Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

“ಮೊದಲು ರಸ್ತೆ ಗುಂಡಿ ಮುಚ್ಚಿ ಮಾನ ಕಾಪಾಡಿಕೊಳ್ಳಿ, ಕೈಯಲ್ಲಿ ಆಗದಿದ್ದರೆ ಬೆಂಗಳೂರು ಉಸ್ತುವಾರಿ ಬಿಡಿ”

ಕುಮಾರಸ್ವಾಮಿ ವಿರುದ್ಧ ಡಿಕೆಶಿ ವಾಗ್ದಾಳಿ: ಜೆಡಿಎಸ್ ತಿರುಗೇಟು, ಟ್ವೀಟ್ ವಾರ್ ಭುಗಿಲು | ಬೆಂಗಳೂರು ಮೂಲಸೌಕರ್ಯ, ರಸ್ತೆ ಗುಂಡಿ ವಿಚಾರವಾಗಿ ರಾಜಕೀಯ ಜಟಾಪಟಿ

by Bengaluru Wire Desk
September 19, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಸೆ.19 www.bengaluruwire.com : ರಾಜ್ಯದಲ್ಲಿನ ರಸ್ತೆ ಗುಂಡಿಗಳ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ ಆರೋಪಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಇಬ್ಬರ ನಡುವೆ ಟ್ವೀಟ್ ವಾರ್ ಶುರುವಾಗಿದೆ. ಇದಕ್ಕೆ ಜೆಡಿಎಸ್ ಅಧಿಕೃತ ಎಕ್ಸ್ (X) ಖಾತೆಯಿಂದ ಖಾರವಾದ ತಿರುಗೇಟು ನೀಡಲಾಗಿದ್ದು, ಬೆಂಗಳೂರಿನ ಮೂಲಸೌಕರ್ಯದ ಬಗ್ಗೆ ರಾಜಕೀಯ ಜಟಾಪಟಿ ತಾರಕಕ್ಕೇರಿದೆ.

ಕೇಂದ್ರ ಸಚಿವ ಕುಮಾರಸ್ವಾಮಿ ಅವರು, ರಸ್ತೆ ಗುಂಡಿಗಳಿಂದಾಗಿ ರಾಜ್ಯದಲ್ಲಿ ಐಟಿ ಮತ್ತು ಸ್ಟಾರ್ಟ್ ಅಪ್ ಕಂಪನಿಗಳು ದೂರವಾಗುತ್ತಿವೆ ಎಂದು ಆರೋಪಿಸಿದ್ದರು. ಇದಕ್ಕೆ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್, “ಸಂಸದರಾಗಿ ಮತ್ತು ಕೇಂದ್ರ ಸಚಿವರಾಗಿ ಬೆಂಗಳೂರಿಗೆ ನಿಮ್ಮ ಕೊಡುಗೆ ಏನು? ಯುಪಿಎ ಸರ್ಕಾರದಲ್ಲಿ ನೆಹರೂ ಹೆಸರಿನಲ್ಲಿ ಜೆಎನ್‌ಯುಆರ್‌ಎಂ ಯೋಜನೆಯಡಿ ಅನೇಕ ಅನುದಾನಗಳನ್ನು ನೀಡಲಾಗಿತ್ತು. ಅದೇ ರೀತಿ ನೀವು ಪ್ರಧಾನಮಂತ್ರಿಯ ಬಲಗೈ ಆಗಿರುವ ಕಾರಣ ಬೆಂಗಳೂರಿನ ರಸ್ತೆ ಅಭಿವೃದ್ಧಿಗೆ ₹10,000 ಕೋಟಿ ವಿಶೇಷ ಅನುದಾನ ಕೊಡಿಸಿ,” ಎಂದು ಸವಾಲು ಹಾಕಿದರು.

