Thursday, July 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result

Home Others

ರಾಜ್ಯದಲ್ಲಿ ಆಗಸ್ಟ್‌ 18ರಿಂದ ಮೂರು ದಿನಗಳ ಕಾಲ ಭಾರಿ ಮಳೆ: ಹವಾಮಾನ ಇಲಾಖೆಯಿಂದ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್!!

ಕರಾವಳಿ ಕರ್ನಾಟಕ, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಎಚ್ಚರಿಕೆ ರವಾನೆ

by Bengaluru Wire Desk
August 17, 2025
in Others
Reading Time: 1 min read
0

ಬೆಂಗಳೂರು, ಆ.17 www.bengaluruwire.com : ಭಾರತೀಯ ಹವಾಮಾನ ಇಲಾಖೆ (India Meteorological Department – IMD)ಯು ರಾಜ್ಯದಾದ್ಯಂತ ಆಗಸ್ಟ್ 18ರಿಂದ 20ರವರೆಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಬಿರುಗಾಳಿ ಸಂಭವಿಸುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಇದೇ ಕಾರಣಕ್ಕೆ ಕೆಲವು ಜಿಲ್ಲೆಗಳಿಗೆ ರೆಡ್, ಆರೆಂಜ್ ಹಾಗೂ ಯೆಲ್ಲೋ ಅಲರ್ಟ್‌ಗಳನ್ನು ಘೋಷಿಸಲಾಗಿದೆ.

ಕರಾವಳಿ ಕರ್ನಾಟಕದಲ್ಲಿ ಬಿರುಗಾಳಿ, ಭಾರಿ ಮಳೆ ಸಾಧ್ಯತೆ :

ಆಗಸ್ಟ್ 18 ಮತ್ತು 19ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಅವಧಿಯಲ್ಲಿ ಬಿರುಗಾಳಿಯು ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಆಗಸ್ಟ್ 18ರಂದು ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮತ್ತು ಬಿರುಗಾಳಿಗೆ ಮುನ್ನೆಚ್ಚರಿಕೆಯಾಗಿ ಹವಾಮಾನ ಇಲಾಖೆ ‘ರೆಡ್ ಅಲರ್ಟ್’ ಘೋಷಿಸಿದೆ. ಇದರೊಂದಿಗೆ, ಆಗಸ್ಟ್ 19ರಂದು ಇದೇ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಇರಲಿದೆ.

ಉತ್ತರ ಒಳನಾಡಿನಲ್ಲಿ ಭಾರಿ ಗಾಳಿ ಮಳೆ :

ಉತ್ತರ ಒಳನಾಡಿನಲ್ಲಿ ಆಗಸ್ಟ್ 18ರಂದು ಬೀದರ್ ಜಿಲ್ಲೆಯಲ್ಲಿ ಮತ್ತು ಆಗಸ್ಟ್ 19ರಂದು ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಆಗಸ್ಟ್ 17 ಮತ್ತು 18ರಂದು ಉತ್ತರ ಒಳನಾಡಿನಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಂಭವವಿದೆ. ಆಗಸ್ಟ್ 19 ಮತ್ತು 20ರಂದು ಇದು ಗಂಟೆಗೆ 40-50 ಕಿ.ಮೀ ವೇಗಕ್ಕೆ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಉಳಿದ ಜಿಲ್ಲೆಗಳಾದ ಬಾಗಲಕೋಟೆ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಆಗಸ್ಟ್ 18 ಮತ್ತು 19ರಂದು ‘ಯೆಲ್ಲೋ ಅಲರ್ಟ್’ ಇರಲಿದೆ ಎಂದು ತಿಳಿಸಲಾಗಿದೆ.

ದಕ್ಷಿಣ ಒಳನಾಡಿನಲ್ಲಿ ಮಳೆಯ ಎಚ್ಚರಿಕೆ :

ದಕ್ಷಿಣ ಒಳನಾಡಿನಲ್ಲಿ, ಮೈಸೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಆಗಸ್ಟ್ 18ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಮಂಡ್ಯ, ರಾಮನಗರ, ತುಮಕೂರು, ಮತ್ತು ವಿಜಯನಗರ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆಗಸ್ಟ್ 17 ಮತ್ತು 19ರಂದು ದಕ್ಷಿಣ ಒಳನಾಡಿನಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

WhatsApp Join our WhatsApp Channel
Previous Post

ಪಿಓಪಿ ಗಣೇಶ ಮೂರ್ತಿಗಳ ವಿಸರ್ಜನೆಯಿಂದ ಜಲಮಾಲಿನ್ಯ : ಮಣ್ಣಿನ ಗಣಪನ ಪೂಜಿಸಲು ಈಶ್ವರ ಖಂಡ್ರೆ ಮನವಿ

Next Post

ಬೆಂಗಳೂರಿನಲ್ಲಿ ಅವೈಜ್ಞಾನಿಕ ಕಟ್ಟಡಗಳ ತೆರವಿಗೆ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ

Next Post

ಬೆಂಗಳೂರಿನಲ್ಲಿ ಅವೈಜ್ಞಾನಿಕ ಕಟ್ಟಡಗಳ ತೆರವಿಗೆ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ

ಕಾನೂನು ಮೀರಿ ಬಗರ್ ಹುಕುಂ ಅರ್ಜಿ ವಿಲೇ ಇಲ್ಲ, ಭೂಕುಸಿತ ನಿಯಂತ್ರಣಕ್ಕೆ ₹500 ಕೋಟಿ ಕಾಮಗಾರಿ : ಸಚಿವ ಕೃಷ್ಣ ಬೈರೇಗೌಡ

Please login to join discussion

Like Us on Facebook

Follow Us on Twitter

Recent News

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group