Monday, July 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

  • Bengaluru Focus

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Vaikunta Ekadashi | ವೈಕುಂಠ ಏಕಾದಶಿ ವೈಭವ: ತಿರುಮಲದಲ್ಲಿ ಸ್ವರ್ಗದ ಬಾಗಿಲು ತೆರೆದ ಕ್ಷಣ; ಗೋವಿಂದ ನಾಮಸ್ಮರಣೆಯಲ್ಲಿ ಮಿಂದೆದ್ದ ಭಕ್ತಸಾಗರ

ಜ.8ರವರೆಗೆ ವೈಕುಂಠ ದ್ವಾರ ದರ್ಶನಕ್ಕೆ ಅವಕಾಶ: ಇಂದಿನಿಂದ 3 ದಿನ ಟೋಕನ್ ಇದ್ದವರಿಗೆ ತಿರುಮಲ ದೇಗುಲದಲ್ಲಿ ಮಾತ್ರ ಪ್ರವೇಶ; ಬೆಂಗಳೂರಿನ ದೇವಾಲಯಗಳಲ್ಲೂ ಮುಂಜಾನೆಯಿಂದಲೇ ಜನವೋ ಜನ

by Bengaluru Wire Desk
December 30, 2025
in News Wire, Photo Gallery, Public interest
Reading Time: 1 min read
0

ತಿರುಪತಿ/ಬೆಂಗಳೂರು, ಡಿ.30 www.bengaluruwire.com : ಪವಿತ್ರ ವೈಕುಂಠ ಏಕಾದಶಿಯ ಶುಭ ಸಂದರ್ಭದಲ್ಲಿ ಕಲಿಯುಗ ವೈಕುಂಠ ತಿರುಮಲ ಸೇರಿದಂತೆ ರಾಜ್ಯಾದ್ಯಂತ ವಿಷ್ಣು ದೇವಾಲಯಗಳಲ್ಲಿ ಭಕ್ತಿಯ ಪಾರಮ್ಯ ಮೇಳೈಸಿದೆ. ‘ಗೋವಿಂದಾ… ಗೋವಿಂದಾ…’ ಎನ್ನುವ ಭಕ್ತರ ಜಯಘೋಷದೊಂದಿಗೆ ಸೋಮವಾರ ಮಧ್ಯರಾತ್ರಿಯೇ ವೈಕುಂಠ ದ್ವಾರಗಳು ತೆರೆದುಕೊಂಡಿದ್ದು, ಭಕ್ತರು ಪರಮಾತ್ಮನ ದರ್ಶನ ಪಡೆದು ಪುನೀತರಾದರು.

ಇತ್ತ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ವೈಕುಂಠ ಏಕಾದಶಿ ಸಂಭ್ರಮ ಮನೆಮಾಡಿದೆ. ಬೆಂಗಳೂರಿನ ಇಸ್ಕಾನ್, ಟಿಟಿಡಿ ದೇವಸ್ಥಾನ ಹಾಗೂ ಪ್ರಮುಖ ವೆಂಕಟೇಶ್ವರ ದೇವಾಲಯಗಳಲ್ಲಿ ಮುಂಜಾನೆಯಿಂದಲೇ ಭಕ್ತರು ಉದ್ದನೆಯ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ.

ತಿರುಮಲದಲ್ಲಿ ವೈಕುಂಠ ದ್ವಾರ ಪ್ರವೇಶ :

ತಿರುಮಲದ ಶ್ರೀವಾರಿ ದೇವಾಲಯದಲ್ಲಿ ಸೋಮವಾರ ಮಧ್ಯರಾತ್ರಿ 12.05 ಗಂಟೆಗೆ ಸಾಂಪ್ರದಾಯಿಕವಾಗಿ ವೈಕುಂಠ ದ್ವಾರವನ್ನು ತೆರೆಯಲಾಯಿತು. ಇದಕ್ಕೂ ಮುನ್ನ ಅರ್ಚಕರು ಮೂಲವಿರಾಟರಿಗೆ ಏಕಾಂತವಾಗಿ ವಿಶೇಷ ಕೈಂಕರ್ಯ ಹಾಗೂ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿದರು. ನಂತರ ದೇವಸ್ಥಾನದ ಸಂಪ್ರದಾಯದಂತೆ ವೈಕುಂಠ ದ್ವಾರದ ಮೂಲಕ ಪ್ರವೇಶಕ್ಕೆ ಚಾಲನೆ ನೀಡಲಾಯಿತು.

ಬೆಳಗಿನ ಜಾವ 1.30ರ ಸುಮಾರಿಗೆ ವಿಐಪಿಗಳು ಹಾಗೂ ಪ್ರೋಟೋಕಾಲ್ ವ್ಯಾಪ್ತಿಯ ಗಣ್ಯರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ನಂತರ ಬೆಳಿಗ್ಗೆ 5.00 ಗಂಟೆಗೆ ಸರ್ವದರ್ಶನ ಟೋಕನ್ ಪಡೆದ ಸಾಮಾನ್ಯ ಭಕ್ತರಿಗೆ ವೈಕುಂಠ ದ್ವಾರದ ಮೂಲಕ ಪ್ರವೇಶ ನೀಡಲಾಯಿತು. ದೇವಾಲಯದ ಒಳಾಂಗಣ ಮತ್ತು ಹೊರಾಂಗಣದಲ್ಲಿ ಮಾಡಲಾದ ವಿಶೇಷ ಹೂವಿನ ಅಲಂಕಾರ ಹಾಗೂ ವಿದ್ಯುತ್ ದೀಪಗಳ ಜಗಮಗ ಭಕ್ತರಿಗೆ ದೈವಿಕ ಲೋಕದ ಅನುಭೂತಿ ನೀಡಿತು.

