Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಔಷಧ, ವಿದೇಶಿ ಪ್ರವಾಸ ಅಗ್ಗ; ಮದ್ಯ, ಕಾಫಿ ದುಬಾರಿ : ಬೆಲೆ ಏರಿಕೆ ಮತ್ತು ಇಳಿಕೆಯ ಸಂಪೂರ್ಣ ಪಟ್ಟಿ ಇಲ್ಲಿದೆ

by Bengaluru Wire Desk
February 1, 2026
in News Wire, Public interest
Reading Time: 1 min read
0

ನವದೆಹಲಿ, ಫೆ.01 www.bengaluruwire.com : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ (ಫೆಬ್ರವರಿ 1, 2026) ಸಂಸತ್ತಿನಲ್ಲಿ ತಮ್ಮ 9ನೇ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಜನಸಾಮಾನ್ಯರಿಗೆ, ವಿಶೇಷವಾಗಿ ರೋಗಿಗಳಿಗೆ ಮತ್ತು ಮಧ್ಯಮ ವರ್ಗದವರಿಗೆ ಬಂಪರ್ ಕೊಡುಗೆಗಳನ್ನು ನೀಡಲಾಗಿದೆ. 

ಏಪ್ರಿಲ್ 1, 2026ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದ್ದು, ಆದಾಯ ತೆರಿಗೆ ಸಲ್ಲಿಕೆ ವ್ಯವಸ್ಥೆಯನ್ನು ಇನ್ನಷ್ಟು ಸರಳಗೊಳಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ.

ಪ್ರಮುಖವಾಗಿ ಕ್ಯಾನ್ಸರ್ ಚಿಕಿತ್ಸೆಗೆ ಬಳಸುವ ಜೀವರಕ್ಷಕ ಔಷಧಗಳ ಮೇಲಿನ ಸುಂಕವನ್ನು ತೆಗೆದುಹಾಕಲಾಗಿದ್ದು, ಮೊಬೈಲ್ ಫೋನ್ ಮತ್ತು ಸೋಲಾರ್ ಉಪಕರಣಗಳು ಅಗ್ಗವಾಗಲಿವೆ. ಇದೇ ವೇಳೆ ಮದ್ಯ ಮತ್ತು ಐಷಾರಾಮಿ ವಸ್ತುಗಳ ಮೇಲಿನ ತೆರಿಗೆ ಹೆಚ್ಚಳ ಮಾಡಲಾಗಿದೆ.

ಹಾಗಾದರೆ 2026ರ ಬಜೆಟ್‌ನಲ್ಲಿ ನಿಮ್ಮ ಜೇಬಿಗೆ ಹೊರೆಯಾಗುವುದೇನು? ಮತ್ತು ಉಳಿತಾಯವಾಗುವುದೇನು? ಇಲ್ಲಿದೆ ಸಂಪೂರ್ಣ ವಿವರ. ಹೊಸ ಕಾಯ್ದೆ ಜಾರಿಗೆ ಬಂದರೂ, ಆದಾಯ ತೆರಿಗೆ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಕಳೆದ ವರ್ಷ ಜಾರಿಯಲ್ಲಿರುವ ಹಳೆ ವ್ಯವಸ್ಥೆಯನ್ನೇ ಮುಂದುವರಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಹೊಸ ಕಾಯ್ದೆಯ ಪ್ರಮುಖ ಅಂಶವೆಂದರೆ, ತಾಂತ್ರಿಕ ದೋಷಗಳನ್ನು ಅಪರಾಧವಾಗಿ ಪರಿಗಣಿಸದೆ ದಂಡಕ್ಕೆ ಮಾತ್ರ ಸೀಮಿತಗೊಳಿಸುವುದು. ಸಣ್ಣ ತೆರಿಗೆ ಉಲ್ಲಂಘನೆಗಳಿಗೆ ಜೈಲು ಶಿಕ್ಷೆ ಇರುವುದಿಲ್ಲ. ಆದಾಯ ತೆರಿಗೆ ಸಲ್ಲಿಕೆಯಲ್ಲಿ ವಿಳಂಬವಾದರೆ ಶೇ.10ರಷ್ಟು ದಂಡ ವಿಧಿಸಲಾಗುವುದು, ಯಾವುದೇ ಶಿಕ್ಷೆ ಇರುವುದಿಲ್ಲ ಎಂದು ವಿತ್ತ ಸಚಿವರು ತಿಳಿಸಿದ್ದಾರೆ.

