿದೆ.

ತಾಂತ್ರಿಕ ಸಿಬ್ಬಂದಿ ಕೊರತೆಯಿಂದಾಗಿ, ಪಾಲಿಕೆ ವ್ಯಾಪ್ತಿಯಲ್ಲಿ ಹಲವಾರು ಅಕ್ರಮಗಳನ್ನು ತಡೆಯಲು ಸಾಧ್ಯವಾಗಿಲ್ಲ ಎಂದು ವರದಿ ಹೇಳುತ್ತದೆ. ಅನಧಿಕೃತ OFC ಗಳನ್ನು ತೆರವುಗೊಳಿಸುವ ಪ್ರಯತ್ನಗಳಿಗೆ ದೂರಸಂಪರ್ಕ ಸೇವಾ ಪೂರೈಕೆದಾರರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಲೇ ಇರುತ್ತದೆ. ಇದೆಲ್ಲ ಸಂಘಟಿತ ಮಾಫಿಯಾ ಜಾಲ ಎಂಬ ಬಗ್ಗೆ ಸಾಕಷ್ಟು ಆರೋಪಗಳಿವೆ.

ಒಟ್ಟಾರೆಯಾಗಿ, ಒಂದೆಡೆ ಅನಧಿಕೃತ ಒಎಫ್ ಸಿ ಅಳವಡಿಕೆ ಲಂಗು ಲಗಾಮಿಲ್ಲದೆ ಮುಂದುವರೆಯುತ್ತಿದೆ. ಮತ್ತೊಂದೆಡೆ ಬೆಸ್ಕಾಂನ ಒಎಫ್‌ಸಿ ಅಳವಡಿಕೆ ಯೋಜನೆಯು ಬಿಬಿಎಂಪಿ ಮತ್ತು ಬೆಸ್ಕಾಂ ನಡುವಿನ ಭಿನ್ನಾಭಿಪ್ರಾಯಕ್ಕೆ ಹಾಗೂ ಪಾಲಿಕೆ ಆದಾಯ ನಷ್ಟಕ್ಕೆ ಕಾರಣವಾಗಲಿದ್ದು, ಈ ವಿವಾದವನ್ನು ಬಿಬಿಎಂಪಿ ಹೇಗೆ ಬಗೆಹರಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ. 

WhatsApp Join our WhatsApp Channel
Previous Post

ನಗರದಲ್ಲಿ ಮಳೆಗಾಲದ ವೇಳೆ ಸದಾ ಸನ್ನದ್ಧರಾಗಿರಲು ಅಧಿಕಾರಿಗಳಿಗೆ ಸೂಚನೆ : ತುಷಾರ್ ಗಿರಿ ನಾಥ್

Next Post

ಬೆಂಗಳೂರು : ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟಕ್ಕೆ ಯತ್ನ : ಇಬ್ಬರ ಬಂಧನ

Next Post

ಬೆಂಗಳೂರು : ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟಕ್ಕೆ ಯತ್ನ : ಇಬ್ಬರ ಬಂಧನ

ಬಿಡಿಎ ಕಾರ್ಯಾಚರಣೆ - ನಂದಿನಿ ಬಡಾವಣೆಯಲ್ಲಿ 3.5 ಕೋಟಿ ರೂ. ಮೌಲ್ಯದ ಆಸ್ತಿ ವಶ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group