Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

ಗಾಯಗೊಂಡವರನ್ನು ಹತ್ತಿರದ ವೈದೇಹಿ ಹಾಗೂ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ | ಗಂಭೀರವಾಗಿ ಗಾಯಗೊಂಡು 9 ಮಂದಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ | ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ | ದುರ್ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

by Bengaluru Wire Desk
June 4, 2025
in Bengaluru Focus, News Wire, Public interest
Reading Time: 2 mins read
0

ಬೆಂಗಳೂರು, ಜೂ.04 www.bengaluruwire.com : 18 ವರ್ಷಗಳ ಬಳಿಕ ಮೊದಲ ಬಾರಿಗೆ ಕಪ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಚಿನ್ನಸ್ವಾಮಿ‌ ಸ್ಟೇಡಿಯಮ್ ನಲ್ಲಿ ನಡೆಯುವ ಸಂಭ್ರಮಾಚರಣೆ ನಡೆಯಬೇಕಿದ್ದ ಸಂಭ್ರಮಾಚರಣೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಒಮ್ಮೆಗೆ ತೆರಳಿದ್ದರಿಂದ ಕಾಳ್ತುಳಿತ ಸಂಭವಿಸಿ 12 ಮಂದಿ ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡರು ಹೇಳಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ದುರ್ಘಟನೆಯಲ್ಲಿ ಗಾಯಗೊಂಡ ಮಹಿಳೆಯೊಬ್ಬರನ್ನು ಕರೆದೊಯ್ಯುತ್ತಿರುವ ಚಿತ್ರ.

ಆರ್ ಸಿಬಿ ಮಧ್ಯಾಹ್ನದ ವೇಳೆಗೆ ರಾಜಧಾನಿಗೆ ಬಂದಿಳಿದ ನಂತರ, ಎಚ್‌ಎಎಲ್‌ನಿಂದ ತಾಜ್ ವೆಸ್ಟೆಂಡ್ ಹೊಟೇಲ್‌ಗೆ ತೆರಳುತ್ತಿದ್ದ ವೇಳೆ ಲಕ್ಷಾಂತರ ಅಭಿಮಾನಿಗಳು ರಸ್ತೆ ಅಕ್ಕಪಕ್ಕದಲ್ಲಿ ನಿಂತು ಸಂಭ್ರಮಾಚರಣೆ ನಡೆಸುತ್ತಿದ್ದರು. ಹೀಗೆ ಖುಷಿಪಡುವ ಸಂಭ್ರಮ ಚಿನ್ನಸ್ವಾಮಿ‌ ಸ್ಟೇಡಿಯಮ್ ನಲ್ಲಿ ವಿಜಯದ ಸಂಭ್ರಮಾಚರಣೆ ಆಗಬೇಕಿದ್ದ ಸಂಭ್ರಮ 12 ಮಂದಿ ಸಾವನ್ನಪ್ಪಿ, 30ಕ್ಕೂ ಹೆಚ್ಚು ಮಂದಿ ಕಾಲ್ತುಳಿತದಲ್ಲಿ ಗಾಯಗೊಂಡು ಆ ಸ್ಥಳವು ಸೂತಕದ ಸ್ಥಳವಾಗಿ ಮಾರ್ಪಟ್ಟಿತ್ತು. 33 ಮಂದಿಯ ಪೈಕಿ 9 ಮಂದಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ದುರ್ಘಟನೆಯಲ್ಲಿ ಈತನಕ ಗಾಯಗೊಂಡು, 27 ಮಂದಿಯನ್ನು ವೈದೇಹಿ ಹಾಗೂ ಬೌರಿಂಗ್ ಆಸ್ಪತ್ರೆ, ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿದೆ.

