Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP ELECTION | ಬಿಬಿಎಂಪಿ ವಾರ್ಡ್ ಮೀಸಲಾತಿ ಪಟ್ಟಿಗೆ ಕಾಂಗ್ರೆಸ್ ತೀವ್ರ ವಿರೋಧ : ಪಟ್ಟಿ ಹಿಂಪಡೆಯದಿದ್ದರೆ ಕೋರ್ಟ್ ಮೆಟ್ಟಿಲು ಏರಲು ನಿರ್ಧಾರ

ವಿಕಾಸ ಸೌಧದ ನಗರಾಭಿವೃದ್ಧಿ ಇಲಾಖೆಯ ಕಚೇರಿಗೆ ಆರ್.ಎಸ್.ಎಸ್ ಕಚೇರಿ ಎಂದು ನಾಮಫಲಕ ಅಳವಡಿಸಲು ಯತ್ನಿಸಿದ ಕಾಂಗ್ರೆಸ್

by Bengaluru Wire Desk
August 5, 2022
in Bengaluru Focus
Reading Time: 1 min read
0

ಬೆಂಗಳೂರು, ಆ.5 www.bengaluruwire.com : ನಿರೀಕ್ಷೆಯಂತೆಯೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ವಾರ್ಡ್ ಮೀಸಲಾತಿ ಪಟ್ಟಿಯ ಬಗ್ಗೆ ಬಿಜೆಪಿ ನಾಯಕರಲ್ಲೇ ಅಸಮಾಧಾನ ಸ್ಪೋಟಗೊಂಡ ನಡುವೆಯೇ ಸಹಜವಾಗಿ ವಿರೋಧ ಪಕ್ಷವಾದ ಕಾಂಗ್ರೆಸ್ ಕೂಡ ತನ್ನ ಪ್ರಬಲ ವಿರೋಧ ವ್ಯಕ್ತಪಡಿಸಿದೆ.

ನಗರದ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಕಾಂಗ್ರೆಸ್ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಪತ್ರಿಕಾಗೋಷ್ಟಿ ನಡೆಸಿದ ಬೆಂಗಳೂರಿನ ಕಾಂಗ್ರೆಸ್ ಶಾಸಕರು, ಸಂಸದರು, ಬಿಬಿಎಂಪಿ ಮಾಜಿ ಪಾಲಿಕೆ ಸದಸ್ಯರು ಸರ್ಕಾರದ ಕ್ರಮವನ್ನು ಉಗ್ರ ಶಬ್ದಗಳಲ್ಲಿ ಖಂಡಿಸಿದ್ದಾರೆ.

ಅಲ್ಲದೆ ಬಿಬಿಎಂಪಿ ವಾರ್ಡ್ ಪುನರ್ವಿಂಗಡಣೆ ಅನ್ಯಾಯದ ವಿರುದ್ಧ ಕೋರ್ಟ್ ಮೆಟ್ಟಿಲು ಹತ್ತಿರುವಂತೆಯೇ, ಯಾವುದೇ ಮಾನದಂಡ ಅನುಸರಿಸದೆ ವಾರ್ಡ್ ಮೀಸಲಾತಿ ಪಟ್ಟಿ ಪ್ರಕಟಿಸಿದ್ದಾರೆ. ಇದನ್ನು ಕೂಡಲೇ ಹಿಂಪಡೆಯಬೇಕು. ಇಲ್ಲವಾದಲ್ಲಿ ನ್ಯಾಯಾಲಯದ ಮೆಟ್ಟಿಲು ಏರುವುದಾಗಿ ಹೇಳಿದ್ದಾರೆ.

ಮೀಸಲಾತಿ ಮಾನದಂಡದ ಪ್ರಕಾರ ಬಿಬಿಎಂಪಿ ವಾರ್ಡ್ ಮೀಸಲಾತಿ ಮಾಡಲಿಲ್ಲ. ಸರ್ಕಾರದ ಅನುಮತಿ ಪಡೆಯದೆ ಮೀಸಲಾತಿ ಪ್ರಕಟ ಮಾಡಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಇರುವ ಕಡೆ, ಸ್ಥಳೀಯ ಬಿಜೆಪಿ ಮುಖಂಡರು, ಸಂಸದರು, ಶಾಸಕರಿಗೆ ಅನುಕೂಲವಾಗುವಂತೆ ವಾರ್ಡ್ ಪುನರ್ವಿಂಗಡಣೆ ಮಾಡಿದ್ದಾರೆ. ಕಾಂಗ್ರೆಸ್ (12 MLA ಕ್ಷೇತ್ರ) – ಜೆಡಿಎಸ್ (1 MLA ಕ್ಷೇತ್ರ) ಶಾಸಕರಿರುವ ವಿಧಾನಸಭಾ ಕ್ಷೇತ್ರದಲ್ಲಿ 99 ವಾರ್ಡ್ ಬರಲಿದ್ದು, 72 ಮಹಿಳೆಯರಿಗೆ ಮೀಸಲಾತಿ ಕಲ್ಪಿಸಲಾಗಿದೆ. ಇದು ಯಾವ ರೀತಿಯ ಮೀಸಲಾತಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಟೀಕಿಸಿದ್ದಾರೆ.

