Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BW EXCLUSIVE | Covid Death Componsation | ರಾಜ್ಯ ಸರ್ಕಾರದ ಘೋಷಣೆಗಷ್ಟೆ ಸೀಮಿತವಾಯ್ತಾ ಕೋವಿಡ್ ಸಾವಿನ ಪರಿಹಾರ?

ಬಿಬಿಎಂಪಿ ವ್ಯಾಪ್ತಿಯಲ್ಲಿ ಈತನಕ ಒಂದು ಕುಟುಂಬಕ್ಕೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪರಿಹಾರದ ಹಣ ತಲುಪಿಲ್ಲ | 1,715 ಸಾವನ್ನಪ್ಪಿದ ಕುಟುಂಬಗಳಿಗೆ ಮಾತ್ರ ರಾಜ್ಯ ವಿಪತ್ತು ಪರಿಹಾರ ನೀಡಲು ಅಂಕಿತ | ಈತನಕ ಹಣ ವರ್ಗಾವಣೆಯಾಗಿಲ್ಲ

by Bengaluru Wire Desk
December 8, 2021
in Bengaluru Focus, BW Special
Reading Time: 2 mins read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com) : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಕರೋನಾ ಸೋಂಕಿನಿಂದ ಸರ್ಕಾರ ಘೋಷಿಸಿದ 14,229 ಮೃತ ವ್ಯಕ್ತಿಗಳ ಕುಟುಂಬದ ಪೈಕಿ ಒಂದೇ ಒಂದು ಕುಟುಂಬಕ್ಕೂ ರಾಜ್ಯ ಸರ್ಕಾರದ ಕೋವಿಡ್ ಪರಿಹಾರದ ಹಣ ತಲುಪಿಲ್ಲ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ನಿಂದ ಸಾವಿಗೀಡಾದ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡುವ ಸಂಬಂಧ ಸೆ.30 ರಂದು ಪಾಲಿಕೆ ಮುಖ್ಯ ಆಯುಕ್ತರಾದ ಗೌರವಗುಪ್ತಾ ಕಚೇರಿ ಆದೇಶ ಹೊರಡಿಸಿದ್ದರು.

ಅಲ್ಲಿಂದ ಎರಡು ತಿಂಗಳಾದರೂ ಕೋವಿಡ್ ನಿಂದ ಮೃತಪಟ್ಟ 14,229 ವ್ಯಕ್ತಿಗಳ ಕೇವಲ 1,715 ಕುಟುಂಬಗಳಿಗೆ (ಡಿ.6ರ ತನಕದ ಮಾಹಿತಿಯಂತೆ) ಕೇಂದ್ರ ಸರ್ಕಾರದ ಅನುದಾನದ ರಾಜ್ಯ ವಿಪತ್ತು ಪರಿಹಾರ ನಿಧಿಯಲ್ಲಿ ತಲಾ 50 ಸಾವಿರ ಹಣ ನೀಡಲು ಕರ್ನಾಟಕ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ನಿರ್ದೇಶನಾಲಯ ಕೇವಲ ಒಪ್ಪಿಗೆ ಸೂಚಿಸಿದೆಯಷ್ಟೆ.

  • ವಿಧಾನಸೌಧದ ಸಾಂದರ್ಭಿಕ ಚಿತ್ರ

ಇದರಲ್ಲಿ ಬಿಪಿಎಲ್ (575 ಕುಟುಂಬ) ಮತ್ತು ಎಪಿಎಲ್ ಕಾರ್ಡ್ (1,140 ಕುಟುಂಬ) ಹೊಂದಿದ ಎರಡೂ ವರ್ಗದವರು ಸೇರಿದ್ದಾರೆ. ಇದೇ ವರ್ಷದ ಜೂನ್ ನಲ್ಲಿ ಹಿಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೋವಿಡ್ ನಿಂದ ದುಡಿಯುವ ವ್ಯಕ್ತಿ ಸಾವನ್ನಪ್ಪಿದ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಒಂದು ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದರು. ಅವರ ಘೋಷಣೆ ಮಾಡಿ ಏಳು ತಿಂಗಳಾದರೂ ಅದಿನ್ನೂ ಕಾರ್ಯಗತವಾಗಿಲ್ಲ.