ಅಲ್ಲದೆ, “ಮೇಕೆದಾಟು ಯೋಜನೆಗೆ ಐದೇ ನಿಮಿಷದಲ್ಲಿ ಅನುಮತಿ ಕೊಡಿಸುತ್ತೇನೆ ಎಂದಿದ್ದೀರಿ, ಏಕೆ ಕೊಟ್ಟಿಲ್ಲ? ಮಹದಾಯಿ ಯೋಜನೆಗೆ ಅನುಮತಿ ಏಕೆ ಕೊಡಿಸಿಲ್ಲ? ರೈತರ ಮಕ್ಕಳು ಎಂದು ಹೇಳಿಕೊಳ್ಳುವ ನೀವು ಯುಕೆಪಿ ಯೋಜನೆ ವಿರುದ್ಧ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ ಎಂದಿರುವಾಗ ಏಕೆ ಧ್ವನಿ ಎತ್ತುತ್ತಿಲ್ಲ? ಕೇವಲ ಮಾಧ್ಯಮಗಳಲ್ಲಿ ಹೇಳಿಕೆ ನೀಡಿ, ಟ್ವೀಟ್ ಮಾಡಿದರೆ ಸಮಸ್ಯೆ ಬಗೆಹರಿಯುವುದಿಲ್ಲ,” ಎಂದು ಕುಟುಕಿದರು.

ಜೆಡಿಎಸ್ ನಿಂದ ಖಾರವಾದ ತಿರುಗೇಟು :

ಡಿಕೆಶಿ ಅವರ ಹೇಳಿಕೆಗೆ ಜೆಡಿಎಸ್ ಪಕ್ಷ ಶುಕ್ರವಾರ ತನ್ನ ಅಧಿಕೃತ ಎಕ್ಸ್ (X) ಖಾತೆಯಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. “ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ, ನಿಮ್ಮಲ್ಲೇನೋ ಮೂಲಭೂತ ಸಮಸ್ಯೆ ಇದೆ. ಬರೀ ಧಿಮಾಕು, ಎಲ್ಲವನ್ನೂ ಬಲ್ಲೆ ಎನ್ನುವ ಪೋಷಾಕು! ಅದಕ್ಕೆ ಏನೋ ಬೆಂಗಳೂರಿನ ಮೂಲಭೂತ ಸೌಕರ್ಯ ಎಕ್ಕುಟ್ಟಿ ಹೋಗಿದೆ,” ಎಂದು ಆರೋಪಿಸಿದೆ.

ಡಿಸಿಎಂ @DKShivakumar ಅವರೇ,

ನಿಮ್ಮಲ್ಲೇನೋ ಮೂಲಭೂತ ಸಮಸ್ಯೆ ಇದೆ. ಬರೀ ಧಿಮಾಕು, ಎಲ್ಲವನ್ನೂ ಬಲ್ಲೆ ಎನ್ನುವ ಪೋಷಾಕು! ಅದಕ್ಕೆ ಏನೋ ಬೆಂಗಳೂರಿನ ಮೂಲಭೂತ ಸೌಕರ್ಯ ಎಕ್ಕುಟ್ಟಿ ಹೋಗಿದೆ.

ಬಹುಶಃ, ನಿಮಗೆ ನೆಟ್ ವರ್ಕಿಂಗ್ ಸಮಸ್ಯೆ ಕಾಡುತ್ತಿರಬಹುದು. ನಿಮ್ಮ ಮಿದುಳು, ನಾಲಿಗೆಯ ನಡುವೆ ಲೈನಪ್ ಸರಿ ಇದ್ದಂತೆ ಇಲ್ಲ! ಏಕೆಂದರೆ, ಇನ್ನೊಬ್ಬರ…

— Janata Dal Secular (@JanataDal_S) September 19, 2025

“ಬಹುಶಃ, ನಿಮಗೆ ನೆಟ್ ವರ್ಕಿಂಗ್ ಸಮಸ್ಯೆ ಕಾಡುತ್ತಿರಬಹುದು. ನಿಮ್ಮ ಮೆದುಳು, ನಾಲಿಗೆಯ ನಡುವೆ ಲೈನಪ್ ಸರಿ ಇದ್ದಂತೆ ಇಲ್ಲ! ಏಕೆಂದರೆ, ಇನ್ನೊಬ್ಬರ ಹೇಳಿಕೆಯನ್ನು ಅರ್ಥೈಸಿಕೊಳ್ಳುವ ಬೌದ್ಧಿಕ ಸಾಮರ್ಥ್ಯ ನಿಮಗಿಲ್ಲ. ಅಸಂಬದ್ಧವಾಗಿ ಪ್ರತಿಕ್ರಿಯೆ ಕೊಡುತ್ತೀರಿ. ನಗೆಪಾಟಲಿಗೆ ತುತ್ತಾಗುತ್ತೀರಿ,” ಎಂದು ಟೀಕಿಸಿದೆ.

