Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಆಗಸ್ಟ್ 5 ರ ನಂತರ ಬಿಡಿಎಗೆ ಸೇರಿದ ಆಸ್ತಿಗಳ ಒತ್ತುವರಿ ತೆರವಿಗೆ ಚಾಲನೆ : ಎಸ್.ಆರ್.ವಿಶ್ವನಾಥ್

ಬಿಡಿಎ ಲ್ಯಾಂಡ್ ಆಡಿಟ್ ನಿಂದ ಪ್ರಾಧಿಕಾರದ ಆಸ್ತಿ ವಿವರ ಪತ್ತೆ | ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ದೂರಿನ ಮೇರೆಗೆ ಲ್ಯಾಂಡ್ ಆಡಿಟ್ ಗೆ ಆದೇಶ ನೀಡಿದ್ದ ಲೋಕಾಯುಕ್ತ | ತಪ್ಪಿತಸ್ಥರ ವಿರುದ್ದ ತ್ವರಿತ ಕಾನೂನು ಕ್ರಮಕ್ಕೆ ಆಗ್ರಹಿಸಿರುವ ಸಾಯಿದತ್ತ

by Bengaluru Wire Desk
July 18, 2021
in Bengaluru Focus
Reading Time: 1 min read
0
ಬೆಂಗಳೂರಿನ ಸಾಂದರ್ಭಿಕ ಚಿತ್ರ

ಬೆಂಗಳೂರಿನ ಸಾಂದರ್ಭಿಕ ಚಿತ್ರ

ಬೆಂಗಳೂರು ( www.bengaluruwire.com ) : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಒತ್ತುವರಿಯಾದ ಜಾಗಗಳನ್ನು ಮರು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಆಗಸ್ಟ್ 5 ನೇ ತಾರೀಖಿನ ನಂತರ ಆರಂಭಿಸಲಾಗುವುದು ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ.

ಭೂಮಿ ಲೆಕ್ಕಪರಿಶೋಧನೆ ಪ್ರಗತಿಯಲ್ಲಿದ್ದು, ಬಿಡಿಎಗೆ ಸೇರಿದ ಆಸ್ತಿಯನ್ನು ಗುರುತಿಸಲಾಗುತ್ತಿದೆ. ಇದುವರೆಗೆ 11 ಸಾವಿರ ಎಕರೆಯಷ್ಟು ಪ್ರದೇಶ ಬಿಡಿಎಗೆ ಸೇರಿದ್ದೆಂದು ವರದಿಯಲ್ಲಿ ತಿಳಿಸಲಾಗಿದೆ. ಈ ಪೈಕಿ ಹಲವಾರು ಪ್ರಕರಣಗಳು ಭೂಸ್ವಾಧೀನ ಪ್ರಕ್ರಿಯೆಯ ವಿವಿಧ ಹಂತದಲ್ಲಿದ್ದರೆ, ಇನ್ನೂ ಕೆಲವು ಪ್ರಕರಣಗಳ ವ್ಯಾಜ್ಯವು ವಿವಿಧ ನ್ಯಾಯಾಲಯಗಳಲ್ಲಿದೆ ಎಂದು ಅವರು ಹೇಳಿದರು.

ಕಳೆದ ಹಲವಾರು ತಿಂಗಳಿಂದ ಪ್ರಾಧಿಕಾರಕ್ಕೆ ಸೇರಿದ ಆಸ್ತಿಯ ಪೈಕಿ 400 ರಿಂದ 500 ಎಕರೆಯಷ್ಟು ಪ್ರದೇಶಗಳನ್ನು ವಿವಿಧ ಬಡಾವಣೆಗಳಲ್ಲಿ ಗುರುತಿಸಿದ್ದೇವೆ. ಈ ಭೂಮಿಯ ಬಗ್ಗೆ ನ್ಯಾಯಾಲಯಗಳು ಬಿಡಿಎ ಪರ ತೀರ್ಪು ನೀಡಿದ್ದು, ತೆರವುಗೊಳಿಸಲು ಹಸಿರು ನಿಶಾನೆ ನೀಡಿವೆ.

ಆದರೆ, ಕೋವಿಡ್ ಹಿನ್ನೆಲೆಯಲ್ಲಿ ಯಾವುದೇ ರೀತಿ ಅಕ್ರಮವಾಗಿ ನಿರ್ಮಾಣವಾಗಿರುವ ಕಟ್ಟಡಗಳನ್ನು ಜುಲೈ 5 ರವರೆಗೆ ನೆಲಸಮ ಮಾಡಬಾರದು ಎಂದು ನ್ಯಾಯಾಲಯ ಈ ಹಿಂದೆ ಆದೇಶ ನೀಡಿತ್ತು. ಇದೀಗ ಮತ್ತೆ ಈ ಅವಧಿಯನ್ನು ಆಗಸ್ಟ್ 5 ರವರೆಗೆ ವಿಸ್ತರಣೆ ಮಾಡಿದೆ. ಈ ಗಡುವಿನ ಬಗ್ಗೆ ನ್ಯಾಯಾಲಯ ಮುಂದಿನ ಆದೇಶ ನೀಡಿದ ನಂತರ ನೆಲಸಮ ಪ್ರಕ್ರಿಯೆಯನ್ನು ಆರಂಭ ಮಾಡಲಾಗುತ್ತದೆ ಎಂದು ತಿಳಿಸಿದರು.