ತೆರಿಗೆದಾರರಿಗೆ ಮತ್ತೊಂದು ಮಹತ್ವದ ರಿಲೀಫ್ ನೀಡಿರುವ ಸರ್ಕಾರ, ಪರಿಷ್ಕೃತ ಆದಾಯ ತೆರಿಗೆ ರಿಟರ್ನ್ (Revised ITR) ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಿದೆ. ಈಗಿರುವ ಡಿಸೆಂಬರ್ 31ರ ಗಡುವಿನ ಬದಲಾಗಿ, ಸಂಬಂಧಿತ ಮೌಲ್ಯಮಾಪನ ವರ್ಷದ ಮಾರ್ಚ್ 31ರವರೆಗೆ ಐಟಿಆರ್ ಸಲ್ಲಿಸಲು ಅವಕಾಶ ನೀಡಲಾಗಿದೆ.

ಬಜೆಟ್ 2026: ಯಾವುದೆಲ್ಲ ಅಗ್ಗ? (Cheaper List)

ಆರೋಗ್ಯ ಮತ್ತು ತಂತ್ರಜ್ಞಾನ ವಲಯಕ್ಕೆ ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡಲಾಗಿದ್ದು, ಈ ಕೆಳಗಿನ ವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಲಿದೆ:

ಕ್ಯಾನ್ಸರ್ ಔಷಧಗಳು: ಬಜೆಟ್‌ನ ಅತಿದೊಡ್ಡ ಘೋಷಣೆಯೆಂದರೆ, ಕ್ಯಾನ್ಸರ್ ಚಿಕಿತ್ಸೆಗೆ ಬಳಸುವ 17 ಬಗೆಯ ಪ್ರಮುಖ ಔಷಧಗಳು ಮತ್ತು 7 ಬಗೆಯ ಅಪರೂಪದ ಕಾಯಿಲೆಗಳಿಗೆ ಬಳಸುವ ಔಷಧಗಳ ಮೇಲಿನ ಮೂಲ ಸೀಮಾ ಸುಂಕವನ್ನು (Basic Customs Duty) ಸಂಪೂರ್ಣವಾಗಿ ತೆಗೆದುಹಾಕಲಾಗಿದೆ. ಇದರಿಂದ ಚಿಕಿತ್ಸಾ ವೆಚ್ಚ ಭಾರೀ ಪ್ರಮಾಣದಲ್ಲಿ ತಗ್ಗಿ ರೋಗಿಗಳಿಗೆ ನೆಮ್ಮದಿ ಸಿಗಲಿದೆ.

 ವಿದೇಶಿ ಪ್ರವಾಸ ಮತ್ತು ಶಿಕ್ಷಣ: ವಿದೇಶಕ್ಕೆ ಪ್ರವಾಸ ಹೋಗುವವರಿಗೆ ಸಿಹಿಸುದ್ದಿ ಸಿಕ್ಕಿದೆ. ವಿದೇಶಿ ಪ್ರವಾಸ ಪ್ಯಾಕೇಜ್‌ಗಳ ಮೇಲಿನ ‘ಮೂಲದಲ್ಲಿ ಸಂಗ್ರಹಿಸಿದ ತೆರಿಗೆ’ (TCS) ದರವನ್ನು ಶೇ. 5 ರಿಂದ ಶೇ. 2ಕ್ಕೆ ಇಳಿಸಲಾಗಿದೆ. ಹಾಗೆಯೇ ವಿದೇಶದಲ್ಲಿ ಓದುವ ವಿದ್ಯಾರ್ಥಿಗಳ ಶಿಕ್ಷಣ ಸಾಲದ ಮೇಲಿನ ಟಿಸಿಎಸ್ ಕೂಡ ಕಡಿತಗೊಂಡಿದೆ.