‘ಪಾಲಿಕೆ ವಾರ್ಡ್ ಪುನರ್ವಿಂಗಡಣೆ ಬಗ್ಗೆ ಒಂದು ಸಭೆ ನಡೆಸಿಲ್ಲ’ :
ಬಿಬಿಎಂಪಿ ಮುಖ್ಯ ಆಯುಕ್ತರು ಪುನರ್ವಿಂಗಡಣೆ ಸಮಿತಿ ಅಧ್ಯಕ್ಷರಾಗಿದ್ದರೂ ಒಂದು ಸಮಿತಿಯ ಸಭೆ ಮಾಡಿಲ್ಲ. ವಿಧಾನಪರಿಷತ್ ಸದಸ್ಯ ಪಿ.ಆರ್.ರಮೇಶ್ ಅವರಿಗೆ, 11 ಸಮಿತಿ ಸಭೆ ಮಾಡಿದ್ದಾಗಿ ಮುಖ್ಯ ಆಯುಕ್ತರು ಮಾಹಿತಿಹಕ್ಕು ಕಾಯ್ದೆಯಡಿ ಸಲ್ಲಿಸಿದ ಅರ್ಜಿಗೆ ಉತ್ತರ ನೀಡಿದ್ದಾರೆ.

ವಿಕಾಸ ಸೌಧದಲ್ಲಿನ ನಗರಾಭಿವೃದ್ಧಿ ಇಲಾಖೆ ಕಚೇರಿಗೆ ಆರ್.ಎಸ್.ಎಸ್ ಕಚೇರಿ ಎಂಬ ನಾಮಫಲಕ ಅಳವಡಿಸಲು ಯತ್ನಿಸಿದ ಕಾಂಗ್ರೆಸ್

ನಗರಾಭಿವೃದ್ಧಿ ಇಲಾಖೆ ಮುಖ್ಯಮಂತ್ರಿ ಕಚೇರಿ ಕಳಿಸಿದ್ದನ್ನು ಯತಾವತ್ ಅನುಷ್ಟಾನ ಮಾಡಿದ್ದಾರೆ. ಯುಡಿ ಇಲಾಖೆ ಬಿಜೆಪಿ ಕಚೇರಿಯಾಗಿದೆ. ಕೇವಲ ರಬ್ಬರ್ ಸ್ಟಾಂಪ್ ಆಗಿದೆ. ಪುನರ್ವಿಂಗಡಣೆಗೆ ಬಂದ ಸಾವಿರಾರು ಆಕ್ಷೇಪಣೆಗಳನ್ನು ಕಡೆಗಣಿಸಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಮುಖಂಡರು ಇರುವ ಕಡೆ ಚುನಾವಣೆಗೆ ನಿಲ್ಲದಂತೆ ಮೀಸಲಾತಿ ನಿಗಧಿಪಡಿಸಿದ್ದಾರೆ. ಕಾಂಗ್ರೆಸ್ ಪ್ರಭಾವಿ‌ ಮುಖಂಡರು ಇರುವ ಕಡೆ ಮೀಸಲಾತಿ ಮಾಡಿದ್ದಾರೆ.

