Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತವಾಗಿ ನವದೆಹಲಿಗೆ : ಸೋಮವಾರ ಸಂಜೆ ವೇಳೆಗೆ ಬೆಂಗಳೂರಿಗೆ ವಾಪಸ್

ಪ್ರಧಾನಿ ಮೋದಿ ಸೂಚನೆ ಮೇರೆಗೆ ವಿದ್ಯಾರ್ಥಿಗಳ ಸುರಕ್ಷಿತ ವಾಪಸ್ಸಿಗೆ ಮುಂದಾದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ | ವಿದ್ಯಾರ್ಥಿಗಳು ದೆಹಲಿ ತಲುಪುವ ತನಕ ನಿಗಾ ವಹಿಸಿದ್ದ ಸಚಿವರು | ನಾಳೆ ಸಂಜೆ ವಿದ್ಯಾರ್ಥಿಗಳು ಬೆಂಗಳೂರಿಗೆ ವಾಪಸ್

by Bengaluru Wire Desk
May 11, 2025
in Bengaluru Focus, Public interest
Reading Time: 1 min read
0
ಶ್ರೀನಗರದಿಂದ ಶೇರ್ - ಇ -ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ಜನ ವಿದ್ಯಾರ್ಥಿಗಳು ರೈಲಿನಲ್ಲಿ ಸುರಕ್ಷಿತವಾಗಿ ನವದೆಹಲಿ ತಲುಪಿದ್ದಾರೆ.

ಶ್ರೀನಗರದಿಂದ ಶೇರ್ - ಇ -ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ಜನ ವಿದ್ಯಾರ್ಥಿಗಳು ರೈಲಿನಲ್ಲಿ ಸುರಕ್ಷಿತವಾಗಿ ನವದೆಹಲಿ ತಲುಪಿದ್ದಾರೆ.

ನವದೆಹಲಿ, ಮೇ.11 www.bengaluruwire.com : ಶ್ರೀನಗರದಿಂದ ಶೇರ್ – ಇ -ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ಜನ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ವಾಪಸ್ ಕರೆತರಲಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನದ ದಾಳಿ ನಡೆಸುತ್ತಿರುವ ಈ ಪ್ರಕ್ಷ್ಯುಬ್ದ ಪರಿಸ್ಥಿತಿಯಲ್ಲಿ ಸಿಲುಕಿಕೊಂಡಿದ್ದ ವಿದ್ಯಾರ್ಥಿಗಳನ್ನು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ನಿರ್ದೇಶನದ ಮೇರೆಗೆ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಜಮ್ಮುವಿನಿಂದ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ನಾಳೆ ಸಂಜೆಯ ವೇಳೆಗೆ ರಾಜ್ಯದ ವಿದ್ಯಾರ್ಥಿಗಳು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಪಾಕಿಸ್ತಾನವು ಅಧರ್ಮ ಮಾರ್ಗದಲ್ಲಿ ಭಾರತದ ಮೇಲೆ ದಾಳಿ ನಡೆಸುತ್ತಿದ್ದು, ಅದಕ್ಕೆ ಪ್ರತ್ಯುತ್ತರ ನೀಡಲಾಗುತ್ತಿದೆ. ಅಲ್ಲದೆ, ಕಣಿವೆ ರಾಜ್ಯದಲ್ಲಿನ ಎಲ್ಲರ ಜೀವ ರಕ್ಷಣೆ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆಯಂತೆ ವಿದ್ಯಾರ್ಥಿಗಳ ತೆರವಿಗೆ ಸರ್ವ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಈ ಕಾರ್ಯಾಚರಣೆಗೆ ನೆರವಾದ ಎಲ್ಲವರಿಗೂ ಧನ್ಯವಾದ ಸಲ್ಲಿಸುತ್ತೇನೆ. ಎಲ್ಲಾ ವಿದ್ಯಾರ್ಥಿಗಳು ಈಗಾಗಲೇ ನವದೆಹಲಿ ತಲುಪಿದ್ದು, ಅವರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕಳಿಸುವ ವ್ಯವಸ್ಥೆ ಮಾಡಲಾಗಿದೆ ಎಂದು  ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಶ್ರೀನಗರದಿಂದ ರಾಜ್ಯ ವಿದ್ಯಾರ್ಥಿಗಳು ವಾಪಸ್ ಮರಳಿದ್ದು ಹೇಗೆ? :

ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಚನ್ನಪಟ್ಟಣ ತಾಲ್ಲೂಕಿನ ತಗಚಗೆರೆ ಗ್ರಾಮದ ವಿದ್ಯಾರ್ಥಿ ಹರ್ಷಿತ್ ಅವರ ಪೋಷಕರು ಜಮ್ಮುವಿನಲ್ಲಿ ಸಿಲುಕಿರುವ ತಮ್ಮ ಪುತ್ರನನ್ನು ರಕ್ಷಣೆ ಮಾಡಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದರು. ಕೂಡಲೇ ಈ ವಿಷಯವನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಗಮನಕ್ಕೆ ತಂದು ವಿದ್ಯಾರ್ಥಿಗಳ ಸುರಕ್ಷಿತ ಸ್ಥಳಾಂತರಕ್ಕೆ ಮನವಿ ಮಾಡಿದ್ದರು.

