ಬೆಂಗಳೂರು, ಜು.08 www.bengaluruwire.com: ಕರ್ನಾಟಕ ಪತ್ರಕರ್ತರ ಸಹಕಾರ ಸಂಘವು ತನ್ನ ಸದಸ್ಯರು ಹಾಗೂ ಸಹಸದಸ್ಯರ ಮಕ್ಕಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ‘ಪ್ರತಿಭಾ ಪುರಸ್ಕಾರ’ಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
2026ನೇ ಸಾಲಿನಲ್ಲಿ ನಡೆದ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳು ಈ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇಕಡಾ 85ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಹಾಗೂ ಪಿಯುಸಿಯ ಎಲ್ಲಾ ವಿಭಾಗಗಳು, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಶೇಕಡಾ 80ಕ್ಕಿಂತ ಹೆಚ್ಚು ಅಂಕ ಪಡೆದ ಸಂಘದ ಸದಸ್ಯರ ಮಕ್ಕಳು ಅರ್ಜಿ ಸಲ್ಲಿಸಬಹುದು.
ಇದರ ಜೊತೆಗೆ, ಪಠ್ಯೇತರ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ ಮಾಡಿದ್ದಲ್ಲಿ, ಸೂಕ್ತ ದಾಖಲೆಗಳೊಂದಿಗೆ ಸಂಘಕ್ಕೆ ಸಲ್ಲಿಸಿದರೆ ಆಡಳಿತ ಮಂಡಳಿಯು ಪರಿಶೀಲಿಸಿ ಅಭಿನಂದಿಸಲಿದೆ.
ಅರ್ಹ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯ ಜೆರಾಕ್ಸ್ ಪ್ರತಿ, ಇತ್ತೀಚಿನ ಭಾವಚಿತ್ರ ಹಾಗೂ ಸಂಪರ್ಕಿಸಲು ದೂರವಾಣಿ ಸಂಖ್ಯೆಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಕಾರ್ಯದರ್ಶಿಗಳು, ಕರ್ನಾಟಕ ಪತ್ರಕರ್ತರ ಸಹಕಾರ ಸಂಘ ನಿ., ನಂ.11/4, ‘ಸುವರ್ಣ ಭವನ’, 2ನೇ ಮಹಡಿ, ಕ್ವೀನ್ಸ್ ರಸ್ತೆ, ಬೆಂಗಳೂರು-560052 ವಿಳಾಸಕ್ಕೆ ಆಗಸ್ಟ್ 10ರ ಒಳಗಾಗಿ ತಲುಪಿಸುವಂತೆ ಕೋರಲಾಗಿದೆ.

ಆಗಸ್ಟ್ 30 ರಂದು ನಡೆಯುವ ಸರ್ವಸದಸ್ಯರ ಸಭೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ವಿತರಿಸಲಾಗುವುದು ಎಂದು ಸಂಘದ ಕಾರ್ಯದರ್ಶಿ ರಘು ಡಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





