ಈಗಾಗಲೇ ಬಿಬಿಎಂಪಿ ವಾರ್ಡ್ ಪುನರ್ವಿಂಗಡಣೆ ಬಗ್ಗೆ ಕೋರ್ಟ್ ಮೆಟ್ಟಿಲೇರಿದ್ದೇವೆ. ನಮ್ಮ ಆಕ್ಷೇಪಣೆಗಳಿಗೆ ಸರ್ಕಾರ ಬೆಲೆ ಕೊಟ್ಟಿಲ್ಲ. ವಾರ್ಡ್ ಮೀಸಲಾತಿ ವಿಷಯದಲ್ಲೂ ನಾವು ಕೋರ್ಟಿಗೆ ಹೋಗುತ್ತೇವೆ. ಬಿಜೆಪಿಯ 15 ಕ್ಷೇತ್ರದಲ್ಲಿ ಪ್ರಭಾವಿ ಬಿಜೆಪಿ ಸದಸ್ಯರು ತೊಂದರೆಯಾಗದಂತೆ ಮೀಸಲಾತಿ ಹಾಗೂ ಪುನರ್ವಿಂಗಡಣೆ ಮಾಡಿದ್ದಾರೆ.

ಇದು ಬಿಜೆಪಿ ವಾಮಮಾರ್ಗ ಮೂಲಕ ಅಧಿಕಾರ ಹಿಡಿಯಲು ಮುಂದಾಗಿದೆ. ಈ ಪಕ್ಷಕ್ಕೆ ನೈತಿಕತೆ ಇಲ್ಲ. ಮೀಸಲಾತಿಯಲ್ಲಿ ಯಾವುದೇ ಮಾರ್ಗಸೂಚಿ, ಮಾನದಂಡವಿಲ್ಲ. ಸರ್ಕಾರ ಈ ಮೀಸಲಾತಿಪಟ್ಟಿಯನ್ನು ಹಿಂಪಡೆಯಬೇಕು ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಆಗ್ರಹಿಸಿದ್ದಾರೆ.

ಅಜಾದ್ ನಗರ ವಾರ್ಡ್ ನಲ್ಲಿ 340 ರಿಂದ 347 ವೋಟ್ ಎಸ್ ಟಿ ಸಮುದಾಯದ ಮತಗಳಿರುವುದು. ಅಲ್ಲಿ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ನಿಗದಿ ಮಾಡಿದೆ. ಮುಸ್ಲೀಂ ಮುಖಂಡರು ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಮಾಡಿದ್ದಾರೆ ಎಂದು ಶಾಸಕ ಜಮೀರ್ ಅಹ್ಮದ್ ಆರೋಪಿಸಿದರು.

ಶಿವಾಜಿನಗರದಲ್ಲಿ ಡೈನೊಸಾರಸ್ ರೀತಿ ವಾರ್ಡ್ ವಿಂಗಡಣೆ :
ಅಧಿಕಾರಿಗಳು ಮೀಸಲಾತಿ ಸಿದ್ದಪಡಿಸಿಲ್ಲ. ಬದಲಿಗೆ ಯಾರೋ ವಿಜ್ಞಾನಿಗಳು ಮೀಸಲಾತಿ ಪ್ರಕಟಿಸಿದಂತಿದೆ. ಕಾನೂನು ರೀತಿ ಮೀಸಲಾತಿ ಹಾಗೂ ವಾರ್ಡ್ ಪುನರ್ವಿಂಗಡಣೆ ಮಾಡಿಲ್ಲ. ನಮ್ಮ ಶಿವಾಜಿನಗರದಲ್ಲಿ ಅಮೀಬಾದಂತಿಲ್ಲ,‌ ಡೈನೊಸಾರಸ್ ರೀತಿ ವಾರ್ಡ್ ಪುನರ್ವಿಂಗಡಣೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಟೀಕಿಸಿದ್ದಾರೆ.

