Wednesday, August 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

ಸಾರ್ವಜನಿಕ ವಾಹನಗಳ ಪ್ರವೇಶ ನಿರ್ಬಂಧಿಸುವಂತೆ ಬಿಯು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ತೀವ್ರ ಆಗ್ರಹ

by Bengaluru Wire Desk
August 5, 2026
in Bengaluru Focus
Reading Time: 1 min read
0

ಬೆಂಗಳೂರು, ಆ.05 www.bengaluruwire.com: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ (Jnanabharathi Campus) ಇತ್ತೀಚೆಗೆ ನಡೆದಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಮಾನಸ (23) ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ (ಆಗಸ್ಟ್ 5) ದುರಂತ ಅಂತ್ಯ ಕಂಡಿದ್ದಾರೆ.

​ದೃಶ್ಯಕಲಾ ವಿಭಾಗದಲ್ಲಿ ಪ್ರಥಮ ವರ್ಷದ ವ್ಯಾಸಂಗ ಮಾಡುತ್ತಿದ್ದ ಮಾನಸ ಅವರ ಸಾವಿನಿಂದಾಗಿ ಕ್ಯಾಂಪಸ್‌ನಲ್ಲಿ ಶೋಕ ಮಡುಗಟ್ಟಿದ್ದು, ಸಾರ್ವಜನಿಕ ವಾಹನಗಳ ಅನಿಯಂತ್ರಿತ ಸಂಚಾರದ ವಿರುದ್ಧ ವಿದ್ಯಾರ್ಥಿ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ರಸ್ತೆ ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿನಿ ಮಾನಸ.

​ಘಟನೆಯ ಹಿನ್ನೆಲೆ:

ಕಳೆದ ಜುಲೈ 30ರಂದು ವಿಶ್ವವಿದ್ಯಾಲಯದ ಆಡಳಿತ ಕಚೇರಿಯಿಂದ ನಾಗರಬಾವಿ ವೃತ್ತದ ಕಡೆಗೆ ತೆರಳುತ್ತಿದ್ದ ಆಟೋವೊಂದು, ಗಾಂಧಿ ಮಾರ್ಗ ರಸ್ತೆಯನ್ನು ದಾಟುತ್ತಿದ್ದ ವೇಳೆ ವಿದ್ಯಾರ್ಥಿನಿ ಮಾನಸ ಅವರಿಗೆ ವೇಗವಾಗಿ ಬಂದು ಡಿಕ್ಕಿ ಹೊಡೆದಿತ್ತು. ಪರಿಣಾಮ ತಲೆ ಹಾಗೂ ದೇಹದ ಇತರ ಭಾಗಗಳಿಗೆ ಗಂಭೀರ ಸ್ವರೂಪದ ಪೆಟ್ಟಾಗಿತ್ತು.

​ಅಪಘಾತದ ತಕ್ಷಣವೇ ಅವರನ್ನು ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿತ್ತು. ಆ ಬಳಿಕ ಮೇಲ್ದರ್ಜೆಯ ಚಿಕಿತ್ಸೆಗಾಗಿ ಪೋಷಕರು ಮಾನಸ ಅವರನ್ನು ಮೈಸೂರಿನ ಆಸ್ಪತ್ರೆಗೆ ಸ್ಥಳಾಂತರಿಸಿದ್ದರು. ಆದರೆ, ವೈದ್ಯರ ಸತತ ಪ್ರಯತ್ನದ ಹೊರತಾಗಿಯೂ ಇಂದು ಮಧ್ಯಾಹ್ನ ಅವರು ಕೊನೆಯುಸಿರೆಳೆದಿದ್ದಾರೆ.

​ಸಾರ್ವಜನಿಕ ವಾಹನಗಳ ಸಂಚಾರಕ್ಕೆ ಕಡಿವಾಣ ಹಾಕಲು ಒತ್ತಾಯ:

ಈ ಕರುಣಾಜನಕ ಘಟನೆಯ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಕ್ಯಾಂಪಸ್ ಒಳಗೆ ಸಾರ್ವಜನಿಕ ವಾಹನಗಳ ಓಡಾಟವನ್ನು ಸಂಪೂರ್ಣವಾಗಿ ನಿಯಂತ್ರಿಸುವಂತೆ ಬಿಗಿಪಟ್ಟು ಹಿಡಿದಿದ್ದಾರೆ.

