Saturday, May 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

  • Bengaluru Focus

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result

Home Public interest

Karnataka Flood | ರಾಜ್ಯದ ಪ್ರವಾಹ ಪರಿಸ್ಥಿತಿ ವಿಷಯದಲ್ಲಿ ಸಂವೇದನಾ ಶೀಲತೆಯಿಂದ ಕಾರ್ಯನಿರ್ವಹಿಸಿ : ಮುಖ್ಯಮಂತ್ರಿಗಳಿಂದ ಅಧಿಕಾರಿಗಳಿಗೆ ಸೂಚನೆ

ಕಳೆದ ವರ್ಷದ ಪ್ರವಾಹ ಸಂದರ್ಭದಲ್ಲಿ ಮನೆಹಾನಿಯ ಬಾಕಿ ಪರಿಹಾರ ಬಿಡುಗಡೆಗೆ ತುರ್ತು ಕ್ರಮ ಕೈಗೊಳ್ಳಬೇಕು - ಬಿಎಸ್ವೈ ನಿಂದ ಜಿಲ್ಲಾಧಿಕಾರಿಗಳಿಗೆ ಫರ್ಮಾನು

by Bengaluru Wire Desk
July 25, 2021
in Public interest
Reading Time: 2 mins read
0

ಬೆಳಗಾವಿ ( www.bengaluruwire.com ) : ರಾಜ್ಯದಲ್ಲಿ ಕೋವಿಡ್ ಸಂಕಷ್ಟದ ಮಧ್ಯೆಯೂ ಪ್ರವಾಹ ಸ್ಥಿತಿ ಉದ್ಭವಿಸಿದೆ.‌ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜಿಲ್ಲಾಡಳಿತಗಳು ಸಂವೇದನಾಶೀಲತೆಯಿಂದ ಕೆಲಸ ಮಾಡಬೇಕು. ಹಣಕಾಸು ಸೇರಿದಂತೆ ಯಾವುದೇ ತೊಂದರೆ ಇದ್ದರೂ ತಕ್ಷಣವೇ ಸಂಬಂಧಿಸಿದವರ ಗಮನಕ್ಕೆ ತಂದು ಸರಿಪಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚನೆ ನೀಡಿದರು.

ನಗರದ ಪ್ರವಾಸಿಮಂದಿರದಲ್ಲಿ ಭಾನುವಾರ (ಜು.25) ನಡೆದ ಅತಿವೃಷ್ಟಿ – ಪ್ರವಾಹ ಕುರಿತ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಳೆದ ವಾರದಿಂದ ದಾಖಲೆ ಪ್ರಮಾಣದ ಮಳೆಯಾಗಿದೆ. ರಾಜ್ಯದ ಅಧಿಕಾರಿಗಳು ಮಹಾರಾಷ್ಟ್ರದ ಜತೆ ನಿರಂತರ ಸಂಪರ್ಕದಲ್ಲಿದ್ದು, ಪ್ರವಾಹ‌ ನಿರ್ವಹಣೆ ಕುರಿತು ನಿಗಾ ವಹಿಸಲಾಗಿದೆ.

2-3 ದಿನಗಳಲ್ಲಿ ಹರಿವು ಹೆಚ್ಚಾಗುವ ಸಾಧ್ಯತೆಯಿದೆ. ಪರಿಸ್ಥಿತಿ ನಿರ್ವಹಣೆಗೆ ಸರಕಾರದಿಂದ ಎಲ್ಲ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಇದಕ್ಕೂ ಮುನ್ನ ಬೆಳಗ್ಗೆ ಪ್ರವಾಹ ಪೀಡಿತ ಸ್ಥಳಗಳಿಗೆ ಹಿರಿಯ ಸಚಿವರು, ಶಾಸಕರು ಮತ್ತು ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.

ಪ್ರವಾಹ-ಬಾಕಿ ಪರಿಹಾರ ಬಿಡುಗಡೆಗೆ ಸೂಚನೆ:

ಕಳೆದ ವರ್ಷದ ಪ್ರವಾಹ ಸಂದರ್ಭದಲ್ಲಿ ಮನೆಹಾನಿಯ ಬಾಕಿ ಪರಿಹಾರ ಬಿಡುಗಡೆಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು.

ಬೆಳಗಾವಿ ಜಿಲ್ಲೆಯಲ್ಲಿ 113 ಗ್ರಾಮದಲ್ಲಿ ಪ್ರವಾಹ ಭೀತಿ ಎದುರಾಗಿರುವುದರಿಂದ ಜನರ ತುರ್ತು ರಕ್ಷಣೆ ಹಾಗೂ ತಾತ್ಕಾಲಿಕ ಪುನರ್ವಸತಿಗಾಗಿ 89 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ.

