Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Air India Plane Crash | ಏರ್ ಇಂಡಿಯಾ ಭಾರೀ ವಿಮಾನ ದುರಂತ: 242 ಜನರಿದ್ದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆಯೇ ಪತನ 

ಅಹಮದಾಬಾದ್‌ನಲ್ಲಿ ಭೀಕರ ಅಪಘಾತ; ಲಂಡನ್‌ಗೆ ಹೊರಟಿದ್ದ ಡ್ರೀಮ್‌ಲೈನರ್ ಧರೆಗೆ; ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ

by Bengaluru Wire Desk
June 12, 2025
in News Wire, Public interest
Reading Time: 1 min read
0

ಅಹಮದಾಬಾದ್, ಜೂ.12 www.bengaluruwire.com : ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾಕ್ಕೆ ಸೇರಿದ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು ಟೇಕ್ ಆಫ್ ಆದ ತಕ್ಷಣವೇ ಪತನಗೊಂಡು ಭಾರಿ ಅಪಘಾತ ಸಂಭವಿಸಿದೆ. 

ವಿಮಾನದಲ್ಲಿ 232 ಪ್ರಯಾಣಿಕರು ಮತ್ತು 10 ಸಿಬ್ಬಂದಿ ಸೇರಿದಂತೆ ಒಟ್ಟು 242 ಜನರಿದ್ದರು ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ತಿಳಿಸಿದೆ. ಈ ಅಪಘಾತದಿಂದಾಗಿ ವಿಮಾನದಲ್ಲಿದ್ದ ಬಹುತೇಕ ಮಂದಿ ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ತುರ್ತು ಚಿಕಿತ್ಸೆಗೆ ವರ್ಗಾಯಿಸಲಾಗಿದೆ.

ಏರ್ ಇಂಡಿಯಾ ವಿಮಾನವು ಬಿಜೆ ಹಾಸ್ಟೆಲ್ ಮೇಲೆ ಪತನವಾಗಿದ್ದು, ಘಟನೆಯ ಸಂದರ್ಭದಲ್ಲಿ 50 ಜನ ವೈದ್ಯ ವಿದ್ಯಾರ್ಥಿಗಳಿದ್ದರು. ವಿಮಾನ ಅಪಘಾತದಿಂದ ಹಾಸ್ಟೆಲ್ ಕಟ್ಟಡ ಸಂಪೂರ್ಣವಾಗಿ ಧ್ವಂಸವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬುಧವಾರ ಮಧ್ಯಾಹ್ನ 1.38ಕ್ಕೆ ಈ ದುರಂತ ಸಂಭವಿಸಿದೆ. ವಿಮಾನವು ಕಡಿಮೆ ಎತ್ತರದಲ್ಲಿ ಹಾರಲು ಹೆಣಗಾಡುತ್ತಿರುವುದು ಮತ್ತು ನಂತರ ಕಟ್ಟವೊಂದರ ಮೇಲೆ  ಅಪ್ಪಳಿಸಿ ಭಾರಿ ಬೆಂಕಿಯ ಚೆಂಡಾಗಿ ಸ್ಫೋಟಗೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದೆ. ಲಂಡನ್‌ಗೆ ಸುದೀರ್ಘ ಪ್ರಯಾಣಕ್ಕೆ ಸಿದ್ಧವಾಗಿದ್ದರಿಂದ ವಿಮಾನದಲ್ಲಿ ಭಾರೀ ಪ್ರಮಾಣದ ಇಂಧನವಿತ್ತು ಎನ್ನಲಾಗಿದೆ.

