Wednesday, August 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP Engineering Chief Post Selection | ಬಿಬಿಎಂಪಿ ಪ್ರಧಾನ ಎಂಜಿನಿಯರ್ ಹುದ್ದೆಗೆ ಯಾರು ಹೊಸ ಸಾರಥಿ?

ನಗರದಲ್ಲಿನ 12 ಕಾಮಗಾರಿ ವಿಭಾಗಗಳ ಉಸ್ತುವಾರಿಗೆ ಮೂವರು ಚೀಫ್ ಎಂಜಿನಿಯರ್ ಗಳ ನಡುವೆ ಪೈಪೋಟಿ | ಸಿಎಂ ಕಚೇರಿಯಲ್ಲಿದೆ ಕಡತ | ಇನ್ನು ಮೂರು ದಿನಗಳ ಒಳಗಾಗಿ ಹೊಸ ಐಇಸಿ ಆಯ್ಕೆ | ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಸಿಇ ಬಿ.ಎಸ್.ಪ್ರಹ್ಲಾದ್ ಹೆಸರು ಬಹುತೇಕ ಫೈನಲ್

by Bengaluru Wire Desk
May 18, 2022
in Bengaluru Focus, BW Special
Reading Time: 1 min read
0
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬೆಂಗಳೂರು, ಮೇ.18, (www.bengaluruwire.com) : ಒಂದು ಕಾಲದಲ್ಲಿ ಸಖತ್ ಬೇಡಿಕೆಯಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಪ್ರಧಾನ ಎಂಜಿನಿಯರ್ ಹುದ್ದೆ ತೆರವಾಗಿ 18 ದಿನಗಳು ಉರುಳಿದ್ದು, ಹೊಸ ಮುಖ್ಯಸ್ಥರು ಯಾರಾಗಲಿದ್ದಾರೆ ಎಂಬ ಪ್ರಶ್ನೆ ಮೂಡಿದೆ. ಈಗಾಗಲೇ ಹೊಸ ಎಂಜನಿಯರಿಂಗ್ ಚೀಫ್ ಹುದ್ದೆಗಾಗಿ ಅರ್ಹರಾದ ಮೂವರ ಹೆಸರನ್ನು ಬಿಬಿಎಂಪಿಯಿಂದ ನಗರಾಭಿವೃದ್ಧಿ ಇಲಾಖೆಗೆ ಕಳುಹಿಸಿ ಕೊಟ್ಟಿದ್ದು, ಎಲ್ಲಾ ಪ್ರಕ್ರಿಯೆಗಳು ನಡೆದು ಕಡತವು ಮುಖ್ಯಮಂತ್ರಿಗಳ ಕಚೇರಿ ತಲುಪಿದೆ. ಇಂದು ಎಂದು ಉನ್ನತ ಮೂಲಗಳು ಬೆಂಗಳೂರು ವೈರ್ ಗೆ ಖಚಿತಪಡಿಸಿದೆ.

ಬಿ.ಎಸ್.ಪ್ರಭಾಕರ್ ಏಪ್ರಿಲ್ 30ರಂದು ಪ್ರಧಾನ ಎಂಜಿನಿಯರ್ ಹುದ್ದೆಯಿಂದ ನಿವೃತ್ತರಾಗಿದ್ದರು.

