Friday, August 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

  • Bengaluru Focus

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

EC Voter ID Link To Aadhaar | ನಿಮ್ಮ ವೋಟರ್ ಐಡಿಕಾರ್ಡ್ ಜೊತೆ ಆಧಾರ್ ಲಿಂಕ್ ಮಾಡಲು ಚುನಾವಣಾ ಆಯೋಗ ನೀಡಿದೆ ಅವಕಾಶ…! ಇಂದಿನಿಂದ ಜಾರಿಗೆ ಬರುತ್ತಿರುವ ಹೊಸ ಬದಲಾವಣೆಗಳು ಯಾವುದು?

ವರ್ಷಕ್ಕೆ ನಾಲ್ಕು ಬಾರಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅವಕಾಶ |ಮತದಾರರ ಪಟ್ಟಿಯಲ್ಲಿ ಭಾಗವಾಗಲು ಯುವ ಸಮುದಾಯಕ್ಕೆ ಆದ್ಯತೆ

by Bengaluru Wire Desk
August 1, 2022
in News Wire, Public interest
Reading Time: 2 mins read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.1 www.bengaluruwire.com : ಮತದಾರರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್ ದತ್ತಾಂಶವನ್ನು ಜೋಡಣೆ ಮಾಡುವ ಕಾರ್ಯಕ್ರಮ ಹಾಗೂ ಚುನಾವಣಾ ಸುಧಾರಣೆಗಳು ಆಗಸ್ಟ್ 1ರಿಂದ ದೇಶಾದ್ಯಂತ ಹಲವು ರಾಜ್ಯಗಳಲ್ಲಿ ಜಾರಿಗೆ ಬಂದಿದೆ.

ಒಬ್ಬ ಮತದಾರ ಮತಕ್ಷೇತ್ರದಲ್ಲಿನ ಮತದಾರರ ಪಟ್ಟಿಯಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ಹೆಸರು ಹೊಂದಿರುವ ಅಥವಾ ಒಂದಕ್ಕಿಂತ ಹೆಚ್ಚು ಮತಕ್ಷೇತ್ರದಲ್ಲಿ ಚುನಾವಣಾ ಗುರುತಿನ ಚೀಟಿ ಅಥವಾ ಮತದಾರರ ಪಟ್ಟಿಯಲ್ಲಿ ಹೆಸರಿರುವುದನ್ನು ಗುರುತಿಸಲು ವೋಟರ್ ಐಡಿ ಕಾರ್ಡ್ ಡಾಟಾ ಜೊತೆ ಆಧಾರ್ ಡಾಟಾವನ್ನು ಜೋಡಿಸುವ ಕಾರ್ಯ ಕೈಗೊಳ್ಳಲು ಚುನಾವಣಾ ಆಯೋಗ ಈ ತಿದ್ದುಪಡಿಯನ್ನು ತಂದಿದೆ.

1950ರ ಜನತಾ ಪ್ರಾತಿನಿಧ್ಯ ಕಾಯ್ದೆ ಸೆಕ್ಷನ್ 14 (ಬಿ) ಮತ್ತು ಸೆಕ್ಷನ್ 23ರಲ್ಲಿನ ಕಾನೂನು ತಿದ್ದುಪಡಿಗಳ ಅನುಸಾರವಾಗಿ ಮತ್ತು ಮತದಾರರ ನೋಂದಣಿ ನಿಯಮಗಳು, 1960ರಲ್ಲಿನ ಮಾರ್ಪಾಡುಗಳ ಅನುಸಾರವಾಗಿ ಕೇಂದ್ರ ಚುನಾವಣಾ ಆಯೋಗ ವಿಧಾನಸಭೆ ಮತ್ತು ಲೋಕಸಭಾ ಮತದಾರರ ಪಟ್ಟಿಯ ತಯಾರಿಕೆ ಮತ್ತು ಪರಿಷ್ಕರಣೆಯಲ್ಲಿ ಅಗತ್ಯ ಬದಲಾವಣೆಯನ್ನು ತಂದಿದ್ದು, ಆಗಸ್ಟ್ 1ರ ಸೋಮವಾರದಿಂದ ಜಾರಿಗೆ ಬಂದಿದೆ. ಅಲ್ಲದೆ ಕೇಂದ್ರ ಚುನಾವಣಾ ಆಯೋಗವು 1 ಜನವರಿ 2023ಕ್ಕೆ ಅನ್ವಯವಾಗುವಂತೆ ಮತದಾರರ ಪಟ್ಟಿ ಪರಿಷ್ಕರಣೆ ಕೈಗೊಳ್ಳಲು ಆದೇಶಿಸಿದೆ. ಅದರಂತೆ 9ನೇ ನವೆಂಬರ್ ರಂದು ಕರಡು ಮತದಾರರ ಪಟ್ಟಿ ಪ್ರಕಟ, 5 ಜನವರಿ 2023ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಿದೆ ಎಂದು ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಚುನಾವಣಾ ಸುಧಾರಣೆಗಳು ಮತ್ತು ಅದರ ಪ್ರಮುಖ ಮುಖ್ಯಾಂಶಗಳು ಈ ಕೆಳಕಂಡಂತಿದೆ :