ಮೊಬೈಲ್ ಫೋನ್ ಮತ್ತು ಚಾರ್ಜರ್‌: ಭಾರತದಲ್ಲಿ ತಯಾರಾದ ಮೊಬೈಲ್ ಫೋನ್‌ಗಳು ಮತ್ತು ಮೊಬೈಲ್ ಚಾರ್ಜರ್‌ಗಳ ಮೇಲಿನ ಸುಂಕ ಇಳಿಕೆಯಾಗಿದ್ದು, ಸ್ಮಾರ್ಟ್‌ಫೋನ್‌ಗಳ ಬೆಲೆ ಕಡಿಮೆಯಾಗಲಿದೆ.

 ಮೈಕ್ರೋವೇವ್ ಓವನ್: ಅಡುಗೆಮನೆಯ ಪ್ರಮುಖ ಸಾಧನವಾದ ಮೈಕ್ರೋವೇವ್ ಓವನ್ ತಯಾರಿಕೆಗೆ ಬಳಸುವ ಬಿಡಿಭಾಗಗಳ ಮೇಲಿನ ಸುಂಕ ಕಡಿತಗೊಳಿಸಲಾಗಿದ್ದು, ಇವು ಅಗ್ಗವಾಗಲಿವೆ.

 ಕ್ರೀಡಾ ಸಾಮಗ್ರಿಗಳು: ‘ಖೇಲೋ ಇಂಡಿಯಾ’ ಮಿಷನ್ ಅಡಿಯಲ್ಲಿ ಕ್ರೀಡೆಯನ್ನು ಉತ್ತೇಜಿಸಲು ಕ್ರೀಡಾ ಉಪಕರಣಗಳ ಮೇಲಿನ ತೆರಿಗೆಯನ್ನು ತಗ್ಗಿಸಲಾಗಿದೆ.

 ಚರ್ಮದ ವಸ್ತುಗಳು: ಲೆದರ್ ಬ್ಯಾಗ್, ಶೂಗಳಂತಹ ಚರ್ಮದ ಉತ್ಪನ್ನಗಳ ತಯಾರಿಕೆಗೆ ಬೇಕಾದ ಕಚ್ಚಾ ವಸ್ತುಗಳ ಆಮದು ಸುಂಕ ಇಳಿಕೆಯಾಗಿದ್ದು, ಇವುಗಳ ದರ ಕಡಿಮೆಯಾಗಲಿದೆ.

 ಇತರೆ: ಸೋಲಾರ್ ಗ್ಲಾಸ್, ಟಿವಿ ಉಪಕರಣಗಳು ಮತ್ತು ಸೀಫುಡ್ (ಸಮುದ್ರಾಹಾರ) ಅಗ್ಗವಾಗಲಿವೆ.

ಬಜೆಟ್ 2026: ಯಾವುದೆಲ್ಲ ದುಬಾರಿ? (Costlier List)

ಕೆಲವು ಐಷಾರಾಮಿ ಮತ್ತು ಅನಗತ್ಯ ವಸ್ತುಗಳ ಮೇಲೆ ಸರ್ಕಾರ ಕತ್ತರಿ ಪ್ರಯೋಗಿಸಿದ್ದು, ಇವುಗಳ ಬೆಲೆ ಏರಿಕೆಯಾಗಲಿದೆ:

 ಮದ್ಯ ಮತ್ತು ಸಿಗರೇಟ್: ಸಿಗರೇಟ್, ಪಾನ್ ಮಸಾಲ ಮತ್ತು ಇತರೆ ತಂಬಾಕು ಉತ್ಪನ್ನಗಳ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಲಾಗಿದ್ದು, ಇವು ಮತ್ತಷ್ಟು ದುಬಾರಿಯಾಗಲಿವೆ. ಜೊತೆಗೆ ಆಮದಾಗುವ ಐಷಾರಾಮಿ ಮದ್ಯದ ಬೆಲೆಯೂ ಏರಲಿದೆ.