ಪಾಲಿಕೆಯ ಎಂಜಿನಿಯರಿಂಗ್ ಚೀಫ್ ಹುದ್ದೆಗೆ ಈ ಮೊದಲಿಗೆ ಯಲಹಂಕ ವಲಯದ ರಂಗನಾಥ್, ಸದ್ಯ ದಾಸರಹಳ್ಳಿ ವಲಯದ ಚೀಫ್ ಎಂಜಿನಿಯರ್ ಪಿ.ವಿಶ್ವನಾಥ್, ರಸ್ತೆ ಮತ್ತು ಮೂಲಸೌಕರ್ಯ ವಿಭಾಗದ ಮುಖ್ಯ ಎಂಜಿನಿಯರ್ ಬಿ.ಎಸ್.ಪ್ರಹ್ಲಾದ್, ಪಶ್ಚಿಮ ವಲಯದ ಸಿಇ ದೊಡ್ಡಯ್ಯ, ಬೃಹತ್ ನೀರುಗಾಲುವೆ ಸಿಇ ಸುಗುಣ ಹಾಗೂ ಮೋಹನ್ ಕೃಷ್ಣ ಅವರ ಹೆಸರನ್ನು ಪರಿಗಣಿಸಲಾಗಿತ್ತು. ಆದರೆ ಅಂತಿಮವಾಗಿ ಸೇವಾ ಹಿರಿತನದಲ್ಲಿ ಕ್ರಮವಾಗಿ ರಂಗನಾಥ್, ಪಿ.ವಿಶ್ವನಾಥ್ ಹಾಗೂ ಬಿ.ಎಸ್.ಪ್ರಹ್ಲಾದ್ ಈ ಮೂವರನ್ನು ಅಂತಿಮಗೊಳಿಸಿ ಬಿಬಿಎಂಪಿಯ ಆಡಳಿತ ಶಾಖೆಯು ನಗರಾಭಿವೃದ್ಧಿ ಇಲಾಖೆಗೆ 20 ದಿನಗಳ ಹಿಂದೆಯೇ ತೆರವಾದ ಹುದ್ದೆಯನ್ನು ತುಂಬಲು ಸೂಕ್ತ ವ್ಯಕ್ತಿಯನ್ನು ನೇಮಕ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿತ್ತು. ಬಳಿಕ ಕಳೆದ ಒಂದು ವಾರದ ಹಿಂದಷ್ಟೇ ಇಲಾಖಾ ಬಡ್ತಿ ಸಮಿತಿ ಸಭೆ (Department Promotion Committee Meeting) ನಡೆದಿದ್ದು, ನಗರಾಭಿವೃದ್ಧಿ ಇಲಾಖೆಯಿಂದ ಕಡತವು ಬೆಂಗಳೂರು ಅಭಿವೃದ್ಧಿ ಸಚಿವರೂ ಆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಚೇರಿಗೆ ರವಾನೆಯಾಗಿದೆ. ಅಂತಿಮವಾಗಿ ಮುಖ್ಯಮಂತ್ರಿಗಳು ಈ ವಿಚಾರದಲ್ಲಿ ತೀರ್ಮಾನ ಕೈಗೊಳ್ಳಲಿದ್ದಾರೆ.

ಚೀಫ್ ಎಂಜಿನಿಯರ್ ಬಿ.ಎಸ್.ಪ್ರಹ್ಲಾದ್

ಈ ಮೂವರ ಪೈಕಿ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಯಲ್ಲಿ ಸಾಕಷ್ಟು ಪ್ರಭಾವಿಯಾಗಿರುವ ಬಿ.ಎಸ್.ಪ್ರಹ್ಲಾದ್ ಅವರ ಹೆಸರನ್ನು ನಗರಾಭಿವೃದ್ಧಿ ಇಲಾಖೆಯು ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ ಎಂದು ತಿಳಿದುಬಂದಿದೆ.

