Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home BW Special

BW SPECIAL | ಬಸವಕಲ್ಯಾಣದಲ್ಲಿ ಜಗತ್ತಿನ ಮೊದಲ ಸಂಸತ್ತಿನ ಪುನರುತ್ಥಾನ: 2027ರ ಬಸವ ಜಯಂತಿಗೆ ‘ನವ ಅನುಭವ ಮಂಟಪ’ ಲೋಕಾರ್ಪಣೆ?

ಕಲ್ಯಾಣ ಕ್ರಾಂತಿಯ ಹರಿಕಾರ ಬಸವಣ್ಣನವರ ತತ್ತ್ವ ಪ್ರಸಾರಕ್ಕೆ ₹750 ಕೋಟಿ ವೆಚ್ಚದ ಬೃಹತ್ ಯೋಜನೆ; ಶೇ. 70ರಷ್ಟು ಕಾಮಗಾರಿ ಪೂರ್ಣ, ಹಲವು ಕೆಲಸ ಕಾರ್ಯಗಳು ಬಾಕಿಯಿವೆ.

by Bengaluru Wire Desk
April 20, 2026
in BW Special, Life Style, Public interest
Reading Time: 1 min read
0

ವಿಶೇಷ ವರದಿ: ಶ್ಯಾಮ್ ಹೆಬ್ಬಾರ್.ಎಸ್

      ಬಸವಕಲ್ಯಾಣ, (ಬೀದರ್) ಏ.20 www.bengaluruwire.com: 12ನೇ ಶತಮಾನದಲ್ಲಿ ಸಮಾನತೆ ಮತ್ತು ಶರಣ ಸಾಹಿತ್ಯದ ಮೂಲಕ ಜಗತ್ತಿಗೆ ಪ್ರಜಾಪ್ರಭುತ್ವದ ಮೊದಲ ಪರಿಕಲ್ಪನೆ ನೀಡಿದ ಬಸವಣ್ಣನವರ ‘ಅನುಭವ ಮಂಟಪ’  ಕಟ್ಟಡವು ಆಧುನಿಕ ರೂಪದಲ್ಲಿ ಮರುಜನ್ಮ ಪಡೆಯುತ್ತಿದೆ. 

      ಬಸವಕಲ್ಯಾಣದ ತ್ರಿಪುರಾಂತ ಕೆರೆಯ ದಂಡೆಯ ಮೇಲೆ ಸುಮಾರು 25 ಎಕರೆ ಪ್ರದೇಶದಲ್ಲಿ ತಲೆ ಎತ್ತುತ್ತಿರುವ ಈ ಭವ್ಯ ಕಟ್ಟಡವು 2027ರ ಬಸವ ಜಯಂತಿಯ ವೇಳೆಗೆ ಲೋಕಾರ್ಪಣೆಯಾಗುವುದು ಬಹುತೇಕ ಖಚಿತವಾಗಿದೆ.

      ₹750 ಕೋಟಿಗೆ ಏರಿದ ಯೋಜನಾ ವೆಚ್ಚ:

      ಆರಂಭದಲ್ಲಿ ಕಡಿಮೆ ಅಂದಾಜಿನಲ್ಲಿದ್ದ ಈ ಮಹತ್ವಾಕಾಂಕ್ಷಿ ಯೋಜನೆಯ ವೆಚ್ಚವು ಈಗ ₹750 ಕೋಟಿಗೆ ತಲುಪಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಇದುವರೆಗೆ ₹280 ಕೋಟಿಗೂ ಅಧಿಕ ಹಣವನ್ನು ಬಿಡುಗಡೆ ಮಾಡಿದ್ದು, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮುಗಿಸಲು ಸೂಚನೆ ನೀಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಇತ್ತೀಚೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮುಂದಿನ ವರ್ಷದ ಏಪ್ರಿಲ್ ವೇಳೆಗೆ ಈ ಯೋಜನಾ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಬೆಂಗಳೂರು ವೈರ್ ಗೆ ಖಚಿತಪಡಿಸಿದ್ದಾರೆ.

      “12ನೇ ಶತಮಾನದಲ್ಲಿ ಲೋಕಕ್ಕೆ ಸಮಾನತೆಯನ್ನು ಸಾರಿದ, ಅಂತರ್ಜಾತಿ ವಿವಾಹವನ್ನು ಜಾರಿಗೆ ತಂದ, ಕಲ್ಯಾಣ ಕ್ರಾಂತಿಯನ್ನು ಸಾರಲು ಕಾರಣವಾದ ಅನುಭವ ಮಂಟಪದ ಪರಿಕಲ್ಪನೆಯ ಆಧುನಿಕ ಅನುಭವ ಮಂಟಪದ ಕಾಮಗಾರಿ 2027ರ ಬಸವ ಜಯಂತಿ ಒಳಗೆ ಪೂರ್ಣಗೊಳ್ಳಲಿದೆ” ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಎಂದು ತಿಳಿಸಿದ್ದಾರೆ.

