Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

    GBA NEWS | “ಗ್ರೇಟರ್ ಬೆಂಗಳೂರು” ಪಾಲಿಕೆ ಚುನಾವಣೆ ಮತ್ತಷ್ಟು ವಿಳಂಬ: ಸೆಪ್ಟೆಂಬರ್ ವರೆಗೆ ಕಾಲಾವಕಾಶ ಕೋರಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Others

GBA News | ಬೆಂಗಳೂರು: ಪೂರ್ವ ಮುಂಗಾರು ಬರುವ ಮುನ್ನವೇ, ಮಳೆಹಾನಿ ತಡೆಗೆ ಜಿಬಿಎ, ಪಾಲಿಕೆ ಆಯುಕ್ತರ ಮ್ಯಾರಥಾನ್ ರೌಂಡ್ಸ್

ಸಾಯಿ ಲೇಔಟ್ ಪ್ರವಾಹಕ್ಕೆ ಶಾಶ್ವತ ಪರಿಹಾರ: ಬಾಕ್ಸ್ ಪುಶಿಂಗ್ ಕಾಮಗಾರಿ ಚುರುಕು, ಸ್ವಚ್ಛತೆ ನಿರ್ಲಕ್ಷಿಸಿದ ಅಧಿಕಾರಿಗಳಿಗೆ ಎಚ್ಚರಿಕೆ

by Bengaluru Wire Desk
April 22, 2026
in Others
Reading Time: 2 mins read
0

ಬೆಂಗಳೂರು, ಏ.22, www.bengaluruwire.com: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುವ ಮುನ್ನವೇ ಎಚ್ಚೆತ್ತುಕೊಂಡಿರುವ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ (GBA) ಹಾಗೂ ನಗರದ ವಿವಿಧ ಪಾಲಿಕೆಗಳ ಆಯುಕ್ತರು ಇಂದು ನಗರದಾದ್ಯಂತ ವಿವಿಧೆಡೆ ಸಂಚರಿಸಿ ಪರಿಶೀಲನೆ ನಡೆಸಿದರು. 

ಸಾಯಿ ಲೇಔಟ್‌ನ ದಶಕಗಳ ಪ್ರವಾಹ ಸಮಸ್ಯೆಗೆ ಮುಕ್ತಿ ಹಾಡುವುದರಿಂದ ಹಿಡಿದು, ನಗರದ ಸ್ವಚ್ಛತಾ ವ್ಯವಸ್ಥೆಯ ಸುಧಾರಣೆಯವರೆಗೆ ಹಲವು ಪ್ರಮುಖ ನಿರ್ದೇಶನಗಳನ್ನು ಹಿರಿಯ ಅಧಿಕಾರಿಗಳು ನೀಡಿದ್ದಾರೆ.

ಸಾಯಿ ಲೇಔಟ್ ಪ್ರವಾಹ ಮುಕ್ತಕ್ಕೆ ಗಡುವು:

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಇಂದು (ಏ.22) ಸಾಯಿ ಲೇಔಟ್ ಪ್ರದೇಶಕ್ಕೆ ಭೇಟಿ ನೀಡಿ, ಬಾಕ್ಸ್ ಪುಶಿಂಗ್ ಕಾಮಗಾರಿಯನ್ನು ಪರಿಶೀಲಿಸಿದರು. ಪ್ರತಿ ವರ್ಷ ಮಳೆಗಾಲದಲ್ಲಿ ಜಲಾವೃತವಾಗುವ ಸಾಯಿ ಲೇಔಟ್ ಸಮಸ್ಯೆಗೆ ಗೆದ್ದಲಹಳ್ಳಿ ರೈಲ್ವೆ ವೆಂಟ್ ಬಳಿಯ ಬಾಕ್ಸ್ ಪುಶಿಂಗ್ ಕಾಮಗಾರಿ ಅತಿ ಮುಖ್ಯವಾಗಿದೆ.

“ರೈಲ್ವೆ ಇಲಾಖೆಯಿಂದ ಅನುಮತಿ ದೊರೆತಿದ್ದು, ಒಂದು ಬಾಕ್ಸ್ ಪುಶಿಂಗ್ ಕಾರ್ಯ ಏಪ್ರಿಲ್ 30ರೊಳಗೆ ಪೂರ್ಣಗೊಳ್ಳಲಿದೆ. ಎರಡನೇ ಬಾಕ್ಸ್ ಕಾಮಗಾರಿಯನ್ನು ಮೇ 30ರೊಳಗೆ ಮುಗಿಸಲು ಸೂಚಿಸಲಾಗಿದೆ,” ಎಂದು ಮಹೇಶ್ವರ್ ರಾವ್ ತಿಳಿಸಿದರು. 