ಏರ್ ಇಂಡಿಯಾ ವಿಮಾನ ದುರಂತಕ್ಕೀಡಾದ ಸ್ಥಳ. (ಕೃಪೆ : News18)

ಏರ್ ಇಂಡಿಯಾ ತನ್ನ ಹೇಳಿಕೆಯಲ್ಲಿ, “ಅಹಮದಾಬಾದ್-ಲಂಡನ್ ಗ್ಯಾಟ್‌ವಿಕ್ ಮಾರ್ಗದ AI 171 ವಿಮಾನವು ಇಂದು ಅಪಘಾತಕ್ಕೀಡಾಗಿದೆ. ಪ್ರಸ್ತುತ ನಾವು ಹೆಚ್ಚಿನ ವಿವರಗಳನ್ನು ಖಚಿತಪಡಿಸಿಕೊಳ್ಳುತ್ತಿದ್ದೇವೆ ಮತ್ತು ಶೀಘ್ರದಲ್ಲೇ ಹೆಚ್ಚಿನ ಮಾಹಿತಿ ನೀಡುತ್ತೇವೆ” ಎಂದು ತಿಳಿಸಿದೆ.

ಅಪಘಾತ ಸ್ಥಳದಿಂದ ದಟ್ಟವಾದ ಹೊಗೆ ಆಕಾಶಕ್ಕೆ ಏರುತ್ತಿರುವ ದೃಶ್ಯಗಳು ಕಂಡುಬಂದಿವೆ. ಕನಿಷ್ಠ ಎರಡು ಡಜನ್ ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿದ್ದು, ಕೆಲ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಪೊಲೀಸರು ಆ ಪ್ರದೇಶದಲ್ಲಿ ಸಂಚಾರವನ್ನು ನಿರ್ಬಂಧಿಸಿದ್ದಾರೆ.

ಕಟ್ಟಡಕ್ಕೆ ಡಿಕ್ಕಿ ಹೊಡೆದ ವಿಮಾನದ ಮುಂಭಾಗ ಹೊರಚಾಚಿರುವುದು, ಭೀಕರ ಅಪಘಾತದ ತೀವ್ರತೆಯನ್ನು ಸೂಚಿಸುತ್ತಿದೆ.

ದುರ್ಘಟನೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ತೀವ್ರ ಸಂತಾಪ ಸೂಚಿಸಿದ್ದಾರೆ. ಏರ್ ಇಂಡಿಯಾ ಪತನವಾದ ವಿಮಾನದಲ್ಲಿ 53 ಬ್ರಿಟನ್ ಪ್ರಜೆಗಳಿದ್ದರು ಎಂದು ಬ್ರಿಟನ್ ಪ್ರಧಾನಿ ಹೇಳಿದ್ದಾರೆ.

ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು ಅವರು ವೈಯಕ್ತಿಕವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದು, ಎಲ್ಲಾ ವಿಮಾನಯಾನ ಮತ್ತು ತುರ್ತು ಪ್ರತಿಕ್ರಿಯೆ ಏಜೆನ್ಸಿಗಳಿಗೆ ತ್ವರಿತ ಮತ್ತು ಸಂಘಟಿತ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ. “ವಿಮಾನದಲ್ಲಿದ್ದ ಎಲ್ಲರಿಗೂ ಮತ್ತು ಅವರ ಕುಟುಂಬಗಳಿಗೂ ಅವರು ಕ್ಷೇಮವಾಗಿರಲೆಂದು ನಾನು ಪ್ರಾರ್ಥಿಸುತ್ತೇನೆ” ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇಂದು ಮಧ್ಯಾಹ್ನ ನಡೆದ ಏರ್ ಇಂಡಿಯಾ ದುರಂತದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ 68 ವರ್ಷದ ವಿಜಯ್ ರೂಪಾನಿ ಕೂಡ ಮೃತಪಟ್ಟಿದ್ದಾರೆ. ಅವರು ಇಂದು ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗಿನ ಫೊಟೊವನ್ನು ಸಹ ಪ್ರಯಾಣಿಕರೊಬ್ಬರು ಸೆಲ್ಫಿ ತೆಗೆದು ತಮ್ಮವರಿಗೆ ಕಳುಹಿಸಿದ ಫೊಟೊ ಬೆಂಗಳೂರು ವೈರ್ ಗೆ ಲಭ್ಯವಾಗಿದೆ.

ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿರುವ ಚಿತ್ರ.

ಡಿಜಿಸಿಎ ನೀಡಿರುವ ಹೇಳಿಕೆಯ ಪ್ರಕಾರ, 8,200 ಗಂಟೆಗಳ ಅನುಭವವಿರುವ ಕ್ಯಾಪ್ಟನ್ ಸುಮೀತ್ ಸಬರ್‌ವಾಲ್ ಮತ್ತು 1,100 ಗಂಟೆಗಳ ಅನುಭವವಿರುವ ಫಸ್ಟ್ ಆಫೀಸರ್ ಕ್ಲೈವ್ ಕುಂದರ್ ಅವರು ಅಪಘಾತಕ್ಕೆ ಕೆಲವೇ ಮೊದಲು ‘ಮೇಡೇ’ (Mayday) ಕರೆ ಮಾಡಿದ್ದರು. ದುರಂತದ ಬಗ್ಗೆ ವಿಮಾನಯಾನ ಸಚಿವಾಲಯವು ತನಿಖೆಗೆ ಆದೇಶಿಸಿದೆ. 2010ರಲ್ಲಿ ಮಂಗಳೂರಿನಲ್ಲಿ ಇಂತದ್ದೇ ದೊಡ್ಡ ವಿಮಾನ ದುರಂತ ನಡೆದಾಗ 158 ಜನ ಸಾವನ್ನಪ್ಪಿದ್ದರು.

ಏರ್ ಇಂಡಿಯಾ ಪತನವಾದ ನಂತ ಭಸ್ಮವಾದ ವಿಮಾನದ ಅವಶೇಷದ ಚಿತ್ರ. (ಕೃಪೆ : AP)

ಮೇಡೇ ಕರೆ ಎಂದರೇನು?:

ಮೇಡೇ ಕರೆ ಎಂಬುದು ಅಂತರರಾಷ್ಟ್ರೀಯವಾಗಿ ಗುರುತಿಸಲ್ಪಟ್ಟ ಸಂಕಷ್ಟ ಸಂಕೇತವಾಗಿದ್ದು, ಇದನ್ನು ಪ್ರಾಥಮಿಕವಾಗಿ ವಾಯುಯಾನ ಮತ್ತು ಸಮುದ್ರ ಸಂವಹನದಲ್ಲಿ ಜೀವಕ್ಕೆ ಅಪಾಯಕಾರಿ ತುರ್ತು ಪರಿಸ್ಥಿತಿಯನ್ನು ಸೂಚಿಸಲು ಬಳಸಲಾಗುತ್ತದೆ. ಈ ಪದವು ಫ್ರೆಂಚ್ ಪದ “ಮೈಡರ್” ನಿಂದ ಬಂದಿದೆ, ಇದರರ್ಥ “ನನಗೆ ಸಹಾಯ ಮಾಡಿ”. ಇದನ್ನು ಮೊದಲು 1920 ರ ದಶಕದಲ್ಲಿ ಪರಿಚಯಿಸಲಾಯಿತು ಮತ್ತು ಈಗ ಜಾಗತಿಕವಾಗಿ ಪ್ರಮಾಣಿತ ಪ್ರೋಟೋಕಾಲ್ ಆಗಿದೆ.

WhatsApp Join our WhatsApp Channel
Previous Post

Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Next Post

ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಿಯಾಗಿದ್ದ 3.12 ಎಕರೆ ಭೂಮಿ ವಶಕ್ಕೆ: ಬಿಡಿಎ ಕಾರ್ಯಾಚರಣೆ

Next Post

ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಿಯಾಗಿದ್ದ 3.12 ಎಕರೆ ಭೂಮಿ ವಶಕ್ಕೆ: ಬಿಡಿಎ ಕಾರ್ಯಾಚರಣೆ

ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ 'ಸ್ಟಿಲ್ಟ್ ಪಾರ್ಕಿಂಗ್' ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group