Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ರಾಜಧಾನಿ ಮಳೆನೀರು ನಿರ್ವಹಣೆಗೆ ಅಷ್ಟ ದಿಕ್ಕುಗಳಲ್ಲಿಯೂ ಸಚಿವರ ನೇತೃತ್ವದ ಕಾರ್ಯಪಡೆ ರಚನೆ – ಸಿಎಂ ಬೊಮ್ಮಾಯಿ

ದಾಸರಹಳ್ಳಿ ವಿವಿಧ ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಸಿಎಂ ಎಚ್.ಡಿ.ಕೆ ಭೇಟಿ - ಪರಿಶೀಲನೆ | ಅಭಿವೃದ್ಧಿ ವಿಚಾರದಲ್ಲಿ ಸರ್ಕಾರದ ನಿರ್ಲಕ್ಯಕ್ಕೆ ಎಚ್ ಡಿಕೆ ಗರಂ

by Bengaluru Wire Desk
May 20, 2022
in Bengaluru Focus, Public interest
Reading Time: 2 mins read
0

ಬೆಂಗಳೂರು, ಮೇ.20(www.bengaluruwire.com) :
ರಾಜಧಾನಿಯಲ್ಲಿ ಮಳೆ‌ ನೀರು ನಿರ್ವಹಣೆಗೆ ಅಷ್ಟ ದಿಕ್ಕುಗಳಿಗೂ ಅಂದರೆ ಪ್ರತಿ ಬಿಬಿಎಂಪಿ ವಲಯದಲ್ಲಿಯೂ ಸಚಿವರ ಮತ್ತು ಅಧಿಕಾರಿಗಳನ್ನೊಳಗೊಂಡ ಕಾರ್ಯಪಡೆಯನ್ನು ರಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದ್ದಾರೆ.

ನಗರದಲ್ಲಿ ಮಂಗಳವಾರ ಸುರಿದ ಭಾರಿ ಮಳೆಯಿಂದಾಗಿ ಕೆ.ಅರ್.ಪುರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಕೆಲ ಪ್ರದೇಶಗಳಲ್ಲಿ ಹಾನಿಯನ್ನುಂಟು ಮಾಡಿದ ಸ್ಥಳಕ್ಕೆ ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲಿಸಿದರು.

ನಂತರ ಮಾತನಾಡಿದ ಅವರು, ಕಾರ್ಯಪಡೆಯಲ್ಲಿ ಒಬ್ಬ ಸಚಿವರನ್ನು ಮುಖ್ಯಸ್ಥರನ್ನಾಗಿ ಮಾಡಿ, ಆ ಭಾಗದ ಶಾಸಕರು, ಸಂಸದರು, ಎಂಎಲ್ ಸಿ ಗಳು , ಹಿರಿಯ ಅಧಿಕಾರಿಗಳು ಸಮಿತಿಯಲ್ಲಿ ಸದಸ್ಯರಾಗಿರುತ್ತಾರೆ. ಈ ಕಾರ್ಯಪಡೆಗಳ ನೇತೃತ್ವದಲ್ಲಿ ಆಯಾ ವಲಯದ ಅಭಿವೃದ್ಧಿ ಕಾರ್ಯಗಳು, ಪ್ರವಾಹದಂತಹ ಸಂದರ್ಭಗಳಲ್ಲಿ ತುರ್ತು ಕ್ರಮಗಳನ್ನು ತೆಗೆದುಕೊಳ್ಳುವ ಜವಾಬ್ದಾರಿಯನ್ನು ನೀಡಿ ಇಂದೇ ಆದೇಶ ಹೊರಡಿಸಲಾಗುವುದು ಎಂದರು.

ಮಳೆಯಿಂದ ಹಾನಿಗೊಳಗಾದ ಸಂತ್ರಸ್ತರ ಅಳಲು ಆಲಿಸಿದ ಸಿಎಂ ಬೊಮ್ಮಾಯಿ

ಕ್ಷೇತ್ರದ ಅಭಿವೃದ್ಧಿ,ಕಾಮಗಾರಿ ಪರಿಶೀಲನೆ, ತುರ್ತು ಸಂದರ್ಭದಲ್ಲಿ ಟಾಸ್ಕ್‌ಫೋರ್ಸ್ ವಲಯ ಉಸ್ತುವಾರಿ ನೋಡಿಕೊಳ್ಳಲಿದೆ. ಬೆಂಗಳೂರು ಅಜೆಂಡಾಗೆ ಟಾಸ್ಕ್ ಫೋರ್ಸ್ ಪುನಾರಚನೆಗೆ ಈ ಹಿಂದೆ  ಮಾಜಿ ಸಿಎಂ ಎಸ್.ಎಂ ಕೃಷ್ಣ ಸಲಹೆ ನೀಡಿದ್ದರು. ಆ ಸಲಹೆ ಬೆನ್ನೆಲ್ಲೆ ಬಸವರಾಜ ಬೊಮ್ಮಾಯಿ ಟಾಸ್ಕ್ ಫೋರ್ಸ್ ರಚಿಸಲು ಮುಂದಾಗಿದ್ದಾರೆ.

