Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಪ್ರತಿವರ್ಷ ಮಾರ್ಚ್ 3 ರಂದು ವಿಶ್ವ ಕನ್ನಡ ಸಿನಿಮಾ ದಿನವಾಗಿ ಆಚರಣೆ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ

13ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ವಿದ್ಯುಕ್ತ ಚಾಲನೆ | ನಟ ಪುನೀತ್ ರಾಜ್ ಕುಮಾರ್ ಗೆ ಸದ್ಯದಲ್ಲೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ | ಪುಟ್ಟಣ್ಣ ಕಣಗಾಲ್ ಸ್ಮಾರಕ ನಿರ್ಮಾಣ ಭರವಸೆ ನೀಡಿದ ಸಿಎಂ

by Bengaluru Wire Desk
March 3, 2022
in News Wire, Public interest
Reading Time: 1 min read
0

ಬೆಂಗಳೂರು, (www.bengaluruwire.com) : 
ಕನ್ನಡದ ಮೊದಲ ಟಾಕಿ ಚಿತ್ರ ಮಾರ್ಚ್ ಮೂರರಂದು ಸತಿ ಸುಲೋಚನೆ ಬಿಡುಗಡೆಯಾದ ಈ ದಿನವನ್ನು ರಾಜ್ಯ ಸರ್ಕಾರ “ವಿಶ್ವ ಕನ್ನಡ ಸಿನಿಮಾ ದಿನ” ಎಂದು ಘೋಷಣೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

13ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಡಿಜಿಟಲ್ ಜಗತ್ತಿನಲ್ಲಿ ಕನ್ನಡ ಚಲನಚಿತ್ರಕ್ಕೆ ಸಾಕಷ್ಟು ಅವಕಾಶಗಳಿವೆ. ಕನ್ನಡ ಭಾಷಾ ಬೆಳವಣಿಗೆಗೆ ಕನ್ನಡ ಚಲನಚಿತ್ರ ಅತ್ಯಂತ ಪ್ರಭಾವಿ‌ ಮಾಧ್ಯಮ. ಕನ್ನಡ ಚಿತ್ರರಂಗವನ್ನು ಉಳಿಸಲು ಹೊಸ ತಂತ್ರಜ್ಞಾನ ಬಳಕೆ ಹಾಗೂ ಸ್ಥಳೀಯ ಪ್ರತಿಭೆಗೆ ಅವಕಾಶ ಲಭಿಸಲು ರಾಜ್ಯ ಸರ್ಕಾರ ಈ ದಿಕ್ಕಿನಲ್ಲಿ ಕನ್ನಡ ಚಿತ್ರರಂಗ ಹಿರಿಯರ ಜೊತೆ ಸೇರಿ ಸೂಕ್ತ ಕ್ರಮ ಕೈಗೊಳ್ಳಲಿದೆ.

ದೇಶದಲ್ಲಿ ದೆಹಲಿ, ಕೋಲ್ಕತಾ, ಗೋವಾ, ಕೇರಳ, ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ಆ ಪೈಕಿ ಬೆಂಗಳೂರು ಮೊದಲ ಸ್ಥಾನಕ್ಕೆ ಬರಬೇಕಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಸಿನಿಮಾಗಳ ಪ್ರದರ್ಶನ ನಡೆದರೆ ಕನ್ನಡ ಚಿತ್ರಗಳಿಗೆ ಅವಕಾಶ ಹೆಚ್ಚಲಿದೆ.

ಇದ್ದ ವ್ಯವಸ್ಥೆಯಲ್ಲಿಯೇ ಹಿಂದೆ ಕಪ್ಪುಬಿಳುಪು ಸಿನಿಮಾ ಮಾಡುತ್ತಿದ್ದರು.‌ ಅದೇ ತಮಗೆ ಇಷ್ಟ. ಈಗ ಕಪ್ಪು ಬಿಳುಪಿನ ಎಫೆಕ್ಟ್ ಈಗಿನ ಸಿನಿಮಾಗಳಲ್ಲೂ ಆಗಾಗ ಬಳಕೆಯಾಗುತ್ತಿದೆ.

