ಬೆಂಗಳೂರು, ಆ.18 www.bengaluruwire.com: ರಾಜ್ಯದ ಯುವಜನತೆಯಲ್ಲಿ ವೃತ್ತಿಪರ ನೈಪುಣ್ಯತೆ ಮತ್ತು ಸ್ವಾವಲಂಬನೆ ಉತ್ತೇಜಿಸುವ ಉದ್ದೇಶದಿಂದ ಆಯೋಜಿಸಲಾದ ‘ಕೌಶಲ್ಯ ಕರ್ನಾಟಕ’ ವಿಶ್ವ ಯುವ ಕೌಶಲ್ಯ ದಿನಾಚರಣೆ – 2026 ಕಾರ್ಯಕ್ರಮಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅಧಿಕೃತ ಚಾಲನೆ ದೊರೆಯಿತು.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ನಡೆದ ಸಮಾರಂಭವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, ಬದಲಾಗುತ್ತಿರುವ ಆಧುನಿಕ ಕೈಗಾರಿಕಾ ಕ್ಷೇತ್ರಕ್ಕೆ ತಕ್ಕಂತೆ ಯುವಜನರಿಗೆ ಸೂಕ್ತ ಕೌಶಲ್ಯ ತರಬೇತಿ ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ತಿಳಿಸಿದರು.
ರಾಜ್ಯದ ಯುವ ಸಮುದಾಯಕ್ಕೆ ನವೀನ ತಂತ್ರಜ್ಞಾನ ಹಾಗೂ ಪ್ರಾಯೋಗಿಕ ಜ್ಞಾನ ಒದಗಿಸಿ, ಜಾಗತಿಕ ಮಟ್ಟದ ಉದ್ಯೋಗಾವಕಾಶಗಳನ್ನು ತೆರೆದಿಡುವ ನಿಟ್ಟಿನಲ್ಲಿ ಸರ್ಕಾರ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತರುತ್ತಿದೆ ಎಂದು ಸಚಿವರು ಈ ಸಂದರ್ಭದಲ್ಲಿ ವಿವರಿಸಿದರು.

ಈ ಕಾರ್ಯಕ್ರಮದಲ್ಲಿ, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಸಕ್ಕರೆ ಸಚಿವರಾದ ಶಂಕರಪ್ಪ ಲಮಾಣಿ, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಹೆಚ್.ಎಂ. ರೇವಣ್ಣ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಿವಕಾಂತಮ್ಮ, ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಇ.ವಿ. ರಮಣರೆಡ್ಡಿ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸುಬೋಧ ಯಾದವ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

















