Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP Officers Transfer | ಬಿಬಿಎಂಪಿಯಲ್ಲಿ ಅಧಿಕಾರಿಗಳ ಭರಪೂರ ಎತ್ತಂಗಡಿ….!!?

ಮುಖ್ಯ ಆಯುಕ್ತರು, ವಿಶೇಷ ಆಯುಕ್ತರು ಹಾಗೂ ವಲಯ ಜಂಟಿ ಆಯುಕ್ತರ ವರ್ಗಾವಣೆ ಸಾಧ್ಯತೆ | ನಗರಾಭಿವೃದ್ಧಿ ಇಲಾಖೆ ಹಾಗೂ ಆಡಳಿತ ಸುಧಾರಣೆಯಲ್ಲಿ ವರ್ಗಾವಣೆ ಪಟ್ಟಿ ಸಿದ್ದ? | ಕೋವಿಡ್ ಸೋಂಕು ಇಳಿಕೆ ಬಳಿಕ ಭಾರೀ ಬದಲಾವಣೆ?

by Bengaluru Wire Desk
September 27, 2021
in Bengaluru Focus, BW Special
Reading Time: 2 mins read
0
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com) : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಲ್ಲಿ ಮುಖ್ಯ ಆಯುಕ್ತರು ಹಾಗೂ ವಿಶೇಷ ಹಣಕಾಸು ಆಯುಕ್ತರ ಹುದ್ದೆಯೂ ಸೇರಿದಂತೆ ಅಧಿಕಾರಿಗಳ ಭರಪೂರ ವರ್ಗಾವಣೆಯಾಗುವ ಸುದ್ದಿ ಹೊರಬಿದ್ದಿದೆ.

ಕಳೆದ ವರ್ಷದ ಆರಂಭದಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡಿದ್ದು, ಈ ವರ್ಷದ ಏಪ್ರಿಲ್, ಮೇ ನಲ್ಲಿ ತೀವ್ರವಾಗಿತ್ತು. ಈ ಸಂದರ್ಭದಲ್ಲಿ ಅಧಿಕಾರಿಗಳ ಮಟ್ಟದಲ್ಲಿ ಮೇಜರ್ ಸರ್ಜರಿಯಾದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಸಾಧ್ಯತೆಯಿತ್ತು. ಹಾಗಾಗಿ ಬೆಂಗಳೂರು ಸಚಿವರು, ಶಾಸಕರು ಆಗಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಒತ್ತಡ ಹೇರಿದರೂ ಅದಿಕ್ಕೆ ಅವರು ಸೊಪ್ಪು ಹಾಕಿರಲಿಲ್ಲ.

ಆದರೆ ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎದುರು ಶಾಸಕರು ಹಾಗೂ ಸಚಿವರು ಅಧಿಕಾರಿಗಳ ಬದಲಾವಣೆಗೆ ಪಟ್ಟು ಹಿಡಿದಿದ್ದು, ಕೆಲವು ದಿನಗಳ ಒಳಗಾಗಿ ಅಧಿಕಾರಿಗಳ ವರ್ಗಾವಣೆ ಪಟ್ಟಿ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆಯಿಂದ ಪ್ರಕಟವಾಗಲಿದೆ ಎಂದು ಗೊತ್ತಾಗಿದೆ.

ಕನಿಷ್ಠ ಎರಡು- ಮೂರು ಐಎಎಸ್ ಅಧಿಕಾರಿಗಳು, ದಾಸರಹಳ್ಳಿ, ಪಶ್ಚಿಮ ಹಾಗೂ ಮಹದೇವಪುರ ವಲಯ ಜಂಟಿ ಆಯುಕ್ತರ ಹುದ್ದೆ ಹೊರತುಪಡಿಸಿ, ಪೂರ್ವ ವಲಯ, ದಕ್ಷಿಣ ವಲಯ, ರಾಜರಾಜೇಶ್ವರಿ ನಗರ ವಲಯ, ಯಲಹಂಕ ಹಾಗೂ ಬೊಮ್ಮನಹಳ್ಳಿ ವಲಯ ಜಂಟಿ ಆಯುಕ್ತರ ಹುದ್ದೆಯಲ್ಲಿದ್ದವರನ್ನು ಬದಲಾಯಿಸಿ ಬೇರೆ ಅಧಿಕಾರಿಗಳನ್ನು ಇಲ್ಲಿಗೆ ವರ್ಗಾವಣೆ ಮಾಡಲಾಗುತ್ತೆ ಎಂದು ಹೇಳಲಾಗುತ್ತಿದೆ.

