Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karnataka bus strike | ಕರೋನಾ ಸಂಕಷ್ಟದ ಮಧ್ಯೆ ಸಾರಿಗೆ ನಿಗಮದ ನೌಕರರ ಅನಿರ್ಧಿಷ್ಟಾವಧಿ ಮುಷ್ಕರದ ಬರೆ

ನಾ ಕೊಡೆ ನೀ ಬಿಡೆ ಎಂಬಂತಿದೆ ಸರ್ಕಾರ ಮತ್ತು ನಿಗಮದ ನೌಕರರ ಪರಿಸ್ಥಿತಿ ; ಇಬ್ಬರ ಮಧ್ಯದ ಜಗಳದಲ್ಲಿ ತ್ರಿಶಂಕು ಸ್ಥಿತಿಯಲ್ಲಿ ಬಸ್ ಪ್ರಯಾಣಿಕ

by Bengaluru Wire Desk
April 7, 2021
in News Wire
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಸ್ಸನ್ನೆ ನಂಬಿಕೊಂಡು ದೈನಂದಿನ ಕೆಲಸ ಕಾರ್ಯಗಳಿಗೆ ಹೋಗುವವರು ಪರ್ಯಾಯ ವ್ಯವಸ್ಥೆ ಮಾಡಿಕೊಂಡರೆ ಉತ್ತಮ. ಏಕೆಂದರೆ ಆರನೇ ವೇತನ ಆಯೋಗದ ರೀತಿ ವೇತನ ಪರಿಷ್ಕರಣೆ ಸೇರಿದಂತೆ 9 ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯಾದ್ಯಂತ ಸಾರಿಗೆ ನೌಕರರು ಬುಧವಾರದಿಂದ (ಏ.7) ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಿದ್ದಾರೆ.

ಈ ಹಿನ್ನಲೆಯಲ್ಲಿ ಸರ್ಕಾರ ಮತ್ತು ಸಾರಿಗೆ ನಿಗಮಗಳು ಖಾಸಗಿ ಬಸ್, ಮೆಟ್ರೋ ನಿಗಮ, ಖಾಸಗಿ ಆಟೋ-ಕ್ಯಾಬ್ ಗಳ ಸಂಘಟನೆಗಳ ಜೊತೆ ಮಾತನಾಡಿದ್ದು, ಪರ್ಯಾಯ ವ್ಯವಸ್ಥೆಗೆ ಕ್ರಮ ಕೈಗೊಂಡಿದ್ದರೂ ಸಾರ್ವಜನಿಕರ ದೈನಂದಿನ ಸುಗಮ ಓಡಾಟಕ್ಕೆ ಹೊಡೆತ ಬೀಳುವ ಸಾಧ್ಯತೆಯಿದೆ.

ಏಕೆಂದರೆ ರಾಜ್ಯಾದ್ಯಂತ ವಿವಿಧ ಸಾರಿಗೆ ನಿಗಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1.40 ಲಕ್ಷ ಸಾರಿಗೆ ನೌಕರರ ಪೈಕಿ ಬಹುತೇಕ ಸಿಬ್ಬಂದಿ ಏ.7 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ. 2020ರ ಡಿಸೆಂಬರ್ ನಲ್ಲಿ ಕರೋನಾ ಸಂಕಷ್ಟದ ಸಂದರ್ಭದಲ್ಲೂ 4 ದಿನ ಬಸ್ ಗಳನ್ನು ನಿಲ್ಲಿಸಿ ಸರ್ಕಾರಕ್ಕೆ 9 ವಿವಿಧ ಬೇಡಿಕೆಗಳನ್ನು ಇಟ್ಟಿದ್ದರು.

ಆ 9 ಬೇಡಿಕೆಗಳು ಯಾವುವು?

