Saturday, May 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

    ಅಕ್ಕಿ ಗೋದಾಮುವೊಂದರ ಸಾಂದರ್ಭಿಕ ಚಿತ್ರ.

    ದೇಶದ ಆಹಾರ ಭದ್ರತೆ ಭದ್ರ: ಬಫರ್ ಸ್ಟಾಕ್‌ಗಿಂತ ಮೂರು ಪಟ್ಟು ಹೆಚ್ಚು ಧಾನ್ಯ ಸಂಗ್ರಹ

    ಬೆಂಗಳೂರು: ರಾಜ್ಯ ಸರ್ಕಾರದ ಮೊದಲ ಹೈಟೆಕ್ ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ (HEOC) ಲೋಕಾರ್ಪಣೆ

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

  • Bengaluru Focus

    BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

    BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

    GBA News | ಬೆಂಗಳೂರಿಗರಿಗೆ ಬಿಗ್ ರಿಲೀಫ್: ಇ-ಖಾತಾ ಅರ್ಜಿಯಲ್ಲಿ ತಪ್ಪಾಗಿದ್ದರೆ ನೀವೇ ಹಿಂಪಡೆಯಬಹುದು

    ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

    ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಯುಜಿಸಿಇಟಿ-25 ಆಪ್ಷನ್ ಎಂಟ್ರಿ ದಿನಾಂಕ ವಿಸ್ತರಣೆ, ವೈದ್ಯಕೀಯ ಕೋರ್ಸ್ ದಾಖಲಾತಿ ಪರಿಶೀಲನೆಗೆ ಸೂಚನೆ

ಸರ್ವರ್ ಸಮಸ್ಯೆ ಹಿನ್ನೆಲೆ; ಜುಲೈ 18ರವರೆಗೆ ಅವಧಿ ವಿಸ್ತರಣೆ; ಜುಲೈ 28ಕ್ಕೆ ಅಂತಿಮ ಫಲಿತಾಂಶ

by Bengaluru Wire Desk
July 14, 2025
in News Wire
Reading Time: 1 min read
0

ಬೆಂಗಳೂರು, ಜು.14 www.bengaluruwire.com : ಯುಜಿಸಿಇಟಿ-25 ಆಪ್ಷನ್ ಎಂಟ್ರಿ ಪ್ರಕ್ರಿಯೆಯಲ್ಲಿ ಎದುರಾದ ತಾಂತ್ರಿಕ ಸಮಸ್ಯೆಗಳ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA- ಕೆಇಎ) ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯನ್ನು ನೀಡಿದೆ. ಅಭ್ಯರ್ಥಿಗಳ ಹಿತದೃಷ್ಟಿಯಿಂದ ಆಪ್ಷನ್ ಎಂಟ್ರಿ ದಿನಾಂಕವನ್ನು ಜುಲೈ 15ರಿಂದ ಜುಲೈ 18ರವರೆಗೆ ವಿಸ್ತರಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಐಎಎಸ್ ತಿಳಿಸಿದ್ದಾರೆ.

ಸರ್ವರ್ ಸಮಸ್ಯೆಯಿಂದಾಗಿ ಲಾಗಿನ್ ಆಗಿ ಆಪ್ಷನ್ ಎಂಟ್ರಿ ಮಾಡಲು ಕೊಂಚ ವಿಳಂಬವಾಗುತ್ತಿದ್ದುದನ್ನು ಪರಿಗಣಿಸಿ ಈ ವಿಸ್ತರಣೆ ಮಾಡಲಾಗಿದೆ. ಇಂಜಿನಿಯರಿಂಗ್, ಪಶು ವೈದ್ಯಕೀಯ ಮತ್ತು ಪಶುಸಂಗೋಪನೆ, ಕೃಷಿ ವಿಜ್ಞಾನ, ಬಿ.ಪಿ.ಟಿ. ಅಲೈಡ್ ಹೆಲ್ತ್ ಸೈನ್ಸ್ ಕೋರ್ಸುಗಳಿಗೆ ಸೀಟು ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೆ ಈ ವಿಸ್ತರಿತ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಪ್ರಸನ್ನ ಮನವಿ ಮಾಡಿದ್ದಾರೆ.