ಕನಿಷ್ಟ ವಾರ್ಡ್ ಜನಸಂಖ್ಯೆ 45 ಸಾವಿರ ಇರಬೇಕು. ಜನಸಂಖ್ಯೆಗಿಂತ ಶೇ.30ರಷ್ಟು ಮತದಾರರು ಇರುತ್ತಾರೆ. ಆದರೆ ಇಲ್ಲಿ ಕಾಂಗ್ರೆಸ್ ಮತದಾರರು ಇರುವ ಕಡೆ, ಬಿಜೆಪಿ ಅನುಕೂಲವಾಗುವಂತೆ 30, 37 ಸಾವಿರ ಜನಸಂಖ್ಯೆಗೆ ಒಂದು ವಾರ್ಡ್ ಮಾಡಿದ್ದಾರೆ. ಕಾಂಗ್ರೆಸ್ ಇರುವ ಕಡೆ 40, 45 ಸಾವಿರ ಜನಸಂಖ್ಯೆಗೆ ಒಂದು ವಾರ್ಡ್ ಮಾಡಿದ್ದಾರೆ. ಸಾಕಷ್ಟು ಮೋಸ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಸಿಎಂ ಬೊಮ್ಮಾಯಿ ಬಿಜೆಪಿ ಶಾಸಕರ ಕೈಗೊಂಬೆ :
ರಾಷ್ಟ್ರದ ಜನತೆಗೆ ಪ್ರಧಾನಂಮತ್ರಿ ಒಳ್ಳೊಳ್ಳೆ ಕೊಡುಗೆ ನೀಡಿದ್ದಾರೆ. ಕೇಶವಕೃಪದಲ್ಲಿ ಸಿದ್ದವಾದ ಪಟ್ಟಿಗೆ ವಿಕಾಸ ಸೌಧದಲ್ಲಿನ ನಗರಾಭಿವೃದ್ಧಿ ಇಲಾಖೆ ಮೀಸಲಾತಿ ಪಟ್ಟಿ ಪ್ರಕಟಿಸಿದೆ. ನಗರಾಭಿವೃದ್ಧಿ ಇಲಾಖೆಯ ಕಚೇರಿ ಬಿಜೆಪಿ ಕಚೇರಿ ಅಂತ ಫಲಕ ಹಾಕುವಂತಾಗಿದೆ. ಸಾಮಾಜಿಕ ನ್ಯಾಯದ ವಿರುದ್ಧ, ಚುನಾವಣಾ ಆಯೋಗದ ಮಾನದಂಡ ಕೈಬಿಟ್ಟು ಬಿಬಿಎಂಪಿ ಮೀಸಲಾತಿಯನ್ನು ಪ್ರಕಟಿಸಲಾಗಿದೆ. ಬೆಂಗಳೂರಿನ ಜವಾಬ್ದಾರಿ ಹೊತ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಜೆಪಿ ಶಾಸಕರ ಕೈಗೊಂಬೆಯಾಗಿ ಮೀಸಲಾತಿ ಪಟ್ಟಿ ಹಾಗೂ ವಾರ್ಡ್ ಪುನರ್ವಿಂಗಡಣೆ ಮಾಡಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ನೇರ ಆರೋಪ ಮಾಡಿದ್ದಾರೆ.

40 ಪರ್ಸೆಂಟ್ ಕಮಿಷನ್ ಪಡೆದು, ನಗರದ ರಸ್ತೆ ಗುಂಡಿ ಬಿದ್ದಿದೆ. ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಕಾಂಗ್ರೆಸ್ ಬಿಬಿಎಂಪಿ ಚುನಾವಣೆಗೆ ಹೆದರುತ್ತಿಲ್ಲ. ಸರ್ಕಾರದ ನಗರಾಭಿವೃದ್ಧಿ ಇಲಾಖೆಗೆ ಬಿಜೆಪಿ ಕಚೇರಿ ಅಂತ ಇಂದು ಬೋರ್ಡ್ ಹಾಕುತ್ತೇವೆ. ಬಿಜೆಪಿಗೆ ಚುನಾವಣೆ ನಡೆಸಲು ಭಯಬಂದಿದೆ ಎಂದು ಅವರು ಹೇಳಿದ್ದಾರೆ.

ಶೇ.40 ಕಮಿಷನ್ – ಶೇ.60 ಜಿಎಸ್ ಟಿ ಕಟ್ಟುವ ಅನಿವಾರ್ಯತೆ :
ಬೆಂಗಳೂರು ಹಿಂದೆ ಏಷ್ಯಾದ ಐಟಿ ರಾಜಧಾನಿ, ಪ್ರಪಂಚದ ಡೈನಮಿಕ್ ಸಿಟಿ ಹೀಗೆ ಸಾಕಷ್ಟು ಬಿರುದುಗಳು ಕಾಂಗ್ರೆಸ್ ನಾಯಕತ್ವದಲ್ಲಿ ಬಂದುತ್ತು. ಈಗ ಬಿಜೆಪಿ ಮೂರು ವರ್ಷದಲ್ಲಿ ಪ್ರಪಂಚದಲ್ಲೇ ಅತಿಹೆಚ್ಚು ಗುಂಡಿಗಳಿರುವ ನಗರ ಎಂಬ ಕುಖ್ಯಾತಿಗಳಿಸಿದೆ. ರಸ್ತೆಗುಂಡಿ ಮುಚ್ಚುವುದರಲ್ಲೇ ಹಣ ಮಾಡುತ್ತಿದ್ದಾರೆ. ರಸ್ತೆಗುಂಡಿ, ಸಂಚಾರ ಸಮಸ್ಯೆಗೆ ಬೆಂಗಳೂರಿಗೆ ಶಾಶ್ವತ ಪರಿಹಾರ ಕಲ್ಪಿಸಿಲ್ಲ ಕಾಂಗ್ರೆಸ್ ಶಾಸಕ ಕೃಷ್ಣ ಭೈರೇಗೌಡ ಕುಟುಕಿದರು.