      ಕಟ್ಟೆಡದ ನೀಲಿನಕ್ಷೆ.

      ಕಲ್ಯಾಣ-ಚಾಲುಕ್ಯ ಶೈಲಿಯ ವಾಸ್ತುಶಿಲ್ಪ:

      ಗೊ.ರು. ಚನ್ನಬಸಪ್ಪ ಸಮಿತಿಯ ಶಿಫಾರಸ್ಸಿನಂತೆ ಈ ಕಟ್ಟಡವನ್ನು ನಿರ್ಮಿಸಲಾಗುತ್ತಿದ್ದು, ಹಲವು ವೈಶಿಷ್ಟ್ಯಗಳನ್ನು ಹೊಂದಿದೆ:

      770 ಸ್ತಂಭಗಳು: 770 ಶರಣರ ನೆನಪಿಗಾಗಿ ಅಷ್ಟೇ ಸಂಖ್ಯೆಯ ಕಲ್ಲಿನ ಕಂಬಗಳನ್ನು ನಿರ್ಮಿಸಲಾಗಿದ್ದು, ಪ್ರತಿ ಕಂಬದ ಮೇಲೆ ಶರಣರ ಹೆಸರು, ವೃತ್ತಿ ಮತ್ತು ಅವರ ವಚನಗಳನ್ನು ಕೆತ್ತಲಾಗಿದೆ.

      ಆರು ಅಂತಸ್ತಿನ ಭವನ: ನೆಲಮಹಡಿ ಸೇರಿದಂತೆ ಒಟ್ಟು ಆರು ಅಂತಸ್ತುಗಳ (G+4) ಈ ಕಟ್ಟಡದಲ್ಲಿ ಅತ್ಯಾಧುನಿಕ ಗ್ರಂಥಾಲಯ, ಸಂಶೋಧನಾ ಕೇಂದ್ರ ಮತ್ತು ಯೋಗ ಕೇಂದ್ರಗಳಿವೆ.

      ದಾಸೋಹ ಭವನ: ಒಮ್ಮೆಗೆ 1,500 ಜನರು ಕುಳಿತು ಪ್ರಸಾದ ಸ್ವೀಕರಿಸುವಂತಹ ವಿಶಾಲವಾದ ಬೇಸ್‌ಮೆಂಟ್ ಸಭಾಂಗಣ ಇಲ್ಲಿದೆ.

      ಡಿಜಿಟಲ್ ಸ್ಪರ್ಶ: ರೋಬೋಟಿಕ್ಸ್ ತಂತ್ರಜ್ಞಾನ ಮತ್ತು ಡಿಜಿಟಲ್ ಪ್ರದರ್ಶನದ ಮೂಲಕ ಶರಣರ ಜೀವನ ಚರಿತ್ರೆಯನ್ನು ಪ್ರವಾಸಿಗರಿಗೆ ಉಣಬಡಿಸಲಾಗುತ್ತದೆ.

      ಬಸವಕಲ್ಯಾಣದಲ್ಲಿ ಪ್ರಸ್ತುತ ಇರುವ ಅನುಭವ ಮಂಟಪವನ್ನು ನಿರ್ಮಿಸಲು ಭಾಲ್ಕಿ ಹೀರೇಮಠದ  ಡಾ.ಚೆನ್ನಬಸವ ಪಟ್ಟದ ದೇವರು ಸ್ವಾಮೀಜಿಯವರ ಒತ್ತು ನೀಡಿದ್ದರು. ಅವರ ಶಿಷ್ಯರಲ್ಲಿ ಪ್ರಮುಖರಾಗಿದ್ದ ಮಾಜಿ ಸಚಿವ ದಿವಂಗತ ಡಾ.ಭೀಮಣ್ಣ ಖಂಡ್ರೆಯವರು ಮೊದಲಿಗೆ ಪ್ರಸ್ತುತ ಇರುವ ಅನುಭವ ಮಂಟಪದ ನಿರ್ಮಾಣಕ್ಕೆ ₹25,000 ಇಡಗಂಟನ್ನು ಇಟ್ಟು, ದಾನದ ಮೂಲಕ ಉಳಿದ ಹಣ ಸಂಗ್ರಹಿಸಿ ಅನುಭವ ಮಂಟಪದ ಕಟ್ಟಡವನ್ನು ನಿರ್ಮಿಸಿದ್ದರು. ಆ ಕಟ್ಟಡದಲ್ಲಿ ಶಿವಲಿಂಗ ಕಟ್ಟಲು ಕಾರ್ಮಿಕರು ಹಿಂದೇಟು ಹಾಕಿದಾಗ ಖುದ್ದು ತಾವೇ ಜಲ್ಲಿ, ಮರಳು, ಸಿಮೆಂಟ್ ಹಾಗೂ ಕಬ್ಬಿಣ ಬಳಸಿ ಒಂದೇ ರಾತ್ರಿಯಲ್ಲಿ ಶಿವಲಿಂಗ ನಿರ್ಮಿಸಿ ಅನುಭವ ಮಂಟಪದ ಪ್ರಮುಖ ಕಾರ್ಯವನ್ನು ಪೂರ್ಣಗೊಳಿಸಿದ್ದರು.