 ಕಾಫಿ: ಕಾಫಿ ರೋಸ್ಟಿಂಗ್ ಮತ್ತು ಬ್ರೂಯಿಂಗ್ ಯಂತ್ರಗಳ ಮೇಲಿನ ಸುಂಕ ವಿನಾಯಿತಿಯನ್ನು ಹಿಂಪಡೆಯಲಾಗಿದೆ. ಇದರಿಂದ ಕಾಫಿ ಶಾಪ್‌ಗಳಲ್ಲಿ ಕಾಫಿ ದರ ಏರಿಕೆಯಾಗುವ ಸಾಧ್ಯತೆಯಿದೆ.

 ಷೇರು ಮಾರುಕಟ್ಟೆ ವಹಿವಾಟು: ಫ್ಯೂಚರ್ಸ್ ಮತ್ತು ಆಪ್ಷನ್ಸ್ (F&O) ಮೇಲಿನ ಸೆಕ್ಯುರಿಟೀಸ್ ಟ್ರಾನ್ಸಾಕ್ಷನ್ ಟ್ಯಾಕ್ಸ್ (STT) ಅನ್ನು ಶೇ. 0.02 ರಿಂದ ಶೇ. 0.05 ಕ್ಕೆ ಏರಿಸಲಾಗಿದೆ. ಇದು ಟ್ರೇಡರ್‌ಗಳಿಗೆ ಹೊರೆಯಾಗಲಿದೆ.

ಐಷಾರಾಮಿ ವಸ್ತುಗಳು: ವಿದೇಶದಿಂದ ಆಮದಾಗುವ ದುಬಾರಿ ಕೈಗಡಿಯಾರಗಳು (Watches) ಮತ್ತು ಹೈ-ಎಂಡ್ ಲ್ಯಾಪ್‌ಟಾಪ್‌ಗಳ ಬೆಲೆ ಹೆಚ್ಚಾಗಲಿದೆ.

WhatsApp Join our WhatsApp Channel
Previous Post

ಪಾಲಿಕೆ ಬಜೆಟ್‌ನಲ್ಲಿ ಜನಮತಕ್ಕೆ ಮನ್ನಣೆ: ಬನ್ನೇರುಘಟ್ಟ ರಸ್ತೆ ವೇಗಾ ಸಿಟಿ ಜಂಕ್ಷನ್‌ನಲ್ಲಿ ಸ್ಕೈವಾಕ್ ನಿರ್ಮಾಣಕ್ಕೆ ಅಸ್ತು

Next Post

T20 Worldcup | ಟಿ20 ವಿಶ್ವಕಪ್: ಭಾರತದ ವಿರುದ್ಧ ಆಡಲ್ಲ ಎಂದು ಹಠ ಹಿಡಿದ ಪಾಕಿಸ್ತಾನ; ಐಸಿಸಿಗೆ ಖಡಕ್ ಎಚ್ಚರಿಕೆ ನೀಡಿದ ರಶೀದ್ ಲತೀಫ್

Next Post

T20 Worldcup | ಟಿ20 ವಿಶ್ವಕಪ್: ಭಾರತದ ವಿರುದ್ಧ ಆಡಲ್ಲ ಎಂದು ಹಠ ಹಿಡಿದ ಪಾಕಿಸ್ತಾನ; ಐಸಿಸಿಗೆ ಖಡಕ್ ಎಚ್ಚರಿಕೆ ನೀಡಿದ ರಶೀದ್ ಲತೀಫ್

ಸಿ.ಜೆ. ರಾಯ್ ನಿಗೂಢ ಸಾವು: ಐಟಿ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಗುಡುಗಿದ ಕೇರಳ ಸಿಎಂ; ಕೇಂದ್ರ ಸರ್ಕಾರಕ್ಕೆ, ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಪತ್ರ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group