Sunday, July 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

  • Bengaluru Focus

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

ವಿಕಸಿತ ಭಾರತ'ದ ಗುರಿ ಸಾಧನೆಗೆ ಇಂಧನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ: ಕಾಮನ್‌ವೆಲ್ತ್ ಕಾನೂನು ಶಿಕ್ಷಣ ಸಂಸ್ಥೆಯ ಸಮ್ಮೇಳನದಲ್ಲಿ ಒಮ್ಮತದ ನಿರ್ಣಯ

by Bengaluru Wire Desk
April 19, 2026
in Bengaluru Focus, Public interest
Reading Time: 1 min read
0

ಬೆಂಗಳೂರು, ಏ.19 www.bengaluruwire.com: ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ‘ಸುಸ್ಥಿರ ಇಂಧನ: 2047ರ ಭಾರತಕ್ಕಾಗಿ ಒಂದು ಕಾರ್ಯಸೂಚಿ’ ಎಂಬ ಐತಿಹಾಸಿಕ ಅಂತರಾಷ್ಟ್ರೀಯ ಸಮ್ಮೇಳನವು ಭಾನುವಾರ ಯಶಸ್ವಿಯಾಗಿ ಮುಕ್ತಾಯಗೊಂಡಿತು. 

ಅಂತರರಾಷ್ಟ್ರೀಯ ಸಮ್ಮೇಳನದ ಎರಡನೇ ದಿನವಾದ ಭಾನುವಾರ ಸಮಾರೋಪ ಭಾಷಣ ಮಾಡಿದ ಇಂಧನ ಸಚಿವ ಕೆ.ಜೆ. ಜಾರ್ಜ್, ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ಸಾಂಪ್ರದಾಯಿಕ ಮೂಲಗಳಿಂದ ನವೀಕರಿಸಬಹುದಾದ ಮೂಲಗಳಿಗೆ ಇಂಧನ ಪರಿವರ್ತನೆಯು ಮಹತ್ವಾಕಾಂಕ್ಷೆಯಾಗಿ ಉಳಿಯದೇ, ಅನುಷ್ಠಾನಕ್ಕೆ  ಸಂಘಟಿತ ಕ್ರಮವಹಿಸಬೇಕಿದೆ ಎಂದರು.

“ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ ಸಮೇಳನ ವೇದಿಕೆಯಾಯಿತು. ಸುಸ್ಥಿರ ಇಂಧನ ಭವಿಷ್ಯವನ್ನು ರೂಪಿಸುವಲ್ಲಿ ಈ ಸಮ್ಮೇಳನದ ನಿರ್ಣಯಗಳು ಪ್ರಮುಖ ಪಾತ್ರ ವಹಿಸುತ್ತವೆ,” ಎಂದು ಅವರು  ಹೇಳಿದರು.

“ಈ ಸಮ್ಮೇಳನವು ನ್ಯಾಯಾಂಗ ಮತ್ತು ಕಾರ್ಯಾಂಗದ ನಡುವೆ ಅರ್ಥಪೂರ್ಣ ಸಂವಾದಕ್ಕೆ ವೇದಿಕೆ ಕಲ್ಪಿಸಿತು.ಭಾರತದ ಇಂಧನ ಪರಿವರ್ತನೆಗೆ ಸಾಂಸ್ಥಿಕ ಸಹಯೋಗವು ನಿರ್ಣಾಯಕವಾಗಿರುತ್ತದೆ” ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅಭಿಪ್ರಾಯಪಟ್ಟರು.

“2047ರ ವೇಳೆಗೆ ಭಾರತದ ಇಂಧನ ಬೇಡಿಕೆ ಸುಮಾರು 4 ಪಟ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ನವೀಕರಿಸಬಹುದಾದ ಇಂಧನದ ಬಳಕೆಗೆ ಒತ್ತು ನೀಡುವುದೇ ಇದಕ್ಕೆ ಇರುವ ಪ್ರಮುಖ ಪರಿಹಾರ. ಇಂಧನ ಭದ್ರತೆಗಾಗಿ ಇಂಧನ ಸಂಗ್ರಹಣಾ ವ್ಯವಸ್ಥೆಗಳು ಮತ್ತು ಸುಧಾರಿತ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವುದು ಅನಿವಾರ್ಯ. ನ್ಯಾಯಾಂಗ, ಸರ್ಕಾರ ಮತ್ತು ಉದ್ಯಮಗಳ ನಡುವಿನ ಸಹಕಾರ ಈ ನಿಟ್ಟಿನಲ್ಲಿ ನಿರ್ಣಾಯಕವಾಗುತ್ತದೆ” ಎಂದು ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ವಾಸ್ತವತೆಯನ್ನು ಸಮ್ಮೇಳನದಲ್ಲಿ ತೆರದಿಟ್ಟರು.