ಸಾರಿಗೆ ನೌಕರರಿಗೆ ಆರೋಗ್ಯ ವಿಮೆ, ಕೋವಿಡ್ ನಿಂದ ಸತ್ತ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ, ಅಂತರ್ ನಿಗಮ ವರ್ಗಾವಣೆ, ತರಬೇತಿ ನೌಕರರ ಅವಧಿ 2 ವರ್ಷದ ಬದಲು 1 ವರ್ಷಕ್ಕೆ ಇಳಿಕೆ ಮಾಡಬೇಕು, ಸಾರಿಗೆ ನಿಗಮಗಳಲ್ಲಿ ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ ಜಾರಿಗೆ ತರಬೇಕು, ನಿಗಮದ ನೌಕರರ ಮೇಲೆ ಕಿರುಕುಳ ತಪ್ಪಿಸಲು ಆಡಳಿತ ವ್ಯವಸ್ಥೆ ಬದಲಾಯಿಸಬೇಕು ಹಾಗೂ ಬಹು ಮುಖ್ಯವಾಗಿ 6ನೇ ವೇತನ ಆಯೋಗದ ರೀತಿ ಸಮಾನ ವೇತನ ಜಾರಿಗೆ ತರಬೇಕು ಎಂದು ಸಾರಿಗೆ ನಿಗಮದ ನೌಕರರು ಪಟ್ಟು ಹಿಡಿದು ಈ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದರು. ರಾಜ್ಯ ಸರ್ಕಾರ ಈ ಬಹುತೇಕ ಬೇಡಿಕೆಗಳನ್ನು ಈಡೇರಿಸಿದೆ ಎಂದು ಹೇಳಿದೆ.

ಆದರೆ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಸಾರಿಗೆ ನಿಗಮದ ನೌಕರರ ಬೇಡಿಕೆ ಈಡೇರಿಕೆ ಬಗ್ಗೆ ಸರ್ಕಾರಕ್ಕೆ ಮೂರ್ಲಾಲ್ಕು ಬಾರಿ ಮನವಿ ಮಾಡಿದ್ದರೂ ಅದಕ್ಕೆ ಸೂಕ್ತ ಸ್ಪಂದಿಸಿಲ್ಲ. ಹೀಗಾಗಿ ಸಾರಿಗೆ ನಿಗಮಗಳ ಬಸ್ ಓಡಾಟವನ್ನು ಸ್ಥಗಿತಗೊಳಿಸಿ ಮುಷ್ಕರ ಮಾಡುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಎಸ್ಮಾ ಜಾರಿ ಅಸ್ತ್ರ ಪ್ರಯೋಗಕ್ಕೆ ಮುಂದಾದ ಸರ್ಕಾರ

ಸಾರಿಗೆ ನಿಗಮದ ನೌಕರರ ಬೇಡಿಕೆಗಳನ್ನು ಸಂಧಾನ ಮುಖಾಂತರ ಈಡೇರಿಸುವ ಬದಲು, ಸರ್ಕಾರ ಮುಷ್ಕರದಲ್ಲಿ ನಿರತರಾಗುವ ನೌಕರರ ಮೇಲೆ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ) ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ  (ಎನ್ ಡಿಎಂಎ) ಅಡಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ. ಇನ್ನೊಂದೆಡೆ ಚುನಾವಣಾ ಆಯೋಗದ ನೀತಿ ಸಂಹಿತೆ ಜಾರಿಯಲ್ಲಿದೆ. ಹಾಗಾಗಿ ಅದಾದ ಬಳಿಕ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳುತ್ತಿದೆ. ಆದರೂ ಸಾರಿಗೆ ನಿಗಮದ ಸಾವಿರಾರು ನೌಕರರು ತಮ್ಮ ಮೇಲೆ ಏನೇ ಕ್ರಮ ಕೈಗೊಂಡರು ಮುಷ್ಕರ ಕೈಬಿಡುವ ಮಾತೇ ಇಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಬಿಎಂಟಿಸಿ ಬಸ್ ಡಿಪೋವೊಂದರ ದೃಶ್ಯ

ಬುಧವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಪ್ರಾರಂಭವಾಗುವ ಹಿನ್ನಲೆಯಲ್ಲಿ ಮಂಗಳವಾರ ಮಧ್ಯಾಹ್ನದಿಂದಲೇ ಸಾರಿಗೆ ನೌಕರರು ಕೆಲಸಕ್ಕೆ ಗೈರು ಹಾಜರಾಗಿದ್ದರು. ಹೀಗಾಗಿ ಬೆಂಗಳೂರಿನ ಕೆಲವು ಡಿಪೋ, ಬಸ್ ನಿಲ್ದಾಣಗಳಲ್ಲಿ ಬಿಎಂಟಿಸಿ ಬಸ್ ಗಳಿಲ್ಲದೆ ಜನರು ಪರದಾಡುತ್ತಿದ್ದರು. ಈ ಬಾರಿ ಏ.7ರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮೊದಲು ಮುಷ್ಕರ ಪೂರ್ವ ಪ್ರತಿಭಟನಾ ಸಪ್ತಾಹದಲ್ಲಿ ಸಾರಿಗೆ ನೌಕರರು ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಣೆ, ಬಚ್ಚಿ-ಬೋಂಡಾ ತಯಾರಿಸಿ ಮಾರಾಟ, ಮಾನವ ಸರಪಳಿ ನಿರ್ಮಿಸಿ ಭಿತ್ತಿಪತ್ರ ಪ್ರದರ್ಶನ ಹಾಗೂ ಕರಪತ್ರ ಹಂಚಿಕೆ ಚಳವಳಿ ನಡೆಸಿದ್ದರು.

ಪರ್ಯಾಯ ವ್ಯವಸ್ಥೆ ಕಲ್ಪಿಸಿದ ರಾಜ್ಯ ಸರ್ಕಾರ

ಬುಧವಾರದಿಂದ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರದ ಬಿಸಿ ಸಾಮಾನ್ಯ ಬಸ್ ಪ್ರಯಾಣಿಕರಿಗೆ ಅಷ್ಟಾಗಿ ಬಾಧಿಸದಂತೆ ನಿಯಂತ್ರಿಸಲು ಸರ್ಕಾರ ಪರ್ಯಾಯ ವ್ಯವಸ್ಥೆಗೆ ಮುಂದಾಗಿದೆ. ರಾಜ್ಯದಲ್ಲಿ 7 ಸಾವಿರ ಖಾಸಗಿ ಬಸ್ ಹಾಗೂ 2 ಸಾವಿರ ಸ್ಕೂಲ್ ಬಸ್ ಗಳನ್ನು ಈ ಅವಧಿಯಲ್ಲಿ ಪರ್ಮಿಟ್ ಇಲ್ಲದಿದ್ದರೂ ಸಾರ್ವಜನಿಕರ ಸಂಚಾರಕ್ಕೆ ಅವಕಾಶ ಕಲ್ಪಿಸಿದೆ. ಟ್ಯಾಕ್ಸಿ, ಕ್ಯಾಬ್ ಸಂಘಟನೆಗಳೊಂದಿಗೆ ಈ ಸಂಬಂಧ ಮಾತುಕತೆ ನಡೆಸಿದೆ. ಹೆಚ್ಚುವರಿ ರೈಲು ಸಂಚಾರಕ್ಕೂ ರೈಲ್ವೆ ಇಲಾಖೆಗೆ ಮನವಿ ಮಾಡಿದೆ.

5 ನಿಮಿಷಕ್ಕೊಂದು ಮೆಟ್ರೊ ರೈಲು

ಬೆಂಗಳೂರಿನ ನೇರಳೆ ಹಾಗೂ ಹಸಿರು ಮಾರ್ಗದಲ್ಲಿ ಪ್ರತಿದಿನ ಒಟ್ಟು 248 ಟ್ರಿಪ್ ರೈಲು ಸಂಚಾರವಿರುತ್ತದೆ. ಬೆಳಗ್ಗೆ ಹಾಗೂ ಸಂಜೆ ಪ್ರತಿ 5 ನಿಮಿಷಕ್ಕೊಂದು ರೈಲು ಸಂಚಾರ ಮಾಡುತ್ತಿತ್ತು. ಮಧ್ಯಾಹ್ನದ ವೇಳೆ 10 ನಿಮಿಷಕ್ಕೊಂದು ರೈಲು ಸಂಚಾರ ಸೇವೆ ನೀಡುತ್ತಿತ್ತು. ಆದ್ರೆ ಬಸ್ ಮುಷ್ಕರದ ಹಿನ್ನಲೆಯಲ್ಲಿ ಬೆಳಗ್ಗೆ 7 ರಿಂದ ರಾತ್ರಿ 9ರ ತನಕ 5 ನಿಮಿಷಕ್ಕೊಂದು ಮೆಟ್ರೊ ರೈಲು ಸಂಚಾರ ಲಭ್ಯವಿರಲಿದೆ ಎಂದು ಹೇಳಿದ್ದಾರೆ ಮೆಟ್ರೊ ನಿಗಮದ ಆಪರೇಷನ್ ವಿಭಾಗದ ಕಾರ್ಯಕಾರಿ ನಿರ್ದೇಶಕ ಶಂಕರ್.          

