Sunday, August 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Bengaluru Focus

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

ಬೆಂಗಳೂರಿನ ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ ಹಾಗೂ ಹದಗೆಟ್ಟ ವಾರ್ಡ್ ರಸ್ತೆಗಳ ಅಭಿವೃದ್ಧಿಗೆ 2000 ಕೋಟಿ ರೂ. ವಿಶೇಷ ಅನುದಾನ: ಸಚಿವ ಕೃಷ್ಣ ಬೈರೇಗೌಡ.

by Bengaluru Wire Desk
June 18, 2026
in Bengaluru Focus
Reading Time: 1 min read
0

ಬೆಂಗಳೂರು, ಜೂ‌.18 www.bengaluruwire.com: ನಗರದ ಪ್ರಮುಖ ಸಮಸ್ಯೆಗಳಾದ ಕಸದ ವಿಲೇವಾರಿ ಹಾಗೂ ಹದಗೆಟ್ಟ ರಸ್ತೆಗಳಿಗೆ ಶಾಶ್ವತ ಮುಕ್ತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 

ಈಗಿರುವ ವ್ಯವಸ್ಥೆಯನ್ನೇ ಸಮರ್ಪಕವಾಗಿ ಬಳಸಿಕೊಂಡು ತ್ಯಾಜ್ಯ ನಿರ್ವಹಣೆ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿರುವ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

​ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆ ಹಾಗೂ ರಸ್ತೆ ಅಭಿವೃದ್ಧಿ ಕುರಿತು ಅಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿದ ಬಳಿಕ ಅವರು ಮಹತ್ವದ ಮಾಹಿತಿ ಹಂಚಿಕೊಂಡರು.

​ಕಸದ ಸಮಸ್ಯೆ: 3-4 ತಿಂಗಳಲ್ಲಿ ಗೋಚರಿಸಲಿದೆ ಬದಲಾವಣೆ:

​ನಗರದಲ್ಲಿ ಕಸದ ಸಮಸ್ಯೆ ನಿವಾರಣೆಗೆ ಹೊಸ ಟೆಂಡರ್ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಒಟ್ಟು 33 ಪ್ಯಾಕೇಜ್‌ಗಳ ಪೈಕಿ 6 ನ್ಯಾಯಾಲಯದಲ್ಲಿವೆ. ಉಳಿದ 27 ಪ್ಯಾಕೇಜ್‌ಗಳು ಅಂತಿಮ ಹಂತದಲ್ಲಿವೆ. ಹೊಸ ವ್ಯವಸ್ಥೆ ಜಾರಿಗೆ ಬರುವವರೆಗೆ, ಪ್ರಸ್ತುತ ಇರುವ ಸಿಬ್ಬಂದಿ, ಮಾರ್ಷಲ್‌ಗಳು ಹಾಗೂ ವಾಹನಗಳನ್ನು ಬಳಸಿಕೊಂಡೇ ಕಸದ ಸಮಸ್ಯೆಯನ್ನು ನಿಯಂತ್ರಣಕ್ಕೆ ತರಲು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ.

​ತ್ಯಾಜ್ಯ ನಿರ್ವಹಣೆಯ ಪ್ರಮುಖ ಕ್ರಮಗಳು:

​ರಸ್ತೆ ಬದಿ ಕಸ ಎಸೆದರೆ ದಂಡ: ಆಟೋ ಟಿಪ್ಪರ್‌ಗಳು ಮನೆ-ಮನೆಗೆ ಬಂದರೂ, ರಸ್ತೆ ಬದಿ ಕಸ ಬಿಸಾಡುವವರ ವಿರುದ್ಧ ದಂಡಾತ್ಮಕ ಕ್ರಮ ಜರುಗಿಸಲಾಗುವುದು.

​ವಿಂಗಡಿಸಿದ ಕಸ ಕಡ್ಡಾಯ: ಹಸಿ ಮತ್ತು ಒಣ ತ್ಯಾಜ್ಯ ವಿಂಗಡಿಸದೆ ಕಸ ಸಂಗ್ರಹಿಸಿದರೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಮೇಲೆ ನಿರ್ದಾಕ್ಷಿಣ್ಯ ಕ್ರಮ.

​ವಾಹನಗಳಿಗೆ ಜಿಪಿಎಸ್ (GPS) ಕಡ್ಡಾಯ: ಹೊಸ ಟೆಂಡರ್ ಅಡಿ ಕಾರ್ಯನಿರ್ವಹಿಸುವ ಎಲ್ಲ ಕಸದ ವಾಹನಗಳಿಗೆ ಜಿಪಿಎಸ್ ಕಡ್ಡಾಯ. ಜಿಪಿಎಸ್ ಇಲ್ಲದ ವಾಹನಗಳಿಗೆ ಬಿಲ್ ಪಾವತಿ ಮಾಡುವುದಿಲ್ಲ.

​ವಿಶೇಷ ಸ್ವಚ್ಛತಾ ಅಭಿಯಾನ: ರಸ್ತೆ ಬದಿ ಬಿದ್ದಿರುವ ತ್ಯಾಜ್ಯ, ಕಟ್ಟಡದ ಅವಶೇಷಗಳು ಹಾಗೂ ಕಳೆ ಗಿಡಗಳನ್ನು ತೆರವುಗೊಳಿಸಲು ಪಾಲಿಕೆ, ಮೆಟ್ರೋ, ರೈಲ್ವೆ ಮತ್ತು ಬಿಡಿಎ ಸಮನ್ವಯದಲ್ಲಿ ವಿಶೇಷ ಅಭಿಯಾನ.