ಪ್ರಭಾವೀ ಹಾಗೂ ಆಯಕಟ್ಟಿನ ಹುದ್ದೆಗೆ ಪ್ರಬಲ ಲಾಭಿ

ಕೌನ್ಸಿಲರ್ ಗಳಿಲ್ಲದೆ ಆಡಳಿತಾಧಿಕಾರಿ ಅವಧಿ ಬಂದು ಒಂದು ವರ್ಷ ಆದ ಹಿನ್ನಲೆ ಹಾಗೂ ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಯಾದ ಕಾರಣ ತಮಗೆ ಬೇಕಾದ ಅಧಿಕಾರಿಗಳನ್ನು ಆಯಕಟ್ಟಿನ ಹುದ್ದೆಗೆ ನೇಮಿಸಲು ಬೆಂಗಳೂರಿನ ಸಚಿವರು ಹಾಗೂ ಶಾಸಕರು ತೆರೆಮರೆಯ ಕಸರತ್ತು ನಡೆಸಿದ್ದಾರೆ. ಅಲ್ಲದೆ ಹೆಚ್ಚು “ಅನುಕೂಲ” ಹಾಗೂ ಪ್ರಭಾವ ಹೊಂದಿದ ಅಧಿಕಾರ ಸ್ಥಾನ ಪಡೆದುಕೊಳ್ಳಲು ಬೇರೆ ಇಲಾಖೆಗಳಲ್ಲಿನ ಅಧಿಕಾರಿಗಳು ಲಾಭಿ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.

ಮುಖ್ಯ ಆಯುಕ್ತರ ಹುದ್ದೆಗೆ ಮೂವರ ಹೆಸರು ಕೇಳಿಬರುತ್ತಿದೆ :

ಈ ಹಿಂದೆ ಬಿಬಿಎಂಪಿಯಲ್ಲಿ ಮೇಯರ್ ಅವಧಿ ಮುಗಿದ ಬಳಿಕ ಆಡಳಿತಾಧಿಕಾರಿ ಹುದ್ದೆಗೇರಿದ್ದ ಗೌರವಗುಪ್ತಾ, ಬಿಬಿಎಂಪಿ ಕಾಯ್ದೆ-2020 ರ ಜಾರಿಗೆ ಬಂದ ನಂತರ ಸೃಷ್ಟಿಯಾದ ಪಾಲಿಕೆ ಮುಖ್ಯ ಆಯುಕ್ತರ ಹುದ್ದೆಯನ್ನು ಇದೇ ವರ್ಷದ ಏಪ್ರಿಲ್ ಒಂದರಂದು ವಹಿಸಿಕೊಂಡಿದ್ದರು. ಕೋವಿಡ್ ಸೋಂಕು ಏಪ್ರಿಲ್ – ಮೇ ತಿಂಗಳಲ್ಲಿ ತೀವ್ರಗತಿಯಲ್ಲಿ ಏರಿಕೆಯಾದಾಗ ಅಧಿಕಾರಿಗಳನ್ನು ಬಳಸಿಕೊಂಡು ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಂಡರು. ಆದರೂ, ನಗರದಲ್ಲಿ ಸೋಂಕು ಹೆಚ್ಚಿರುವ ಕಡೆ, ಆಸ್ಪತ್ರೆಗಳಿಗೆ ನಿರಂತರ ಭೇಟಿ ನೀಡದೆ ಎಸಿ ರೂಮ್ ನಲ್ಲಿ ಬೆಳಗ್ಗೆ – ರಾತ್ರಿ ಸಭೆ ನಡೆಸಲು ಮಾತ್ರ ಸೀಮಿತರಾಗಿದ್ದರು ಎಂಬ ದೂರುಗಳು ಕೇಳಿಬಂದಿತ್ತು. ಇದೀಗ ಮುಖ್ಯ ಆಯುಕ್ತರ ಹುದ್ದೆ ಬದಲಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಹಿರಿಯ ಐಎಎಸ್ ಅಧಿಕಾರಿ ಬಿ.ಎಚ್.ಅನಿಲ್ ಕುಮಾರ್ & ಮೇಜರ್ ಮಣಿವಣ್ಣನ್