ಕ್ರೀಡಾಂಗಣದ ಹೊರಗೆ ಸಂಭವಿಸಿದ ತಳ್ಳಾಟ-ನೂಕಾಟದಲ್ಲಿ ಗಾಯಗೊಂಡ ಸಣ್ಣ ಮಗುವನ್ನು ಕೈಯಲ್ಲಿ ಹಿಡಿದು ರಕ್ಷಿಸಲು ಮುಂದಾದ ಪೊಲೀಸ್ ಅಧಿಕಾರಿ.

ವೈದೇಹಿಯಲ್ಲಿ ಹಾಗೂ ಬೌರಿಂಗ್ ಆಸ್ಪತ್ರೆಯಲ್ಲಿ ಮತ್ತು ಮಣಿಪಾಲ್ ಆಸ್ಪತ್ರೆಯಲ್ಲಿ ಕಾಲ್ತಳಿದಲ್ಲಿ ಗಾಯಗೊಂಡವರು ಮೃತಪಟ್ಟಿದ್ದಾರೆ.

ಆರ್‌ಸಿಬಿ ಪಡೆಯು ನಗರದಲ್ಲಿ ವಿಜಯ ಯಾತ್ರೆ ಕೈಗೊಂಡು ಆರ್‌ಸಿಬಿ ಅಭಿಮಾನಿಗಳಲ್ಲಿ ಪುಳಕವುಂಟು ಮಾಡಲು ಕಾತುರವಾಗಿತ್ತು. ಇದಾದ ನಂತರ ಚಿನ್ನಸ್ವಾಮಿ ಸ್ಟೇಡಿಯಮ್ ನಲ್ಲಿ ಆರ್‌ಸಿಬಿ ವಿಜಯೋತ್ಸವ ಸಂಭ್ರಮ ನೋಡಲು ಅಭಿಮಾನಿಗಳಿಗೆ ಸೀಮಿತ ಉಚಿತ ಪ್ರವೇಶ ಪಾಸ್ ಹಂಚಿಕೆ ಮಾಡುವುದಾಗಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪ್ರಕಟಿಸಿತ್ತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿನ್ನೆ ಅಹಮದಾಬಾದ್ ನಲ್ಲಿ ಸಾಧಿಸಿದ ಅಭೂತಪೂರ್ವ ಗೆಲುವಿನ ಸಂಭ್ರಮಾಚರಣೆ ಹಮ್ಮಿಕೊಂಡಿತ್ತು. 

ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿ ದುರ್ಘಟನೆಗೆ ಸಾಕ್ಷಿಯಾದ ದೃಶ್ಯ.

ಆದರೆ ಸ್ಟೇಡಿಯಮ್ ನಲ್ಲಿ ಸೀಮಿತ ಉಚಿತ ಪಾಸ್ ಸಿಗುತ್ತಾ? ಹಣಕೊಟ್ಟು ಟಿಕೆಟ್ ಪಡೆಯಬೇಕಾ? ಎಂಬ ಬಗ್ಗೆ ಸ್ಟೇಡಿಯಮ್ ಹತ್ತಿರ ಬಂದ ಅಭಿಮಾನಿಗಳಿಗೆ ಮಾಹಿತಿ ಕೊರತೆಯೂ ಈ ರೀತಿಯ ದುರ್ಘಟನೆಗೆ ಕಾರಣವಾಯ್ತಾ ಎಂಬ ಬಗ್ಗೆ ಇನ್ನಿಷ್ಟೇ ಮಾಹಿತಿ ತಿಳಿದು ಬರಬೇಕಾಗಿದೆ.

ದುರ್ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ :

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಧ್ಯಮಗಳಿಗೆ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದರು.