ಕೆ.ಅರ್.ಪುರ ಕ್ಷೇತ್ರದ ಶಾಸಕ ಹಾಗೂ ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ ಅವರೊಂದಿಗೆ ಕ್ಷೇತ್ರದ ವ್ಯಾಪ್ತಿಯಲ್ಲಿನ ಸಾಯಿ ಬಡಾವಣೆ, ಪೈ ಬಡಾವಣೆ, ನಾಗಪ್ಪ ಬಡಾವಣೆ, ಹೊರ ಮಾವು ಸೇರಿದಂತೆ ಹಲ ಪ್ರದೇಶಗಳಲ್ಲಿ ಸಂಚರಿಸುವ ಮೂಲಕ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದರು.

ನಿನ್ನೆ ಒಂದು ಭಾಗ ನೋಡಿದ್ದೇವೆ. ಇಂದು ಮತ್ತೊಂದು ಭಾಗ ಪರಿಶೀಲನೆ ಮಾಡಿದ್ದೇವೆ. ಈ ಭಾಗದ ರೈಲ್ವೆ ಭಾಗದಲ್ಲಿ ಸಮಸ್ಯೆ ಇದೆ. 42 ಕೋಟಿ ರೂ. ಅನುದಾನದಲ್ಲಿ ಅಲ್ಲಿ ಕಾಮಗಾರಿ ನಡೆಸಿ ಸಮಸ್ಯೆ ಬಗೆ ಹರಿಸುತ್ತೇವೆ. 900 ಮೀಟರ್ ಹೆಚ್ಚುವರಿ ಮಳೆನೀರು ಚರಂಡಿ ಕೂಡ ಮಾಡುತ್ತಿದ್ದೇವೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ‌ ಹೇಳಿದರು.

ಕೆಲವು ಕಡೆ ರಾಜಕಾಲುವೆ ಮೇಲೆ ಮನೆ ನಿರ್ಮಾಣ ಮಾಡಿದ್ದಾರೆ. ಅದನ್ನು ತೆರವು ಮಾಡಿಸುವ ಕೆಲಸ ಲಮಾಡುತ್ತೇವೆ. ಯಾವುದೇ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಬಾರದು ಎಂದು ಕಠಿಣ ಆದೇಶ ಮಾಡಿದ್ದೇನೆ. ಹಾಗಾಗಿ ಕೆರೆ ಜಾಗಗಳಲ್ಲಿ ಬಿಡಿಎ ವಸತಿ ನಿರ್ಮಾಣ ನೋಟಿಫಿಕೆಷನ್ ರದ್ದು ಮಾಡಿದ್ದೇವೆ ಎಂದು ತಿಳಿಸಿದರು.

ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ  ರಾಜೇಂದ್ರ ಸಿಂಗ್, ಬಿಬಿಎಂಪಿ ಮುಖ್ಯ ಅಯುಕ್ತರಾದ ತುಷಾರ್ ಗಿರಿನಾಥ್ ಸೇರಿದಂತೆ ಹಿರಿಯ ಅಧಿಕಾರಿಗಳು ‌ಉಪಸ್ಥಿತರಿದ್ದರು.

ದಾಸರಹಳ್ಳಿಯ ವಿವಿಧ ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಸಿಎಂ ಎಚ್.ಡಿ.ಕೆ ಭೇಟಿ – ಪರಿಶೀಲನೆ :

ದಾಸರಹಳ್ಳಿಯ ರುಕ್ಮಿಣಿ‌ನಗರ, ಬೆಲ್ಮಾರ್ ಬಡಾವಣೆ, ಚಿಕ್ಕಬಾಣಾವಾರ ಪ್ರದೇಶಗಳ ವಿವಿಧ ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಸಿಎಂ ಕುಮಾರಸ್ವಾಮಿ ಶುಕ್ರವಾರ ಭೇಟಿ ನೀಡಿದರು.

