ಬೆಂಗಳೂರು, ಮಾ.23 www.bengaluruwire.com: ಸಿಲಿಕಾನ್ ಸಿಟಿಯ ರಸ್ತೆಗಳಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಅಪಘಾತಗಳನ್ನು ತಡೆಗಟ್ಟಲು ಬೆಂಗಳೂರು ಸಂಚಾರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.
ಕಳೆದ ಒಂದು ವಾರದಿಂದ ನಗರದಾದ್ಯಂತ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರು ಮತ್ತು ಅತಿವೇಗವಾಗಿ ಸಂಚರಿಸುವವರ ವಿರುದ್ಧ ವಿಶೇಷ ಡ್ರೈವ್ ಹಮ್ಮಿಕೊಳ್ಳಲಾಗಿತ್ತು.
634 ಕುಡುಕ ಚಾಲಕರಿಗೆ ಬಿದ್ದಿತು ದಂಡ:
ಮಾ.16. ರಿಂದ ಮಾ.22 ರವರೆಗೆ ನಡೆದ ಈ ಕಾರ್ಯಾಚರಣೆಯಲ್ಲಿ ನಗರದ 53 ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ತಪಾಸಣೆ ನಡೆಸಲಾಗಿದೆ. ಈ ಅವಧಿಯಲ್ಲಿ ಒಟ್ಟು 45,568 ವಾಹನಗಳನ್ನು ತಪಾಸಣೆ ಮಾಡಲಾಗಿದ್ದು, ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ 634 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಅತಿವೇಗಕ್ಕೆ ಬ್ರೇಕ್ – ಲಕ್ಷಾಂತರ ರೂಪಾಯಿ ದಂಡ ವಸೂಲಿ:
ಕೇವಲ ಡ್ರಿಂಕ್ ಅಂಡ್ ಡ್ರೈವ್ ಮಾತ್ರವಲ್ಲದೆ, ಅತಿವೇಗವಾಗಿ ವಾಹನ ಚಲಾಯಿಸುವವರ ಮೇಲೂ ಪೊಲೀಸರು ಕಣ್ಣಿಟ್ಟಿದ್ದರು. ಈ ವಿಶೇಷ ಕಾರ್ಯಾಚರಣೆಯಲ್ಲಿ ಅತಿವೇಗದ ಚಾಲನೆಗೆ ಸಂಬಂಧಿಸಿದಂತೆ 122 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಒಟ್ಟು ₹1,29,000 ರೂ. ದಂಡವನ್ನು ವಸೂಲಿ ಮಾಡಲಾಗಿದೆ.
ಸಾರ್ವಜನಿಕರ ರಸ್ತೆ ಸುರಕ್ಷತೆಯ ದೃಷ್ಟಿಯಿಂದ ಈ ರೀತಿಯ ಕಟ್ಟುನಿಟ್ಟಿನ ಕಾರ್ಯಾಚರಣೆಗಳು ಮುಂದಿನ ದಿನಗಳಲ್ಲೂ ಮುಂದುವರಿಯಲಿವೆ ಎಂದು ಸಂಚಾರ ಪೊಲೀಸ್ ವಿಭಾಗ ತಿಳಿಸಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. (Image Credit : Gemini AI)