“ರಾಜ್ಯ ಸರ್ಕಾರ ಪೂರ್ವ ತಯಾರಿ ಇಲ್ಲದೆ, ಪೊಲೀಸರ ಪೂರ್ವಾನುಮತಿ ಪಡೆಯದೆ ಆತುರಾತುರವಾಗಿ ಸಂಭ್ರಮಾಚರಣೆ ಮಾಡಲು, ಪೊಲೀಸರ ಒತ್ತಾಯಪೂರ್ವಕವಾಗಿ ಒಪ್ಪಿಸಿ, ಆರ್ ಸಿಬಿ ವಿಜಯೋತ್ಸವ ನಡೆಸಲು, ರಾಜ್ಯ ಸರ್ಕಾರದ ಪ್ರಚಾರದ ಹುಚ್ಚಿಗೆ ಜನರು ಪರದಾಡುವಂತಾಗಿದೆ. ಚಿನ್ನಸ್ವಾಮಿ ಸ್ಟೇಡಿಯಮ್ ನಲ್ಲಿ ಸೂಕ್ತ ಭದ್ರತೆ, ಪೂರ್ವಸಿದ್ಧತೆ ಕೈಗೊಳ್ಳದೆ ಸಂಭ್ರಮಾಚರಣೆ ಆಯೋಜಿಸಲಾಗಿತ್ತು. ಈಗಾಗಲೇ 12 ಜನ ಪ್ರಾಣ ಕಳೆದುಕೊಂಡಿದ್ದಾರೆ. ಈ ದುರ್ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕಿದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹಿಸಿದ್ದಾರೆ.

ವಿಧಾನಸೌಧ ಮುಂಭಾಗದ ಗ್ರ್ಯಾಂಡ್ ಸ್ಟೆಪ್ ಮೇಲೆ ಆರ್ ಸಿಬಿ ಚಾಂಪಿಯನ್ ಆಟಗಾರರನ್ನು ರಾಜ್ಯ ಸರ್ಕಾರದಿಂದ ಸನ್ಮಾನಿಸಿದರು.

ಸಾವಿರಾರು ಜನರ ಪ್ರವೇಶಕ್ಕೆ ಕೇವಲ 3 ಗೇಟ್ ನಿಂದ ಪ್ರವೇಶ? :

ಚಿನ್ನಸ್ವಾಮಿ ಸ್ಟೇಡಿಯಮ್ ನಲ್ಲಿ ಪ್ರವೇಶ ಪಡೆಯಲು ಜನರ ನೂಗುನುಗ್ಗಲು.

35,000 ಸೀಟಿನ ಸಾಮರ್ಥ್ಯ ಹೊಂದಿದ ಚಿನ್ನಸ್ವಾಮಿ ಸ್ಟೇಡಿಯಮ್ ನಲ್ಲಿ, ಪಾಸ್ ಪಡೆದವರಿಗೆ ಕೇವಲ ಮೂರು ಗೇಟ್ ಗಳಿಂದ ಒಳಗೆ ಬಿಡುವಾಗ, ಟಿಕೆಟ್ ಇಲ್ಲದವರೂ ಆ ಸ್ಥಳಕ್ಕೆ ನುಗ್ಗಿದಾಗ, ಗೇಟ್ ಏರಿ ಒಳ ಹೋಗುವಾಗ, ಏಕಾಏಕಿ ತಳ್ಳಾಟ ನಡೆದಾಗ ಕಾಲ್ತುಳಿತ ಸಂಭವಿಸಿತು. ಗೇಟ್ ಹೊರಗೆ ಸಾವಿರಾರು ಜನರು ಜಮಾಯಿಸಿದ್ದರು. ಹೀಗಿದ್ದಾಗ ಇನ್ನು ಹಲವು ಗೇಟ್ ಗಳನ್ನು ತೆಗೆಯುವ ಬದಲು ಕೇವಲ ಮೂರು ಗೇಟ್ ತೆಗೆದಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸಂಜೆ 4 ಗಂಟೆಗೆ ವಿಧಾನಸೌಧದ ಗ್ರಾಂಡ್ ಸ್ಟೆಪ್ ಬಳಿ ರಾಜ್ಯ ಸರ್ಕಾರದಿಂದ ಐಪಿಎಲ್ ಚಾಂಪಿಯನ್ ಆಟಗಾರರನ್ನು ಸನ್ಮಾನಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು.‌ ಈ ಮಾಹಿತಿ ತಿಳಿದ ಅಸಂಖ್ಯಾತ ಮಂದಿ ವಿಧಾನಸೌಧದ ಮುಂಭಾಗದ ರಸ್ತೆ, ಪಾರ್ಕ್ ಜಾಗಗಳಲ್ಲಿ, ಸಿಕ್ಕ ಸಿಕ್ಕ ಜಾಗಗಳಲ್ಲಿ ಆರ್ ಸಿಬಿ ಟೀಮ್ ಆಟಗಾರರನ್ನು ಸನ್ಮಾನವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಜಮಾಯಿಸಿದ್ದರು.