ಪ್ರಮುಖ ಗಣ್ಯರ ದಂಡು :

ವೈಕುಂಠ ದ್ವಾರ ದರ್ಶನ ಆರಂಭವಾಗುತ್ತಿದ್ದಂತೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಮತ್ತು ಅವರ ಕುಟುಂಬ, ಆಂಧ್ರದ ಸಚಿವರುಗಳಾದ ಪಯ್ಯಾವುಲ ಕೇಶವ್, ಸತ್ಯಕುಮಾರ್, ಅಚ್ಚಂ ನಾಯ್ಡು, ಕೇಂದ್ರ ಸಚಿವ ರಾಮ್ಮೋಹನ್ ನಾಯ್ಡು, ನಟ ಶಿವಾಜಿ, ಮೆಗಾಸ್ಟಾರ್ ಚಿರಂಜೀವಿ ಪತ್ನಿ ಸುರೇಖಾ, ಕ್ರಿಕೆಟಿಗ ತಿಲಕ್ ವರ್ಮಾ ಸೇರಿದಂತೆ ಹಲವು ಗಣ್ಯರು ಶ್ರೀವಾರಿ ದರ್ಶನ ಪಡೆದರು.

ಭಕ್ತರಿಗೆ ಟಿಟಿಡಿ ಪ್ರಮುಖ ಸೂಚನೆಗಳು:

ವೈಕುಂಠ ದ್ವಾರ ದರ್ಶನವು ಇಂದಿನಿಂದ (ಡಿ.30) ಆರಂಭಗೊಂಡು ಜನವರಿ 8, 2026ರವರೆಗೆ ಲಭ್ಯವಿರುತ್ತದೆ. ಆದರೆ ಭಕ್ತರು ಈ ಕೆಳಗಿನ ನಿಯಮಗಳನ್ನು ಕಡ್ಡಾಯವಾಗಿ ಗಮನಿಸಬೇಕು ಎಂದು ಟಿಟಿಡಿ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ತಿಳಿಸಿದ್ದಾರೆ.

ಮೊದಲ 3 ದಿನ ನಿರ್ಬಂಧ: ಡಿಸೆಂಬರ್ 30, 31 ಹಾಗೂ ಜನವರಿ 1ರಂದು ಕೇವಲ ಇ-ಡಿಪ್ (Online) ಮೂಲಕ ಟೋಕನ್ ಪಡೆದ ಭಕ್ತರಿಗೆ ಮಾತ್ರ ವೈಕುಂಠ ದ್ವಾರ ದರ್ಶನಕ್ಕೆ ಅವಕಾಶವಿರುತ್ತದೆ.

ಎಸ್‌ಎಸ್‌ಡಿ ಟೋಕನ್ ರದ್ದು: ಜನದಟ್ಟಣೆ ನಿಯಂತ್ರಿಸುವ ದೃಷ್ಟಿಯಿಂದ ತಿರುಪತಿಯ ಭೂದೇವಿ ಕಾಂಪ್ಲೆಕ್ಸ್‌ನಲ್ಲಿ ನೀಡಲಾಗುತ್ತಿದ್ದ ಎಸ್‌ಎಸ್‌ಡಿ (SSD) ಟೋಕನ್‌ಗಳನ್ನು ಡಿ.28ರಿಂದ ಜ.7ರವರೆಗೆ ರದ್ದುಗೊಳಿಸಲಾಗಿದೆ.
ಟೋಕನ್ ಇಲ್ಲದವರಿಗೆ ಯಾವಾಗ ದರ್ಶನ?: ಟೋಕನ್ ಹೊಂದಿಲ್ಲದ ಭಕ್ತರು ಜನವರಿ 2 ರಿಂದ ಜನವರಿ 8ರವರೆಗೆ ಸರ್ವದರ್ಶನ ಸರತಿ ಸಾಲಿನಲ್ಲಿ ವೈಕುಂಠ ದ್ವಾರ ದರ್ಶನ ಪಡೆಯಬಹುದು. (Image courtesy : TTD)

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್/ಚಾನಲ್ ಉಚಿತವಾಗಿ Subscribe ಆಗಲು Facebook, Instagram, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

ಬಾಂಗ್ಲಾದೇಶದ ‘ಉಕ್ಕಿನ ಮಹಿಳೆ’ ಖಾಲಿದಾ ಜಿಯಾ ಇನ್ನಿಲ್ಲ; 80ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದ ಮಾಜಿ ಪ್ರಧಾನಿ

Next Post

ಕರ್ನಾಟಕ ಮಾಹಿತಿ ಹಕ್ಕು ಆಯೋಗಕ್ಕೆ ಭೇಟಿ ನೀಡಿದ್ದ ಶ್ರೀಲಂಕಾ ಪತ್ರಕರ್ತರ ನಿಯೋಗ

Next Post

ಕರ್ನಾಟಕ ಮಾಹಿತಿ ಹಕ್ಕು ಆಯೋಗಕ್ಕೆ ಭೇಟಿ ನೀಡಿದ್ದ ಶ್ರೀಲಂಕಾ ಪತ್ರಕರ್ತರ ನಿಯೋಗ

ಸೂರ್ಯನಗರ 4ನೇ ಹಂತ: 'ಸಾಂಕೇತಿಕ ಪತ್ರ'ವಿಟ್ಟುಕೊಂಡು ಸೈಟ್ ಡೀಲ್; ಸಾರ್ವಜನಿಕರಿಗೆ ಕೆಎಚ್‌ಬಿ ಖಡಕ್ ಎಚ್ಚರಿಕೆ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Vidhana Soudha

GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

July 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group