ಈ ಸ್ಥಾನಕ್ಕೆ, ಈ ಹಿಂದೆ ಪಾಲಿಕೆಯಲ್ಲಿ ಆಯುಕ್ತರಾಗಿ ಕಾರ್ಯನಿರ್ವಹಿಸಿದ ಹಿರಿಯ ಐಎಎಸ್ ಅಧಿಕಾರಿ ಬಿ.ಎಚ್.ಅನಿಲ್ ಕುಮಾರ್ ಹಾಗೂ ಟಫ್ ಆಫೀಸರ್ ಮೇಜರ್ ಮಣಿವಣ್ಣನ್ , ಕಪಿಲ್ ಮೋಹನ್ ಅವರ ಹೆಸರು ಬಲವಾಗಿ ಕೇಳಿಬರುತ್ತಿದೆ. ಈಗಾಗಲೇ ಕಂದಾಯ ಸಚಿವ ಆರ್.ಅಶೋಕ್, ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಐಎಎಸ್ ಅಧಿಕಾರಿ ಟಿ.ಕೆ.ಅನಿಲ್ ಕುಮಾರ್ ಅವರಿಗೆ ಹುದ್ದೆ ನೀಡುವ ಬಗ್ಗೆ ಮಾತುಕತೆ ನಡೆಸಿದ್ದು, ಇದಕ್ಕೆ ಅನಿಲ್ ಕುಮಾರ್ ಸುತಾರಾಮ್ ಒಪ್ಪಿಲ್ಲ ಎಂದು ಮೂಲಗಳು ತಿಳಿಸಿವೆ.

ಹಣಕಾಸು ವಿಭಾಗದ ವಿಶೇಷ ಆಯುಕ್ತರ ಎತ್ತಂಗಡಿಗೆ ಮುಹೂರ್ತ ಫಿಕ್ಸ್?

ಇನ್ನೊಂದೆಡೆ ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಪಾಲಿಕೆ ಹಣಕಾಸು ವಿಭಾಗದ ವಿಶೇಷ ಆಯುಕ್ತರಾಗಿ ಬಂದ ತುಳಸಿ ಮದ್ದಿನೇನಿ ತಮಗೆ ಸಂಬಂಧಪಡದ ಆಡಳಿತ ವಿಚಾರದಲ್ಲಿ ಪ್ರತಿಯೊಂದಕ್ಕೂ ಮೂಗುತೂರಿಸುತ್ತಾರೆ ಎಂಬ ಆರೋಪಗಳಿವೆ. ಪಾಲಿಕೆಯ ಎಲ್ಲ ವಿಭಾಗಗಳ ಹಣಕಾಸು ವೆಚ್ಚಕ್ಕೆ ಕೊಕ್ಕೆ ಹಾಕುವ ತುಳಸಿ ಮದ್ದಿನೇನಿ ತಮ್ಮ ಕಚೇರಿಯ ಕೊಠಡಿಗೆ ಮಾತ್ರ ಐಷಾರಾಮಿ ಒಳವಿನ್ಯಾಸ ಹಾಗೂ ಎಸಿ ಅಳವಡಿಸಿಕೊಂಡು ದುಂದುವೆಚ್ಚ ಮಾಡಿದ್ದರು ಎಂದು ಪಾಲಿಕೆ ಸಿಬ್ಬಂದಿ ಹೇಳುತ್ತಾರೆ.