ವಿವಿ ಸಿಂಡಿಕೇಟ್ ಸಭೆಯಲ್ಲಿ ಚರ್ಚಿಸಿ ಶೀಘ್ರ ಸೂಕ್ತ ಕ್ರಮ:

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿ. ಶಿವರಾಜು ಅವರು, “ಗಾಂಧಿಮಾರ್ಗ ರಸ್ತೆಯಲ್ಲಿ ಸಾರ್ವಜನಿಕ ಸಂಚಾರಕ್ಕೆ ನಿರ್ಬಂಧ ವಿಧಿಸುವ ಕುರಿತು ರಾಜ್ಯ ಸರ್ಕಾರದ ಮಟ್ಟದಲ್ಲಿ ಹಾಗೂ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ಚರ್ಚಿಸಿ ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮೃತ ವಿದ್ಯಾರ್ಥಿನಿಯ ಕುಟುಂಬಕ್ಕೆ ವಿಶ್ವವಿದ್ಯಾಲಯದ ವತಿಯಿಂದ ಪರಿಹಾರ ನೀಡಲಾಗುವುದು. ಅಲ್ಲದೆ, ಇಂತಹ ದುರ್ಘಟನೆಗಳಿಂದ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದ ತಕ್ಷಣದಿಂದಲೇ ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ವಿದ್ಯಾರ್ಥಿಗಳಿಗೆ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲಾಗುವುದು,” ಎಂದು ಭರವಸೆ ನೀಡಿದರು.

​ಬೆಂಗಳೂರು ವಿಶ್ವವಿದ್ಯಾಲಯವು 47 ವಿವಿಧ ವಿಭಾಗಗಳನ್ನು ಹೊಂದಿದ್ದು, 6,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ 1,000ಕ್ಕೂ ಅಧಿಕ ಬೋಧಕ/ಬೋಧಕೇತರ ಸಿಬ್ಬಂದಿ ಇಲ್ಲಿ ನಿತ್ಯ ಕಾರ್ಯನಿರ್ವಹಿಸುತ್ತಿದ್ದಾರೆ. ಆಡಳಿತ ಕಚೇರಿಯಿಂದ ನಾಗರಬಾವಿ ವೃತ್ತದವರೆಗೆ ಸಂಪರ್ಕಿಸುವ ಗಾಂಧಿ ಮಾರ್ಗ ರಸ್ತೆಯು ಕಿರಿದಾಗಿದ್ದರೂ, ಸಾರ್ವಜನಿಕ ವಾಹನಗಳ ದಟ್ಟಣೆ ಮಿತಿಮೀರಿದೆ. ಇದರಿಂದಾಗಿ ವಿದ್ಯಾರ್ಥಿಗಳು ರಸ್ತೆ ದಾಟಲು ಹಾಗೂ ದೈನಂದಿನ ಶೈಕ್ಷಣಿಕ ಚಟುವಟಿಕೆಗಳಿಗೆ ತೆರಳಲು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.

​ಮರುಕಳಿಸುತ್ತಿರುವ ದುರಂತಗಳು:

ಜ್ಞಾನಭಾರತಿ ಆವರಣದಲ್ಲಿ ವಿದ್ಯಾರ್ಥಿಗಳು ಬಲಿಯಾಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ 2022ರಲ್ಲೂ ಗಣಿತಶಾಸ್ತ್ರ ವಿಭಾಗದ ವಿದ್ಯಾರ್ಥಿನಿಯೊಬ್ಬರು ಬಿಎಂಟಿಸಿ ಬಸ್‌ಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದರು. ಇಂತಹ ಭೀಕರ ಘಟನೆಗಳು ಮರುಕಳಿಸುತ್ತಲೇ ಇದ್ದರೂ ಆಡಳಿತ ಮಂಡಳಿ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ವಿದ್ಯಾರ್ಥಿಗಳು, ವಿವಿ ಆವರಣದಲ್ಲಿ ಸಾರ್ವಜನಿಕ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿ, ಸ್ಪೀಡ್ ಬ್ರೇಕರ್ ಹಾಗೂ ಕಟ್ಟುನಿಟ್ಟಿನ ಭದ್ರತಾ ನಿಯಂತ್ರಣ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

WhatsApp Join our WhatsApp Channel
Previous Post

ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

Next Post

GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

Next Post

GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

Please login to join discussion

Like Us on Facebook

Follow Us on Twitter

Recent News

GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

August 5, 2026

ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

August 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

August 5, 2026

ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

August 5, 2026
ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

August 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group