ರೈಲು ಸಂಚಾರಕ್ಕೆ ತೊಂದರೆಯಾಗದಂತೆ ಗರ್ಡರ್ ಅಳವಡಿಸಿ ದಿನಕ್ಕೆ 2 ಮೀಟರ್‌ಗಳಷ್ಟು ಪುಶಿಂಗ್ ಮಾಡಲಾಗುತ್ತಿದೆ. ಇದರೊಂದಿಗೆ ಬಿಡಿಎ ವತಿಯಿಂದ ಮತ್ತೊಂದು ವೆಂಟ್ ನಿರ್ಮಾಣವಾಗುತ್ತಿದ್ದು, ತುರ್ತು ಸಂದರ್ಭದಲ್ಲಿ ನೀರು ಹೊರಹಾಕಲು ತಾತ್ಕಾಲಿಕ ಪಂಪ್ ಸೆಟ್ ಅಳವಡಿಸಲು ಆದೇಶಿಸಲಾಗಿದೆ.

ವೈಟ್ ಟಾಪಿಂಗ್ ವಿಳಂಬ: ಗುತ್ತಿಗೆದಾರರಿಗೆ ದಂಡದ ಬಿಸಿ:

ಹೆಣ್ಣೂರು-ಬಾಗಲೂರು ರಸ್ತೆಯ 5 ಕಿ.ಮೀ ಉದ್ದದ ವೈಟ್ ಟಾಪಿಂಗ್ ಕಾಮಗಾರಿಯ ವಿಳಂಬದ ಬಗ್ಗೆ ಆಯುಕ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಜೂನ್ 15ರೊಳಗೆ ಕಾಮಗಾರಿ ಪೂರ್ಣಗೊಳ್ಳಬೇಕು ಎಂದು ಗಡುವು ನೀಡಿದ ಅವರು, ವಿಳಂಬ ನೀತಿ ಅನುಸರಿಸುತ್ತಿರುವ ಗುತ್ತಿಗೆದಾರರಿಗೆ ದಂಡ ವಿಧಿಸಲು ಬಿ-ಸ್ಮೈಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾದಚಾರಿ ಮಾರ್ಗ ಮತ್ತು ಬಫರ್ ಝೋನ್ ಅಭಿವೃದ್ಧಿಯನ್ನು ಸಮಾನಾಂತರವಾಗಿ ಕೈಗೊಳ್ಳಲು ನಿರ್ದೇಶಿಸಿದರು.

ಪೂರ್ವ ನಗರ ಪಾಲಿಕೆ: ರಾಜಕಾಲುವೆಗಳ ಹೂಳೆತ್ತಲು ಆದ್ಯತೆ:

ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್. ರಮೇಶ್ ಅವರು ಪ್ರವಾಹ ಪೀಡಿತ ಪ್ರದೇಶಗಳಾದ ಗುಂಜೂರು, ವರ್ತೂರು, ಯಮಲೂರು (ಎಪ್ಸಿಲಾನ್) ಹಾಗೂ ಮಣಿಪಾಲ್ ಆಸ್ಪತ್ರೆ ಸಮೀಪದ ರಾಜಕಾಲುವೆಗಳನ್ನು ಪರಿಶೀಲಿಸಿದರು. ವಿಶ್ವಬ್ಯಾಂಕ್ ಅನುದಾನದಡಿ ನಡೆಯುತ್ತಿರುವ ಈ ಕಾಮಗಾರಿಗಳನ್ನು ಮಳೆಗಾಲಕ್ಕೆ ಮುನ್ನವೇ ಮುಗಿಸಲು ಅವರು ತಾಕೀತು ಮಾಡಿದರು. “ಒತ್ತುವರಿ ತೆರವುಗೊಳಿಸಿ ಕಚ್ಚಾ ಕಾಲುವೆಗಳನ್ನು ವ್ಯವಸ್ಥಿತಗೊಳಿಸುವುದು ನಮ್ಮ ಮೊದಲ ಆದ್ಯತೆ. ಪ್ರವಾಹ ತಡೆಗಟ್ಟಲು ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ,” ಎಂದು ರಮೇಶ್ ತಿಳಿಸಿದರು.

ಉತ್ತರ ನಗರ ಪಾಲಿಕೆ: ಪೌರಕಾರ್ಮಿಕರ ಗೈರಿಗೆ ಆಯುಕ್ತರ ತರಾಟೆ:

ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರು ಸರ್ವಜ್ಞನಗರದಲ್ಲಿ ಸ್ವಚ್ಛತಾ ಕಾರ್ಯ ಪರಿಶೀಲಿಸಿದರು. ಪೌರಕಾರ್ಮಿಕರ ಹಾಜರಾತಿಯಲ್ಲಿನ ವ್ಯತ್ಯಯ ಕಂಡು ಕೆಂಡಾಮಂಡಲರಾದ ಅವರು, ದೀರ್ಘಕಾಲದವರೆಗೆ ಗೈರಾದವರ ಸಂಬಳ ಕಡಿತಕ್ಕೆ ಸೂಚಿಸಿದರು.

