Thursday, August 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karnataka Ratna Award | ನಟ ಪುನೀತ್ ರಾಜಕುಮಾರ್ ಗೆ ಮರಣೋತ್ತರ “ಕರ್ನಾಟಕ ರತ್ನ ಪ್ರಶಸ್ತಿ” : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

by Bengaluru Wire Desk
November 16, 2021
in News Wire
Reading Time: 2 mins read
0

ಬೆಂಗಳೂರು, (www.bengaluruwire.com) : ಕರ್ನಾಟಕದ ಯುವರತ್ನ ಪುನೀತ್ ರಾಜಕುಮಾರ್ ಗೆ ರಾಜ್ಯ ಸರ್ಕಾರದಿಂದ ಮರಣೋತ್ತರ “ಕರ್ನಾಟಕ ರತ್ನ ಪ್ರಶಸ್ತಿ” ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಮಂಗಳವಾರ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಆಯೋಜಿಸಿದ್ದ ಪುನೀತ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವಿಷಯ ತಿಳಿಸಿದ್ದಾರೆ.

ಇದಲ್ಲದೆ ಬೆಂಗಳೂರಿನ ಲಗ್ಗೆರೆಯ ರಿಂಗ್ ರಸ್ತೆಯಲ್ಲಿರುವ ಶ್ರೀ ಕಂಠೀರವ ಸ್ಟುಡಿಯೋದ ಪುನೀತ್ ರಾಜ್ ಕುಮಾರ್ ಸಮಾಧಿಯನ್ನು ಡಾ.ರಾಜ್ ಕುಮಾರ್ ಅವರ ಸಮಾಧಿಯಂತೆ ನಿರ್ಮಾಣ ಮಾಡಲು ಸರ್ಕಾರ ತೀರ್ಮಾನ ಮಾಡಿದೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ಕಂಡ ಕಲಾವಿದರಲ್ಲಿ ಪುನೀತ್ ರಾಜಕುಮಾರ್ ಅವರು ಡಾ.ರಾಜ್ ಕುಮಾರ್ ಅವರ ಆದರ್ಶಗಳನ್ನ ಚಾಚೂ ತಪ್ಪದೆ ಪಾಲಿಸಿ ಎಲ್ಲರನ್ನು ಅವರು ಸೂಜಿಗಲ್ಲಿನಂತೆ ಸೆಳೆಯುತ್ತಿದ್ದರು. ಪುನೀತ್ ಅವರ ಅಗಲಿಕೆಯ ನಂತರ ಎರಡು ದಿನಗಳಲ್ಲಿ ಹರಿದು ಬಂದ ಅಭಿಮಾನಿಗಳ ಜನಸಾಗರವನ್ನು ನಾನು ವರ್ಣಿಸಲು ಅಸಾಧ್ಯವಾಗಿದೆ.

ಅಂದು ನಾನು ಪ್ರೀತಿಯ ಅಪ್ಪು ಕೆನ್ನೆಗೆ ಮುತ್ತಿಟ್ಟಾಗ ಹಲವರು ಹಲವು ರೀತಿಯಲ್ಲಿ ವ್ಯಾಖ್ಯಾನಿಸಿದ್ದಾರೆ. ಆದರೆ ಅದು ನನ್ನ ಹೃದಯದಿಂದ ಬಂದದ್ದು. ರಾಜ್ಯದ ಜನತೆಯ ಪರವಾಗಿ ಅಪ್ಪು ವಿಗೆ ಮುತ್ತುಕೊಟ್ಟಿದೆ. ಅವರ ಹೆಸರನ್ನು ಕನ್ನಡ ನಾಡಿನಲ್ಲಿ ಚಿರಸ್ಥಾಯಿಯಾಗಿಸುವ ದೃಷ್ಟಿಯಿಂದ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ಹೇಳಿದರು.