ಕೇಂದ್ರ ಚುನಾವಣಾ ಆಯೋಗದ ಕಚೇರಿ – ಸಾಂದರ್ಭಿಕ ಚಿತ್ರ

ಮತದಾರರ ಪಟ್ಟಿಯಲ್ಲಿರುವವರು ಇನ್ನು ಮುಂದೆ ಸ್ವಯಂಪ್ರೇರಿತವಾಗಿ ತಮ್ಮ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ. ಚುನಾವಣೆಯಲ್ಲಿ ಹೆಚ್ಚು ಹೆಚ್ಚಾಗಿ ಯುವ ಸಮುದಾಯವನ್ನು ಆಕರ್ಷಿಸಲು ಹೆಚ್ಚಿನ ಆದ್ಯತೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಮತದಾರರ ಪಟ್ಟಿಗೆ ನೋಂದಾಣಿಯಸಲು ವರ್ಷದಲ್ಲಿ ನಾಲ್ಕು ಅವಕಾಶವನ್ನು ಕಲ್ಪಿಸಲಾಗಿದೆ. ಈ ಹಿಂದೆ ಜನವರಿಗೆ 1ಕ್ಕೆ 18 ವರ್ಷ ತುಂಬವ ತನಕ ಕಾಯಬೇಕಿಲ್ಲ. ಪ್ರಸಕ್ತ 2023ರ ವಾರ್ಷಿಕ ಮತದಾರರ ಪಟ್ಟಿಯ ಪರಿಷ್ಕರಣೆಯ ಸಂದರ್ಭದಲ್ಲಿ 1ನೇ ಏಪ್ರಿಲ್, 1ನೇ ಜುಲೈ, 1ನೇ ಅಕ್ಟೋಬರ್ 2022ನೇ ಇಸವಿಯಲ್ಲಿ 18 ವರ್ಷ ತುಂಬುವ ಯುವ ಮತದಾರರನ್ನು ವೋಟರ್ ಲಿಸ್ಟ್ ಗೆ ಹೆಸರು ಸೇರಿಸಲು ಮುಂಗಡ ಅರ್ಜಿ ಸಲ್ಲಿಸಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ.

ಇದರಿಂದಾಗಿ 18 ವರ್ಷ ಪೂರೈಸಿದ ಯುವಜನರು ಮುಂದಿನ ವರ್ಷದ ವಿಶೇಷ ಪರಿಷ್ಕರಣೆ ತನಕ ಕಾಯುವುದನ್ನು ತಪ್ಪಿಸಲಾಗಿದೆ. ಹಾಗೂ ಮಧ್ಯಂತರ ಅವಧಿಯಲ್ಲಿ ನಡೆಯುವ ಚುನಾವಣೆಗಳಲ್ಲಿ ಮತ ಚಲಾವಣೆಗೆ ಅವಕಾಶ ದೊರೆಯಲಿದೆ.