ದತ್ತಾಂಶದಲ್ಲಿನ ತೊಡಕುಗಳೇ ಪರಿಹಾರ ವಿತರಣೆಗೆ ಅಡ್ಡಿ :

ಕೋವಿಡ್ ಮೊದಲ ಅಲೆ ಹಾಗೂ ಎರಡನೇ ಅಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 14,229 ಮಂದಿ ಮೃತಪಟ್ಟಿರುವ ದತ್ತಾಂಶವನ್ನು ಕಂದಾಯ ಇಲಾಖೆಯಡಿ ಬರುವ ಕರ್ನಾಟಕ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ನಿರ್ದೇಶನಾಲಯ(DSSP)ವು ಪಾಲಿಕೆಗೆ ನೀಡಿತ್ತು. ಇದರ ಜೊತೆಗೆ ಬಿಬಿಎಂಪಿಯು ತನ್ನ ವ್ಯಾಪ್ತಿಯಲ್ಲಿ ಸಿಎಚ್ ಎಂಬಿಎಸ್ ಸಾಫ್ಟ್ ವೇರ್ ದತ್ತಾಂಶದಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಡಾಟಾವನ್ನು ಹೊಂದಿದೆ.

ಆದರೆ ಡಿಎಸ್ ಎಸ್ ಪಿ ನೀಡಿದ ದತ್ತಾಂಶವನ್ನು ಬಳಸಿ, ಪಾಲಿಕೆಯ ಸಿಎಚ್ ಎಂಬಿಎಸ್ ಸಾಫ್ಟ್ ವೇರ್ ನಲ್ಲಿ ಹುಡುಕಿದಾಗ ಹಲವು ದತ್ತಾಂಶಗಳು ತಾಳೆಯಾಗುತ್ತಿಲ್ಲ. ಹೀಗಾಗಿ ಕೋವಿಡ್ ನಿಂದ ಮೃತಪಟ್ಟ ಅಂತಹ ಕುಟುಂಬಗಳಿಗೆ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಹಣ ವರ್ಗಾವಣೆ ಮಾಡಲು ಸಾಧ್ಯವಾಗುತ್ತಿಲ್ಲ.

ಪರಿಹಾರ ವಿತರಣೆಯಲ್ಲಿನ ಸಮಸ್ಯೆಗಳು ಹಾಗೂ ಗೊಂದಲಗಳ ಬಗ್ಗೆ ಕಂದಾಯ ಇಲಾಖೆಯ ಕರ್ನಾಟಕ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ನಿರ್ದೇಶನಾಲಯದ ನಿರ್ದೇಶಕ ಸತೀಶ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಪ್ರತಿಕ್ರಿಯೆಗೆ ಲಭ್ಯವಾಗಲಿಲ್ಲ.

ಕೆಲವು ಪ್ರಕರಣಗಳಲ್ಲಿ ಕೋವಿಡ್ ಪೀಡಿತರಾಗಿ ಮೃತಪಟ್ಟವರ ಬಿಯು ನಂಬರ್ ಪತ್ತೆಯಾಗುತ್ತಿಲ್ಲ ಎಂದು ಕಂಪ್ಯೂಟರ್ ಸಾಫ್ಟ್ ವೇರ್ ನಲ್ಲಿ ತೋರಿಸುತ್ತಿದೆ. ಇದು ಬಿಬಿಎಂಪಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನುಂಗಲಾರದ ತುತ್ತಾಗಿದೆ ಎಂದು ಬಿಬಿಎಂಪಿಯ ಅಧಿಕಾರಿಯೊಬ್ಬರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

“ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ನಿರ್ದೇಶನಾಲಯ ನೀಡಿದ ದತ್ತಾಂಶದ ವಿವರಗಳು, ಪಾಲಿಕೆ ಬಳಿಯಿರುವ ದತ್ತಾಂಶಕ್ಕೆ ಕೆಲವೆಡೆ ತಾಳೆಯಾಗುತ್ತಿಲ್ಲ. ಹೀಗಾಗಿ ನಿಜವಾದ ಫಲಾನುಭವಿಗಳನ್ನು ಹುಡುಕಲು ತೊಡಕಾಗುತ್ತಿದೆ. ಕೆಲವು ಪ್ರಕರಣಗಳಲ್ಲಿ ಕೋವಿಡ್ ನಿಂದ ಮೃತಪಟ್ಟವರ ಹೆಸರಿನಲ್ಲಿ ಬಿಯು ನಂಬರ್ ಪತ್ತೆಯಾಗುತ್ತಿಲ್ಲ.‌ ಕೋವಿಡ್ ನಿಂದ ಸಾವಿಗೀಡಾದವರ ವಿಳಾಸವಿರುವ ಆಯಾ ಜೋನ್ ಗಳಿಗೆ ದತ್ತಾಂಶ ವರ್ಗಾವಣೆ ಮಾಡಿ ಪರಿಶೀಲನೆ ಮಾಡಲಾಗುತ್ತಿದೆ. ಚುನಾವಣೆ ನೀತಿಸಂಹಿತೆ ಮುಗಿದ ಬಳಿಕ ರಾಜ್ಯ ಸರ್ಕಾರದಿಂದ ಬಿಪಿಎಲ್ ಫಲಾನುಭವಿ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡಲು ಕ್ರಮ ಕೈಗೊಳ್ಳುತ್ತೇವೆ. ಕೆಲವು ಮೃತರ ಕುಟುಂಬಸ್ಥರು ಸರ್ಕಾರದ ಪರಿಹಾರ ಪಡೆಯಲು ನಿರಾಕರಿಸಿದ್ದಾರೆ.”