ಅಲ್ಲದೆ ಕಾಮಗಾರಿ ಪೂರ್ಣಗೊಳಿಸಿದ ಗುತ್ತಿಗೆದಾರರಿಗೆ ಹಣ ಬಿಡುಗಡೆ ವಿಚಾರದಲ್ಲಿ ಸಾಕಷ್ಟು ಸತಾಯಿಸುತ್ತಾ ಬಂದಿದ್ದರು. ಇದು ಪಾಲಿಕೆಯಲ್ಲಿ ಗುತ್ತಿಗೆ ಪಡೆದವರು ಹಾಗೂ ಸಚಿವರು, ಶಾಸಕರ ಹಿಂಬಾಲಕರಾದ ಕಾಂಟ್ರಾಕ್ಟರ್ ಗಳ ಅಸಮಾಧಾನಕ್ಕೂ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಅವರ ಬದಲಾವಣೆಗೂ ಬಹಳ ಕಾಲದಿಂದ ಪ್ರಯತ್ನಗಳು ನಡೆದರೂ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಅವರ “ಕೃಪಾಕಟಾಕ್ಷ”ದಿಂದ ಪಾಲಿಕೆ ವಿಶೇಷ ಆಯುಕ್ತೆ ತುಳಸಿ ಮದ್ದಿನೇನಿ ಬದಲಾವಣೆಗೆ ಕಾಲ ಕೂಡಿಬಂದಿರಲಿಲ್ಲ.

ಬಿಬಿಬಿಎಂಪಿ ವಿಶೇಷ ಆಯುಕ್ತೆ ಹಾಗೂ ದಕ್ಷಿಣ ವಲಯ ಆಯುಕ್ತೆ ತುಳಸಿ ಮದ್ದಿನೇನಿ

ಬೆಂಗಳೂರು ಲೋಕಸಭಾ ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ರವಿಸುಬ್ರಮಣ್ಯ, ಸತೀಶ್ ರೆಡ್ಡಿ ಮತ್ತಿತರರು ಪಾಲಿಕೆ ದಕ್ಷಿಣ ವಲಯ ಕಚೇರಿಯ ಕೋವಿಡ್ ನಿಯಂತ್ರಣ ಕೇಂದ್ರಕ್ಕೆ ಭೇಟಿ ನೀಡಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ಹಾಸಿಗೆ ಪಡೆಯಲು, ಬೆಡ್ ಬ್ಲಾಕಿಂಗ್ ದಂಧೆ ನಡೆಯುತ್ತಿರುವುದನ್ನು ಬಹಿರಂಗಪಡಿಸಿದ್ದರು. ಬಳಿಕ ಈ ವಿಷಯದ ಬಗ್ಗೆ ಪೊಲೀಸ್ ತನಿಖೆ ಕೂಡ ನಡೆಯಿತು.

ಬೆಡ್ ಬ್ಲಾಕಿಂಗ್ ದಂಧೆ ಮತ್ತು ಕೋವಿಡ್ ಸೋಂಕು ನಿರ್ವಹಣೆ ಬಗ್ಗೆ ಆಕ್ಷೇಪ…!

  • ಬಿಬಿಎಂಪಿ ಕೋವಿಡ್ ವಾರ್ ರೂಮ್ ಒಂದರ ಸಾಂದರ್ಭಿಕ ಚಿತ್ರ

ಕೋವಿಡ್ ತೀವ್ರಗತಿ ಏರಿಕೆ ಸಂದರ್ಭದಲ್ಲಿ ದಕ್ಷಿಣ ವಲಯ ಆಯುಕ್ತರಾಗಿದ್ದ ತುಳಸಿ ಮದ್ದಿನೇನಿ ಕಾರ್ಯನಿರ್ವಹಣೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. 2021-22ನೇ ಸಾಲಿನ ಬಜೆಟ್ ಮಂಡಿಸಿದ್ದರೂ ಅದರ ಅನುಷ್ಠಾನಕ್ಕೆ ಸೂಕ್ತ ಗಮನಹರಿಸಿರಲಿಲ್ಲ ಎಂಬ ಕುರಿತೂ ಸಾಕಷ್ಟು  ದೂರುಗಳು ಕೇಳಿ ಬಂದಿತ್ತು. ಆಗಲೂ ತುಳಸಿ ಅವರ ವರ್ಗಾವಣೆಗೆ ಸಾಕಷ್ಟು ಒತ್ತಡ ಬಂದಿದ್ದರೂ ಮೇಲಿನವರ ಕೃಪೆಯಿಂದ ಹುದ್ದೆ ಬದಲಾವಣೆಯಾಗಿರಲಿಲ್ಲ. ಈ ಐಎಎಸ್ ಅಧಿಕಾರಿ ಬೇರೆಡೆ ಎತ್ತಂಗಡಿ ಮಾಡಲು ನಗರದ ಬಹುತೇಕ ಸಚಿವರು, ಶಾಸಕರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದು, ವಿಧಾನಸಭೆ ಅಧಿವೇಶನದ ಬಳಿಕ ವರ್ಗಾವಣೆ ಮಾಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದರು ಎನ್ನಲಾಗಿದೆ.