ಮತದಾರರ ಪಟ್ಟಿ ಪೂರ್ವ ಪರಿಷ್ಕರಣೆ ಆಗಸ್ಟ್ ತಿಂಗಳಿನಲ್ಲಿ ಆರಂಭವಾಗಲಿದೆ. ಇಂದಿನಿಂದಲೇ (ಆ.1ರಿಂದ) ಮತದಾರರ ನೋಂದಣಿಗಾಗಿ ಹೊಸ ಸರಳೀಕರಿಸಿದ ಅರ್ಜಿ ನಮೂನೆಗಳು ಲಭ್ಯವಾಗಲಿದೆ. ಮತದಾರರ ಪಟ್ಟಿಯ ಹೆಸರು, ಇನ್ನಿತರ ತಿದ್ದುಪಡಿಗಳಿಗಾಗಿ ಹೊಸ ನಮೂನೆ-8 ಈಗ ಲಭ್ಯವಿದೆ. ಒಂದೇ ತರಹದ ಹೆಸರು ಅಥವಾ ಫೊಟೋ ಹೊಂದಿರುವ ಮತದಾರರ ಪರಿಶೀಲನೆಗೆ ಆದ್ಯತೆ ನೀಡಲಾಗುತ್ತದೆ. ಆರೋಗ್ಯಕರ ಮತದಾರರ ಪಟ್ಟಿಯನ್ನು ಖಾತರಿಪಡಿಸುವ ಉದ್ದೇಶದಿಂದ ಪರಿಶೀಲನೆ ಮತ್ತು ಮೇಲ್ವಿಚಾರಣೆ ನಡೆಸಲು ಚುನಾವಣಾ ಆಯೋಗದ ಕಾಯ್ದೆ ಸೂಕ್ತ ತಿದ್ದುಪಡಿಗಳನ್ನು ತರಲಾಗಿದೆ.

ಮತದಾರರ ಪಟ್ಟಿಯಲ್ಲಿನ ಮತದಾರರ ದೃಢೀಕರಣಕ್ಕೆ ನಮೂನೆ-6ಬಿ :

ಮತದಾರರ ಪಟ್ಟಿಯಲ್ಲಿನ ಮತದಾರರ ದೃಢೀಕರಣದ ಉದ್ದೇಶದಿಂದ ಹೊಸದಾಗಿ ನಮೂನೆ-6ಬಿಯನ್ನು ಜಾರಿಗೆ ತರಲಾಗಿದೆ. ಇದರಲ್ಲಿ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಮತದಾರರು ತಮ್ಮ ಆಧಾರ್ ಸಂಖ್ಯೆಯನ್ನು ಸ್ವಯಂಪ್ರೇರಿತವಾಗಿ ಜೋಡಣೆ ಮಾಡಿ ದೃಢೀಕರಿಸಲು ಅವಕಾಶ ಕಲ್ಪಿಸಲಾಗಿದೆ. ಒಂದೊಮ್ಮೆ ಆಧಾರ್ ಮಾಹಿತಿ ಒದಗಿಸಲು ಸಾಧ್ಯವಾಗದಿದ್ದಲ್ಲಿ, ಈ ಮುಂದಿನ 11 ದಾಖಲೆಗಳ ಪೈಕಿ ಒಂದು ದಾಖಲೆ ಒದಗಿಸಿ ಮತದಾರರ ದೃಢೀಕರಣ ಮಾಡಿಕೊಳ್ಳಬಹುದು. 1-08-2022 ರಿಂದ 31-03-2023ರ ಒಳಗಾಗಿ ಮತದಾರರು ದಾಖಲೆ ಒದಗಿಸಿ ಈ ದೃಢೀಕರಣ ಮಾಡಬೇಕಾಗಿದೆ.