      2015ರಲ್ಲಿ ಈಗಿನ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ನೇತೃತ್ವದ ನಿಯೋಗ, ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರ ಬಳಿ ತೆರಳಿ ಆಧುನಿಕ ಅನುಭವ ಮಂಟಪ ನಿರ್ಮಾಣದ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದರು. ಇದಕ್ಕೆ ಸಮ್ಮತಿ ಸೂಚಿಸಿದ್ದ ಸಿದ್ದರಾಮಯ್ಯ ಅವರು, ಗೊ.ರು.ಚೆನ್ನಬಸಪ್ಪ ಅವರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿತ್ತು. ಈ ಸಮಿತಿಯು ಆಧುನಿಕ ಅನುಭವ ಮಂಟಪ ರಚನೆ, ಪ್ರಮುಖ ಬಸವಾದಿ ಶರಣರು ಸೇರಿದಂತೆ ಅನುಭವ ಮಂಟಪದ ಕುರಿತಂತೆ ಅಧ್ಯಯನ, ವಾಸ್ತುಶಿಲ್ಪಿಗಳು, ವಚನ ತಜ್ಞರು ಮತ್ತಿತರರೊಂದಿಗೆ ಹಲವು ಬಾರಿ ಸಂವಾದ, ಸಭೆ ನಡೆಸಿ ಅಂತಿಮವಾಗಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಅದಾದ ಬಳಿಕ 2021ರಲ್ಲಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಯೋಜನೆಗೆ ಚಾಲನೆ ದೊರೆತಿತ್ತು.

      ರಾಜಕೀಯ ಮತ್ತು ಸಾಂಸ್ಕೃತಿಕ ಮಹತ್ವ:

      2028ರ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದಲೂ ಈ ಯೋಜನೆ ಮಹತ್ವ ಪಡೆದಿದೆ. 2027ರ ಅಂತ್ಯದ ವೇಳೆಗೆ ಇದನ್ನು ಲೋಕಾರ್ಪಣೆಗೊಳಿಸುವ ಮೂಲಕ ಲಿಂಗಾಯತ ಮತದಾರರ ಒಲವು ಗಳಿಸಲು ಸರ್ಕಾರ ಮುಂದಾಗಿದೆ ಎಂಬ ವಿಶ್ಲೇಷಣೆಗಳೂ ಇವೆ. ಏನೇ ಇರಲಿ, ಭಾಲ್ಕಿಯ ಹೀರೇಮಠ ಡಾ. ಚೆನ್ನಬಸವ ಪಟ್ಟದ ದೇವರು ಮತ್ತು ಡಾ. ಭೀಮಣ್ಣ ಖಂಡ್ರೆ ಅವರ ಕನಸಾಗಿದ್ದ ಈ ಆಧುನಿಕ ಅನುಭವ ಮಂಟಪವು ಲೋಕಾರ್ಪಣೆಯಾಗದ ಬಳಿಕ ವಿಶ್ವದ ಗಮನ ಸೆಳೆಯುವ ಪ್ರವಾಸಿ ತಾಣವಾಗುವುದರಲ್ಲಿ ಸಂಶಯವಿಲ್ಲ.

      Previous Post

      CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

      Next Post

      ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

      Next Post

      ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

      IndiaHealthReport2026 | ಭಾರತದ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿ: ಶೇ. 50ರಷ್ಟು ಜನರಿಗೆ ಈಗ ವಿಮಾ ಸುರಕ್ಷತೆ

      Please login to join discussion

      Like Us on Facebook

      Follow Us on Twitter

      Recent News

      ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

      June 13, 2026

      GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

      June 13, 2026
      Bengaluru Wire

      "ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

      Browse by Category

      • Bengaluru Focus
      • BW Special
      • Crime
      • Life Style
      • News Wire
      • Others
      • Photo Gallery
      • Public interest
      • sponsored
      • Uncategorized
      • Video

      ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

      June 13, 2026

      GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

      June 13, 2026

      ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

      June 13, 2026
      • About
      • Privacy & Policy
      • Disclaimer
      • Contact
      • Advertise With Us

      © 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

      Welcome Back!

      Login to your account below

      Forgotten Password?

      Retrieve your password

      Please enter your username or email address to reset your password.

      Log In

      Add New Playlist

      error: Content is protected !!
      No Result
      View All Result
      • Home
      • News Wire
      • Bengaluru Focus
      • Public interest
      • BW Special
      • Life Style
      • Photo Gallery
      • Video

      © 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

      Join the Group