ಆಯ್ಕೆಗಳನ್ನು ಮುಂಚಿತವಾಗಿಯೇ ಸಿದ್ಧಪಡಿಸಿಕೊಳ್ಳಿ

ಅಭ್ಯರ್ಥಿಗಳು, ಕಾಲೇಜುಗಳು ಮತ್ತು ಕೋರ್ಸುಗಳ ಪಟ್ಟಿಯನ್ನು ಆದ್ಯತೆಯ ಕ್ರಮದಲ್ಲಿ (ಕಾಲೇಜು ಕೋಡ್ ಮತ್ತು ಕೋರ್ಸ್ ಕೋಡ್) ಬಿಳಿ ಕಾಗದದಲ್ಲಿ ಮುಂಚಿತವಾಗಿಯೇ ಬರೆದು ಸಿದ್ಧಪಡಿಸಿಕೊಂಡು ನಂತರ ಪೋರ್ಟಲ್‌ನಲ್ಲಿ ಆಪ್ಷನ್ ಎಂಟ್ರಿ ನಮೂದಿಸಬೇಕು. ಹೀಗೆ ಮಾಡುವುದರಿಂದ ಏಕಕಾಲದಲ್ಲಿ ಅಧಿಕ ಸಂಖ್ಯೆಯ ಅಭ್ಯರ್ಥಿಗಳು ಪೋರ್ಟಲ್ ಅನ್ನು ದೀರ್ಘ ಸಮಯದವರೆಗೆ ಸಕ್ರಿಯ ಅವಸ್ಥೆಯಲ್ಲಿ ಇರಿಸುವುದು ತಪ್ಪುತ್ತದೆ; ಇದು ಇತರ ಅಭ್ಯರ್ಥಿಗಳಿಗೆ ಪೋರ್ಟಲ್ ಲಭ್ಯತೆಯನ್ನು ಸುಲಭಗೊಳಿಸುತ್ತದೆ ಎಂದು ಕೆಇಎ ತಿಳಿಸಿದೆ.

ಆಯ್ಕೆ ನಮೂದು ಪೋರ್ಟಲ್ ಪುನರಾರಂಭದ ಬಗ್ಗೆ ಎಲ್ಲ ಅಭ್ಯರ್ಥಿಗಳಿಗೆ ಜ್ಞಾಪನ ಸಂದೇಶ ಕಳುಹಿಸಲಾಗುವುದು. ಮೊದಲ ಸುತ್ತಿನ ಸೀಟು ಹಂಚಿಕೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ್ದು, ಜುಲೈ 21ರಂದು ಅಣಕು ಸೀಟು ಹಂಚಿಕೆ ಫಲಿತಾಂಶ ಹಾಗೂ ಜುಲೈ 28ರಂದು ಅಂತಿಮ ಫಲಿತಾಂಶ ಹೊರಬೀಳಲಿದೆ ಎಂದು ಕೆಇಎ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ವಿವರಿಸಿದೆ.

ವೈದ್ಯಕೀಯ ಕೋರ್ಸ್‌ಗಳಿಗೆ ದಾಖಲೆ ಪರಿಶೀಲನೆ ಜುಲೈ 17ರಿಂದ :

ಜುಲೈ 7ರ ನಂತರ ಯುಜಿನೀಟ್ -2025ಕ್ಕೆ ನೋಂದಣಿ ಮತ್ತು ಆನ್‌ಲೈನ್ ಅರ್ಜಿ ಭರ್ತಿ ಮಾಡಿ, ಶುಲ್ಕ ಪಾವತಿಸಿರುವ (‘ಎ’ಯಿಂದ ‘ಒ’ವರೆಗೆ ಹಾಗೂ ‘ಝಡ್’ ಕ್ಲಾಸ್‌ನಡಿ ಸೀಟು ಕ್ಲೇಮು ಮಾಡಿರುವವರು) ಅಭ್ಯರ್ಥಿಗಳು, ವೈದ್ಯಕೀಯ/ದಂತ ವೈದ್ಯಕೀಯ/ಆರ್ಯುವೇದ/ಹೋಮಿಯೋಪತಿ/ಯುನಾನಿ ಕೋರ್ಸುಗಳ ಪ್ರವೇಶಾತಿಗಾಗಿ ಎಲ್ಲಾ ಅಗತ್ಯ ಮೂಲ ದಾಖಲೆಗಳ ಪರಿಶೀಲನೆಗೆ ಕೆಇಎ ಕಚೇರಿಗೆ ಜುಲೈ 17ರಿಂದ 19ರೊಳಗೆ ಹಾಜರಾಗಬೇಕು.