ಆ ದಾಖಲೆಗಳು ಯಾವುದೆಂದರೆ : ಮನ್ರೇಗಾ ಉದ್ಯೋಗ ಕಾರ್ಡ್, ಬ್ಯಾಂಕ್ ಅಥವಾ ಅಂಚೆಕಚೇರಿಯಿಂದ ನೀಡಲಾದ ಭಾವಚಿತ್ರವಿರುವ ಪಾಸ್ ಪುಸ್ತಕ, ಕಾರ್ಮಿಕ ಇಲಾಖೆಯ ಯೋಜನೆಯಡಿ ನೀಡಲಾದ ವಿಮೆ, ಸ್ಮಾರ್ಟ್ ಕಾರ್ಡ್, ಚಾಲನಾ ಪರವಾನಗಿ, ಪ್ಯಾನ್ ಕಾರ್ಡ್, ಎನ್ ಪಿಆರ್ ಅಡಿಯಲ್ಲಿ ಆರ್ ಜಿಐ ಮೂಲಕ ನೀಡಲಾದ ಸ್ಮಾರ್ಟ್ ಕಾರ್ಡ್, ಇಂಡಿಯನ್ ಪಾಸ್ ಪೋರ್ಟ್, ಭಾವಚಿತ್ರವಿರುವ ಪಿಂಚಣಿ ದಾಖಲೆ, ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಸಾರ್ವಜನಿಕ ವಲಯದ ಉದ್ದಿಮೆ ಅಥವಾ ಸಾರ್ವಜನಿಕ ನಿಯಮಿತ ಕಂಪನಿಗಳಿಂದ ನೀಡಲಾದ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿ, ಸಂಸದರು, ವಿಧಾನಸಭಾ ಮತ್ತು ವಿಧಾನಪರಿಷತ್ ಸದಸ್ಯರಿಗೆ ನೀಡಿದ ಅಧಿಕೃತ ಗುರುತಿನ ಚೀಟಿ, ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ಮೂಲಕ ನೀಡಲಾದ ವಿಶಿಷ್ಟ ಗುರುತಿನ ಚೀಟಿ (UDID)ಗಳಾಗಿದೆ. ನಮೂನೆ-6ಬಿಯಲ್ಲಿ ಮಾಹಿತಿ ದೃಢೀಕರಿಸಲು ಆನ್ ಲೈನ್ ಮತ್ತು ಆಫ್ ಲೈನ್ ಎರಡರಲ್ಲೂ ಅವಕಾಶವಿದೆ.

ಆನ್ ಲೈನ್ ಮತ್ತು ಆಫ್ ಲೈನ್ ವ್ಯವಸ್ಥೆಯಲ್ಲಿ ಹೇಗೆ ದೃಢೀಕರಣ ಮಾಡಬಹುದು ?

ಆನ್ ಲೈನ್ ವ್ಯವಸ್ಥೆಯಡಿ ಎನ್ ವಿಎಸ್ ಪಿ (NVSP) ಮತ್ತು ವೋಟರ್ ಹೆಲ್ಪ್ ಲೈನ್ ಆಪ್ (VHP) ನಲ್ಲಿಯೂ ಮತದಾರರು ತಮ್ಮ ಮಾಹಿತಿಯನ್ನು ದೃಢೀಕರಿಸಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ. ಆಧಾರ್ ಸ್ವಯಂ ದೃಢೀಕರಣಕ್ಕೆ  ಆಧಾರ್ ಜೋಡಣೆಯಾಗಿರುವ ಮೊಬೈಲ್ ಗೆ ಸ್ವೀಕೃತಿಯಾಗುವ  ಒಟಿಪಿ (OTP) ಸೌಲಭ್ಯವನ್ನು ಒದಗಿಸಿದೆ. ಆಕಸ್ಮಾತ್ ಒಟಿಪಿ ಸಹಿತ ದೃಢೀಕರಣ ಸಾಧ್ಯವಾಗದಿದ್ದಲ್ಲಿ ಮತದಾರರು ಆಧಾರ್ ಅನ್ನು ಮೇಲಿನ ಆಪ್ ಗಳಲ್ಲಿ ಅಪಲೋಡ್ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ.

ಆಧಾರ್ ದಾಖಲೆ ಅಪಲೋಡ್ ಮಾಡಲು ಸಾಧ್ಯವಾಗದಿದ್ದಲ್ಲಿ, ಸಂಬಂಧಪಟ್ಟ ಬೂತ್ ಲೆವೆಲ್ ಅಧಿಕಾರಿಗೆ ನಮೂನೆ-6ಬಿ ಯಲ್ಲಿ ಭೌತಿಕವಾಗಿ ಆ ದಾಖಲೆಯನ್ನು ಅರ್ಜಿಯೊಂದಿಗೆ ಸಲ್ಲಿಬಹುದಾಗಿದೆ. ಆ ಅರ್ಜಿಯನ್ನು ಮತದಾರರ ಅನಕೂಲ ಕೇಂದ್ರಗಳು, ಇ-ಸೇವಾ ಕೇಂದ್ರಗಳು ಹಾಗೂ ನಾಗರೀಕ ಸೇವಾ ಕೇಂದ್ರಗಳು ಮತ್ತು ಮತದಾರರ ನೋಂದಣಿ ಅಧಿಕಾರಿ ಅಥವಾ ಸಹಾಯಕ ಮತದಾರರ ನೋಂದಣಿ ಅಧಿಕಾರಿ ಕಚೇರಿಯಲ್ಲೂ ಸಲ್ಲಿಸಬಹುದಾಗಿದೆ.