ವಿಧಾನಸೌಧ ಮುಂಭಾಗದ ಗ್ರ್ಯಾಂಡ್ ಸ್ಟೆಪ್ ಮೇಲೆ ಆರ್ ಸಿಬಿ ಚಾಂಪಿಯನ್ ಆಟಗಾರರನ್ನು ರಾಜ್ಯ ಸರ್ಕಾರದಿಂದ ಸನ್ಮಾನಿಸಿದರು.

ಅಂತಿಮವಾಗಿ ಬೆಂಗಳೂರು ಪೊಲೀಸರು ಚಿನ್ನಸ್ವಾಮಿ ಸ್ಟೇಡಿಯಮ್ ನಲ್ಲಿ ಆರ್‌ಸಿಬಿ ವಿಜಯೋತ್ಸವ ಸಂಭ್ರಮಾಚರಣೆಗೆ ಕೇವಲ 15 ನಿಮಿಷ ಕಾಲಾವಕಾಶ ನೀಡಿದರು. ಈ ಮಧ್ಯೆ ಸ್ಟೇಡಿಯಮ್ ನಲ್ಲಿ ಆರ್ ಸಿಬಿ ವಿಜಯೋತ್ಸವ ನಡೆಯಿತು. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ತುರ್ತು ಸಭೆ ನಡೆಸಿದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ವಿಜಯೋತ್ಸವದಲ್ಲಿ ಐಪಿಎಲ್ ಚಾಂಪಿಯನ್ ಆರ್ ಸಿಬಿ ಆಟಗಾರರ ಜೊತೆ ಕಪ್ ಎತ್ತಿ ಹಿಡಿದ ಡಿಸಿಎಂ ಡಿ.ಕೆ.ಶಿವಕುಮಾರ್.

ಸಂಜೆ 6.15 ವೇಳೆಗೆ ಕಬ್ಬನ್ ಪಾರ್ಕ್, ವಿಧಾನಸೌಧದಲ್ಲಿ ಅಪಾರ ಅಭಿಮಾನಿಗಳು ಸೇರ್ಪಡೆಗೊಂಡು, ಜನದಟ್ಟಣೆ ಉಂಟಾಗಿರುವ ಕಾರಣ, ನಮ್ಮ ಮೆಟ್ರೋ ಈ ಎರಡು ನಿಲ್ದಾಣಗಳಲ್ಲಿ ಮೆಟ್ರೋ ರೈಲ್ ನಿಲ್ಲಿಸದೆ ಸಾಗುತ್ತಿತ್ತು.

ಮೊದಲಿಗೆ ಎಚ್ಎಎಲ್‌ ವಿಮಾನ ನಿಲ್ದಾಣದಲ್ಲಿ ಬಂದ ಆರ್ ಸಿಬಿ ಕ್ಯಾಪ್ಟನ್ ರಜತ್‌ ಪಾಟೀದಾರ್‌ ಪಡೆಗೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆತ್ಮೀಯವಾಗಿ ಸ್ವಾಗತ ಕೋರಿದರು. ಈ ವೇಳೆ, ಆರ್‌ಸಿಬಿ ಸ್ಟಾರ್‌ ವಿರಾಟ್‌ ಕೊಹ್ಲಿಗೆ (Virat Kohli) ಕನ್ನಡದ ಬಾವುಟ ಹಾಗೂ ಆರ್ ಸಿಬಿ ಬಾವುಟ ನೀಡಿದರು. ಇದನ್ನು ಹಾರಿಸುವ ಮೂಲಕ ವಿರಾಟ್‌ ಸಂತಸಪಟ್ಟಿದ್ದರು. 