ವಿಶೇಷ ಪ್ರವರ್ಗಗಳಡಿ ಅರ್ಜಿ ಸಲ್ಲಿಕೆ ಮಾಡಿರುವವರು, ವಿಶೇಷ ಚೇತನ ಅಭ್ಯರ್ಥಿಗಳು, ‘ಎ’ಯಿಂದ ‘ಒ’ ಹಾಗೂ ‘ಝಡ್’ ಕ್ಲಾಸ್‌ನಡಿ ಕ್ಲೇಮು ಮಾಡಿರುವವರು ದಾಖಲೆಗಳ ಪರಿಶೀಲನೆಗೆ ಹಾಜರಾಗುವ ಕುರಿತಾದ ವೇಳಾಪಟ್ಟಿಯನ್ನು ಕೆಇಎ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗಿದ್ದು, ಆ ಪ್ರಕಾರ ಹಾಜರಾಗಬೇಕು. ಪರಿಶೀಲನೆಗೆ ಸಲ್ಲಿಸಬೇಕಾದ ಮೂಲ ದಾಖಲೆಗಳ ವಿವರಗಳನ್ನು ಯುಜಿಸಿಇಟಿ ಸಂದರ್ಭದಲ್ಲಿಯೇ ನೀಡಲಾಗಿದೆ. ಅಭ್ಯರ್ಥಿಗಳು ಅದನ್ನು ಓದಿಕೊಳ್ಳಬೇಕು ಎಂದು ಕೆಇಎ ಸ್ಪಷ್ಟಪಡಿಸಿದೆ.

ಹೊರನಾಡು ಮತ್ತು ಗಡಿನಾಡು ಕನ್ನಡ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ :

ಹೊಸದಾಗಿ ನೋಂದಣಿ ಮಾಡಿರುವ ಹೊರನಾಡು ಮತ್ತು ಗಡಿನಾಡು ಕನ್ನಡ ಅಭ್ಯರ್ಥಿಗಳಿಗೆ ಜುಲೈ 17ರಂದು ಮಧ್ಯಾಹ್ನ 3.30ರಿಂದ ಸಂಜೆ 4.30ರವರೆಗೆ ಬೆಂಗಳೂರು ಕೇಂದ್ರದಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.

WhatsApp Join our WhatsApp Channel
Previous Post

ದೇವನಹಳ್ಳಿ ಭೂ ವಿವಾದ: ಜುಲೈ 15ಕ್ಕೆ ಸಿಎಂ ಅಂತಿಮ ನಿರ್ಧಾರ

Next Post

ಅಭಿನಯ ಸರಸ್ವತಿ ಬಿ. ಸರೋಜಾದೇವಿ ಇನ್ನಿಲ್ಲ: ಕನ್ನಡ ಚಿತ್ರರಂಗಕ್ಕೆ ಬಹುದೊಡ್ಡ ನಷ್ಟ

Next Post

ಅಭಿನಯ ಸರಸ್ವತಿ ಬಿ. ಸರೋಜಾದೇವಿ ಇನ್ನಿಲ್ಲ: ಕನ್ನಡ ಚಿತ್ರರಂಗಕ್ಕೆ ಬಹುದೊಡ್ಡ ನಷ್ಟ

ಶರಾವತಿ ಹಿನ್ನೀರಿನ ಮೇಲೆ ಬೃಹತ್ ಸೇತುವೆ ಲೋಕಾರ್ಪಣೆ: ಸಿಗಂದೂರು-ಸಾಗರ ಸಂಪರ್ಕ ಇನ್ನಷ್ಟು ಸುಗಮ

Please login to join discussion

Like Us on Facebook

Follow Us on Twitter

Recent News

BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

May 9, 2026

BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

May 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

May 9, 2026

BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

May 8, 2026

ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

May 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group