– ದಯಾನಂದ್, ಕೋವಿಡ್ ಪರಿಹಾರ ವಿತರಣೆ ನೋಡೆಲ್ ಅಧಿಕಾರಿ ಮತ್ತು ವಿಶೇಷ ಆಯುಕ್ತರು, ಬಿಬಿಎಂಪಿ

ಕೋವಿಡ್ ನಿಂದ ಮೃತರಾದ ಕುಟುಂಬಕ್ಕೆ ಪರಿಹಾರ ವಿತರಣೆ ಹೇಗಾಗುತ್ತೆ?

ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಯ ಹೆಸರಿನಲ್ಲಿ‌ ನೀಡಿದ ದತ್ತಾಂಶದಲ್ಲಿನ ವಿಳಾಸದ ಮನೆಗೆ ಭೇಟಿ ನೀಡುವ ಪಾಲಿಕೆಯ ಕಂದಾಯ ಪರಿವೀಕ್ಷಕ (Revenue Inspector)ರು ಮೃತ ವ್ಯಕ್ತಿಯ ಕುಟುಂಬದಿಂದ ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಪಡೆದು ಹಿರಿಯ ಆರೋಗ್ಯ ಪರಿವೀಕ್ಷಕ (Senior Health Inspector)ರಿಗೆ ಹಸ್ತಾಂತರಿಸುತ್ತಾರೆ.

ಈ ದಾಖಲೆಗಳನ್ನು ಸೀನಿಯರ್ ಹೆಲ್ತ್ ಇನ್ಸ್ ಪೆಕ್ಟರ್ ಕೋವಿಡ್ ಪರಿಹಾರ ನೀಡುವ ಕಂಪ್ಯೂಟರ್ ತಂತ್ರಾಂಶ ದಲ್ಲಿ ಡಾಟಾ ಎಂಟ್ರಿ ಮಾಡುತ್ತಾರೆ. ಅಲ್ಲಿಂದ ಕಡತ ವಲಯ ಆರೋಗ್ಯಾಧಿಕಾರಿಗಳು, ಆಯಾ ವಲಯದ ಜಂಟಿ ಆಯುಕ್ತರ ಅಧ್ಯಕ್ಷತೆಯ ಮರಣ ಪರಿಶೀಲನಾ‌ ಸಮಿತಿ ಒಪ್ಪಿಗೆ ಬಳಿಕ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ನಿರ್ದೇಶನಾಲಯದ ನಿರ್ದೇಶಕರಿಗೆ ತಲುಪಿ ಅಲ್ಲಿಂದ ಮೃತ ವ್ಯಕ್ತಿಯ ಅಧಿಕೃತ ಕಾನೂನು ಬದ್ಧ ವಾರಸುದಾರರಿಗೆ ಪರಿಹಾರದ ಹಣ ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಆಗಲಿದೆ.

ಬಿಎಪಿಲ್ – ಎಪಿಎಲ್ ಕುಟುಂಬಗಳಿಗೆ ಪರಿಹಾರ ನಿಗಧಿ ಕ್ರಮ ಹೇಗೆ?

ರಾಜ್ಯ ಸರ್ಕಾರವು ಘೋಷಿಸಿರುವಂತೆ ಕೋವಿಡ್‌ನಿಂದ ಮೃತಪಟ್ಟ ಬಡತನ ರೇಖೆಗಿಂತ ಕೆಳಗಿನ(ಬಿಪಿಎಲ್) ಕುಟುಂಬದ ಒಬ್ಬ ಕಾನೂನುಬದ್ಧ ವಾರಸುದಾರರಿಗೆ ‘ಸಂಧ್ಯಾ ಸುರಕ್ಷಾ ಯೋಜನೆ’ ಅಡಿ 1 ಲಕ್ಷ ರೂ. ಪಾವತಿಸಲಿದೆ. ಮತ್ತು ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ಕೋವಿಡ್-19 ವೈರಾಣು ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕಾನೂನುಬದ್ಧ ವಾರಸುದಾರರಿಗೆ ರಾಜ್ಯ ವಿಪತ್ತು ಪರಿಹಾರ ನಿಧಿ(ಎಸ್‌ಡಿಆರ್‌ಎಫ್) ಯಿಂದ 50 ಸಾವಿರ ರೂ. ಸೇರಿದಂತೆ ಒಟ್ಟು 1.50 ಲಕ್ಷ ರೂ.ಗಳನ್ನು ಪಾವತಿಸುತ್ತದೆ.