ಯಲಹಂಕ ವಲಯ ಚೀಫ್ ಎಂಜಿನಿಯರ್ ಅವರಿಗೆ ಇನ್ನು ಮೂರು ವರ್ಷಗಳ ಸೇವೆ ಸಲ್ಲಿಸಲು ಅವಕಾಶವಿದೆ. ಆದರೆ ಇವರ ವಿರುದ್ಧ ಕೆಲ ಪ್ರಕರಣಗಳ ವಿಚಾರಣೆ ನಡೆಯುತ್ತಿದೆ. ಇನ್ನು ಪಿ.ವಿಶ್ವನಾಥ್ ವಿರುದ್ಧ ಯಾವುದೇ ವಿಚಾರಣೆಯಿಲ್ಲ. ಅಲ್ಲದೆ ಇವರ ವಿರುದ್ಧ ಯಾವುದೇ ಗಂಭೀರ ಆರೋಪಗಳಿಲ್ಲ. ವಿಶ್ವನಾಥ್ ಅವರಿಗೆ ಇನ್ನು ಒಂದು ವರ್ಷ ಪಾಲಿಕೆಯಲ್ಲಿ ಸೇವಾವಧಿ ಬಾಕಿಯಿದೆ. ಸೇವಾ ಹಿರಿತನ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಪ್ರಹ್ಲಾದ್  ವಿರುದ್ಧ ಆದಾಯಕ್ಕಿಂತ ಹೆಚ್ಚು ವರಮಾನ ಹೊಂದಿದ್ದಾರೆಂಬ ಬಗ್ಗೆ ಪ್ರಕರಣ ದಾಖಲಾಗಿತ್ತು. ಬಳಿಕ ಭ್ರಷ್ಟಾಚಾರ ನಿಗ್ರಹ ದಳ (ACB) ಬಿ-ರಿಪೋರ್ಟ್ ಸಲ್ಲಿಕೆ ಮಾಡಿತ್ತು. ಟಿಡಿಆರ್ ಹಂಚಿಕೆಯಲ್ಲಿನ ಭ್ರಷ್ಟಾಚಾರವೂ ಸೇರಿದಂತೆ ಕೆಲವು ಪ್ರಕರಣಗಳಲ್ಲಿ ಪ್ರಹ್ಲಾದ್ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದಿದ್ದಾರೆ. ಅಲ್ಲದೆ ಇವರಿಗೆ ಇನ್ನು 11 ವರ್ಷಗಳ ಸೇವಾವಧಿಯಿದೆ.

ಬಿಬಿಎಂಪಿಯ ಎಂಟು ವಲಯಗಳು, ಕೇಂದ್ರ ಯೋಜನೆ, ರಸ್ತೆ ಮೂಲಸೌಕರ್ಯ, ಕೆರೆ ವಿಭಾಗ ಹಾಗೂ ರಾಜಕಾಲುವೆ ಸೇರಿದಂತೆ 12 ಕಾಮಗಾರಿ ವಿಭಾಗಗಳು ಬಿಬಿಎಂಪಿಯಲ್ಲಿದ್ದು, ಈ ಎಲ್ಲ ವಿಭಾಗಗಳ ಕಾಮಗಾರಿಗಳ ಮಾಹಿತಿಯನ್ನು 2012-13 ರಲ್ಲಿ ಪಾಲಿಕೆ ಪ್ರಧಾನ ಎಂಜನಿಯರ್ ಆಗಿದ್ದ ಬಿ.ಟಿ.ರಮೇಶ್ ಅವಧಿಯ ತನಕ ಈ ಕಚೇರಿಯು ತಾಂತ್ರಿಕವಾಗಿ ಪರಿಶೀಲಿಸಿ ಕಡತಗಳನ್ನು ನಿರ್ವಹಣೆ ಮಾಡುತ್ತಿತ್ತು. ಆನಂತರ ಯಾವುದೇ ಕಾಮಗಾರಿಗಳ ಕಡತವು ಎಂಜಿನಿಯರಿಂಗ ಚೀಫ್ ಕಚೇರಿಗೆ ಬರುವುದೇ ನಿಂತು ಹೋಯಿತು. ಆ ಬಳಿಕ ಈ ಹುದ್ದೆ ಪಡೆಯಲು ನಡೆಯುತ್ತಿದ್ದ ಲಾಭಿಯು ಕಡಿಮೆಯಾಯಿತು. ಆದರೆ 2021ರಲ್ಲಿ ಟೆಂಡರ್ ಕಡತಗಳು ಹಾಗೂ ಅದರಲ್ಲಿನ ಬದಲಾವಣೆಗಳಿಗೆ ಸಂಬಂಧಿಸಿದ ಫೈಲ್ ಗಳನ್ನು ನೋಡಿಕೊಳ್ಳುವ ಜವಾಬ್ದಾರಿ ಮತ್ತೆ ಪ್ರಧಾನ ಎಂಜಿಯರ್ ಹೆಗಲೇರಿತ್ತು. ಆದರೂ 12 ಕಾಮಗಾರಿ ವಿಭಾಗಗಳ ಫೈಲ್ ಗಳು ಕಚೇರಿಗೆ ಬರದೆ ಆ ಪೋಸ್ಟ್ ಕೇವಲ ನಾಮಕಾವಸ್ಥೆಗಷ್ಟೆ ಸೀಮಿತವಾಗಿತ್ತು.