ಶನಿವಾರ ಶ್ರೀನಗರದಿಂದ ಭದ್ರತೆಯ ನಡುವೆ ಬಸ್ಸಿನಲ್ಲಿ ಜಮ್ಮುವಿಗೆ ಪ್ರಯಾಣಿಸಿದ್ದ ವಿದ್ಯಾರ್ಥಿಗಳು ಭಾನುವಾರ ಮಧ್ಯಾಹ್ನದ ಹೊತ್ತಿಗೆ ರೈಲಿನಲ್ಲಿ ದೆಹಲಿ ತಲುಪಿದರು. ವಿದ್ಯಾರ್ಥಿಗಳ ಸ್ಥಳಾಂತರ ಮತ್ತು ಪ್ರಯಾಣದ ಎಲ್ಲಾ ಪ್ರಕ್ರಿಯೆಗಳನ್ನು ಕೇಂದ್ರ ಸಚಿವರು ಖುದ್ದು ಉಸ್ತುವಾರಿ ವಹಿಸಿ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದರು.

ವಿದ್ಯಾರ್ಥಿಗಳು ನವದೆಹಲಿಗೆ ತಲುಪಿದ ನಂತರ ಅವರ ಉಸ್ತುವಾರಿಯನ್ನು ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವಾಲಯದ ಅಧಿಕಾರಿಗಳೇ ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳು ಸುರಕ್ಷಿತವಾಗಿ ಅವರ ಮನೆಗಳನ್ನು ತಲುಪುವವರೆಗೂ ನಾವು ಎಚ್ಚರಿಕೆ ವಹಿಸುತ್ತೇವೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

“ಇಡೀ ದೇಶವು ಸವಾಲಿನ ಪರಿಸ್ಥಿತಿಯಲ್ಲಿ ಇರುವಾಗ ಪ್ರಧಾನಿ ನರೇಂದ್ರ ಮೋದಿಯವರ ಸ್ಪಷ್ಟ ಮಾರ್ಗದರ್ಶನದಿಂದ ಮಾತ್ರ ಇದೆಲ್ಲಾ ಸಾಧ್ಯವಾಗಿದೆ. ಜಮ್ಮು ಮತ್ತು ಕಾಶ್ಮೀರದಿಂದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಇಡೀ ಕೇಂದ್ರ ಸರ್ಕಾರದ ಅಧಿಕಾರಿಗಳು ಸಹಕಾರ ನೀಡಿದ್ದಾರೆ. ಮುಖ್ಯವಾಗಿ ಭದ್ರತಾ ಸಂಸ್ಥೆಗಳು, ರೈಲ್ವೆ ಸಿಬ್ಬಂದಿ ಮತ್ತು ಸಚಿವಾಲಯದ ಅಧಿಕಾರಿಗಳನ್ನು ನಾನು ಶ್ಲಾಘಿಸುತ್ತೇನೆ. ನಮ್ಮ ಜನರ, ವಿಶೇಷವಾಗಿ ದೂರದ ಪ್ರದೇಶಗಳ ವಿದ್ಯಾರ್ಥಿಗಳ ಸುರಕ್ಷತೆಯು ನಮ್ಮ ಪ್ರಮುಖ ಆದ್ಯತೆಯಾಗಿದೆ” ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಸುರಕ್ಷಿತ ವಾಪಸ್, ವಿದ್ಯಾರ್ಥಿಗಳ ಸಂತಸ :

ಶ್ರೀನಗರದಿಂದ ದೆಹಲಿಗೆ ಸುರಕ್ಷಿತವಾಗಿ ವಾಪಸ್ ಬಂದ ಬಗ್ಗೆ ಎಲ್ಲಾ ಹದಿಮೂರು ವಿದ್ಯಾರ್ಥಿಗಳು ಅತೀವ ಸಂತಸ ವ್ಯಕ್ತಪಡಿಸಿದ್ದಾರೆ.

