Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

State Health Infrastructure | ರಾಜ್ಯದ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರದಿಂದ 800 ಕೋಟಿ ರೂ. ನೆರವು ಭರವಸೆ

ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಈ ವರ್ಷ ಸುಮಾರು 18 ಸಾವಿರ ಕೋಟಿ ರೂ. ಪರಿಹಾರ ಸಾಲ ರೂಪದಲ್ಲಿ ಬಿಡುಗಡೆ | ಮೇಕೆದಾಟು ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದ ಸಿಎಂ ಬಸವರಾಜ ಬೊಮ್ಮಾಯಿ

by Bengaluru Wire Desk
July 31, 2021
in News Wire
Reading Time: 1 min read
0

ನವದೆಹಲಿ, ಜು.31 (www.bengaluruwire.com) : ಕೋವಿಡ್ 3 ನೇ ಅಲೆ ತಡೆಗಟ್ಟಲು ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ, ಐಸಿಯು, ಆಕ್ಸಿಜನ್, ಔಷಧಿ ಖರೀದಿಗೆಂದು ರಾಜ್ಯಕ್ಕೆ 800 ಕೋಟಿ ರೂ. ಮಂಜೂರು ಮಾಡಲು ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ಸಮ್ಮತಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನವದೆಹಲಿಯಲ್ಲಿ ಶನಿವಾರ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ

ರಾಜ್ಯಕ್ಕೆ 1.5 ಕೋಟಿ ಲಸಿಕೆ ಪೂರೈಸಲು ಕೋರಿಕೆ ಸಲ್ಲಿಸಿದ್ದು, 1 ಕೋಟಿ ಲಸಿಕೆ ಪೂರೈಸುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದರು. ಇದರಿಂದ ರಾಜ್ಯದಲ್ಲಿ ಪ್ರತಿದಿನ 2 ರಿಂದ 3 ಲಕ್ಷ ಲಸಿಕೆ ಒದಗಿಸಲು ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಕೋವಿಡ್ 3 ನೇ ಅಲೆ ನಿಯಂತ್ರಣ, ಲಸಿಕೆ ಅಭಿಯಾನ ಹಾಗೂ ನೆರೆರಾಜ್ಯವಾದ ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ನಿಂದಾಗಿ ರಾಜ್ಯದ ಸರಹದ್ದು ಪ್ರವೇಶ ನಿಯಂತ್ರಿಸುವ ಕುರಿತು ಮಾರ್ಗಸೂಚಿ ಸದ್ಯದಲ್ಲಿಯೇ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಸಚಿವರು ತಿಳಿಸಿರುವುದಾಗಿ ಮುಖ್ಯಮಂತ್ರಿಗಳು ವಿವರಿಸಿದರು.

ಹಣಕಾಸು ಸಚಿವೆ ಭೇಟಿ ಮಾಡಿದ ಸಿಎಂ : ಜಿಎಸ್ ಟಿ ಪರಿಹಾರ ಬಿಡುಗಡೆಗೆ ಮನವಿ

ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಶನಿವಾರ ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಜಿಎಸ್ ಟಿ ಪರಿಹಾರ, ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಅಗತ್ಯ ಅನುದಾನ ಬಿಡುಗಡೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಳೆದ ವರ್ಷ ಕೇಂದ್ರ ಸರ್ಕಾರವು 12 ಸಾವಿರ ಕೋಟಿ ರೂ. ಜಿ.ಎಸ್.ಟಿ ಪರಿಹಾರ ನೀಡಿದ್ದು, ಇನ್ನು 11 ಸಾವಿರ ಕೋಟಿ ರೂ. ಗಳಷ್ಟು ಪರಿಹಾರ ಬಿಡುಗಡೆಯಾಗಬೇಕಿದೆ. ಈ ಪರಿಹಾರದ ಬಿಡುಗಡೆ ಮಾಡುವಂತೆ ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.

ಈ ವರ್ಷ ಸುಮಾರು 18 ಸಾವಿರ ಕೋಟಿ ಪರಿಹಾರವನ್ನು ಸಾಲ ರೂಪದಲ್ಲಿ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಕೋವಿಡ್ ಹಿನ್ನೆಲೆಯಲ್ಲಿ ಆರ್ಥಿಕ ಅಡಚಣೆ ಎದುರಾಗಿರುವುದರಿಂದ ಇದನ್ನು ಕೂಡಲೇ ಬಿಡುಗಡೆ ಮಾಡುವಂತೆ ಕೋರಿದರು.

ಮೇಕೆದಾಟು ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ :

ರಾಜ್ಯವು ಮೇಕೆದಾಟು ಯೋಜನೆ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ತಮಿಳುನಾಡಿನ ಬಿಜೆಪಿ ಮುಖಂಡ ಅಣ್ಣಾಮಲೈ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ತಿಳಿಸಿರುವ ಬಗ್ಗೆ ಮಾಧ್ಯಮದವರು ಬೊಮ್ಮಾಯಿ ಅವರ ಗಮನ ಸೆಳೆದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಯಾರು ಎಷ್ಟೇ ಉಪವಾಸ ಮಾಡಲು, ಊಟ ಮಾಡಲಿ, ರಾಜ್ಯದ ಪಾಲಿನ ನೀರನ್ನು ಬಳಸಿಕೊಂಡು ಯೋಜನೆಯನ್ನು ಮಾಡಿ ಮುಗಿಸುತ್ತೇವೆ. ಮೇಕೆದಾಟು ಯೋಜನೆ ಸಂಬಂಧ ಸಮಗ್ರ ಯೋಜನಾ ವರದಿ ಸಿದ್ದಪಡಿಸಿದ್ದು, ಯೋಜನೆಗೆ ಒಪ್ಪಿಗೆ ಪಡೆದು ನಮ್ಮ ರಾಜ್ಯಕ್ಕೆ ಲಭ್ಯವಾದ ನೀರಿನ ಪಾಲು ಬಳಸಿ ಕಾಮಗಾರಿ ನಡೆಸುತ್ತೇವೆ ಎಂದು ಹೇಳಿದರು.

WhatsApp Join our WhatsApp Channel
Previous Post

ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ – ನಾಯಕತ್ವ ವಹಿಸಿದ ದಿನವೇ ಜನತೆಗೆ ಬಂಪರ್ ಸುದ್ದಿ ಘೋಷಣೆ

Next Post

E- RUPI | ಭವಿಷ್ಯದ ಡಿಜಿಟಲ್ ಪೇಮೆಂಟ್ಸ್ ಸ್ವರೂಪದ ‘ಇ-ರುಪಿ’ ಇಂದು ಪ್ರಧಾನಿ ಮೋದಿಯಿಂದ ಬಿಡುಗಡೆ : ಇದರ ವಿಶೇಷತೆಯೇನು?

Next Post

E- RUPI | ಭವಿಷ್ಯದ ಡಿಜಿಟಲ್ ಪೇಮೆಂಟ್ಸ್ ಸ್ವರೂಪದ 'ಇ-ರುಪಿ' ಇಂದು ಪ್ರಧಾನಿ ಮೋದಿಯಿಂದ ಬಿಡುಗಡೆ : ಇದರ ವಿಶೇಷತೆಯೇನು?

ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಪೋಲೀಸರು ಖಾಸಗಿ ಕಾರ್ಯಕ್ರಮ ಆಚರಿಸುವಂತಿಲ್ಲ : ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಸುತ್ತೋಲೆ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group