ಸಾರಿಗೆ ನಿಗಮಗಳ ವಸ್ತುಸ್ಥಿತಿ ತೆರೆದಿಟ್ಟಿದ್ದ ಸಾರಿಗೆ ಸಚಿವ

ಸೋಮವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಸಾರಿಗೆ ಸಚಿವ ಲಕ್ಷಣ ಸವದಿ, ‘ಮೇ.4ರ ನಂತರ ವೇತನ ಹೆಚ್ಚಳ ಮಾಡುತ್ತೇವೆ ಎಂಬ ಬಗ್ಗೆ ಸ್ಪಷ್ಟ ಭರವಸೆ ನೀಡುತ್ತೇನೆ. ಅಲ್ಲಿಯ ತನಕ ಮುಷ್ಕರ ಕೈಬಿಡುವಂತೆ ಮನವಿ ಮಾಡಿದ್ದರು. ಕರೋನಾ ಸೋಂಕು ಬಂದು ಒಂದು ವರ್ಷ ಕಳೆದಿದ್ದು, 4 ಸಾರಿಗೆ ನಿಗಮಗಳಲ್ಲಿ ಪ್ರತಿದಿನ ಸಂಚರಿಸುತ್ತಿದ್ದ ಪ್ರಯಾಣಿಕರ ಸಂಖ್ಯೆ 1 ಕೋಟಿಯಿಂದ 65 ಲಕ್ಷಕ್ಕೆ ಇಳಿದಿದೆ. ಬರುವ ಆದಾಯ ನಿಗಮಗಳ ಇಂಧನ ಹಾಗೂ ವೇತನ ನಿರ್ವಹಣೆಗೆ ಸಾಲುತ್ತಿಲ್ಲ. ನಮ್ಮಲ್ಲಿ 1.35 ಲಕ್ಷ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಕರೋನಾ ಸಂದರ್ಭದಲ್ಲಿ ಬರೋಬ್ಬರಿ 3,200 ಕೋಟಿ ರೂ. ನಷ್ಠ ಅನುಭವಿಸಿದೆ. ಆದರೂ ಯಾವ ಸಿಬ್ಬಂದಿ ವೇತನ ಕಡಿತ ಮಾಡಿಲ್ಲ’ ಎಂದು ಹೇಳಿದ್ದರು.

ಒಟ್ಟಾರೆ ಸಾರಿಗೆ ನಿಗಮದ ನೌಕರರ ಅನಿರ್ಧಿಷ್ಟಾವಧಿ ಮುಷ್ಕರದ ಪರಿಣಾಮ ಎಲ್ಲಿಗೆ ಹೋಗಿ ಮುಟ್ಟುವುದು ಎಂದು ಕಾದು ನೋಡಬೇಕಿದೆ.

WhatsApp Join our WhatsApp Channel
Previous Post

ಶಿವರಾಮ ಕಾರಂತ ಲೇಔಟ್ ನಿರ್ಮಾಣ ಖಚಿತ

Next Post

BUS STRIKE | OPEN LETTER | ರಾಜ್ಯ ಸರ್ಕಾರ ಬಸ್ ಪ್ರಯಾಣಿಕರು – ಸಾರಿಗೆ ಸಂಸ್ಥೆಗಳನ್ನು ಕಡೆಗಣಿಸಿವೆ

Next Post

BUS STRIKE | OPEN LETTER | ರಾಜ್ಯ ಸರ್ಕಾರ ಬಸ್ ಪ್ರಯಾಣಿಕರು - ಸಾರಿಗೆ ಸಂಸ್ಥೆಗಳನ್ನು ಕಡೆಗಣಿಸಿವೆ

ಟೊಕಿಯೋ -2020 ಒಲಂಪಿಕ್ಸ್ ಗೆ ಅರ್ಹತೆ ಪಡೆದ ಭಾರತೀಯ ಯೋಧ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group