“ತೆರಿಗೆ ಬೀಜಾಸುರನಂತೆ ಬೆಂಗಳೂರಿನ ಜನರ ರಕ್ತ ಹೀರಿ ತೆರಿಗೆ ಪೀಕುತ್ತಿದ್ದೀರಿ. ಮೊದಲು ಅದಕ್ಕೆ ಲೆಕ್ಕ ಕೊಡಿ. ಅದು ಯಾರಪ್ಪನ ದುಡ್ಡು ಅಲ್ಲ, ಜನರ ಬೆವರಿನ ಹಣ. ಆ ದುಡ್ಡು ಎಲ್ಲಿ ಹೋಗುತ್ತಿದೆ? ಅದನ್ನೇ ಕುಮಾರಸ್ವಾಮಿ ಅವರು ಕೇಳಿದ್ದು. ಉದ್ಯಮಿಗಳಿಗೆ ಧಮ್ಕಿ ಹಾಕಿ, ದಾದಾಗಿರಿ ಮಾಡುವುದಕ್ಕೆ ನಿಮ್ಮನ್ನು ಡಿಸಿಎಂ ಮಾಡಿಲ್ಲ ಮಿ. ಶಿವಕುಮಾರ್,” ಎಂದು ಜೆಡಿಎಸ್ ಹೇಳಿದೆ. 

ಕೊನೆಯಲ್ಲಿ, “ಮೊದಲು ರಸ್ತೆ ಗುಂಡಿ ಮುಚ್ಚಿ ಮಾನ ಕಾಪಾಡಿಕೊಳ್ಳಿ. ಕೈಯಲ್ಲಿ ಆಗದಿದ್ದರೆ ಬೆಂಗಳೂರು ಉಸ್ತುವಾರಿ ಬಿಡಿ. ‘ಟ್ವಿಟ್ಟರ್ ಗಿಟ್ಟರ್’ ಎಂದು ನಾಲಿಗೆ ಜಾರಬೇಡಿ,” ಎಂದು ತೀಕ್ಷ್ಣವಾಗಿ ಹೇಳಿದೆ.

ಬೆಂಗಳೂರು ನಗರಾಭಿವೃದ್ಧಿ ಸಚಿವ @DKShivakumar ಅವರ ಸರ್ಕಾರಿ ನಿವಾಸದ ಬಳಿಯೇ "ಅಭಿವೃದ್ಧಿ ಗುಂಡಿಗೆ" ಬಿದ್ದಿದೆ. @INCKarnataka#PotholeBengaluru pic.twitter.com/n6aLyB36jX

— Janata Dal Secular (@JanataDal_S) September 18, 2025
WhatsApp Join our WhatsApp Channel
Previous Post

KMF News | ಗ್ರಾಹಕರಿಗೆ ಸಂತಸದ ಸುದ್ದಿ: ಜಿಎಸ್‌ಟಿ ದರ ಇಳಿಕೆ ಪರಿಣಾಮ : ಸೆ.22ರಿಂದ ಕಡಿಮೆಯಾಗಲಿದೆ ನಂದಿನಿ ಉತ್ಪನ್ನಗಳ ಬೆಲೆ

Next Post

BW SPECIAL | GPS VIDEO | “ಜಾಗ ಬಿಡಿ…ಇದು ಗುಂಡಿಗಳ ರಾಜ ರಸ್ತೆ” : ಬೆಂಗಳೂರು ಪಶ್ಚಿಮ‌ ನಗರ ಪಾಲಿಕೆಯ ರಸ್ತೆ ದುರವಸ್ಥೆ

Next Post

BW SPECIAL | GPS VIDEO | "ಜಾಗ ಬಿಡಿ...ಇದು ಗುಂಡಿಗಳ ರಾಜ ರಸ್ತೆ" : ಬೆಂಗಳೂರು ಪಶ್ಚಿಮ‌ ನಗರ ಪಾಲಿಕೆಯ ರಸ್ತೆ ದುರವಸ್ಥೆ

ರಾಜ್ಯದಲ್ಲಿ ಜಾತಿ ಸಮೀಕ್ಷೆಗೆ ಸರ್ಕಾರದಿಂದ ಅಧಿಕೃತ ಮುದ್ರೆಯೊತ್ತಿದ ಆದೇಶ ಪ್ರಕಟ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group