ಎಚ್ಎಎಲ್ ನಿಂದ ತಾಜ್ ವೆಸ್ಟ್ ಎಂಡ್ ಹೋಟೆಲ್ ಕಡೆಗೆ ತೆರಳಿದ ಆರ್ ಸಿಬಿ ತಂಡವನ್ನು ರಸ್ತೆಬದಿಯಲ್ಲಿ ನಿಂತಿದ್ದ ಲಕ್ಷಾಂತರ ಅಭಿಮಾನಿಗಳು  ಭರ್ಜರಿಯಾಗಿ ಸ್ವಾಗತಿಸಿದರು. ಅಭಿಮಾನಿಗಳನ್ನ ಕಂಡ ವಿರಾಟ್ ಕೊಹ್ಲಿ, ಚಾಂಪಿಯನ್ ಟ್ರೋಫಿಯನ್ನು ತೋರಿಸಿ ಸಂತಸಪಟ್ಟಿದ್ದರು. ಹೆಚ್‌ಎಎಲ್‌ನಿಂದ ತಾಜ್ ವೆಸ್ಟೆಂಡ್‌ವರೆಗಿನ ದಾರಿಯುದ್ದಕ್ಕೂ ಅಭಿಮಾನಿಗಳ ಸಾಗರವೇ ನೆರೆದಿತ್ತು. ಆರ್ ಸಿಬಿ ತಂಡ ತೆರಳುತ್ತಿದ್ದ ಬಸ್ ಹಿಂದೆಮುಂದೆ ಭದ್ರತೆಗಾಗಿ ಪೊಲೀಸರ ಭರ್ಜರಿ ಸರ್ಪಗಾವುಲು ದಾರಿಯುದ್ದಕ್ಕೂ ಇತ್ತು.

ರಸ್ತೆ ಇಕ್ಕೆಲಗಳಲ್ಲೆಲ್ಲಾ ಫ್ಯಾನ್ಸ್ ನಿಂತು `ಆರ್‌ಸಿಬಿ.. ಆರ್‌ಸಿಬಿ.. ಕೊಹ್ಲಿ.. ಕೊಹ್ಲಿ’ ಎಂದು ಕೂಗಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದರು. ಈ ವೇಳೆ ಫ್ಯಾನ್ಸ್‌ಗಳ ಹರ್ಷವನ್ನು ಕಂಡ ವಿರಾಟ್ ಕೊಹ್ಲಿ ಅವರು ಬಸ್‌ನಲ್ಲೇ ಕುಳಿತು ಅಭಿಮಾನಿಗಳಿಗೆ ಚಾಂಪಿಯನ್ ಟ್ರೋಫಿ ತೋರಿಸಿ ಸಂತಸ ಪಟ್ಟರು. ಟ್ರೋಫಿ ಮೇಲೆ ಕೈತಟ್ಟಿ ‘ಈ ಸಲ ಕಪ್ ನಮ್ದು’ ಎಂಬಂತೆ ಸನ್ನೆ ಮಾಡಿದರು. ಕೊಹ್ಲಿಯನ್ನು ಕಂಡು ಅಭಿಮಾನಿಗಳು ಕೂಡ ಫುಲ್ ಥ್ರಿಲ್ ಆಗಿದ್ದರು. ಅಂತಿಮವಾಗಿ ಸಂಭ್ರಮಾಚರಣೆ ಸೂತಕದ ಮನೆಯಾಗಿದ್ದು ದುರದೃಷ್ಟಕರ.

WhatsApp Join our WhatsApp Channel
Previous Post

ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

Next Post

ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

Next Post

ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group