ಸಮ್ಮೇಳನದ ಕೊನೆಯ ದಿನವಾದ ಇಂದು ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಬಂಧಿಸಿದಂತೆ ‘ಬೆಂಗಳೂರು ಘೋಷಣೆ’ಯನ್ನು (Bengaluru Declaration) ಅಂಗೀಕರಿಸುವ ಮೂಲಕ ಭವಿಷ್ಯದ ಅಭಿವೃದ್ಧಿಗೆ ಹೊಸ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಯಿತು.

ಕಾಮನ್ವೆಲ್ತ್ ಕಾನೂನು ಶಿಕ್ಷಣ ಸಂಸ್ಥೆ (CLEA), ರಾಜ್ಯ ಸರ್ಕಾರದ ಇಂಧನ ಇಲಾಖೆ, ಬೆಸ್ಕಾಂ ಹಾಗೂ ಮತ್ತಿತರ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಈ ಸಮಾವೇಶದಲ್ಲಿ ಕಾನೂನು, ತಂತ್ರಜ್ಞಾನ ಮತ್ತು ನೀತಿ ನಿರೂಪಣೆಯ ಸಮನ್ವಯಕ್ಕೆ ಒತ್ತು ನೀಡಲಾಯಿತು.

ಘೋಷಣೆಯ ಪ್ರಮುಖ ಅಂಶಗಳು:

ಸಮ್ಮೇಳನದ ಅಧ್ಯಕ್ಷರಾದ ಪ್ರೊ. (ಡಾ.) ಎಸ್. ಶಿವಕುಮಾರ್ ಅವರು ಪ್ರಕಟಿಸಿದ ಬೆಂಗಳೂರು ಘೋಷಣೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ:

ಇಂಧನ ನ್ಯಾಯ (Energy Justice):

ಇಂಧನವು ಕೇವಲ ಸಂಪನ್ಮೂಲವಲ್ಲ, ಅದು ಆರ್ಥಿಕ ಬೆಳವಣಿಗೆಯ ಬೆನ್ನೆಲುಬು. ಪ್ರತಿಯೊಬ್ಬರಿಗೂ ಕೈಗೆಟುಕುವ ದರದಲ್ಲಿ ಮತ್ತು ವಿಶ್ವಾಸಾರ್ಹವಾದ ಇಂಧನ ಸಿಗುವಂತಾಗಬೇಕು.

ಕಾನೂನು ಚೌಕಟ್ಟು: 

ನವೀಕರಿಸಬಹುದಾದ ಇಂಧನ ಮತ್ತು ಡಿಜಿಟಲೀಕರಣದ ಸವಾಲುಗಳನ್ನು ಎದುರಿಸಲು ಪಾರದರ್ಶಕ ಹಾಗೂ ಬಲಿಷ್ಠ ಕಾನೂನು ನಿಯಮಗಳ ಅಗತ್ಯವಿದೆ.

ತಂತ್ರಜ್ಞಾನ ಮತ್ತು ಎಐ: ಇಂಧನ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ (AI) ಮತ್ತು ಡಿಜಿಟಲ್ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಾಗ ಗ್ರಾಹಕರ ಹಿತಾಸಕ್ತಿ ಹಾಗೂ ದತ್ತಾಂಶ ಗೌಪ್ಯತೆಗೆ (Data Privacy) ಆದ್ಯತೆ ನೀಡಲಾಗುವುದು.

ಸಹಕಾರ ಒಕ್ಕೂಟ ವ್ಯವಸ್ಥೆ:

ರಾಷ್ಟ್ರೀಯ ಗುರಿಗಳನ್ನು ತಲುಪಲು ರಾಜ್ಯ ಸರ್ಕಾರಗಳ ಪಾತ್ರ ನಿರ್ಣಾಯಕವಾಗಿದ್ದು, ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಸಹಕಾರ ಇರಬೇಕು.