ಮುಖ್ಯಮಂತ್ರಿಗಳು, ಮುಖ್ಯ ಕಾರ್ಯದರ್ಶಿ ಅಥವಾ ನಗರಾಭಿವೃದ್ಧಿ ಇಲಾಖೆ ಹೀಗೆ ವಿಧಾನಸೌಧ, ವಿಕಾಸಸೌಧದಲ್ಲಿ ಬಿಬಿಎಂಪಿ ಕುರಿತಂತೆ ನಡೆಯುವ ಸಭೆಗಳಲ್ಲಿ ಮಾತ್ರ ಪ್ರಧಾನ ಎಂಜನಿಯರ್ ಗಳು ಭಾಗವಹಿಸುವುದಕಷ್ಟೆ ಈ ಹುದ್ದೆ ಸೀಮಿತವಾಗಿದೆ. ಪ್ರಧಾನ ಎಂಜಿನಿಯರ್ ಆಗಿ ಬಡ್ತಿ ಹೊಂದಿ ನಿವೃತ್ತಿ ಹೊಂದುವ ತವಕದಲ್ಲಿರುವವರಿಗೆ ಮಾತ್ರ ಈ ಹುದ್ದೆ ಬಗ್ಗೆ ಆಸಕ್ತಿ ಎಂಬಂತಹ ಸ್ಥಿತಿ ನಿರ್ಮಾಣವಾಗಿ ಬಹಳ ಕಾಲವಾಗಿದೆ.

WhatsApp Join our WhatsApp Channel
Previous Post

BBMP Preparation For Rain | ಈ ಮಳೆಗಾಲಕ್ಕೆ ಬೆಂಗಳೂರು ಹೇಗೆ ಸಿದ್ಧವಾಗುತ್ತಿದೆ? ಇಲ್ಲಿದೆ ಕಂಪ್ಲೀಟ್ ಮಾಹಿತಿ

Next Post

Textile Park | ಚಿಕ್ಕಬಳ್ಳಾಪುರದಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ಕೇಂದ್ರಕ್ಕೆ ಮನವಿ ಸಲ್ಲಿಸಿದ ಸಚಿವ ಡಾ.ಕೆ.ಸುಧಾಕರ್

Next Post

Textile Park | ಚಿಕ್ಕಬಳ್ಳಾಪುರದಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ಕೇಂದ್ರಕ್ಕೆ ಮನವಿ ಸಲ್ಲಿಸಿದ ಸಚಿವ ಡಾ.ಕೆ.ಸುಧಾಕರ್

ರಾಜಧಾನಿ ಮಳೆನೀರು ನಿರ್ವಹಣೆಗೆ ಅಷ್ಟ ದಿಕ್ಕುಗಳಲ್ಲಿಯೂ ಸಚಿವರ ನೇತೃತ್ವದ ಕಾರ್ಯಪಡೆ ರಚನೆ - ಸಿಎಂ ಬೊಮ್ಮಾಯಿ

Please login to join discussion

Like Us on Facebook

Follow Us on Twitter

Recent News

ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

August 5, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

August 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

August 5, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

August 5, 2026

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group