ಬಿಡಿಎ ಭೂಸ್ವಾಧೀನ ಮಾಡಿಕೊಂಡಿರುವ ಜಾಗದಲ್ಲಿ ಸುಮಾರು 75 ಸಾವಿರಕ್ಕೂ ಅಧಿಕ ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ, ಈ ಮನೆಗಳನ್ನು ನೆಲಸಮ ಮಾಡುವುದು ಕಷ್ಟಸಾಧ್ಯವಾದ ಕೆಲಸವಾಗಿದೆ.

ಈ ಹಿನ್ನೆಲೆಯಲ್ಲಿ 38ಡಿ ಅಡಿಯಲ್ಲಿ ಈ ಮನೆಗಳನ್ನು ಮಾರ್ಗದರ್ಶಿ ದರದಲ್ಲಿ ಸ್ವಲ್ಪ ಭಾಗವನ್ನು ಪಾವತಿಸಿಕೊಂಡು ಮನೆ ಕಟ್ಟಿಕೊಂಡಿರುವವರಿಗೆ ಆ ಜಾಗವನ್ನು ನೋಂದಣಿ ಮಾಡಿಕೊಡಲಾಗುತ್ತದೆ. ಸಾರ್ವಜನಿಕರಿಗೆ ಹೊರೆ ಆಗುತ್ತದೆ ಎಂಬ ಉದ್ದೇಶದಿಂದ ಶುಲ್ಕವನ್ನು ಕಡಿಮೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಅಲ್ಲಿಂದ ಹಸಿರು ನಿಶಾನೆ ಸಿಕ್ಕ ಮೇಲೆ, ಸಕ್ರಮ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ ಎಂದು ವಿಶ್ವನಾಥ್ ತಿಳಿಸಿದರು.

ಲ್ಯಾಂಡ್ ಆಡಿಟಿಂಗ್ ನಲ್ಲಿ ಗುರುತಿಸಲಾಗಿರುವ ಜಾಗದ ಬಗ್ಗೆ 4.1, 5.1 ಮತ್ತು 6.1 ಅಧಿಸೂಚನೆಗಳು ವಿವಿಧ ಹಂತದಲ್ಲಿವೆ. ನ್ಯಾಯಾಲಯಗಳಲ್ಲಿ ಹಲವು ಪ್ರಕರಣಗಳ ವಿಚಾರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಭೂಮಾಲೀಕರಿಗೆ ಒಂದು ಬಾರಿಯ ಪರಿಹಾರದ ರೂಪದ ಯೋಜನೆಯಡಿ ಪರಿಹಾರ ನೀಡಲು ಅವಕಾಶ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಸುದ್ದಿಗೋಷ್ಠಿ :

ಬಿಡಿಎಗೆ ಸೇರಿದ 50 ಸಾವಿರ ಕೋಟಿ ಮೌಲ್ಯದ 20,836 ಎಕರೆ ಜಮೀನನ್ನ ಖಾಸಗಿಯವರು ಒತ್ತುವರಿ ಮಾಡಿಕೊಂಡಿದ್ದು ಭೂ ಲೆಕ್ಕ ಪರಿಶೋಧನೆ ವರದಿಯಿಂದ ಕಂಡು ಬಂದಿದೆ. ಈ ಸಂಬಂಧ ಬಿಡಿಎ ತನ್ನ ಆಸ್ತಿಯನ್ನು ವಶಪಡಿಸಿಕೊಳ್ಳಲು ತಕ್ಷಣ ಕ್ರಮ ಕೈಗೊಳ್ಳಬೇಕಿದೆ ಎಂದು ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಆಗ್ರಹಿಸಿದ್ದಾರೆ.

ಬಿಡಿಎ, ಲೋಕಾಯುಕ್ತಕ್ಕೆ ಸಲ್ಲಿಸಿದ ಆಡಿಟ್ ಕುರಿತ ವರದಿಯ ಚಿತ್ರ

ನಗರದಲ್ಲಿ ಶನಿವಾರ ಖಾಸಗಿ ಹೋಟೆಲ್ ನಲ್ಲಿ ಕರೆಯಲಾಗಿದ್ದ ಹೋಟೆಲ್ ನಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಸ್ಥಳಿಯ ಅಧಿಕಾರಿಗಳಿಂದ ಬಿಡಿಎ ಆಸ್ತಿ ಖಾಸಗಿಯವರ ಪಾಲಾಗಿದೆ. ತಕ್ಷಣ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕಿದೆ ಎಂದು ಬಿಡಿಎ ಅಧ್ಯಕ್ಷರಿಗೆ ಸಾಯಿದತ್ತ ಮನವಿ ಮಾಡಿದ್ದಾರೆ.