“ನನ್ನದು ಚನ್ನಪಟ್ಟಣ ತಾಲ್ಲೂಕಿನ ತಗಚಗೆರೆ ಗ್ರಾಮ. ನಾವು ಶ್ರೀನಗರದಲ್ಲಿದ್ದ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಾದಾಗ ತೀವ್ರ ಅನಿಶ್ಚಿತ ಮತ್ತು ಆತಂಕಕ್ಕೊಳಗಾಗಿದ್ದೆವು. ಆದರೆ ಭಾರತ ಸರ್ಕಾರದ ತ್ವರಿತ ನೆರವಿನಿಂದ ನಾವು ಅಪಾಯದಿಂದ ಪಾರಾದೆವು. ಪ್ರಧಾನಿ ಮೋದಿಯವರ ಅವರ ಸ್ಪಷ್ಟ ಆದೇಶಗಳು ನಾವು ಸುರಕ್ಷಿತವಾಗಿ ವಾಪಸ್ ಆಗಿದ್ದೇವೆ. ನಮ್ಮನ್ನು ಯೋಗಕ್ಷೇಮ, ಸುರಕ್ಷತೆಯ ಬಗ್ಗೆ ನಿರಂತರವಾಗಿ ನಿಗಾ ವಹಿಸಿದ್ದ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ನಮ್ಮ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇವೆ. ನಿಖಿಲ್ ಕುಮಾರಸ್ವಾಮಿ ಅವರು ಕೂಡ ನಮ್ಮ ಸುರಕ್ಷಿತ ಪ್ರಯಾಣವನ್ನು ನಿಕಟವಾಗಿ ಗಮನಿಸುತ್ತಿದ್ದರು ಮತ್ತು ಅದು ನಮಗೆಲ್ಲರಿಗೂ ಬಹಳಷ್ಟು ಅನುಕೂಲವಾಯಿತು.”

-ಹರ್ಷಿತ್,

ಶೇರ್ – ಇ -ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ವಿದ್ಯಾರ್ಥಿ

“ಕಷ್ಟದ ಸಮಯದಲ್ಲಿ ನಮ್ಮೊಂದಿಗೆ ನಿಂತಿದ್ದಕ್ಕಾಗಿ ನಮ್ಮ ಪ್ರಧಾನಮಂತ್ರಿಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಅವರು ತುಂಬಾ ಗಂಭೀರವಾಗಿ ಪರಿಗಣಿಸಿದ್ದು ನನಗೆ ಬಹಳ ಸಂತೋಷ ಉಂಟು ಮಾಡಿದೆ. ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ವೈಯಕ್ತಿಕ ಕಾಳಜಿ, ನೆರವು ಹಾಗೂ ನಿಖಿಲ್ ಕುಮಾರಸ್ವಾಮಿ ಅವರಿಂದ ದೊರೆತ ಸಹಾಯದಿಂದ ನಾವು ಸುರಕ್ಷಿತವಾಗಿ ನಮ್ಮ ನಮ್ಮ ಮನೆಗಳಿಗೆ ತಲುಪುತ್ತಿದ್ದೇವೆ.”

-ಭಾಗ್ಯಶ್ರೀ ಪ್ರಸಾದ್

ಶೇರ್ – ಇ -ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ವಿದ್ಯಾರ್ಥಿ

WhatsApp Join our WhatsApp Channel
Previous Post

Video News | ಭಾರತದ ಪ್ರಮುಖ ಸಶಸ್ತ್ರ ಬಲ : ಲಕ್ನೋದಲ್ಲಿ ಬ್ರಹ್ಮೋಸ್ ಏರೋಸ್ಪೇಸ್ ಉತ್ಪಾದನಾ ಘಟಕ ಉದ್ಘಾಟನೆ

Next Post

Akash Missile | ಆಕಾಶ್ ಕ್ಷಿಪಣಿ: ಭಾರತದ ಪೂರ್ಣ ಆಕಾಶದಲ್ಲಿನ ಶಕ್ತಿಶಾಲಿ ಕಾವಲುಗಾರ

Next Post

Akash Missile | ಆಕಾಶ್ ಕ್ಷಿಪಣಿ: ಭಾರತದ ಪೂರ್ಣ ಆಕಾಶದಲ್ಲಿನ ಶಕ್ತಿಶಾಲಿ ಕಾವಲುಗಾರ

ಸಂಚಾರಿ ಕಾವೇರಿ : ಬಿಐಎಸ್ ಪ್ರಮಾಣಿತ ಶುದ್ಧ ಕುಡಿಯುವ ನೀರು ನಿಮ್ಮ ಮನೆ ಬಾಗಿಲಿಗೆ

Please login to join discussion

Like Us on Facebook

Follow Us on Twitter

Recent News

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group