“ನಗರದ ಸ್ವಚ್ಛತೆಯಲ್ಲಿ ಮಾನಿಟರಿಂಗ್ ಕೊರತೆ ಎದ್ದು ಕಾಣುತ್ತಿದೆ. ಪ್ರತಿ ಪೌರಕಾರ್ಮಿಕರ ಕಾರ್ಯವೈಖರಿಯನ್ನು ಕಿರಿಯ ಆರೋಗ್ಯ ಪರಿವೀಕ್ಷಕರು (JHI) ನಿರಂತರವಾಗಿ ಗಮನಿಸಬೇಕು. ತ್ಯಾಜ್ಯ ವಿಂಗಡಣೆ ಮಾಡದ ಅಂಗಡಿಗಳು ಮತ್ತು ಕಸ ಎಸೆಯುವವರ ವಿರುದ್ಧ ಕಠಿಣ ದಂಡ ವಿಧಿಸಿ,” ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ರಾತ್ರಿ ಪಾಳಿಯ ಮಾರ್ಷಲ್‌ಗಳ ಕಾರ್ಯಕ್ಷಮತೆಯ ವರದಿಯನ್ನು ಎರಡು ದಿನಗಳಲ್ಲಿ ಸಲ್ಲಿಸಲು ಅವರು ಆದೇಶಿಸಿದರು.

ಇತರ ಪ್ರಮುಖ ನಿರ್ಧಾರಗಳು:

ತ್ಯಾಜ್ಯ ಸಂಗ್ರಹಣೆ:  ಸರ್ವಜ್ಞನಗರದ ದ್ವಿತೀಯ ಹಂತದ ತ್ಯಾಜ್ಯ ಘಟಕಕ್ಕೆ ಬರುವ 200 ಟನ್ ಕಸವನ್ನು ಮೂಲದಲ್ಲಿಯೇ ವಿಂಗಡಿಸಲು ಮಾರ್ಷಲ್‌ಗಳ ನಿಯೋಜನೆ.

ರಸ್ತೆ ಅಭಿವೃದ್ಧಿ: ಬಾಣಸವಾಡಿ 8ನೇ ಮುಖ್ಯ ರಸ್ತೆಯ ಪಾದಚಾರಿ ಮಾರ್ಗಕ್ಕೆ ತಕ್ಷಣ ಅನುದಾನ ಬಿಡುಗಡೆ.

ತೆರವು ಕಾರ್ಯಾಚರಣೆ: ಕೆ. ನಾರಾಯಣಪುರ ರಸ್ತೆಯಲ್ಲಿ ಬಳಕೆಯಲ್ಲಿಲ್ಲದ ಶೌಚಾಲಯ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಹಾದಿ ಸುಗಮ.

ತಂತ್ರಜ್ಞಾನ: ಗೆದ್ದಲಹಳ್ಳಿ ರೈಲ್ವೆ ಹಳಿ ಕೆಳಭಾಗದಲ್ಲಿ ‘ಟ್ರೆಂಚ್ ಲೆಸ್’ ತಂತ್ರಜ್ಞಾನ ಬಳಸಿ ಮಳೆನೀರು ಚರಂಡಿ ನಿರ್ಮಾಣ.

ಬೆಂಗಳೂರನ್ನು ಮುಂಬರುವ ಮಳೆಗಾಲಕ್ಕೆ ಸಜ್ಜುಗೊಳಿಸಲು ಜಿಬಿಎ (GBA) ಮುಖ್ಯ ಆಯುಕ್ತರ ನೇತೃತ್ವದಲ್ಲಿ ಎಲ್ಲಾ ವಿಭಾಗಗಳ ಅಧಿಕಾರಿಗಳು  ಸಮರೋಪಾದಿಯಲ್ಲಿ ಕೆಲಸ ಮಾಡುವ ಅಗತ್ಯವಿದೆ. ಇಲ್ಲವಾದಲ್ಲಿ “ಬೆಂಗಳೂರು ಪ್ರತಿ ಮಳೆಗಾಲ ಬಂದಾಗ ತೇಲುತ್ತಿದೆ, ದೋಣಿಯಲ್ಲಿ ಜನರ ಸಂಚಾರ ಮಾಡುವ ದುಸ್ಥಿತಿ” ಎಂಬ ಅಪಖ್ಯಾತಿಗೆ ಗುರಿಯಾಗಬೇಕಾಗುತ್ತದೆ.

WhatsApp Join our WhatsApp Channel
Previous Post

IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

Next Post

ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

Next Post

ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

Please login to join discussion

Like Us on Facebook

Follow Us on Twitter

Recent News

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026

ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

April 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group