ಜನರ ಕಷ್ಟಗಳನ್ನು ಅರಿತುಕೊಂಡು ಜಿಲ್ಲಾಡಳಿತ ಸಂವೇದನಾಶೀಲತೆಯಿಂದ ಕೆಲಸ ಮಾಡಬೇಕು. ಪರಿಹಾರ ಕಾರ್ಯದಲ್ಲಿ ತೊಡಕು ಉಂಟಾದರೆ ತಕ್ಷಣವೇ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ನಿರ್ದೇಶನ ನೀಡಿದರು.

  • ಪ್ರವಾಹದಿಂದ ತೊಂದರೆಗೆ ಒಳಗಾದ ನಾಗರೀಕರ ಬವಣೆ ಆಲಿಸಿದ ಬಿ.ಎಸ್.ಯಡಿಯೂರಪ್ಪ

ಎನ್.ಡಿ.ಆರ್.ಎಫ್. ಅನುದಾನ ಹೆಚ್ಚಳಕ್ಕೆ ಮನವಿ:

ಸಭೆಯಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ ಅವರು, ಪ್ರವಾಹ ಸಂದರ್ಭದಲ್ಲಿ ತುರ್ತು ಔಷಧಿ ಮತ್ತಿತರ ಸಾಮಗ್ರಿಗಳನ್ನು ಎನ್.ಡಿ.ಆರ್.ಎಫ್. ಅನುದಾನದಲ್ಲಿ ಖರೀದಿಸಬೇಕು ಎಂದು ಸೂಚನೆ ನೀಡಿದರು.

ಎನ್.ಡಿ.ಆರ್.ಎಫ್. ಹೊರತುಪಡಿಸಿ ಉಳಿದ ಹೆಚ್ಚಿನ ಅನುದಾನ ಅಗತ್ಯವಿದೆ ಎಂಬುದರ ಬಗ್ಗೆ ಪ್ರಸ್ತಾವ ಸಲ್ಲಿಸಬೇಕು.
ಎನ್.ಡಿ.ಆರ್.ಎಫ್. ಅನುದಾನ ಹೆಚ್ಚಿಸುವಂತೆ ಕೋರಿ ಸಂಬಂಧಿಸಿದ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.

ಜಾನುವಾರು ಹಾನಿ ಪರಿಹಾರ ವಿತರಣೆಗೆ ಸೂಚನೆ:

ಪ್ರವಾಹ ಸಂದರ್ಭದಲ್ಲಿ ಕೊಚ್ಚಿ ಹೋಗಿರುವ ಜಾನುವಾರುಗಳ ಕುರಿತು ಸ್ಥಳೀಯವಾಗಿ ಮಾಹಿತಿ ಸಂಗ್ರಹಿಸಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ನಿರ್ದೇಶನ ನೀಡಿದರು.

ಆಲಮಟ್ಟಿ ಸದ್ಯಕ್ಕೆ 72 ಟಿಎಂಸಿ ಮಾತ್ರ ಸಂಗ್ರಹವಿದೆ. ಆದಾಗ್ಯೂ ಒಳಹರಿವು ಆಧರಿಸಿ ನೀರು ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ಜಲಾಶಯಗಳಲ್ಲಿ ಕನಿಷ್ಠ ಅಗತ್ಯತೆ ಕಾಯ್ದುಕೊಂಡು ಉಳಿದ ನೀರು ಬಿಡುಗಡೆ ಮಾಡಲಾಗುತ್ತಿದೆ.

1200 ಕೋಟಿ ಹಾನಿ; ತಕ್ಷಣವೇ 170 ಕೋಟಿ ಬಿಡುಗಡೆಗೆ ಮನವಿ :

ಬೆಳಗಾವಿ ವಿಭಾಗದಲ್ಲಿ 1400 ಕಿ.ಮೀ. ರಸ್ತೆ ಹಾನಿಯಾಗಿಸೆ. 305 ಸೇತುವೆ ಹಾನಿ ಸೇರಿ ಒಟ್ಟಾರೆ 1200 ಕೋಟಿ ರೂಪಾಯಿ ಹಾನಿಯಾಗಿದ್ದು, ತಕ್ಷಣ ದುರಸ್ತಿಗೆ 170 ಕೋಟಿ ಬಿಡುಗಡೆ ಮಾಡಬೇಕು ಎಂದು ಲೋಕೋಪಯೋಗಿ ಇಲಾಖೆಯ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಕಳೆದ ಬಾರಿ ಶಾಶ್ವತ ಪುನರ್ವಸತಿ ಕಲ್ಪಿಸಿ ವಿತರಿಸಿರುವ ಮನೆಗಳ ಪೈಕಿ, ಖಾಲಿಯಿರುವ ಮನೆಗಳನ್ನು ಅಗತ್ಯತೆ ಆಧರಿಸಿ ಬೇರೆಯವರಿಗೆ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಕೃಷ್ಣಾ ನದಿಯಲ್ಲಿ ಈಗಲೂ ನೀರಿನ ಹರಿವು ಜಾಸ್ತಿ ಇರುವುದರಿಂದ ಆಲಮಟ್ಟಿ ಜಲಾಶಯದಿಂದ‌ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಜನರ ತುರ್ತು ರಕ್ಷಣೆಗೆ ಅಗತ್ಯವಾಗಿರುವ ಬೋಟ್ ಗಳನ್ನು ನದಿ ತೀರದ ಭಾಗಗಳ ಗ್ರಾಮಗಳಿಗೆ ಒದಗಿಸಬೇಕು ಎಂದು ಹೇಳಿದರು.