ಸಂಧ್ಯಾ ಸುರಕ್ಷಾ ಯೋಜನೆಯಡಿ ಒಂದು ಲಕ್ಷ ರೂ. ಪಾವತಿಸುವಾಗ ಆ ಕುಟುಂಬದಲ್ಲಿ ಎಷ್ಟೇ ಮಂದಿ ಮೃತಪಟ್ಟಿದ್ದರೂ, ಒಂದು ಕುಟುಂಬವನ್ನು ಒಂದು ಘಟಕ (Unit) ರೀತಿ ಪರಿಗಣಿಸಿ 1 ಲಕ್ಷ ರೂ. ಪರಿಹಾರ ನೀಡಲಾಗುತ್ತೆ.‌

ಆದರೆ ಕೇಂದ್ರ ಸರ್ಕಾರದ ಅನುದಾನದ ರಾಜ್ಯ ವಿಪತ್ತು ಪರಿಹಾರ ನಿಧಿಯಡಿ ಪರಿಹಾರ ನೀಡುವಾಗ ಪ್ರತಿ ವ್ಯಕ್ತಿ ಸಾವನ್ನು ಗಣನೆಗೆ ತೆಗೆದುಕೊಂಡು ಆ ಕುಟುಂಬಕ್ಕೆ ಪರಿಹಾರ ನೀಡಲಾಗುತ್ತದೆ. ಉದಾ: ಒಂದು ಕುಟುಂಬದಲ್ಲಿ ಮೂವರು ಸದಸ್ಯರಿದ್ದು, ಆ ಪೈಕಿ ಇಬ್ಬರು ಕೋವಿಡ್ ನಿಂದ ಮೃತಪಟ್ಟರೆ ಆ ಕುಟುಂಬದ ಜೀವಂತವಿರುವ ಮೂರನೇ ವ್ಯಕ್ತಿಗೆ ಕೋವಿಡ್ ನಿಂದ ಸಾವನ್ನಪ್ಪಿದ ಇಬ್ಬರನ್ನು ಗಣನೆಗೆ ತೆಗೆದುಕೊಂಡು (ತಲಾ 50 ಸಾವಿರದಂತೆ) ಒಟ್ಟು 1 ಲಕ್ಷ ರೂ. ಗಳನ್ನು ಆ ಕುಟುಂಬದ ವ್ಯಕ್ತಿಗೆ ಪರಿಹಾರ ನೀಡಲಾಗುತ್ತದೆ ಎಂದು ಪಾಲಿಕೆ ಕೋವಿಡ್ ಪರಿಹಾರ ವಿತರಣೆ ಅಧಿಕಾರಿಗಳು ತಿಳಿಸಿದ್ದಾರೆ.

ಆದಷ್ಟು ಶೀಘ್ರವಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ರಾಜ್ಯಸರ್ಕಾರ ನುಡಿದಂತೆ ಪರಿಹಾರ ನೀಡಲು ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಿಂದ ವ್ಯಕ್ತವಾಗಿದೆ.

WhatsApp Join our WhatsApp Channel
Previous Post

ಕನ್ನಡದ ಹಿರಿಯ ಪತ್ರಕರ್ತ ವಾಗೀಶ್ ಕುಮಾರ್ ಅಕಾಲಿಕ ನಿಧನ

Next Post

Mi-17 Chopper Crash News Update | Mi-17 ಸೇನಾ ಹೆಲಿಕಾಪ್ಟರ್ ದುರಂತದ ಬಗ್ಗೆ ಏರ್ ಮಾರ್ಷಲ್ ನೇತೃತ್ವದಲ್ಲಿ ತನಿಖೆ ಆರಂಭ

Next Post

Mi-17 Chopper Crash News Update | Mi-17 ಸೇನಾ ಹೆಲಿಕಾಪ್ಟರ್ ದುರಂತದ ಬಗ್ಗೆ ಏರ್ ಮಾರ್ಷಲ್ ನೇತೃತ್ವದಲ್ಲಿ ತನಿಖೆ ಆರಂಭ

Tunga Aarathi | ಕಾಶಿಯಲ್ಲಿ ಗಂಗಾ ಆರತಿಯಂತೆ ದಕ್ಷಿಣದಲ್ಲಿ ತುಂಗಾ ಆರತಿ ಮಂಟಪ ನಿರ್ಮಾಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group