ಅಧಿವೇಶನವನ್ನು ಹಗುರವಾಗಿ ಪರಿಗಣಿಸಿದ್ದ ಪಾಲಿಕೆ ಅಧಿಕಾರಿಗಳು….!

ವಿಧಾನಸಭೆ ಅಧಿವೇಶನದ ಸಾಂದರ್ಭಿಕ ಚಿತ್ರ

ಇತ್ತೀಚೆಗೆ ವಿಧಾನಸಭೆ ಅಧಿವೇಶನದಲ್ಲಿ ಪಾಲಿಕೆ ಅಧಿಕಾರಿಗಳು ಸೂಕ್ತ ಅವಧಿಯಲ್ಲಿ ಉತ್ತರ ನೀಡಿದೆ ಸರ್ಕಾರಕ್ಕೆ ಇರುಸು ಮುರಿಸು ಉಂಟಾಗಿತ್ತು. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಬಿಎಂಪಿ ಯಲ್ಲಿ ಆಡಳಿತ ದೃಷ್ಟಿಯಿಂದ ಅಧಿಕಾರಿಗಳ ಬದಲಾವಣೆಯ ಸೂಚನೆ ನೀಡಿದ್ದರು. ಇದಲ್ಲದೆ ಸರ್ಕಾರದ ಆದೇಶದಂತೆ ವಾರ್ಡ್ ಮರು ವಿಂಗಡಣೆ ಕಾರ್ಯಕ್ಕೆ ಚುರುಕು ಮುಟ್ಟಿಸಬೇಕಿದೆ. ಬಹಳ ಕಾಲದಿಂದ ಒಂದೆಡೆ ಕಾರ್ಯನಿರ್ವಹಿಸಿದ ಅಧಿಕಾರಿಗಳ ಮೇಲೆ ಆಯಾ ವಿಧಾನಸಭಾ ಕ್ಷೇತ್ರದ ಶಾಸಕರು ವಾರ್ಡ್ ಗಡಿ ಗುರುತು ಸಂದರ್ಭದಲ್ಲಿ ಪ್ರಭಾವ ಬೀರುವ ಹಿನ್ನಲೆಯಲ್ಲಿ ಅಧಿಕಾರಿಗಳನ್ನು ಬದಲಾಯಿಸುವ ಕೆಲಸಕ್ಕೆ ರಾಜ್ಯ ಸರ್ಕಾರ ಹೊರಟಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

WhatsApp Join our WhatsApp Channel
Previous Post

BHARATH BANDH : ಭಾರತ್ ಬಂದ್ ಯಶಸ್ವಿಗೆ ರೈತ ಸಂಘಟನೆಗಳು ಸಿದ್ಧ

Next Post

TTD Tirupati | ಟಿಟಿಡಿ ಸದಸ್ಯರಾಗಿ ಅಧಿಕಾರ ಸ್ವೀಕರಿಸಿದ ಎಸ್.ಆರ್.ವಿಶ್ವನಾಥ್

Next Post

TTD Tirupati | ಟಿಟಿಡಿ ಸದಸ್ಯರಾಗಿ ಅಧಿಕಾರ ಸ್ವೀಕರಿಸಿದ ಎಸ್.ಆರ್.ವಿಶ್ವನಾಥ್

ಮರದ ಕೊಂಬೆ ಬಿದ್ದು ಮೃತಪಟ್ಟಿದ್ದ ಸಿದ್ದಪ್ಪ ಕುಟುಂಬಕ್ಕೆ 1 ಲಕ್ಷ ರೂ. ಧನ ಸಹಾಯ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group