ಹೊಸ ಅರ್ಜಿ ನಮೂನೆಗಳು : ಯಾವ ನಮೂನೆ? ಯಾವುದಕ್ಕೆ?

ನಮೂನೆ -6 : ಹೊಸ ಮತದಾರರ ನೋಂದಣಿ

ನಮೂನೆ-8 : ಮತದಾರರ ಪಟ್ಟಿಯಲ್ಲಿನ ಮಾಹಿತಿಗಳ ತಿದ್ದುಪಡಿಗೆ

ನಮೂನೆ-7 : ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆಯಲು

ನಮೂನೆ-6ಬಿ : ಆಧಾರ್ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿಯೊಂದಿಗೆ ಲಿಂಕ್ ಮಾಡಲು

ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ನಗರಾಭಿವೃದ್ಧಿ ಎಸಿಎಸ್ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹಾಗೂ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನ್ ಚುನಾವಣಾ ಸುಧಾರಣೆಗಳು ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿದರು.

ಚುನಾವಣೆ ಸುಧಾರಣೆಗಳ ಕುರಿತು ಕಾರ್ಯಾಗಾರ :

ಮತದಾರರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್ ದತ್ತಾಂಶವನ್ನು ಜೋಡಣೆ ಮಾಡುವ ಕಾರ್ಯಕ್ರಮ ಮತ್ತು ಚುನಾವಣಾ ಸುಧಾರಣೆಗಳ ಕುರಿತಾದ ಕಾರ್ಯಾಗಾರವನ್ನು ನಗರದಲ್ಲಿ ಇಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಉದ್ಘಾಟಿಸಿದರು.

ಭಾರತ ಚುನಾವಣಾ ಆಯೋಗ ಮತ್ತು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳ ಕಚೇರಿಯಿಂದ ಆಯೋಜಿಸಿದ್ದ ಚುನಾವಣಾ ಸುಧಾರಣೆಗಳು ಕಾರ್ಯಕ್ರಮದಲ್ಲಿ ಜನತಾ ಪ್ರಾತಿನಿಧ್ಯ ಕಾಯ್ದೆ ಹಾಗೂ ಮತದಾರರ ನೋಂದಣಿ ನಿಯಮಗಳಲ್ಲಿನ ತಿದ್ದುಪಡಿಗಳಿಗೆ ತಿದ್ದುಪಡಿ ತಂದಿದ್ದು ಆ ಕುರಿತಂತೆ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಬಿಬಿಎಂಪಿ ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್, ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಪಾಲಿಕೆ ವಿಶೇಷ ಆಯುಕ್ತ ರಂಗಪ್ಪ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

WhatsApp Join our WhatsApp Channel
Previous Post

BW SPECIAL | Ragi Procurement | ರೈತರೇ ಇತ್ತ ಗಮನಿಸಿ….! ರಾಜ್ಯದಲ್ಲಿ 4.04 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿ!!

Next Post

BW EXCLUSIVE | Hemavati Reservoir Project | ಹೇಮಾವತಿ ಜಲಾಶಯ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಅಕ್ರಮವಾಗಿ 2343 ಎಕರೆ ಅರಣ್ಯ ಜಮೀನು ಮಂಜೂರು…! – ಕಾನೂನು ಉಲ್ಲಂಘಿಸಿದರೂ ಕ್ರಮವಿಲ್ಲ

Next Post

BW EXCLUSIVE | Hemavati Reservoir Project | ಹೇಮಾವತಿ ಜಲಾಶಯ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಅಕ್ರಮವಾಗಿ 2343 ಎಕರೆ ಅರಣ್ಯ ಜಮೀನು ಮಂಜೂರು...! – ಕಾನೂನು ಉಲ್ಲಂಘಿಸಿದರೂ ಕ್ರಮವಿಲ್ಲ

BBMP NEWS | ಸಾರ್ವಜನಿಕರ ಸಮಸ್ಯೆ ಪರಿಹಾರಕ್ಕೆ ವೇದಿಕೆಯಾಗುತ್ತಿದೆ "ಮುಖ್ಯ ಆಯುಕ್ತರ ನಡೆ ವಲಯದ ಕಡೆ" ಕಾರ್ಯಕ್ರಮ

Please login to join discussion

Like Us on Facebook

Follow Us on Twitter

Recent News

ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

August 7, 2026

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

August 7, 2026

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group