ಜಿಕೆವಿಕೆ ಸಭಾಂಗಣದಲ್ಲಿ ಕಿಕ್ಕಿರಿದು ತುಂಬಿದ್ದ ವೀಕ್ಷಕರು

ನಟ ಪುನೀತ್ ರಾಜ್ ಕುಮಾರ್ ಗೆ ಸದ್ಯದಲ್ಲೆ ಕರ್ನಾಟಕ ರತ್ನ ಪ್ರಶಸ್ತಿ :
ನಮ್ಮನ್ನು ಅಗಲಿದ ನಟ ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಮನಸ್ಸಿನಲ್ಲಿ ಶಾಶ್ವತ ಸ್ಥಾನ ಪಡೆದರು. ಇಂಗ್ಲೀಷ್ ಕವಿ ಜಾನ್ ಕೀಡ್ಸ್, ಸ್ವಾಮಿ ವಿವೇಕಾನಂದರು ಸೇರಿದಂತೆ ಸಣ್ಣ ವಯಸ್ಸಿನಲ್ಲಿಯೇ ದೊಡ್ಡ ಸಾಧನೆ ಮಾಡಿದ್ದರು. ಅವರಲ್ಲಿ ಪುನೀತ್ ರಾಜ್ ಕುಮಾರ್ ಕೂಡ ಒಬ್ಬರು.

ರಾಜ್ಯ ಸರ್ಕಾರದಿಂದ ಈ ಹಿಂದೆ ಘೋಷಣೆ ಮಾಡಿದಂತೆ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ವಿತರಿಸಲಿದೆ. ಈ ಕಾರ್ಯಕ್ರಮದ ದಿನಾಂಕವನ್ನು ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಜೊತೆ ನಿರ್ಧಾರ ಮಾಡಲಿದ್ದೇವೆ.

2023-24ನೇ ಇಸವಿಯಲ್ಲಿ ಮೈಸೂರಿನಲ್ಲಿ ಚಲನಚಿತ್ರ ನಗರಿ ನಿರ್ಮಾಣಕ್ಕೆ ಚಾಲನೆ ನೀಡಲಿದ್ದೇವೆ. ತಾವು ಇಂದು ಈ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗುತ್ತಿರಲಿಲ್ಲ. ಏಕೆಂದರೆ ನಾಳೆ ರಾಜ್ಯ 2022-23ನೇ ಸಾಲಿನ ಬಜೆಟ್, ಉಕ್ರೇನ್ ಬಿಕ್ಕಟ್ಟಿನಲ್ಲಿ‌ ರಾಜ್ಯದ ವಿದ್ಯಾರ್ಥಿ ಅಸುನೀಗಿದ್ದಾನೆ. ಪರಿಸ್ಥಿತಿ ಹೀಗಿದ್ದರೂ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಕಾರಣಕ್ಕೆ ಈ ಕಾರ್ಯಕ್ರಮಕ್ಕೆ ಆಗಮಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಿಸ್ಥಿತಿಯನ್ನು ಬಿಚ್ಚಿಟ್ಟರು.

ಕೋವಿಡ್ ಕಾರಣದಿಂದ ಮುಂದೂಡಿಕೆಯಾಗಿದ್ದ ಚಿತ್ತೋತ್ಸವವನ್ನು ನಮ್ಮ ಅಧಿಕಾರಿಗಳ ಕಾರ್ಯಕ್ಷಮತೆಯಿಂದ ಕೇವಲ 35 ದಿನಗಳಲ್ಲಿ ಸಿನಿಮಾ ಹಬ್ಬ ಮಾಡುವ ಕಾರ್ಯಕ್ರಮ ಕಾರ್ಯಗತವಾಗಿದೆ ಎಂದು ಅಧಿಕಾರಿಗಳನ್ನು ಶ್ಲಾಘಿಸಿದರು.