ನಗರ ಪ್ರದಕ್ಷಿಣೆ ವೇಳೆ ಕುಮಾರಸ್ವಾಮಿ ಮಾತನಾಡಿ, ನಾನು ಮುಖ್ಯಮಂತ್ರಿ ಆಗಿದ್ದಾಗ ದಾಸರಹಳ್ಳಿ ಕ್ಷೇತ್ರಕ್ಕೆ ನೀಡಿದ್ದ ಅನುದಾನವನ್ನು ನಂತರ ತಡೆ ಹಿಡಿದರು. ಇಷ್ಟು ವರ್ಷಗಳಾದರೂ ಯಾಕೆ ಇಲ್ಲೆಲ್ಲಾ ಅಭಿವೃದ್ಧಿ ಆಗಿಲ್ಲ? ಸಣ್ಣ ಮಕ್ಕಳನಿಟ್ಟುಕೊಂಡು ಇಲ್ಲಿನ ಜನತೆ ಹೇಗೆ ಜೀವನ ಮಾಡಬೇಕು? ನಗರದ 28 ವಿಧಾನಸಭಾ ಕ್ಷೇತ್ರದಲ್ಲಿ 15 ವರ್ಷ ದಲ್ಲಿ ಎಷ್ಟು ಹಣ ಬಿಡುಗಡೆ ಮಾಡಿದ್ದಾರೆ ಎಂದು ಮಾಹಿತಿ ಪಡೆಯುತ್ತೇನೆ.

ದಾಸರಹಳ್ಳಿಯಲ್ಲಿ ಪರಿಶೀಲನೆ ನಡೆಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ನಿಮ್ಮ ಶಾಸಕರ ಕ್ಷೇತ್ರ ಗಳಿಗೆಲ್ಲ ಮುಖ್ಯಮಂತ್ರಿ ಗಳೇ ನೀವು ಹೋಗಬೇಕಾಗಿದೆ. ನೀವು ಎಷ್ಟು ವರ್ಷ ಇರ್ತೀರೋ ಗೊತ್ತಿಲ್ಲ. ಜನರ ಜೀವನದ ಜೊತೆ ಚೆಲ್ಲಾಟ ಆಡಬೇಡಿ. ನಗರ ಪ್ರದಕ್ಷಿಣಿ ಕಾಟಾಚಾರದ ಫೋಟೋ ಶೂಟ್ ಆಗಬಾರದು. ಬಡವರ ಜೀವನದ ಜೊತೆ ಚೆಲ್ಲಾಟ ಆಡವಾರದು‌. ಕೆಆರ್ ಪುರಂ‌ ವಿಧಾನಸಭಾ ಕ್ಷೇತ್ರಕ್ಕೆ 1600 ಕೋಟಿ ರೂ. ಅನುದಾನ ಕೊಟ್ಟಿದ್ದಾರೆ. ಆದ್ರೆ ಅಲ್ಲಿನ ಜನ ನೀರಿನಲ್ಲಿ ತೇಲುತ್ತಿದ್ದಾರೆ.

ಬೆಂಗಳೂರಿನಲ್ಲಿ ಚಂಬಲ್ ಕಣಿವೆ ರೀತಿಯ ದರೋಡೆಕೋರರಿದ್ದಾರೆ :

ಸಿಎಂ ನಾಲ್ಕು ದಿನದ ನಗರ ಪ್ರದಕ್ಷಣೆಯಲ್ಲಿ ಅವರಿಗೆ ನಗರದಲ್ಲಿನ ಮಳೆಹಾನಿಯ ಅನುಭವ ಆಗಿದೆ. ಒಂದು ಕಾಲದಲ್ಲಿ ಚಂಬಲ್ ಕಣಿವೆ ದರೋಡೆ ಕೋರರನ್ನ ಕಾಣುತ್ತಿದ್ದವು. ಈಗ ಬೆಂಗಳೂರಿನಲ್ಲಿ ದರೋಡೆ ಕೋರರಿದ್ದಾರೆ. ಸಾಕು ದರೋಡೆ ಮಾಡಿದ್ದು. ತಿನ್ನೋದು ಎರಡು ತುತ್ತು ಅನ್ನ, ಒಂದು ಸಲ ಯೋಚನೆ ಮಾಡಿ ಎಂದು ಬಿಬಿಎಂಪಿ ಮತ್ತಿತರ ಸಂಬಂಧಿಸಿದ ಅಧಿಕಾರಿಗಳಿಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಚಾಟಿ ಬೀಸಿದರು.