ಕಾಂಗ್ರೆಸ್ ಪ್ರಭಾವಿ ಅಭ್ಯರ್ಥಿಗಳಿಗೆ ಅವಕಾಶ ತಪ್ಪಿಸಿದ್ದಾರೆ. ನೇರ ಫೈಟ್ ಮಾಡಿದರೆ ಕಷ್ಟ ಅಂತ ಕಾನೂನುಬಾಹಿರವಾಗಿ ವಾರ್ಡ್ ಪುನರ್ವಿಂಗಣೆ, ಮೀಸಲಾತಿ ನಿಗದಿ ಮಾಡಿ ಬಿಜೆಪಿ ವಾಮಮಾರ್ಗ ಹಿಡಿದಿದೆ. ಇದು ನಾಚಿಗೆಗೇಡಿನ ವಿಷಯ. ಕಾನೂನು ಮತ್ತು ಅಧಿಕಾರಿಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಈ ಮೀಸಲಾತಿ ಪಟ್ಟಿಯನ್ನು ಹಿಂಪಡೆಯಬೇಕು. ಯಾವುದೇ ಗುತ್ತಿಗೆ ಪಡೆಯಲು ಈ ಸರ್ಕಾರಕ್ಕೆ ಶೇ.40 ಕಮಿಷನ್, ಶೇ.60 ಜಿಎಸ್ ಟಿಯನ್ನು ಕಟ್ಟಬೇಕು. ಬಿಜೆಪಿಗೆ ತಾಕತ್ತಿದ್ದರೆ ಬಿಬಿಎಂಪಿ ಚುನಾವಣೆ ನೇರವಾಗಿ ಎದುರಿಸಿ ಎಂದು ಶಾಸಕ ಕೃಷ್ಣ ಭೈರೇಗೌಡ ಸವಾಲು ಹಾಕಿದ್ದಾರೆ.

ಚುನಾವಣೆ ಮುಂದೂಡಲು ಬಿಬಿಎಂಪಿ ಕಾಯ್ದೆ-2020 ತಂದರು :
ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ತಾರತಮ್ಯ ಮಾಡುತ್ತಾ ಬಂದಿದೆ. ಬೆಂಗಳೂರಿನಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಶಾಸಕರು ಇರುವ ಕ್ಷೇತ್ರಗಳಿಗೆ ಅನುದಾನ ಹಂಚಿಕೆಯಲ್ಲಿ ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ ಹಚ್ಚುತ್ತಿದ್ದಾರೆ. ಬಿಬಿಎಂಪಿ ಕಾಯ್ದೆ-2020 ಮೂಲಕ ಬಲಿಷ್ಠ ನಗರ ನಿರ್ಮಾಣಕ್ಕೆ ಅಗತ್ಯವಾದ ರೀತ ಕಾಯ್ದೆ ತರದೆ, ಬಿಬಿಎಂಪಿ ಚುನಾವಣೆ ಮುಂದಕ್ಕೆ ಹಾಕಲು ಈ ಕಾಯ್ದೆ ಕಳೆದ ವರ್ಷ ಡಿಸೆಂಬರ್ ನಲ್ಲಿ ತಂದರು ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಹೇಳಿದರು.