ಶಾಸಕರಾದ ಮಹಾಂತೇಶ ಕೌಜಲಗಿ, ಲಕ್ಷ್ಮಿ ಹೆಬ್ಬಾಳಕರ್ ಕಳೆದ ಬಾರಿ ಪ್ರವಾಹದಿಂದ ಹಾನಿಗೊಳಗಾದ ರಸ್ತೆ ದುರಸ್ಥಿ, ಮನೆ ಕಳೆದುಕೊಂಡವರಿಗೆ ಸೂರು ಕಲ್ಪಿಸುವಂತೆ ಸಭೆಯಲ್ಲಿ ಒತ್ತಾಯಿಸಿದರು.

ಸಭೆಯಲ್ಲಿ‌ ಜವಳಿ ಮತ್ತು ಕೈಮಗ್ಗ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀಮಂತ ಪಾಟೀಲ, ವಿಧಾನಸಭಾ ಉಪ ಸಭಾಪತಿ ಆನಂದ ಮಾಮನಿ, ವಿಧಾನಪರಿಷತ್ತಿನ ಸರಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ಶಾಸಕರಾದ ಮಹಾಂತೇಶ ದೊಡ್ಡಗೌಡ್ರ, ಮಹಾಂತೇಶ ಕೌಜಲಗಿ, ಅಭಯ್ ಪಾಟೀಲ, ಅನಿಲ್ ಬೆನಕೆ, ಮಹಾದೇವಪ್ಪ ಯಾದವಾಡ, ಮಹಾಂತೇಶ ಕೌಜಲಗಿ, ವಿಧಾನ ಪರಿಷತ್ ಸದಸ್ಯರಾದ ಸಾಯಬಣ್ಣ ತಳವಾರ, ಕಾಡಾ ಅಧ್ಯಕ್ಷ ವಿ.ಐ.ಪಾಟೀಲ, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ್ ಕುಮಠಳ್ಳಿ, ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ‌.ರಾಜೀವ್, ಶಾಸಕಿ ಅಂಜಲಿ ನಿಂಬಾಳ್ಕರ್, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ದುರ್ಯೋಧನ ಐಹೊಳೆ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಜಕ್ಕೂರು ಏರೊಡ್ರಮ್ ಜಾಗಕ್ಕೆ ಬಾಡಿಗೆ ನೀಡದೆ ಅನಧಿಕೃತವಾಗಿ ಒತ್ತುವರಿ ಹಿನ್ನಲೆ : ಅಗ್ನಿ ಏರೋಸ್ಪೋರ್ಟ್ಸ್ ಆಡ್ವೆಂಚರ್ ಆಕಾಡೆಮಿ ಸಂಸ್ಥೆ ಆಸ್ತಿ ಸೀಜ್ – ಕಚೇರಿಗೆ ಬೀಗಮುದ್ರೆ

Next Post

Koramangala Flood | ಬೆಂಗಳೂರು ಜಲಮಂಡಳಿ ಎಡವಟ್ಟು : ಕೋರಮಂಗಲದ ಕ್ರೀಡಾ ಗ್ರಾಮದ ಆವರಣಕ್ಕೆ ನುಗ್ಗಿದ ರಾಜಕಾಲುವೆಯ ಕೊಳಚೆ ನೀರು

Next Post

Koramangala Flood | ಬೆಂಗಳೂರು ಜಲಮಂಡಳಿ ಎಡವಟ್ಟು : ಕೋರಮಂಗಲದ ಕ್ರೀಡಾ ಗ್ರಾಮದ ಆವರಣಕ್ಕೆ ನುಗ್ಗಿದ ರಾಜಕಾಲುವೆಯ ಕೊಳಚೆ ನೀರು

CM BS Yediyurappa resign | ಮುಖ್ಯಮಂತ್ರಿ ಹುದ್ದೆಗೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ : ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರೈಸಿದ ದಿನವೇ ಹುದ್ದೆಯಿಂದ ನಿರ್ಗಮಿಸಿದ ಶಿಕಾರಿಪುರದ ನೇತಾರ

Please login to join discussion

Like Us on Facebook

Follow Us on Twitter

Recent News

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026

ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

May 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group