ನಮ್ಮ ಸರ್ಕಾರ ಕೇವಲ ಪುನೀತ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನಷ್ಟೇ ನೀಡದೆ, ಕೇಂದ್ರ ಸರ್ಕಾರಕ್ಕೂ ಪ್ರಶಸ್ತಿ ನೀಡುವಂತೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಶಿಫಾರಸ್ಸು ಮಾಡಲಾಗುವುದು ಎಂದು‌ ಮುಖ್ಯಮಂತ್ರಿಗಳು ತಿಳಿಸಿದರು.

ಅಗಲಿದ ಕಲಾವಿದ ಪುನೀತ್ ಗೆ ‘ಪುನೀತ್ ನಮನ” ಕಾರ್ಯಕ್ರಮದಲ್ಲಿ ಭಾಗಿಯಾದ ಗಣ್ಯರು ಸಂತಾಪ ಸೂಚಿಸಿದರು. ಇದಕ್ಕೂ ಮುನ್ನ ಪುನೀತ್ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಗೌರವ ಸಲ್ಲಿಸಿದರು.

ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೂಡ ಇದೇ ಸಂದರ್ಭದಲ್ಲಿ ಮಾತನಾಡಿ, ಪುನೀತ್ ರಾಜ್ ಕುಮಾರ್ ಸಿನಿಪಯಣದಲ್ಲಿ ಮಾಡಿದ ಸಾಧನಾ ಕಾರ್ಯವನ್ನು ನೆನಪಿಸಿಕೊಂಡರು. ಅಪ್ಪುವಿನ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ನಾಡದೇವತೆ ತಾಯಿ ಚಾಮುಂಡೇಶ್ವರಿಯನ್ನು ಬೇಡುತ್ತೇನೆ ಎಂದರು.

ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಪುನೀತ್ ರಾಜ್ ಕುಮಾರ್ ಅವರ ಸಮಾಜ ಸೇವಾ ಕಾರ್ಯಗಳ ಬಗ್ಗೆ ಗುಣಗಾನ ಮಾಡಿದರು. ಇಷ್ಟು ಚಿಕ್ಕ ವಯಸ್ಸಿಗೆ ಪುನೀತ್ ನಮ್ಮನ್ನೆಲ್ಲಾ ಅಗಲಿರುವುದು ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

‘ಪುನೀತ್ ನಮನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರು ಅಗಲಿದ ಪುನೀತ್ ಅವರನ್ನು ನೆನೆದು ಭಾವುಕರಾಗಿದ್ದರು.

ದಕ್ಷಿಣ ಭಾರತದ ಅನೇಕ ಹಿರಿಯ – ಕಿರಿಯ ಸುಪ್ರಸಿದ್ಧ ಸಿನಿ ಕಲಾವಿದರು, ಮಾಜಿ‌ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಹಲವು ಸಚಿವರು ಮತ್ತು ಚಿತ್ರರಂಗದ ಗಣ್ಯರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

KASAPA ELECTION | ನ.21 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಹಿನ್ನಲೆ – ರಾಜ್ಯಾಧ್ಯಕ್ಷ ಸ್ಥಾನಕ್ಕೆ ತುರುಸಿನ ಪೈಪೋಟಿ

Next Post

Bengaluru Tech Summit 2021 | 24ನೇ ತಂತ್ರಜ್ಞಾನ ಶೃಂಗಕ್ಕೆ ಬೆಂಗಳೂರು ಸಜ್ಜು – ಬುಧವಾರ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಂದ ಉದ್ಘಾಟನೆ

Next Post

Bengaluru Tech Summit 2021 | 24ನೇ ತಂತ್ರಜ್ಞಾನ ಶೃಂಗಕ್ಕೆ ಬೆಂಗಳೂರು ಸಜ್ಜು - ಬುಧವಾರ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಂದ ಉದ್ಘಾಟನೆ

Bengaluru Shootout | ನಟೋರಿಯಸ್ ರೌಡಿ ಪಳನಿ ಕಾಲಿಗೆ ಗುಂಡೇಟು : ಸಿಸಿಬಿ ಪೊಲೀಸರ ಕಾರ್ಯಾಚರಣೆ

Please login to join discussion

Like Us on Facebook

Follow Us on Twitter

Recent News

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026

80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

August 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group