ಬಿಡಿಎ ಈತನಕ 64 ಲೇಔಟ್ ಗಳನ್ನ ರಚಿಸಿದೆ. ಆದರೆ ಸಾವಿರಾರು ಎಕರೆ ಆಸ್ತಿ ಬಿಡಿಎ ಕೈತಪ್ಪಿ ಹೋಗಿದ್ದು, ತನ್ನ ಆಸ್ತಿಯ ನಿಖರ ಮಾಹಿತಿ ಇರಲಿಲ್ಲ. ಬಿಡಿಎಗೆ ಸೇರಿದ ಸಾವಿರಾರು ಕೋಟಿ ರೂ. ಆಸ್ತಿ ಖಾಸಗಿ ವ್ಯಕ್ತಿಗಳ ಪಾಲಾಗಿತ್ತು. ಹಾಗಾಗಿ ಬಿಡಿಎ ತನ್ನ ಜಾಗವನ್ನ ಗುರುತಿಸಿಕೊಳ್ಳಲು ವಿಫಲವಾಗಿತ್ತು. ಈ ಸಂಬಂಧ ತಾವು ಬಿಡಿಎ ಲ್ಯಾಂಡ್ ಅಡಿಟ್ ಮಾಡುವಂತೆ ಲೋಕಯುಕ್ತಕ್ಕೆ ದೂರು ನೀಡಿದ್ದೆ.

ಈ ಹಿನ್ನಲೆ ಅಂದಿನ ಬಿಡಿಎ ಆಯುಕ್ತ ರಾಕೇಶ್ ಸಿಂಗ್, ಲ್ಯಾಂಡ್ ಆಡಿಟ್ ಮಾಡಲು ಆದೇಶ ಹೊರಡಿಸಿದ್ದರು. ಇದೀಗ. ಆಡಿಟ್ ಮುಗಿದ ಬಳಿಕ ಬಿಡಿಎನಿಂದ ಕೈತಪ್ಪಿ ಹೋಗಿದ್ದ ಸಂಪೂರ್ಣ ಆಸ್ತಿಯ ವಿವರವನ್ನು ಬಿಡಿಎ ಅಧಿಕಾರಿಗಳು ಲೋಕಯುಕ್ತಕ್ಕೆ ಸಲ್ಲಿಸಿದ್ದಾರೆ ಎಂದು ಸಾಯಿದತ್ತ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಜು.6 ರಿಂದೇ ಈ ಬಗ್ಗೆ ವಿಸ್ತ್ರತ ವರದಿ ಮಾಡಿದ್ದ ಬೆಂಗಳೂರು ವೈರ್ :

ಬಿಡಿಎ 64 ಲೇಔಟ್ ಗಳ ಬಗ್ಗೆ ಭೂ ಲೆಕ್ಕ ಪರಿಶೋಧನಾ ಸಮಗ್ರ ವರದಿ ಬಗ್ಗೆ “ಬೆಂಗಳೂರು ವೈರ್” ಜು.6ರಂದೇ “ಬಿಡಿಎ ಬಡಾವಣೆಗಳಲ್ಲಿ 18,500 ಎಕರೆ ಒತ್ತುವರಿ…! : ಲ್ಯಾಂಡ್ ಆಡಿಟ್ ರಿಪೋರ್ಟ್ ನಿಂದ ಬಹಿರಂಗ” ಎಂಬ ತಲೆ ಬರಹದಡಿ ಅಧಿಕೃತ ಮಾಹಿತಿ ಕಲೆಹಾಕಿ ಸೂಪರ್ ಎಕ್ಸ್ ಕ್ಲೂಸಿವ್ ವರದಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

WhatsApp Join our WhatsApp Channel
Previous Post

ಎಸಿಬಿ ಅಧಿಕಾರಿಗಳಿಂದ ರಾಜ್ಯದ 40 ಕಡೆ 9 ಭ್ರಷ್ಟ ಅಧಿಕಾರಿಗಳ ಮನೆ – ಕಚೇರಿ ಮೇಲೆ ದಾಳಿ ; ಅಪಾರ ಪ್ರಮಾಣದ ಚರ- ಸ್ಥಿರಾಸ್ಥಿ ಪತ್ತೆ

Next Post

Bellandur – Varthur Lake Restoration | ಕುಂಟುತ್ತಾ ಸಾಗುತ್ತಿದೆ ಬೆಳ್ಳಂದೂರು- ವರ್ತೂರು ಕೆರೆ ಹೂಳೆತ್ತುವ ಕಾಮಗಾರಿ : ಏನು ಮಾಡುತ್ತಿದೆ ಬಿಡಿಎ ?

Next Post

Bellandur – Varthur Lake Restoration | ಕುಂಟುತ್ತಾ ಸಾಗುತ್ತಿದೆ ಬೆಳ್ಳಂದೂರು- ವರ್ತೂರು ಕೆರೆ ಹೂಳೆತ್ತುವ ಕಾಮಗಾರಿ : ಏನು ಮಾಡುತ್ತಿದೆ ಬಿಡಿಎ ?

Tokyo Olympics 2020 | ಟೋಕಿಯೋ ಒಲಂಪಿಕ್ಸ್ ಗೆ ಭಾರತದ ಸ್ಪರ್ಧಾಳು ಗಳು ಸಿದ್ಧ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group