Thursday, July 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಕುಸುಮ್‌- ಸಿ ಯೋಜನೆಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

ಗೌರಿಬಿದನೂರು ತಾಲೂಕಿನಲ್ಲಿ ಸೌರ ಘಟಕ ಲೋಕಾರ್ಪಣೆ; ರೈತರಿಗೆ ನೆರವಾಗಲಿದೆ ಕುಸುಮ್-ಸಿ ಯೋಜನೆ

by Bengaluru Wire Desk
June 11, 2025
in News Wire, Public interest
Reading Time: 1 min read
0
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ಸ್ಥಾಪಿಸಲಾದ ಸೋಲಾರ್ ಘಟಕವನ್ನು ಲೋಕಾರ್ಪಣೆಗೊಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ಸ್ಥಾಪಿಸಲಾದ ಸೋಲಾರ್ ಘಟಕವನ್ನು ಲೋಕಾರ್ಪಣೆಗೊಳಿಸಿದರು.

ಗೌರಿಬಿದನೂರು, ಜೂ. 11: ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ವೇಳೆಯಲ್ಲಿ ಸಮರ್ಪಕವಾಗಿ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲು ಕುಸುಮ್-ಸಿ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಇಂದು ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ಸ್ಥಾಪಿಸಲಾದ ಸೋಲಾರ್ ಘಟಕವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕುಸುಮ್-ಸಿ ಯೋಜನೆಯ ಮೂಲ ಉದ್ದೇಶವೇ ರೈತರಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಸುವುದು ಎಂದು ತಿಳಿಸಿದರು. ಕೇಂದ್ರ ಸರ್ಕಾರವು 2019ರಲ್ಲೇ ಈ ಯೋಜನೆಯನ್ನು ಜಾರಿಗೆ ತಂದಿದ್ದರೂ, ರಾಜ್ಯದಲ್ಲಿ 2021ರಲ್ಲಿ ಆಗಿನ ಬಿಜೆಪಿ ಸರ್ಕಾರ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡರೂ, ನಂತರದ ಎರಡು ವರ್ಷಗಳಲ್ಲಿ ಯೋಜನೆ ಜಾರಿಗೊಳಿಸುವ ಪ್ರಯತ್ನ ಮಾಡಿರಲಿಲ್ಲ ಎಂದು ಮುಖ್ಯಮಂತ್ರಿಗಳು ದೂರಿದರು. ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ನೇತೃತ್ವದಲ್ಲಿ ಕುಸುಮ್-ಸಿ ಯೋಜನೆ ಅನುಷ್ಠಾನ ಆರಂಭಿಸಲಾಯಿತು ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಯೋಜನೆಯ ವಿಸ್ತಾರ ಮತ್ತು ಲಾಭ:

ರಾಜ್ಯದಲ್ಲಿ ಕುಸುಮ್-ಸಿ ಯೋಜನೆಯಡಿ 389 ವಿದ್ಯುತ್ ಸರಬರಾಜು ಉಪ ಕೇಂದ್ರಗಳನ್ನು ಸೌರೀಕರಣಗೊಳಿಸಲಾಗುತ್ತಿದೆ. ಇದರ ಅಡಿಯಲ್ಲಿ 2396 ಮೆಗಾವ್ಯಾಟ್ ಸಾಮರ್ಥ್ಯದ ಸೌರಘಟಕಗಳು 1,555 ಕೃಷಿ ಫೀಡರ್‌ಗಳಿಗೆ ಸೌರವಿದ್ಯುತ್ ಒದಗಿಸಲಿವೆ. ಇದರಿಂದ 6,32,794 ಕೃಷಿ ಪಂಪ್‌ಸೆಟ್‌ಗಳಿಗೆ ಸೋಲಾರ್ ವಿದ್ಯುತ್ ಲಭ್ಯವಾಗಲಿದೆ. ಈ ಮೂಲಕ ರೈತರಿಗೆ ಹಗಲು ವೇಳೆಯೇ ಗುಣಮಟ್ಟದ ವಿದ್ಯುತ್ ಸಿಗುವುದರ ಜತೆಗೆ, ವಿದ್ಯುತ್ ಅಪವ್ಯಯವೂ ನಿಲ್ಲುತ್ತದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು. ಯೋಜನೆ ಸಮರ್ಪಕವಾಗಿ ಜಾರಿಗೆ ತಂದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಅಭಿನಂದನೆ ಸಲ್ಲಿಸಿದರು.

ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ಸ್ಥಾಪಿಸಲಾದ ಸೋಲಾರ್ ಘಟಕದ ವಿಹಂಗಮ ನೋಟ.