‘ನಗರಾಭಿವೃದ್ಧಿಯಲ್ಲ ಬಿಜೆಪಿ ಅಭಿವೃದ್ಧಿ ಇಲಾಖೆಯಾಗಿದೆ’ :
ಸಾರ್ವಜನಿಕರ ಜೊತೆ ಚರ್ಚಿಸದೆ ವಾರ್ಡ್ ಪುನರ್ ವಿಂಗಡಣೆ ತಂದರು, ಮೀಸಲಾತಿ ನಿಗದಿ ಮಾಡಿದ್ದಾರೆ. ಹೆಚ್ಚು ಹಿಂದುಳಿದವರು ಇರುವ ಕಡೆ ಬಿಸಿಎ ಗೆ ಅವಕಾಶ ಕೊಟ್ಟಿಲ್ಲ. ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಏಳಕ್ಕೆ ಏಳು ವಾರ್ಡ್ ಗಳಲ್ಲಿ ಮಹಿಳಾ ಮೀಸಲಾತಿ ನೀಡಿದ್ದಾರೆ. ಕಾಯ್ದೆ, ಪುನರ್ ವಿಂಗಡಣೆ, ಮೀಸಲಾತಿ, ಅನುದಾನ ಹಂಚಿಕೆ ಎಲ್ಲದರಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆ. ರಾಜ್ಯದಲ್ಲಿ ಎಲ್ಲಾ ಕಡೆ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಮಾಡಿಲ್ಲ. ಬಿಜೆಪಿ ಆಡಳಿತ ಜನರಿಗೋಸ್ಕರ ಅಲ್ಲ ಸ್ವಾರ್ಥಕ್ಕಾಗಿ ಆಗುತ್ತಿದೆ. ನಗರಾಭಿವೃದ್ಧಿ ಇಲಾಖೆ ಹೆಸರು ತೆಗೆದು ಬಿಜೆಪಿ, ಆರ್.ಎಸ್.ಎಸ್ ಅಭಿವೃದ್ಧಿ ಇಲಾಖೆ ಅಂತ ಬದಲಿಸುವಂತಾಗಿದೆ. ಈಗ ಬಿಬಿಎಂಪಿ ವಿಚಾರದಲ್ಲಿ ಆಗಿರುವ ಅನ್ಯಾಯ ಸರ್ಕಾರ ಸರಿಪಡಿಸಬೇಕು.

ಬಿಜೆಪಿ ಸ್ಥಳೀಯ ನಾಯಕರಿಗೆ ಮೀಸಲಾತಿ ತೊಂದರೆಯಾಗಿದೆ.‌ಅವರೇ ಈ ಬಗ್ಗೆ ತಮ್ಮ ಒಳ ಬೇಗುದಿಯನ್ನು ಮಾಧ್ಯಮದ ಮೂಲಕ ಬಿಜೆಪಿ ಸ್ಥಳೀಯ ನಾಯಕರು ಹೊರಹಾಕಿದ್ದಾರೆ. ಎಲ್ಲವೂ ಆರ್.ಎಸ್.ಎಸ್ ಕೇಂದ್ರೀಕೃತದ ಆಡಳಿತವಾಗಿದೆ ಇದು ಸರಿಯಲ್ಲ ಎಂದು ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ರೇವಣ್ಣ, ಪಿ.ಆರ್.ರಮೇಶ್, ಕಾಂಗ್ರೆಸ್ ಮಾಜಿ ಪಾಲಿಕೆ ಸದಸ್ಯರಾದ ಅಬ್ದುಲ್ ವಾಜಿದ್, ಶಿವರಾಜ್, ಪದ್ಮಾವತಿ, ಸತ್ಯನಾರಾಯಣ ಸೇರಿದಂತೆ ಮೊದಲಾದವರು ಹಾಜರಿದ್ದರು.

ವಿಕಾಸ ಸೌಧದ ನಗರಾಭಿವೃದ್ಧಿ ಇಲಾಖೆಯ ಕಚೇರಿ ಮುಂಭಾಗ ತೆರಳಿ ಆರ್.ಎಸ್.ಎಸ್ ಕಚೇರಿ ಎಂದು ನಾಮಫಲಕ ಅಳವಡಿಸಲು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಯತ್ನಿಸಿದ ಘಟನೆಯು ನಡೆಯಿತು.

WhatsApp Join our WhatsApp Channel
Previous Post

IGNOU Education | ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದಲ್ಲಿ 22 ನೂತನ ಕೋರ್ಸ್ ಗಳ ಪ್ರಾರಂಭ

Next Post

Karnataka Ratna Award | ನವೆಂಬರ್ 1 ರಂದು ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ : ಸಿಎಂ ಬೊಮ್ಮಾಯಿ

Next Post

Karnataka Ratna Award | ನವೆಂಬರ್ 1 ರಂದು ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ 'ಕರ್ನಾಟಕ ರತ್ನ' ಪ್ರಶಸ್ತಿ ಪ್ರದಾನ : ಸಿಎಂ ಬೊಮ್ಮಾಯಿ

ಮಾಧ್ಯಮಗಳಿಗೆ ಸಾಮಾಜಿಕ ಹೊಣೆಗಾರಿಕೆ ಮುಖ್ಯ: ಪ್ರೊ.ಸಿ.ಎನ್.ರಾಮಚಂದ್ರನ್ ಅಭಿಮತ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group