​”ಕಸದ ಸಮಸ್ಯೆ ಬಗೆಹರಿಸಲು ಶೇ. 50ರಷ್ಟು ನಾಗರಿಕರ ಸಹಕಾರ ಅತ್ಯಗತ್ಯ. ನಿಮ್ಮ ಮನೆ ಬಳಿ ಕಸದ ವಾಹನ ಬರದಿದ್ದರೆ ನಮಗೆ ತಿಳಿಸಿ, ವಾಹನ ಕಳುಹಿಸುವುದು ನಮ್ಮ ಜವಾಬ್ದಾರಿ. ಆದರೆ ರಸ್ತೆ ಬದಿ ಕಸ ಎಸೆಯಬೇಡಿ.” – ಕೃಷ್ಣ ಬೈರೇಗೌಡ

​

ವಾರ್ಡ್ ರಸ್ತೆಗಳಿಗೆ ಕಾಯಕಲ್ಪ: ₹2000 ಕೋಟಿ ಬಿಡುಗಡೆ

​ಬೆಂಗಳೂರಿನ ರಸ್ತೆಗಳ ಗುಣಮಟ್ಟ ಸುಧಾರಣೆ ಜನರ ಬಹುದೊಡ್ಡ ನಿರೀಕ್ಷೆಯಾಗಿದೆ. ಮುಖ್ಯ ರಸ್ತೆಗಳನ್ನು ಹೊರತುಪಡಿಸಿ, ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ಸಂಪೂರ್ಣ ಹದಗೆಟ್ಟಿರುವ ವಾರ್ಡ್ ರಸ್ತೆಗಳ ಡಾಂಬರೀಕರಣಕ್ಕಾಗಿ ₹2000 ಕೋಟಿ ವಿಶೇಷ ಅನುದಾನ ಮೀಸಲಿಡಲಾಗಿದೆ ಎಂದು ಸಚಿವರು ಘೋಷಿಸಿದರು.

​

​ರಸ್ತೆ ಕಾಮಗಾರಿಯ ಮುಖ್ಯಾಂಶಗಳು: ಅಲ್ಪಾವಧಿ ಟೆಂಡರ್: ಹಾಳಾಗಿರುವ ರಸ್ತೆಗಳನ್ನು ಗುರುತಿಸಿ, ಮುಂದಿನ 2 ತಿಂಗಳೊಳಗೆ ಅಲ್ಪಾವಧಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚನೆ.

​4 ರಿಂದ 6 ತಿಂಗಳಲ್ಲಿ ಪೂರ್ಣ: ಮಳೆಗಾಲವನ್ನು ಗಮನದಲ್ಲಿಟ್ಟುಕೊಂಡು, ಮಳೆ ಇಲ್ಲದ ಬಿಡುವಿನ ವೇಳೆಯಲ್ಲಿ ಗುಣಮಟ್ಟದ ಕಾಮಗಾರಿ ನಡೆಸಿ 4-6 ತಿಂಗಳಲ್ಲಿ ಮುಕ್ತಾಯಗೊಳಿಸುವ ಗುರಿ.

​ರಸ್ತೆ ಅಗೆಯುವಂತಿಲ್ಲ: ಕಾಮಗಾರಿ ವೇಳೆ ಎಲ್ಲಾ ಇಲಾಖೆಗಳ ಸಮನ್ವಯ (SOP) ಸಾಧಿಸಲಾಗುವುದು. ಪೂರ್ವಾನುಮತಿ ಇಲ್ಲದೆ ರಸ್ತೆ ಅಗೆಯುವಂತಿಲ್ಲ. ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ, ಖುದ್ದಾಗಿ ನಾನೇ ಪರಿಶೀಲನೆ ನಡೆಸುತ್ತೇನೆ ಎಂದು ಸಚಿವರು ಎಚ್ಚರಿಸಿದ್ದಾರೆ.

​ನಗರದ ಸೌಂದರ್ಯ ಕಾಪಾಡಲು ಹಾಗೂ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ನಾಗರಿಕರು ಈ ಪ್ರಯತ್ನಗಳಿಗೆ ಕೈಜೋಡಿಸಬೇಕೆಂದು ಸಚಿವರು ಮನವಿ ಮಾಡಿದ್ದಾರೆ.

​

WhatsApp Join our WhatsApp Channel
Previous Post

Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

Next Post

IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

Next Post
Vidhana Soudha

IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

Please login to join discussion

Like Us on Facebook

Follow Us on Twitter

Recent News

ಅಬ್ಬಾ! ಕಳೆದುಹೋದ ಚಪ್ಪಲಿ ಹುಡುಕಲು ChatGPT ಮೊರೆ ಹೋದ ವ್ಯಕ್ತಿ: ವೈರಲ್ ಆಯ್ತು ವಿಚಿತ್ರ ಐಡಿಯಾ

August 16, 2026

ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

August 15, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಅಬ್ಬಾ! ಕಳೆದುಹೋದ ಚಪ್ಪಲಿ ಹುಡುಕಲು ChatGPT ಮೊರೆ ಹೋದ ವ್ಯಕ್ತಿ: ವೈರಲ್ ಆಯ್ತು ವಿಚಿತ್ರ ಐಡಿಯಾ

August 16, 2026

ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

August 15, 2026

Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

August 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group