ಕಾನೂನು ಶಿಕ್ಷಣದ ಮರುಚಿಂತನೆ: 

ಬದಲಾಗುತ್ತಿರುವ ಇಂಧನ ಮತ್ತು ಹವಾಮಾನದ ಸವಾಲುಗಳನ್ನು ಎದುರಿಸಲು ವಕೀಲರು ಹಾಗೂ ನ್ಯಾಯಾಧೀಶರಿಗೆ ವಿಶೇಷ ತರಬೇತಿ ಮತ್ತು ಕಾನೂನು ಪಠ್ಯಕ್ರಮದಲ್ಲಿ ಬದಲಾವಣೆ ತರಲು ನಿರ್ಧರಿಸಲಾಯಿತು.

ಕರ್ನಾಟಕದ ಸಾಧನೆಗೆ ಶ್ಲಾಘನೆ:

ಈಗಾಗಲೇ ಸಮ್ಮೇಳನದ ಮೊದಲ ದಿನ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕವು ಒಟ್ಟು 25,700 ಮೆಗಾವ್ಯಾಟ್‌ಗಿಂತ ಹೆಚ್ಚು ನವೀಕರಿಸಬಹುದಾದ ಇಂಧನ ಸಾಮರ್ಥ್ಯ ಹೊಂದುವ ಮೂಲಕ ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದು ತಿಳಿಸಿದ್ದರು. ಸೌರಶಕ್ತಿ, ಪವನಶಕ್ತಿ ಮತ್ತು ಜಲಶಕ್ತಿಯಲ್ಲಿ ಕರ್ನಾಟಕದ ಈ ಸಾಧನೆಯು ‘ಬೆಂಗಳೂರು ಘೋಷಣೆ’ಯ ಉದ್ದೇಶಗಳಿಗೆ ಬಲ ತುಂಬಿದೆ.

2047ರ ‘ವಿಕಸಿತ ಭಾರತ’ದ ಕನಸನ್ನು ಸಾಕಾರಗೊಳಿಸಲು ಈ ಸಮ್ಮೇಳನದ ನಿರ್ಣಯಗಳು ದಾರಿದೀಪವಾಗಲಿವೆ ಎಂದು ಸಿಎಲ್ ಇಎ ಅಧ್ಯಕ್ಷರಾದ ಪ್ರೊ. ಎಸ್. ಶಿವಕುಮಾರ್ ಅವರು ಆಶಯ ವ್ಯಕ್ತಪಡಿಸಿದರು. 

ಎರಡು ದಿನಗಳ ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್ ನ್ಯಾ. ವಿಕ್ರಮ್ ನಾಥ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಎಚ್.ಕೆ. ಪಾಟೀಲ್, ಕೆಪಿಟಿಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕಕರಾದ ಡಾ.ರಾಮ್ ಪ್ರಸಾತ್ ಮನೋಹರ್, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್. ಶಿವಶಂಕರ್ ಮತ್ತು ಕ್ರೆಡಲ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಸೇರಿದಂತೆ  ಹಿರಿಯ ಅಧಿಕಾರಿಗಳು, ಸುಪ್ರೀಂಕೋರ್ಟ್ ನ್ಯಾಯಾಧೀಶರುಗಳು, ರಾಜ್ಯ ಹೈಕೋರ್ಟ್ ನ್ಯಾಯಾಧೀಶರುಗಳು ಪಾಲ್ಗೊಂಡು ಸಮ್ಮೇಳನ ಯಶಸ್ವಿಯಾಗಿ ಸಂಪನ್ನಗೊಂಡಿತು.

WhatsApp Join our WhatsApp Channel
Previous Post

BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

Next Post

BW SPECIAL | ಬಸವಕಲ್ಯಾಣದಲ್ಲಿ ಜಗತ್ತಿನ ಮೊದಲ ಸಂಸತ್ತಿನ ಪುನರುತ್ಥಾನ: 2027ರ ಬಸವ ಜಯಂತಿಗೆ ‘ನವ ಅನುಭವ ಮಂಟಪ’ ಲೋಕಾರ್ಪಣೆ?

Next Post

BW SPECIAL | ಬಸವಕಲ್ಯಾಣದಲ್ಲಿ ಜಗತ್ತಿನ ಮೊದಲ ಸಂಸತ್ತಿನ ಪುನರುತ್ಥಾನ: 2027ರ ಬಸವ ಜಯಂತಿಗೆ 'ನವ ಅನುಭವ ಮಂಟಪ' ಲೋಕಾರ್ಪಣೆ?

ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

Please login to join discussion

Like Us on Facebook

Follow Us on Twitter

Recent News

ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

July 25, 2026

ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

July 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

July 25, 2026

ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

July 25, 2026

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

July 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group