“20 ವರ್ಷದಿಂದ ರಾಜಕಾಲುವೆ ಅಂತಾ ಚರ್ಚೆ ಮಾಡುತ್ತಿದ್ದಾರೆ. ಇಷ್ಟು ದಿನ ಬೇಕಾ ಸಮಸ್ಯೆ ಬಗೆಹರಿಸೋಕೆ? ಜನಗಳ ಮದ್ಯೆ ಶೋ ಮಾಡೊದಲ್ಲ ಕಾಮನ್ ಮ್ಯಾನ್ ಚೀಫ್ ಮಿನಿಸ್ಟರ್, ಕಾಮನ್ ಮ್ಯಾನ್‌ಗಳ ಸಮಸ್ಯೆ ಬಗೆಹರಿಸಬೇಕು.
ಮಾಧ್ಯಮಗಳು ಟೀಕೆ ಮಾಡಿವೆ ಅಂತಾ ಮಾಧ್ಯಮಗಳ ವಿರುದ್ದ ಮಾತನಾಡೋದಲ್ಲ. ಸಮಸ್ಯೆ ಇರುವ ಸ್ಥಳಗಳಲ್ಲಿ ಧನಾತ್ಮಕವಾಗಿ ಕೆಲಸ ಮಾಡಬೇಕು. ಕಾಟಾಚಾರದ ಕೆಲಸ ಮಾಡಬಾರದು. ನಗರ ಪ್ರದಕ್ಷಿಣೆ ಮಾಡಬೇಡಿ, ಮಾಧ್ಯಮಗಳ ವಿಡಿಯೋ ತುಣುಕುಗಳನ್ನ ನೋಡಿ. ಆ ವಿಡಿಯೋ ಇಟ್ಟುಕೊಂಡು ಸಮಸ್ಯೆ ಬಗೆಹರಿಸಿ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕಿವಿಮಾತು ಹೇಳಿದರು.

ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ‌ (KRIDL) ಅನ್ನೋ ಸಂಸ್ಥೆಯನ್ನು ಮೊದಲು ಮುಚ್ಚಿ. ಈ ಕೆ‌ಆರ್‌ಐ‌ಡಿ‌ಎಲ್ ಸಂಸ್ಥೆಯಿಂದ ಲೂಟಿ ಮಾಡೋಕೆ ಇಟ್ಟುಕೊಳ್ಳಲಾಗಿದೆ.
ಅವರ ಮಂತ್ರಿ ಮಂಡಲ, ಪಕ್ಷದ ಶಾಸಕರ ಅಭಿವೃದ್ದಿ ಆದರೆ ಮಾತ್ರ ಅದು ಅಭಿವೃದ್ದಿನಾ? ಮಳೆಹಾನಿಯಿಂದ ನಷ್ಟಕ್ಕೊಳಗಾದವರಿಗೆ 25 ಸಾವಿರ ಪರಿಹಾರ ಘೋಷಣೆ ಮಾಡಿದ್ದೀರ, ಜನಗಳು ಭಿಕ್ಷುಕರಾ?

ಮಳೆಯಿಂದ ನಷ್ಟ ಆಗಿರುವವರಿಗೆ ಸರ್ಕಾರ ಸರಿಯಾದ ಪರಿಹಾರ ಕೊಡಬೇಕು. ತೋರಿಕೆಗೆ ಅಷ್ಟೋ ಇಷ್ಟೋ ಕೊಟ್ಟು ಸುಮ್ಮನಾಗಬಾರದು. ಸಾರ್ವಜನಿಕರಿಗೆ ನಷ್ಟ ಆಗಿರುವ ಶೇ.75ರಷ್ಟು ಪರಿಹಾರ ಕೊಡಬೇಕು. ಆ ಪರಿಹಾರ ನೀಡಿಕೆಯಲ್ಲೂ ಅಧಿಕಾರಿಗಳು ಮತ್ತೆ ದುಡ್ಡು ಹೊಡೆಯಲು ನೋಡುತ್ತಾರೆ. ಹಾಗಾಗದಂತೆ ಎಚ್ಚರಿಕೆವಹಿಸಬೇಕು ಎಂದು ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಕಿವಿಮಾತು ಹೇಳಿದರು.

WhatsApp Join our WhatsApp Channel
Previous Post

Textile Park | ಚಿಕ್ಕಬಳ್ಳಾಪುರದಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ಕೇಂದ್ರಕ್ಕೆ ಮನವಿ ಸಲ್ಲಿಸಿದ ಸಚಿವ ಡಾ.ಕೆ.ಸುಧಾಕರ್

Next Post

ACB Raid Today | ಬೆಂಗಳೂರು ಜಿಲ್ಲಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ – ಉಪ ತಹಸೀಲ್ದಾರ್ ಸೇರಿ ಇಬ್ಬರ ಬಂಧನ

Next Post
ಎಸಿಬಿ ಕೇಂದ್ರ ಕಚೇರಿ, ಬೆಂಗಳೂರು

ACB Raid Today | ಬೆಂಗಳೂರು ಜಿಲ್ಲಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ - ಉಪ ತಹಸೀಲ್ದಾರ್ ಸೇರಿ ಇಬ್ಬರ ಬಂಧನ

ಬೆಂಗಳೂರಿನ ಮಳೆ ಸಂಬಂಧಿತ ಸಮಸ್ಯೆಗೆ ಸಚಿವರ ನೇತೃತ್ವದ ಕಾರ್ಯಪಡೆ ರಚನೆ

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group