ಕೇಂದ್ರದ ಯೋಜನೆಗೆ ರಾಜ್ಯದ ಹೆಚ್ಚು ಸಬ್ಸಿಡಿ:

ರೈತರಿಗೆ ಸೋಲಾರ್ ಪಂಪ್ ಸೆಟ್ ನೀಡುವ ಕುಸುಮ್-ಬಿ ಯೋಜನೆಯನ್ನು ರಾಜ್ಯ ಸರ್ಕಾರ ಈಗಾಗಲೇ ಜಾರಿಗೆ ತಂದಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು. ಇದು ಕೇಂದ್ರ ಸರ್ಕಾರದ ಯೋಜನೆಯಾದರೂ, ಅವರು ನೀಡುವ ಸಹಾಯಧನ ಕೇವಲ ಶೇ. 30ರಷ್ಟಿದೆ. ಆದರೆ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯ ಸರ್ಕಾರದ ಸಹಾಯಧನವನ್ನು ಶೇ. 50ಕ್ಕೆ ಹೆಚ್ಚಿಸಲಾಗಿದೆ. ಇದರಿಂದ ಫಲಾನುಭವಿಗಳು ಕೇವಲ ಶೇ. 20ರಷ್ಟನ್ನು ಮಾತ್ರ ಭರಿಸಿದರೆ ಸಾಕು. ಕೇಂದ್ರ ಸರ್ಕಾರದ ಯೋಜನೆಗಳಿಗೂ ನಮ್ಮ ಸರ್ಕಾರ ಅವರಿಗಿಂತ ಹೆಚ್ಚು ಸಹಾಯಧನ ನೀಡುತ್ತಿರುವುದು ರೈತರ ಬಗ್ಗೆ ನಮಗಿರುವ ಕಾಳಜಿಗೆ ಸಾಕ್ಷಿ ಎಂದು ಮುಖ್ಯಮಂತ್ರಿಗಳು ಒತ್ತಿ ಹೇಳಿದರು.

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಒಂದೇ ಒಂದು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿರಲಿಲ್ಲ. ಆದರೆ, ನಾವು ಅಧಿಕಾರಕ್ಕೆ ಬಂದ ಮೇಲೆ 4,000 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿದ್ದೇವೆ. ಪ್ರಸ್ತುತ 35 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಸಾಮರ್ಥ್ಯವಿದ್ದು, 2030ರ ವೇಳೆಗೆ ಇದನ್ನು 60 ಸಾವಿರ ಮೆಗಾವ್ಯಾಟ್ ಗೆ ಹೆಚ್ಚಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

ರೈತರ ಕೃಷಿ ಪಂಪ್ ಸೆಟ್ ಗಳಿಗೆ ಸರ್ಕಾರ ವಾರ್ಷಿಕ 19,000 ಕೋಟಿ ರೂ. ಸಹಾಯಧನ ನೀಡುತ್ತಿದೆ. ಯಾವುದೇ ಕಾರಣಕ್ಕೂ ಕೃಷಿ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಯೋಜನೆ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಸರ್ಕಾರಿ ಕಚೇರಿಗಳಲ್ಲಿ ಪ್ರಿ ಪೇಯ್ಡ್ ಮೀಟರ್ ಕುರಿತು ಚಿಂತನೆ:

ಇಂಧನ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ, ಪರಿಷ್ಕೃತ ವಿತರಣಾ ವಲಯ ಯೋಜನೆ (ಆರ್ ಡಿಎಸ್ಎಸ್) ಯೋಜನೆಯಡಿ ಇಂಧನ ಮೂಲ ಸೌಕರ್ಯಕ್ಕೆ ಕೇಂದ್ರ ಸರ್ಕಾರದಿಂದ ಶೇ. 60 ಸಹಾಯಧನ ಸಿಗುವುದರ ಜತೆಗೆ ಸ್ಮಾರ್ಟ್ ಮೀಟರ್ ಅಳವಡಿಸಲು ಪ್ರತಿ ಮೀಟರ್‌ಗೆ 900 ರೂ. ಸಬ್ಸಿಡಿ ಸಿಗುತ್ತದೆ. ಆದರೆ, ಹಿಂದಿನ ರಾಜ್ಯ ಸರ್ಕಾರ ಕೆಲವು ಷರತ್ತುಗಳಿಂದಾಗಿ ಅದನ್ನು ಒಪ್ಪಿಕೊಂಡಿರಲಿಲ್ಲ. ಇದೀಗ ಆರ್ ಡಿಎಸ್ ಯೋಜನೆ ಅಳವಡಿಸಿಕೊಳ್ಳಲು ಕೇಂದ್ರ ಇಂಧನ ಸಚಿವರನ್ನು ಕೋರಲಾಗಿದ್ದು, ಷರತ್ತುಗಳಿಗೆ ವಿನಾಯಿತಿ ನೀಡುವಂತೆ ಮನವಿ ಮಾಡಿಕೊಳ್ಳಲಾಗಿದೆ. ಇದಕ್ಕೆ ಒಪ್ಪಿರುವ ಕೇಂದ್ರ ಸಚಿವರು, ಇತರೆ ಇಲಾಖೆಗಳಿಂದ ಬರಬೇಕಾದ ಬಾಕಿ ವಸೂಲಿಗೆ ಶೇ. 2ರಷ್ಟು ಸೆಸ್ ವಿಧಿಸಬೇಕು ಮತ್ತು ಸರ್ಕಾರಿ ಕಚೇರಿಗಳಿಗೆ ಪ್ರಿ ಪೇಯ್ಡ್ ಸ್ಮಾರ್ಟ್ ಮೀಟರ್ ಅಳವಡಿಸಬೇಕು ಎಂದು ಹೇಳಿದ್ದಾರೆ. ಇದನ್ನು ಕಾರ್ಯರೂಪಕ್ಕೆ ತರಲು ಸಚಿವ ಸಂಪುಟದ ಸದಸ್ಯರು ಸಹಕಾರ ನೀಡಬೇಕು ಎಂದು ಜಾರ್ಜ್ ಮನವಿ ಮಾಡಿದರು. ಪಿಎಂ ಕುಸುಮ್-ಸಿ ಯೋಜನೆ ರೈತರಿಗೆ, ಅದರಲ್ಲೂ ಮುಖ್ಯವಾಗಿ ಬಯಲು ಸೀಮೆ ಭಾಗದ ರೈತರಿಗೆ ವರದಾನವಾಗಿದೆ ಎಂದು ಅವರು ಬಣ್ಣಿಸಿದರು.

ಸಿಎಂ, ಸರ್ಕಾರಕ್ಕೆ ರೈತರ ಧನ್ಯವಾದ:

ಕುಸುಮ್-ಸಿ ಯೋಜನೆ ಉದ್ಘಾಟಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ವಿವಿಧ ಜಿಲ್ಲೆಗಳ ರೈತರ ಜತೆ ಸಂವಾದ ನಡೆಸಿದರು. ಈ ಯೋಜನೆ ಜಾರಿಗೆ ಬಂದ ಬಳಿಕ ತಮಗೆ ಆಗಿರುವ ಅನುಕೂಲವನ್ನು ಹಂಚಿಕೊಂಡ ರೈತರು, ಮುಖ್ಯಮಂತ್ರಿ, ಇಂಧನ ಸಚಿವರು ಮತ್ತು ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದರು. ಕೇಂದ್ರ ಸರ್ಕಾರದ್ದಾದರೂ, ರಾಜ್ಯ ಸರ್ಕಾರ ಹೆಚ್ಚು ಸಬ್ಸಿಡಿ ನೀಡುತ್ತಿರುವುದು ಮಾತ್ರವಲ್ಲದೆ, ಮುತುವರ್ಜಿಯಿಂದ ಜಾರಿಗೊಳಿಸುವ ಮೂಲಕ ರಾಜ್ಯದ ರೈತರ ನೆರವಿಗೆ ನಿಂತಿದೆ ಎಂದು ರೈತರು ಹರ್ಷ ವ್ಯಕ್ತಪಡಿಸಿದರು.

ಸ್ಥಳೀಯ ಶಾಸಕ ಕೆ.ಎಚ್.ಪುಟ್ಟಸ್ವಾಮಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಮಾಜಿ ಸ್ಪೀಕರ್ ಎನ್.ಎಚ್.ಶಿವಶಂಕರರೆಡ್ಡಿ, ಕ್ರೆಡಲ್ ಅಧ್ಯಕ್ಷ ಟಿ.ಡಿ.ರಾಜೇಗೌಡ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಬನ್ನೇರುಘಟ್ಟದಲ್ಲಿ ಗರ್ಭಿಣಿ ಜೀಬ್ರಾ ‘ಕಾವ್ಯ’ ಸಾವು: ಆಘಾತ ಮತ್ತು ಕ್ಯಾಪ್ಚರ್‌ ಮಯೋಪತಿ ಕಾರಣವಿರುವ ಶಂಕೆ

Next Post

Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

Next Post
ಸಾಂದರ್ಭಿಕ ಚಿತ್ರ

Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Please login to join discussion

Like Us on Facebook

Follow Us on Twitter

Recent News

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group