ಜನಪ್ರಿಯ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಸ್ಮಾರಕ ನಿರ್ಮಾಣ ಭರವಸೆ :

ಇದಕ್ಕೂ ಮುನ್ನ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್ ತಮ್ಮ ಪ್ರಾಸ್ತವಿಕ ಭಾಷಣದಲ್ಲಿ, ಕನ್ನಡದ ಜನಪ್ರಿಯ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಹುಟ್ಟೂರಿನಲ್ಲಿ ಅವರ ಮನೆಯನ್ನು ಅಭಿವೃದ್ಧಿಪಡಿಸಿ ಪುಟ್ಟಣ್ಣ ಕಣಗಾಲ್ ಸ್ಮಾರಕ ನಿರ್ಮಿಸಬೇಕು. ಚಲನಚಿತ್ರ ಅಕಾಡೆಮಿಯಲ್ಲಿ ಅರ್ಧಕ್ಕೆ ನಿಂತ ಆಡಿಟೋರಿಯಮ್ ಪೂರ್ಣಗೊಳಿಸಲು ರಾಜ್ಯ ಸರ್ಕಾರ 15 ಕೋಟಿ ರೂ. ಅನುದಾನ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮನವಿ ಮಾಡಿದರು.

ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ ನೀಡಿದರು.

ನಾಳೆಯ ರಾಜ್ಯ ಬಜೆಟ್ ನಲ್ಲಿ ಕನ್ನಡ ಚಿತ್ರರಂಗಕ್ಕೆ ಅಚ್ಚರಿಯ ಘೋಷಣೆ ಕಾದಿದೆ ಎಂದು ನಿರ್ಮಾಪಕ ಮತ್ತು ಸಚಿವ ಮುನಿರತ್ನ ಹೇಳಿದರು.

13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಂಚಭಾಷಾ ತಾರೆ ಡಾ.ಭಾರತಿ ವಿಷ್ಣುವರ್ಧನ್, ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಚಲನಚಿತ್ರ ನಿರ್ದೇಶಕ ಪ್ರಿಯದರ್ಶನ್, ನಟ ದರ್ಶನ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಅಶ್ವಿನಿ ಪುನೀತ್ ರಾಜ್ ಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹರ್ಷ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

BBMP ACB RAID THOUSANDS OF CRORES ILLEGALITY | ಬಿಬಿಎಂಪಿಯಲ್ಲಿ ಸಾವಿರಾರು ಕೋಟಿ ರೂ. ಬ್ರಹ್ಮಾಂಡ ಭ್ರಷ್ಟಾಚಾರ : ಎಸಿಬಿ ಅಧಿಕಾರಿಗಳ ಪರಿಶೀಲನೆ ವೇಳೆ ಪತ್ತೆ

Next Post

Karnataka State Buget 2022-23 | ರಾಜ್ಯ ಸರ್ಕಾರದ 2022-23 ಬಜೆಟ್ ನಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ. ಅನುದಾನ

Next Post

Karnataka State Buget 2022-23 | ರಾಜ್ಯ ಸರ್ಕಾರದ 2022-23 ಬಜೆಟ್ ನಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ. ಅನುದಾನ

13th Bengaluru International Film Festival | ವರ್ಚುವಲ್ ಮಾದರಿಯಲ್ಲಿ ಚಲನಚಿತ್ರೋತ್ಸವ ಮಾಡುವುದು ಸರಿಯಲ್ಲ : ನಿರ್ದೇಶಕ ಎನ್.ಆರ್.ನಂಜುಂಡೇಗೌಡ

Please login to join discussion

Like Us on Facebook

Follow Us on Twitter

Recent News

ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

June 18, 2026

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

June 18, 2026

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group